ರಾಬಕೊ ಒಕ್ಕೂಟ ಅಧ್ಯಕ್ಷರಾಯ್ಕೆಗೆ ಕಸರತ್ತು

Team Udayavani, May 23, 2019, 11:05 AM IST

Udayavani Kannada Newspaper

ಗಂಗಾವತಿ: ರಾಯಚೂರು, ಬಳ್ಳಾರಿ ಮತ್ತು ಕೊಪ್ಪಳ ಜಿಲ್ಲಾ ಹಾಲು ಉತ್ಪಾದಕರ ಒಕ್ಕೂಟದ ಅಧ್ಯಕ್ಷ, ಉಪಾಧ್ಯಕ್ಷರ ಚುನಾವಣೆ ಮೇ 25ರಂದು ನಿಗದಿಯಾಗಿದ್ದು, ಅಧ್ಯಕ್ಷರ ಹುದ್ದೆಗೆ ಅವಿರೋಧ ಆಯ್ಕೆ ನಡೆಸಲು ಸಹಕಾರಿ ಮುಖಂಡರು ತೆರೆಮರೆಯಲ್ಲಿ ಪ್ರಯತ್ನ ನಡೆಸಿದ್ದಾರೆ.

ಮೂರು ಜಿಲ್ಲೆಗಳ ಹಾಲು ಉತ್ಪಾದಕರ ಸಹಕಾರಿ ಸಂಘಗಳಿಂದ 12 ಜನ ಹಾಗೂ ಬೆಂಗಳೂರು ಕೆಎಂಎಫ್‌ನ ಎಂಡಿ, ಸಹಕಾರಿ ಇಲಾಖೆಯ ಜಂಟಿ ನಿರ್ದೇಶಕರು ಮತ್ತು ಪಶುಸಂಗೋಪನಾ ಇಲಾಖೆಯ ಒಬ್ಬ ಅಧಿಕಾರಿ ಸೇರಿ ಒಟ್ಟು 15 ಜನ ನಿರ್ದೇಶಕರು ಅಧ್ಯಕ್ಷ -ಉಪಾಧ್ಯಕ್ಷರ ಚುನಾವಣೆಯಲ್ಲಿ ಮತ ಚಲಾವಣೆಯ ಅಧಿಕಾರ ಪಡೆದಿರುತ್ತಾರೆ. ಈ ಭಾರಿಯ ಚುನಾವಣೆಯಲ್ಲಿ ಅಧ್ಯಕ್ಷ ಸ್ಥಾನಕ್ಕೆ ಅವಿರೋಧ ಆಯ್ಕೆ ಮಾಡಲು ಸಹಕಾರಿ ಧುರೀಣರು ಮೂರು ಜಿಲ್ಲೆಯ ಜನಪ್ರತಿನಿಧಿಗಳು ಬಹುತೇಕ ನಿರ್ಧಾರ ಮಾಡಿದ್ದು, ಪ್ರತಿ ಜಿಲ್ಲೆಗೆ 20 ತಿಂಗಳ ಅವಧಿಯಂತೆ ಹಂಚಿಕೆ ಮಾಡಿದ್ದಾರೆ ಎನ್ನಲಾಗುತ್ತಿದ್ದು, ಹಗರಿಬೊಮ್ಮನಹಳ್ಳಿ ಶಾಸಕ ಎಂ. ಭೀಮಾನಾಯ್ಕ ಅವರನ್ನು ಕೆಎಂಎಫ್‌ ರಾಜ್ಯ ಮಂಡಳಿ ನಿರ್ದೇಶಕ ಸ್ಥಾನಕ್ಕೆ ಆಯ್ಕೆ ಮಾಡಲು ತೀರ್ಮಾನವಾಗಿದೆ.

