ಕೇರಳದಲ್ಲಿ ಯುಡಿಎಫ್‌ ಕೈಹಿಡಿದ ಶಬರಿಮಲೆ ವಿವಾದ, ರಾಹುಲ್‌ ಸ್ಪರ್ಧೆ


Team Udayavani, May 24, 2019, 6:03 AM IST

kerala

ಕಾಸರಗೋಡು: ಕದನ ಕುತೂಹಲಕ್ಕೆ ಕಾರಣವಾಗಿದ್ದ ಲೋಕಸಭಾ ಚುನಾವಣೆಯ ಮತ ಎಣಿಕೆ ಪ್ರಕ್ರಿಯೆ ಗುರುವಾರ ಬೆಳಗ್ಗೆ ಆರಂಭಗೊಂಡಿದ್ದು, ಕಾಸರಗೋಡು ಲೋಕಸಭಾ ಕ್ಷೇತ್ರದ ಮತ ಎಣಿಕೆ ಕಾಂಞಂಗಾಡ್‌ ಸಮೀಪದ ಪಡನ್ನಕ್ಕಾಡ್‌ ನೆಹರೂ ಆರ್ಟ್ಸ್ ಆ್ಯಂಡ್‌ ಸಯನ್ಸ್‌ ಕಾಲೇಜಿನಲ್ಲಿ ಬಿಗು ಪೊಲೀಸ್‌ ಬಂದೋಬಸ್ತಿನಲ್ಲಿ ನಡೆಯಿತು.

ಕೇರಳದಲ್ಲಿ ಎಲ್‌ಡಿಎಫ್‌ ಸರಕಾರ ವಿದ್ದರೂ, ಲೋಕಸಭಾ ಚುನಾವಣೆಯಲ್ಲಿ ಮತದಾರರು ಎಡರಂಗವನ್ನು ತಿರಸ್ಕರಿಸಿ ಯುಡಿಎಫ್‌ ಅಭ್ಯರ್ಥಿಗÙ ‌ ಕೈಹಿಡಿದಿದ್ದಾರೆ. ಕೇರಳದಲ್ಲಿ ಯುಡಿಎಫ್‌ ಅಲೆ ಎಂದರೂ ತಪ್ಪಾಗಲಾರದು. ದೇಶದಾದ್ಯಂತ ಮೋದಿ ಅಲೆ ಇದ್ದರೆ ಕೇರಳದಲ್ಲಿ ಮಾತ್ರ ರಾಹುಲ್‌ ಅಲೆ ಕಾಣಿಸಿಕೊಂಡಿದೆ.

ಬಹುತೇಕ ಚುನಾವಣೋತ್ತರ ಸಮೀಕ್ಷೆ ಗಳಲ್ಲೂ ಯುಡಿಎಫ್‌ ಬಹಳಷ್ಟು ಮುನ್ನಡೆ ಯನ್ನು ಸಾಧಿಸಲಿದೆ ಎಂದು ಭವಿಷ್ಯ ನುಡಿದಿತ್ತು. ಈ ಭವಿಷ್ಯ ಸತ್ಯವಾಗಿದೆ. ಎಲ್‌ಡಿಎಫ್‌ ನೆಲಕಚ್ಚಲಿದೆ ಎಂದೇ ಬಹುತೇಕ ಸಮೀಕ್ಷೆಗಳಲ್ಲಿ ಬಹಿರಂಗಗೊಳಿಸಲಾಗಿತ್ತು. ಅದರಂತೆಯೇ ಮತ ಎಣಿಕೆಯ ಪ್ರತಿ ಕ್ಷಣದಲ್ಲೂ ಅದನ್ನೇ ರುಜು ಮಾಡುವಂತಿತ್ತು.

