ಚಿಂಚೋಳಿ ಉಪಸಮರದಲ್ಲಿ ಬಿಜೆಪಿಗೆ ಗೆಲುವು, ಬಳ್ಳಾರಿಯಲ್ಲಿ ಉಗ್ರಪ್ಪಗೆ ಸೋಲು!
Team Udayavani, May 23, 2019, 2:08 PM IST
ಬಳ್ಳಾರಿ/ಚಿಂಚೋಳಿ:ಚಿಂಚೋಳಿ ವಿಧಾನಸಭಾ ಕ್ಷೇತ್ರದ ಉಪಚುನಾವಣೆಯಲ್ಲಿ ಬಿಜೆಪಿ ಅಭ್ಯರ್ಥಿ ಅವಿನಾಶ್ ಜಾಧವ್ 7,638 ಮತಗಳ ಅಂತರದಿಂದ ಗೆಲುವು ಸಾಧಿಸಿದ್ದಾರೆ. ಕಾಂಗ್ರೆಸ್ ಹಾಗೂ ಜೆಡಿಎಸ್ ಮೈತ್ರಿ ಅಭ್ಯರ್ಥಿ ಸುಭಾಶ್ ರಾಥೋಡ್ ಪರಾಜಯಗೊಂಡಿದ್ದಾರೆ.
ಚಿಂಚೋಳಿ ಕ್ಷೇತ್ರದ ಕಾಂಗ್ರೆಸ್ ಪಕ್ಷದ ಶಾಸಕರಾಗಿದ್ದ ಡಾ.ಉಮೇಶ್ ಜಾಧವ್ ಅವರು ಕಾಂಗ್ರೆಸ್ ಪಕ್ಷಕ್ಕೆ ರಾಜೀನಾಮೆ ನೀಡಿ ಬಿಜೆಪಿ ಸೇರಿದ್ದರು. ಈ ಹಿನ್ನೆಲೆಯಲ್ಲಿ ಚಿಂಚೋಳಿ ಕ್ಷೇತ್ರಕ್ಕೆ ಉಪಚುನಾವಣೆ ನಡೆದಿತ್ತು. 2013ರಲ್ಲಿ ಚಿಂಚೋಳಿ ವಿಧಾನಸಭಾ ಚುನಾವಣೆ ನಡೆದಿದ್ದು, ಕಾಂಗ್ರೆಸ್ ನ ಉಮೇಶ್ ಜಾಧವ್ ಗೆಲುವು ಸಾಧಿಸಿದ್ದರು. ಬಿಜೆಪಿಯ ಸುನಿಲ್ ವಲ್ಯಾಪುರ್ ಪರಾಜಯಗೊಂಡಿದ್ದರು.
ಬಳ್ಳಾರಿಯಲ್ಲಿ ವಿಎಸ್ ಉಗ್ರಪ್ಪಗೆ ಸೋಲು:
ಬಳ್ಳಾರಿಯಲ್ಲಿ ಕಾಂಗ್ರೆಸ್ ಅಭ್ಯರ್ಥಿ ವಿಎಸ್ ಉಗ್ರಪ್ಪ ಅವರನ್ನು ಬಿಜೆಪಿಯ ವೈ ದೇವೇಂದ್ರಪ್ಪ 50 ಸಾವಿರ ಮತಗಳ ಅಂತರದಿಂದ ಪರಾಜಯಗೊಳಿಸಿದ್ದಾರೆ. ವಿಎಸ್ ಉಗ್ರಪ್ಪ 5,55,970 ಮತ ಪಡೆದಿದ್ದು, ಬಿಜೆಪಿಯ ದೇವೇಂದ್ರಪ್ಪ 6,14,274 ಮತ ಗಳಿಸಿದ್ದಾರೆ. ಆರು ತಿಂಗಳ ಹಿಂದೆ ಬಳ್ಳಾರಿ ಲೋಕಸಭಾ ಕ್ಷೇತ್ರಕ್ಕೆ ನಡೆದಿದ್ದ ಉಪ ಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷದ ವಿಎಸ್ ಉಗ್ರಪ್ಪ ಗೆಲುವು ಸಾಧಿಸಿದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Davanagere; ಉಸ್ತುವಾರಿ ಸಚಿವರ ಬದಲಾವಣೆಗೆ ಸಿಎಂಗೆ ಪತ್ರ ಬರೆದ ಚನ್ನಗಿರಿ ಕಾಂಗ್ರೆಸ್ ಶಾಸಕ
BSY: ಬಿಎಸ್‌ವೈ ತಪ್ಪೊಪ್ಪಿಕೊಂಡಿರುವುದಾಗಿ ಸಂತ್ರಸ್ತೆ ಹೇಳಿಕೆ ದಾಖಲು: ಎಸ್‌ಪಿಪಿ
Belagavi Session: ವಕ್ಫ್ ಅಧಿಸೂಚನೆ ಹಿಂಪಡೆಯಲ್ಲ, ಪರಿಹಾರಕ್ಕೆ ಸಮಿತಿ: ಸಿಎಂ ಭರವಸೆ
Over Remarks: ʼಸಿದ್ದರಾಮೋತ್ಸವʼ ಮಾಡಿಸುವ ನೀವು ‘ಅಂಬೇಡ್ಕರ್ ಉತ್ಸವ’ ಮಾಡಲ್ಲ: ಬಿಜೆಪಿ
Internal Dissent: ಪ್ರಧಾನಿ ಮೋದಿ ಭೇಟಿಯಾದ ವಿಜಯೇಂದ್ರ ದೂರದಿದ್ದರೂ ‘ಸಂದೇಶ’ ರವಾನೆ
MUST WATCH
ಹೊಸ ಸೇರ್ಪಡೆ
Davanagere; ಉಸ್ತುವಾರಿ ಸಚಿವರ ಬದಲಾವಣೆಗೆ ಸಿಎಂಗೆ ಪತ್ರ ಬರೆದ ಚನ್ನಗಿರಿ ಕಾಂಗ್ರೆಸ್ ಶಾಸಕ
Puttur: ಬಸ್ – ಬೈಕ್ ಅಪಘಾತ; ಸವಾರ ಸಾವು
Parliament; ಸಂಸತ್ ಭವನ ಎದುರು ತಳ್ಳಾಟ; ಇಬ್ಬರು ಸಂಸದರಿಗೆ ಗಾಯ, ರಾಹುಲ್ ವಿರುದ್ದ ಆರೋಪ
BBK11: ಕೊನೆಗೂ ಬಿಗ್ ಬಾಸ್ ಬಿಟ್ಟು ಬಂದಿದ್ದಕ್ಕೆ ಕಾರಣ ಬಹಿರಂಗಪಡಿಸಿದ ಗೋಲ್ಡ್ ಸುರೇಶ್
ಕತ್ತರಿಸಿದ ಮೂಗನ್ನು ಚೀಲದಲ್ಲಿ ಇಟ್ಟು ಆಸ್ಪತ್ರೆಗೆ ಓಡಿ ಬಂದ ಮಹಿಳೆ, ಬೆಚ್ಚಿ ಬಿದ್ದ ವೈದ್ಯರು
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.