ರಾಯಚೂರು, ಬಳ್ಳಾರಿ ಹಾಗೂ ಕೊಪ್ಪಳ ಹಾಲು ಒಕ್ಕೂಟದ ಅಧ್ಯಕ್ಷ ಸ್ಥಾನಕ್ಕೆ ಪ್ರಸ್ತುತ ಕೊಪ್ಪಳ ಜಿಲ್ಲೆಯಿಂದ ಮರಿವಾಡ ಸತ್ಯನಾರಾಯಣ, ವೆಂಕನಗೌಡ ಹಿರೇಗೌಡರ್‌, ರಾಯಚೂರಿನಿಂದ ಜಿ. ಸತ್ಯನಾರಾಯಣ, ಬಳ್ಳಾರಿ ಜಿಲ್ಲೆಯಿಂದ ಮರುಳುಸಿದ್ಧನಗೌಡ ಅವರ ಹೆಸರು ಕೇಳಿ ಬರುತ್ತಿದೆ. ಮೊದಲ ಅವಧಿಯಲ್ಲಿ ತಾವೇ ಅಧ್ಯಕ್ಷರಾಗಬೇಕೆಂದು ಬಹುತೇಕರು ಪಟ್ಟುಹಿಡಿದಿದ್ದಾರೆ. ಮೂರು ಜಿಲ್ಲೆಯ ಶಾಸಕರು, ಸಂಸದರು ಮತ್ತು ಸಚಿವರು ಆಯಾ ಜಿಲ್ಲೆಗೆ ಅಧ್ಯಕ್ಷ ಸ್ಥಾನ ಸಿಗಲಿ ಎಂಬ ಲಾಭಿ ನಡೆಸುತ್ತಿದ್ದಾರೆ.

ರಾಯಚೂರು, ಬಳ್ಳಾರಿ ಮತ್ತು ಕೊಪ್ಪಳ ಹಾಲು ಉತ್ಪಾದಕ ಒಕ್ಕೂಟ ವ್ಯಾಪ್ತಿಯ ಪ್ರತಿ ಸಹಕಾರಿ ಸಂಘಗಳಿಗೂ ತಮ್ಮ 2012ರ ಅವಧಿಯಲ್ಲಿ ಅತ್ಯುತ್ತಮ ಕೆಲಸ ಮಾಡಲಾಗಿದೆ. ರೈತರ ಕಲ್ಯಾಣ ನಿಧಿ ಸ್ಥಾಪನೆ ಮಾಡಿ ಹಾಲು ಉತ್ಪಾದಕರ ಸಂಘದ ಸದಸ್ಯರು ಆಕಸ್ಮಿಕ ಮರಣ ಹೊಂದಿದರೆ 10 ಸಾವಿರ ಕಾರ್ಯದರ್ಶಿ ಆಕಸ್ಮಿಕ ಮರಣ ಹೊಂದಿದರೆ 1 ಲಕ್ಷ ರೂ. ಪರಿಹಾರ. ಸಂಘದ ಸದಸ್ಯರ ಮಕ್ಕಳು ಎಸ್ಸೆಸ್ಸೆಲ್ಸಿ ಮತ್ತು ಪಿಯುಸಿ ಪರೀಕ್ಷೆಯಲ್ಲಿ ಉತ್ತಮ ಅಂಕಗಳೊಂದಿಗೆ ತೇರ್ಗಡೆಯಾದರೆ 10 ಮತ್ತು 15 ಸಾವಿರ ಪ್ರೋತ್ಸಾಹ ಧನ ನೀಡುವ ಯೋಜನೆ ಆರಂಭಿಸಲಾಗಿದೆ. ಬೂದಗುಂಪಾ ಹತ್ತಿರ 40 ಕೋಟಿ ರೂ. ವೆಚ್ಚದಲ್ಲಿ ಹಾಲನ್ನು ಪ್ಯಾಕ್‌ ಮಾಡುವ ಡೈರಿ ಘಟಕ ಸ್ಥಾಪನೆ ಮಾಡಲಾಗಿದೆ. ಶ್ರೀಕ್ಷೇತ್ರ ಧರ್ಮಸ್ಥಳ ಕ್ಷೇತ್ರಾಭಿವೃದ್ಧಿ ಯೋಜನೆಯಲ್ಲಿ 30 ಲಕ್ಷ ಸಾಲ ಪಡೆದು ಹಾಲು ಉತ್ಪಾದಕರ ಸಂಘಗಳ ತೂಕದ ಯಂತ್ರ ಮತ್ತು ಕಟ್ಟಡ ದುರಸ್ತಿ ಮಾಡಲಾಗಿದೆ. ಮತ್ತೂಮ್ಮೆ ತಮಗೆ ಅಧ್ಯಕ್ಷ ಸ್ಥಾನ ಲಭಿಸಿದರೆ ಇನ್ನಷ್ಟು ಯೋಜನೆ ಅನುಷ್ಠಾನ ಮಾಡಿ ರಾಜ್ಯದಲ್ಲೇ ಬಳ್ಳಾರಿ ಒಕ್ಕೂಟವನ್ನು ಮಾದರಿ ಮತ್ತು ಲಾಭದಾಯಕ ಮಾಡಲಾಗುತ್ತದೆ.
ಮರಿವಾಡ ಸತ್ಯನಾರಾಯಣ,
ಮಾಜಿ ಅಧ್ಯಕ್ಷರು ರಾಬಕೊ ಹಾಲು ಒಕ್ಕೂಟ