ಕಾಂಗ್ರೆಸ್‌ ಅಲೆ ಸೃಷ್ಟಿ
ಎಡರಂಗದ ಹೀನಾಯ ಸೋಲಿಗೆ ಶಬರಿಮಲೆ ವಿವಾದ ಪ್ರಮುಖ ಕಾರಣವಾಗಿದ್ದರೆ, ಕಾಂಗ್ರೆಸ್‌ ಅಧ್ಯಕ್ಷ ರಾಹುಲ್‌ ಗಾಂಧಿ ಕೇರಳದ ವಯನಾಡಿನಲ್ಲಿ ಕೇರಳಾದ್ಯಂತ ಕಾಂಗ್ರೆಸ್‌ ಅಲೆ ಸೃಷ್ಟಿಗೆ ಕಾರಣವಾಯಿತು. ಅದರ ಸ್ಪಷ್ಟ ಸೂಚನೆಯೂ ಚುನಾವಣಾ ಫಲಿತಾಂಶದಲ್ಲಿ ಗೋಚರಿಸಿದೆ.

ಎಡರಂಗ ಹೀನಾಯ ಸೋಲು
ಪಿಣರಾಯಿ ಸರಕಾರದ ಹಿಂದೂ ವಿರೋಧಿ ನೀತಿಗಳು, ಶಬರಿಮಲೆಗೆ ಮಹಿಳೆಯರ ಪ್ರವೇಶ ಕುರಿತಂತೆ ಸುಪ್ರೀಂ ಕೋರ್ಟ್‌ ತೀರ್ಪು ಬಗ್ಗೆ ತೆಗೆದುಕೊಂಡ ನಿಲುವು ಮೊದಲಾದವು ಎಡರಂಗದ ಹೀನಾಯ ಸೋಲಿನಲ್ಲಿ ಪ್ರಮುಖ ಪಾತ್ರವಹಿಸಿತು ಎಂಬುದಾಗಿ ರಾಜಕೀಯ ತಜ್ಞರು ಅಭಿಪ್ರಾಯ ವ್ಯಕ್ತಪಡಿಸಿದ್ದಾರೆ.

ಶಬರಿಮಲೆಗೆ ಮಹಿಳೆಯರ ಪ್ರವೇಶದ ಕುರಿತಾಗಿ ಕೇರಳ ಸರಕಾರ ತೆಗೆದುಕೊಂಡ ನಿಲುವು ಎಡರಂಗವನ್ನು ಕೈಹಿಡಿಯುವ ಬದಲಾಗಿ ತಿರುಗೇಟು ಉಂಟಾಯಿತು. ಶಬರಿಮಲೆಯ ಮುನಿಸು ಎಡರಂಗಕ್ಕೆ ತಟ್ಟಿದೆ ಎಂಬ ಅಭಿಪ್ರಾಯಗಳೂ ಕೇಳಲಾರಂಭಿಸಿವೆ.

ಶಬರಿಮಲೆ ವಿವಾದ: ಎನ್‌ಡಿಎಗೆ ಲಾಭವಿಲ್ಲ
ಶಬರಿಮಲೆಗೆ ಮಹಿಳೆಯರ ಪ್ರವೇಶದ ವಿರುದ್ಧವಾಗಿ ನಡೆದ ಹೋರಾಟದಿಂದ ಎನ್‌ಡಿಎಗೆ ಲಾಭ ತಂದುಕೊಡಲಿದೆ ಎಂದು ನಿರೀಕ್ಷಿಸಲಾಗಿದ್ದರೂ, ನಿರೀಕ್ಷೆಯಂತೆ ಎನ್‌ಡಿಎಗೆ ಯಾವುದೇ ಲಾಭ ತಂದಿಲ್ಲ.

ಬದಲಾಗಿ ಶಬರಿಮಲೆ ವಿವಾದ ಯುಡಿಎಫ್‌ನ ಕೈಹಿಡಿದಿದೆ ಎಂಬ ಅಭಿಪ್ರಾಯಗಳು ಕೇಳಿ ಬರುತ್ತಿವೆ. ಎಡರಂಗದ ಘಟಾನುಘಟಿಗಳೆಲ್ಲ ಪರಾಭವವನ್ನು ಅನುಭವಿಸಿದ್ದಾರೆ.

ಪ್ರಾರಂಭದಿಂದಲೇ ಐಕ್ಯರಂಗ ಮುನ್ನಡೆ
ಮತ ಎಣಿಕೆಯ ಆರಂಭದಿಂದಲೇ ಐಕ್ಯರಂಗ ಬಹುತೇಕ ಕ್ಷೇತ್ರಗಳಲ್ಲಿ ಮುನ್ನಡೆಯನ್ನು ಸಾಧಿಸುತ್ತಲೇ ಮುಂದೆ ಸಾಗಿತ್ತು.

