ಪುರಸಭೆ: ಕಾಂಗ್ರೆಸ್ಗೇ ಹೆಚ್ಚು ಸ್ಥಾನ
Municipality: Congress is the highest place
Team Udayavani, May 23, 2019, 11:25 AM IST
ಶ್ರೀರಂಗಪಟ್ಟಣದ ಪುರಸಭಾ ವ್ಯಾಪ್ತಿಯ 11ನೇ ವಾರ್ಡ್ನ ಕಾಂಗ್ರೆಸ್ ಅಭ್ಯರ್ಥಿ ಎಂ.ಎಲ್.ದಿನೇಶ್ ಮತಯಾಚಿಸಿದರು.
ಶ್ರೀರಂಗಪಟ್ಟಣ: ರಾಜ್ಯದಲ್ಲಿ ಕಾಂಗ್ರೆಸ್ ಹಾಗೂ ಜೆಡಿಎಸ್ ದೋಸ್ತಿಗಳಾಗಿದ್ದರೂ ಪಟ್ಟಣ ಪುರಸಭೆ ಚುನಾವಣೆಯಲ್ಲಿ ಎದುರಾಳಿಗಳಾಗಿ ಸ್ಪರ್ಧಿಸಿದ್ದು, ಮಾಜಿ ಶಾಸಕ ರಮೇಶ್ ಬಂಡಿಸಿದ್ದೇಗೌಡರ ನೇತೃತ್ವದಲ್ಲಿ ಈ ಬಾರಿ ಕಾಂಗ್ರೆಸ್ ಹೆಚ್ಚು ಸ್ಥಾನ ಗೆಲ್ಲಲಿದೆ ಎಂದು 11ನೇ ವಾರ್ಡ್ ಕಾಂಗ್ರೆಸ್ ಅಭ್ಯರ್ಥಿ ಎಂ.ಎಲ್.ದಿನೇಶ್ ವಿಶ್ವಾಸ ವ್ಯಕ್ತಪಡಿಸಿದರು.
ಪಟ್ಟಣ ಪುರಸಭೆ ವ್ಯಾಪ್ತಿಯ 11ನೇ ವಾರ್ಡ್ ಸಾಮಾನ್ಯ ಕ್ಷೇತ್ರದಿಂದ ಸ್ಪರ್ಧಿಸಿರುವ ಅವರು, ಮತ ಪ್ರಚಾರ ಮಾಡಿ ಮಾತನಾಡಿದ ಅವರು, ಕಳೆದ ಎರಡು ಬಾರಿಯೂ ಪುರಸಭೆ ವ್ಯಾಪ್ತಿಯಲ್ಲಿ ನಮ್ಮ ಅಭ್ಯರ್ಥಿಗಳು ಹೆಚ್ಚಿನ ಮಂದಿ ಗೆಲುವು ಸಾಧಿಸಿದರು. ನಾನು 3ನೇ ಬಾರಿ ಸ್ಪರ್ಧಿಸಿದ್ದೇನೆ. ಮಾಜಿ ಶಾಸಕ ರಮೇಶ್ ಬಂಡಿಸಿದ್ದೇಗೌಡ, ಕಾಂಗ್ರೆಸ್ ಪಕ್ಷದ ಎಲ್ಲಾ ಮುಖಂಡರನ್ನು ಒಗ್ಗೂಡಿಸಿ ಯಾವುದೇ ಭಿನ್ನಮತ ಬಾರದಂತೆ ನೋಡಿಕೊಂಡು ಗೆಲ್ಲುವ ಅಭ್ಯರ್ಥಿಗಳನ್ನು ಆಯ್ಕೆ ಮಾಡಿ ಕಾಂಗ್ರೆಸ್ ಪಕ್ಷದಿಂದ ಎಲ್ಲಾ 23 ವಾರ್ಡ್ಗಳಲ್ಲೂ ಕಾಂಗ್ರೆಸ್ ಅಭ್ಯರ್ಥಿಗಳನ್ನು ಸ್ಪರ್ಧೆಗಿಳಿಸಿದ್ದಾರೆ. ಆಯಾ ವಾರ್ಡ್ಗಳಲ್ಲಿ ಮುಖಂಡರು ಹಾಗೂ ಕಾರ್ಯಕರ್ತರು ಯಾವುದೇ ಭಿನ್ನಮತವಿಲ್ಲದೆ ಕೆಲಸ ಮಾಡುತ್ತಿದ್ದು, ಕಾಂಗ್ರೆಸ್ ಪಕ್ಷ ಪುರಸಭೆಯಲ್ಲಿ ಅಧಿಕಾರ ಹಿಡಿಯಲಿದೆ ಎಂದರು.
ಇದೇ ಸಂದರ್ಭದಲ್ಲಿ 14, 15ನೇ ವಾರ್ಡ್ ಸೇರಿದಂತೆ ಇತರ ಪುರಸಭಾ ವ್ಯಾಪ್ತಿಯಲ್ಲಿನ ಅಭ್ಯರ್ಥಿಗಳ ಪರ ಪ್ರಚಾರ ನಡೆಸಿದರು. ಇದೇ ವೇಳೆ ಕಾಂಗ್ರೆಸ್ ಮುಖಂಡರಾದ ಲೋಕೇಶ್, ರವಿಕುಮಾರ್, ಪುರಸಭಾ ಮಾಜಿ ಸದಸ್ಯ ಸುನೀಲ್ ಸೇರಿದಂತೆ ಇತರರು ಪ್ರಚಾರದಲ್ಲಿ ಭಾಗವಹಿಸಿದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಬಳಂಜದ ಪುಟ್ಟ ಪೋರನ ಕೃಷಿ ಪ್ರೇಮ | ಕಸಿ ಕಟ್ಟುವಿಕೆಯಲ್ಲಿ ಬಲು ಪರಿಣಿತ ಈ 6 ನೇ ತರಗತಿ ಬಾಲಕ
ಎದೆ ನೋವು, ಮಧುಮೇಹ, ಥೈರಾಯ್ಡ್ ,ಸಮಸ್ಯೆಗಳಿಗೆ ಪರಿಹಾರ ತೆಂಗಿನಕಾಯಿ ಹೂವು
ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು
ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?
ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್ |
ಹೊಸ ಸೇರ್ಪಡೆ
R. B. Timmapur: ಮದ್ಯದಂಗಡಿ ಮಂಜೂರಿಗೆ ಲಂಚ ಕೇಳಿದ್ದ ಇಬ್ಬರ ಅಮಾನತು
8 ಮಸೂದೆ ಮಂಡನೆಗೆ ಸಂಪುಟ ಒಪ್ಪಿಗೆ; ವಿಧಾನಮಂಡಲದ ಅಧಿವೇಶನದಲ್ಲಿ ಮಂಡನೆ
Elephant: ಬಂಡೀಪುರದಲ್ಲಿ ಆನೆ ಮೃತದೇಹ ಪತ್ತೆ: ಆಂಥ್ರಾಕ್ಸ್ ಸೋಂಕು ಶಂಕೆ
Ballari District Hospital: ಬಾಣಂತಿಯರ ಸಾವಿಗೆ ವೈದ್ಯರಲ್ಲ, ದ್ರಾವಣ ಕಾರಣ’
ನಕ್ಸಲರ ಪತ್ತೆಗೆ ಶಿವಮೊಗ್ಗ ಪೊಲೀಸರು ಸಜ್ಜು : ಎಎನ್ಎಫ್ ಮಾದರಿಯಲ್ಲಿ ವಿಶೇಷ ಪೊಲೀಸ್ ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.