ಕೆ. ನಿಂಗಜ್ಜ

ಟಾಪ್ ನ್ಯೂಸ್

Supreme Court: ತುರ್ತು ಪರಿಸ್ಥಿತಿ ವೇಳೆ ಸಂಸತ್ತು ಮಾಡಿದ್ದೆಲ್ಲ ತಪ್ಪಲ್ಲ

Supreme Court: ತುರ್ತು ಪರಿಸ್ಥಿತಿ ವೇಳೆ ಸಂಸತ್ತು ಮಾಡಿದ್ದೆಲ್ಲ ತಪ್ಪಲ್ಲ

Gold Prices India:ಚಿನ್ನ ಮತ್ತೆ ದುಬಾರಿ: ದರ 870ರೂ. ಏರಿಕೆ: ಈಗ 10 ಗ್ರಾಂಗೆ 78,820 ರೂ.

Gold Prices India:ಚಿನ್ನ ಮತ್ತೆ ದುಬಾರಿ: ದರ 870ರೂ. ಏರಿಕೆ: ಈಗ 10 ಗ್ರಾಂಗೆ 78,820 ರೂ.

Ullala–Encroch

Ullala: ದೇರಳಕಟ್ಟೆ: ರಸ್ತೆಯನ್ನು ಅತಿಕ್ರಮಿಸಿದ್ದ ಕಟ್ಟಡಗಳ ತೆರವು

Adani; ಆಸೀಸ್‌ ಕಲ್ಲಿದ್ದಲು ಗಣಿಯಲ್ಲಿ ಮಾನವ ಹಕ್ಕುಗಳ ಉಲ್ಲಂಘನೆ ಆರೋಪ

Adani; ಆಸೀಸ್‌ ಕಲ್ಲಿದ್ದಲು ಗಣಿಯಲ್ಲಿ ಮಾನವ ಹಕ್ಕುಗಳ ಉಲ್ಲಂಘನೆ ಆರೋಪ

London: ಶಂಕಾಸ್ಪದ ಲಗೇಜ್‌ ಪತ್ತೆ: ಲಂಡನ್‌ ಏರ್‌ಪೋರ್ಟ್‌ ಖಾಲಿ ಮಾಡಿಸಿ ತನಿಖೆ!

London: ಶಂಕಾಸ್ಪದ ಲಗೇಜ್‌ ಪತ್ತೆ: ಲಂಡನ್‌ ಏರ್‌ಪೋರ್ಟ್‌ ಖಾಲಿ ಮಾಡಿಸಿ ತನಿಖೆ!

Delhi: ಕೇಜ್ರಿವಾಲ್‌ಗಿಂತ ಆತಿಶಿ ಸಾವಿರಪಟ್ಟು ಉತ್ತಮ: ಲೆ.ಗ.ಸಕ್ಸೇನಾ!

Delhi: ಕೇಜ್ರಿವಾಲ್‌ಗಿಂತ ಆತಿಶಿ ಸಾವಿರಪಟ್ಟು ಉತ್ತಮ: ಲೆ.ಗ.ಸಕ್ಸೇನಾ!

BBK11: ಚೈತ್ರಾ ಅವರೇ ನನ್ನ ಬಾಸ್.. ಅವರ ಹೆಜ್ಜೆ ಫಾಲೋ ಮಾಡ್ತೇನೆ ಎಂದ ರಜತ್

BBK11: ಚೈತ್ರಾ ಅವರೇ ನನ್ನ ಬಾಸ್.. ಅವರ ಹೆಜ್ಜೆ ಫಾಲೋ ಮಾಡ್ತೇನೆ ಎಂದ ರಜತ್

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Ullala–Encroch

Ullala: ದೇರಳಕಟ್ಟೆ: ರಸ್ತೆಯನ್ನು ಅತಿಕ್ರಮಿಸಿದ್ದ ಕಟ್ಟಡಗಳ ತೆರವು

1-koo

Violation of the Code of Conduct; ಕೋಟ, ಗುರ್ಮೆ ವಿರುದ್ಧದ ಪ್ರಕರಣ ರದ್ದು

Belgavi-Roberry

Belagavi: ದೂರು ಕೊಟ್ಟವರ ಮೊದಲು ಬಂಧಿಸಿ ಬಳಿಕ ನೈಜ ದರೋಡೆಕೋರರ ಸೆರೆ ಹಿಡಿದ ಪೊಲೀಸರು!