ಮೋದಿ ಮೋಡಿ: ಬಿಜೆಪಿ ಕಾರ್ಯಕರ್ತರ ಸಂಭ್ರಮ
ದೇಶದಾದ್ಯಂತ ಮೋದಿ ಅಲೆಯಲ್ಲಿ ಬಿಜೆಪಿ ನೇತೃತ್ವದ ಎನ್‌ಡಿಎ ನಿರೀಕ್ಷೆಗೂ ಮೀರಿ ಗೆಲುವು ಸಾಧಿಸಿದ ಅಂಗವಾಗಿ ಕಾಸರಗೋಡು ಜಿಲ್ಲೆಯ ವಿವಿಧೆಡೆ ಬಿಜೆಪಿ ಕಾರ್ಯಕರ್ತರು ಪಟಾಕಿ ಸಿಡಿಸಿ ವಿಜಯೋತ್ಸವವನ್ನು ಆಚರಿಸಿದರು. ಕಾಸರಗೋಡಿನ ಬಿಜೆಪಿ ಕೇಂದ್ರಗಳಲೆಲ್ಲಾ ಕಾರ್ಯಕರ್ತರು ಪಟಾಕಿ ಸಿಡಿಸಿ ಸಿಹಿ ಹಂಚಿ ಸಂಭ್ರಮಪಟ್ಟರು.

ಟಾಪ್ ನ್ಯೂಸ್

0055

BBK11: ಮಂಜು ಅವರದ್ದು ಚೀಪ್ ಮೆಂಟಲಿಟಿ‌ ಎಂದ ರಜತ್; ಭವ್ಯ – ಮೋಕ್ಷಿತಾ ವಾಗ್ವಾದ

9-ullala

Ullala: ಸೇತುವೆಗೆ ತೇಪೆ ಹಚ್ಚುವ ಕಾಮಗಾರಿ; ರಾ. ಹೆದ್ದಾರಿಯಲ್ಲಿ ವಾಹನ ಸಂಚಾರ ವ್ಯತ್ಯಯ

BGT: ಆಸೀಸ್‌ ಮಾಧ್ಯಮದ ವಿರುದ್ದ ವಿರಾಟ್‌ ಗರಂ: ಏರ್‌ಪೋರ್ಟ್‌ ನಲ್ಲಿ ವರದಿಗಾರ್ತಿ ಜತೆ ಜಗಳ

BGT: ಆಸೀಸ್‌ ಮಾಧ್ಯಮದ ವಿರುದ್ದ ವಿರಾಟ್‌ ಗರಂ: ಏರ್‌ಪೋರ್ಟ್‌ ನಲ್ಲಿ ವರದಿಗಾರ್ತಿ ಜತೆ ಜಗಳ

8-belthangady

Belthangady: ಕ್ರಿಸ್ಮಸ್‌ ಹಬ್ಬಕ್ಕೆ ವಿದ್ಯುತ್ ಅಲಂಕಾರ ಮಾಡುವ ವೇಳೆ ಶಾಕ್: ಬಾಲಕ ಸಾವು

Chikkamagaluru: ಎಮ್ಮೆ ಹುಡುಕಲು ಹೋದವರ ಮೇಲೆ ಕಾಡಾನೆ ದಾಳಿ; ಮಗ ಪರಾರಿ, ತಂದೆ ಸಾವು

Chikkamagaluru: ಎಮ್ಮೆ ಹುಡುಕಲು ಹೋದವರ ಮೇಲೆ ಕಾಡಾನೆ ದಾಳಿ; ಮಗ ಪರಾರಿ, ತಂದೆ ಸಾವು

‌UP: ಫಸ್ಟ್‌ ನೈಟ್‌ ದಿನ ಬಿಯರ್‌, ಗಾಂಜಾ ತಂದು ಕೊಡಲು ಬೇಡಿಕೆ ಇಟ್ಟ ಪತ್ನಿ; ಪತಿ ಶಾಕ್.!

