ಕಾವೇರಿ ಸ್ವತ್ಛತಾ ಆಂದೋಲನಕ್ಕೆ ಸಹಕರಿಸಿ
ಹುಣ್ಣಿಮೆ ಆರತಿ ಕಾರ್ಯಕ್ರಮದಲ್ಲಿ ಸಮಿತಿ ಅಧ್ಯಕ್ಷ ಸಿದ್ದ ರಾಜು ಮನವಿ
Team Udayavani, May 23, 2019, 3:21 PM IST
ರಾಮನಾಥಪುರ ಕಾವೇರಿ ನದಿ ದಂಡೆಯಲ್ಲಿ ಕಾವೇರಿ ನದಿ ಸ್ವಚ್ಛತಾ ಅಂದೋಲನಾ ಸಮಿತಿ ವತಿಯಿಂದ ಸ್ವಚ್ಛತಾ ಕಾರ್ಯಕ್ರಮ ನಡೆಯಿತು.
ರಾಮನಾಥಪುರ: ಪ್ರಕೃತಿಯನ್ನು ಆರಾಧಿಸುವುದರೊಂದಿಗೆ ಬೆಳೆಸಿ ಉಳಿಸಿ ದಲ್ಲಿ ಮಾತ್ರ ಪರಿಸರದ ಸಮತೋಲನ ಕಾಯ್ದುಕೊಳ್ಳಲು ಸಾಧ್ಯ ಎಂದು ಕಾವೇರಿ ನದಿ ಸ್ವಚ್ಛತಾ ಆಂದೋಲನಾ ಸಮಿತಿ ಅಧ್ಯಕ್ಷ ಸಿದ್ದರಾಜು ಹೇಳಿದರು.
ಪಟ್ಟಣದ ಕಾವೇರಿ ನದಿ ಸ್ವಚ್ಛತಾ ಆಂದೋಲನಾ ಸಮಿತಿ ಹಾಗೂ ತಾಲೂಕು ಶರಣ ಸಾಹಿತ್ಯ ಪರಿಷತ್ತು ಆಶ್ರಯದಲ್ಲಿ ನಡೆದ ಹುಣ್ಣಿಮೆ ಆರತಿ ಕಾರ್ಯಕ್ರಮದಲ್ಲಿ ಮಾತನಾಡಿ, ಕಾವೇರಿ ನದಿಯ ಸ್ವಚ್ಛತೆ ಹಾಗೂ ಸಂರಕ್ಷಣೆ ನಿಟ್ಟಿನಲ್ಲಿ ಸ್ವಚ್ಛತಾ ಆಂದೋಲನಾ ಸಮಿತಿ ಕೈಗೊಂಡಿರುವ ಕಾರ್ಯಕ್ರಮಗಳಿಗೆ ಪ್ರತಿಯೊಬ್ಬ ನಾಗರಿಕರೂ ಸಹಕರಿಸಿ ಸ್ವಚ್ಛ ಪರಿಸರದ ಉಳಿವಿಗೆ ಕಾರಣಿಭೂತರಾಗ ಬೇಕು ಎಂದು ಮನವಿ ಮಾಡಿದರು.
ಸಮಿತಿ ಜಿಲ್ಲಾ ಅಧ್ಯಕ್ಷ ಎಂ.ಎನ್.ಕುಮಾರಸ್ವಾಮಿ ಮಾತನಾಡಿ, ದಕ್ಷಿಣ ಭಾರತದ ಕೋಟ್ಯಂತರ ಜನ, ಜಾನು ವಾರುಗಳಿಗೆ ಜೀವ ಜಲವಾಗಿರುವ ಕಾವೇರಿ ತನ್ನ ತವರೂರಾದ ಕೊಡಗು ಜಿಲ್ಲೆಯ ಮೂಲದಿಂದಲೇ ಕಲುಷಿತ ವಾಗಿ ಹರಿಯುವ ಸ್ಥಿತಿ ಕಂಡುಬರುತ್ತಿ ರುವುದು ನಿಜಕ್ಕೂ ದುರಂತ. ಅರಣ್ಯ ನಾಶ ಹಾಗೂ ಹವಾಮಾನ ವೈಪರೀತ್ಯ ದಿಂದ ಧರೆಯಲ್ಲಿ ಏರುಪೇರು ಉಂಟಾ ಗುವುದರೊಂದಿಗೆ ಅಭಿವೃದ್ಧಿ ಹಾಗೂ ಪ್ರವಾಸೋಧ್ಯಮ ಹೆಸರಿನಲ್ಲಿ ಜೀವನದಿ ಕಾವೇರಿಯ ಉಪನದಿಗಳು ಮಾಯ ವಾಗುವುದರೊಂದಿಗೆ ಪ್ರಮುಖ ನದಿ ಗಳು ತಮ್ಮ ಅಸ್ತಿತ್ವವನ್ನು ಕಳೆದುಕೊಳ್ಳು ತ್ತಿರುವುದು ಇತ್ತೀಚಿನ ಬೆಳವಣಿಗೆ ಯಾಗಿದೆ ಎಂದರು.
ಕಾವೇರಿ ನದಿ ಸ್ವಚ್ಛತಾ ಆಂದೋಲನಾ ಸಮಿತಿ ತಾಲೂಕು ಕಾರ್ಯದರ್ಶಿ ಕಾಳಬೋಮಿ, ಖಜಾಂಚಿ ಕೇಶವ, ಸದಸ್ಯ ರಾದ ವಿಯಕುಮಾರ್, ಶ್ರೀರಾಮ, ಅಶ್ವನ್, ಮಂಜು, ಸೌಭಾಗ್ಯ ಇದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Hassan: ಗರ್ಭಿಣಿ ಪತ್ನಿಯ ಹತ್ಯೆಗೈದು ಆತ್ಮಹ*ತ್ಯೆಗೆ ಯತ್ನಿಸಿದ ಪತಿ
Halebeedu; ನ. 29-ಡಿ. 4: ಜೈನರ ಗುತ್ತಿ ಕ್ಷೇತ್ರದಲ್ಲಿ ಪಂಚಕಲ್ಯಾಣ ಮಹೋತ್ಸವ
Belur: ಶಾಲೆ ಆವರಣದಲ್ಲಿ ಕಾಡಾನೆ ಪ್ರತ್ಯಕ್ಷ, ವಿದ್ಯಾರ್ಥಿಗಳ ಆತಂಕ
Hasana: ಹೊಳೆನರಸೀಪುರ ಸರಕಾರಿ ನರ್ಸಿಂಗ್ ಕಾಲೇಜಿನಲ್ಲಿ ಗಡ್ಡ ವಿವಾದ ಸುಖಾಂತ್ಯ!
Hassan: ವಿವಾಹ ಆಮಂತ್ರಣ ಪತ್ರಿಕೆ ಹಂಚಿ ಮನೆಗೆ ಮರಳುತ್ತಿದ್ದ ಪೊಲೀಸ್ ಬರ್ಬರ ಹ*ತ್ಯೆ!
MUST WATCH
ಎದೆ ನೋವು, ಮಧುಮೇಹ, ಥೈರಾಯ್ಡ್ ,ಸಮಸ್ಯೆಗಳಿಗೆ ಪರಿಹಾರ ತೆಂಗಿನಕಾಯಿ ಹೂವು
ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು
ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?
ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್ |
ಕೊಲ್ಲೂರಿನಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಡಿಸಿಎಂ ಡಿ ಕೆ ಶಿವಕುಮಾರ್
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.