k

Udupi: ಆರೆಸ್ಸೆಸ್‌ ಹಿರಿಯ ಪ್ರಚಾರಕ್‌ ಭಯ್ಯಾಜಿ ಜೋಷಿ ಶ್ರೀಕೃಷ್ಣಮಠಕ್ಕೆ ಭೇಟಿ

Bagalakote-Dryer

Bagalakote: ಪ್ರೇಯಸಿ ಗೆಳತಿ ಹ*ತ್ಯೆಗೆ ಸಂಚು; ಕೊನೆಗೆ ಕೈ ಕಳೆದುಕೊಂಡಿದ್ದು ಪ್ರೇಮಿಯೇ!  

MUST WATCH

udayavani youtube

ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್‌ |

udayavani youtube

ಕೊಲ್ಲೂರಿನಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಡಿಸಿಎಂ ಡಿ ಕೆ ಶಿವಕುಮಾರ್

udayavani youtube

ಉಡುಪಿ ಶ್ರೀ ಕೃಷ್ಣ ಮಠದಲ್ಲಿ ಬೃಹತ್ ಗೀತೋತ್ಸವಕ್ಕೆ ಅದ್ದೂರಿ ಚಾಲನೆ|

udayavani youtube

ಲಾಭದಾಯಕ ಗುಲಾಬಿ ಕೃಷಿ ಮಾಡುವ ವಿಧಾನ

udayavani youtube

ಗೀತೋತ್ಸವ ತ್ರಿಪಕ್ಷ ಶತವೈಭವ ಕಾರ್ಯಕ್ರಮಕ್ಕೆ ಆಮಂತ್ರಿಸಿದ ಪರ್ಯಾಯ ಪುತ್ತಿಗೆ ಶ್ರೀಗಳು

ಹೊಸ ಸೇರ್ಪಡೆ

1-tata

ಮೆಜೆಂಟಾ ಮೊಬಿಲಿಟಿ ಸಂಸ್ಥೆ ವಾಹನ ಬಳಗಕ್ಕೆ ಟಾಟಾ ಏಸ್‌ ಇವಿ ಸೇರ್ಪಡೆ

Supreme Court: ತುರ್ತು ಪರಿಸ್ಥಿತಿ ವೇಳೆ ಸಂಸತ್ತು ಮಾಡಿದ್ದೆಲ್ಲ ತಪ್ಪಲ್ಲ

Supreme Court: ತುರ್ತು ಪರಿಸ್ಥಿತಿ ವೇಳೆ ಸಂಸತ್ತು ಮಾಡಿದ್ದೆಲ್ಲ ತಪ್ಪಲ್ಲ

Gold Prices India:ಚಿನ್ನ ಮತ್ತೆ ದುಬಾರಿ: ದರ 870ರೂ. ಏರಿಕೆ: ಈಗ 10 ಗ್ರಾಂಗೆ 78,820 ರೂ.

Gold Prices India:ಚಿನ್ನ ಮತ್ತೆ ದುಬಾರಿ: ದರ 870ರೂ. ಏರಿಕೆ: ಈಗ 10 ಗ್ರಾಂಗೆ 78,820 ರೂ.

Ullala–Encroch

Ullala: ದೇರಳಕಟ್ಟೆ: ರಸ್ತೆಯನ್ನು ಅತಿಕ್ರಮಿಸಿದ್ದ ಕಟ್ಟಡಗಳ ತೆರವು

Adani; ಆಸೀಸ್‌ ಕಲ್ಲಿದ್ದಲು ಗಣಿಯಲ್ಲಿ ಮಾನವ ಹಕ್ಕುಗಳ ಉಲ್ಲಂಘನೆ ಆರೋಪ

Adani; ಆಸೀಸ್‌ ಕಲ್ಲಿದ್ದಲು ಗಣಿಯಲ್ಲಿ ಮಾನವ ಹಕ್ಕುಗಳ ಉಲ್ಲಂಘನೆ ಆರೋಪ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.