‌UP: ಫಸ್ಟ್‌ ನೈಟ್‌ ದಿನ ಬಿಯರ್‌, ಗಾಂಜಾ ತಂದು ಕೊಡಲು ಬೇಡಿಕೆ ಇಟ್ಟ ಪತ್ನಿ; ಪತಿ ಶಾಕ್.!

ಕಾರಂಜಾ ಸಂತ್ರಸ್ತರ ಸಮಸ್ಯೆ ಅಧ್ಯಯನಕ್ಕೆ ತಾಂತ್ರಿಕ ಸಮಿತಿ ರಚನೆ: ಸಿಎಂ ಸಿದ್ದರಾಮಯ್ಯ

Bidar: ಕಾರಂಜಾ ಸಂತ್ರಸ್ತರ ಸಮಸ್ಯೆ ಅಧ್ಯಯನಕ್ಕೆ ತಾಂತ್ರಿಕ ಸಮಿತಿ ರಚನೆ: ಸಿಎಂ ಸಿದ್ದರಾಮಯ್ಯ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಗಡಿ ನಿರ್ಬಂಧ ತೆರವುಗೊಳಿಸಲು ಆಗ್ರಹ

ಗಡಿ ನಿರ್ಬಂಧ ತೆರವುಗೊಳಿಸಲು ಆಗ್ರಹ

Malayali

12 ವರ್ಷಗಳಿಂದ ಮನೆಯಲ್ಲೇ ಕೃಷಿ ಮಾಡುವ ತಿರುವನಂತಪುರದ ದಂಪತಿ

ಕಾಸರಗೋಡು: 7 ಮಂದಿಗೆ ಸೋಂಕು

ಕಾಸರಗೋಡು: 7 ಮಂದಿಗೆ ಸೋಂಕು

ಕಡಿಮೆ ಖರ್ಚಿನಲ್ಲಿ ಅಟೋಮ್ಯಾಟಿಕ್‌ ವೆಂಟಿಲೇಟರ್‌ ಆವಿಷ್ಕರಿಸಿದ ಪ್ರಾಧ್ಯಾಪಕ

ಕಡಿಮೆ ಖರ್ಚಿನಲ್ಲಿ ಅಟೋಮ್ಯಾಟಿಕ್‌ ವೆಂಟಿಲೇಟರ್‌ ಆವಿಷ್ಕರಿಸಿದ ಪ್ರಾಧ್ಯಾಪಕ

ನಾಲ್ಕೇ ತಾಸುಗಳಲ್ಲಿ ಮನೆಗೆ ಬಂತು ಅಕ್ಕಿ!

ನಾಲ್ಕೇ ತಾಸುಗಳಲ್ಲಿ ಮನೆಗೆ ಬಂತು ಅಕ್ಕಿ!

MUST WATCH

udayavani youtube

ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ

udayavani youtube

ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ

udayavani youtube

ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ

udayavani youtube

ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ

udayavani youtube

ಮನೆ ತೊರೆದಿದ್ದ ವ್ಯಕ್ತಿ 14 ವರ್ಷಗಳ ಬಳಿಕ ಮರಳಿ ಗೂಡಿಗೆ.

ಹೊಸ ಸೇರ್ಪಡೆ

9

Kaup: ಸಮಸ್ಯೆಗೆ ದೂರು ನೀಡಲು 1912ಗೆ ಕರೆ ಮಾಡಿ

8

Shirva: ಹೊಂಡ ಗುಂಡಿ, ಧೂಳುಮಯ ಕೋಡು-ಪಂಜಿಮಾರು ರಸ್ತೆ

0055

BBK11: ಮಂಜು ಅವರದ್ದು ಚೀಪ್ ಮೆಂಟಲಿಟಿ‌ ಎಂದ ರಜತ್; ಭವ್ಯ – ಮೋಕ್ಷಿತಾ ವಾಗ್ವಾದ

7(1

Udupi: ಉದ್ಘಾಟನೆ ಕಾಣದ ಸರಕಾರಿ ಕಟ್ಟಡಗಳು

9-ullala

Ullala: ಸೇತುವೆಗೆ ತೇಪೆ ಹಚ್ಚುವ ಕಾಮಗಾರಿ; ರಾ. ಹೆದ್ದಾರಿಯಲ್ಲಿ ವಾಹನ ಸಂಚಾರ ವ್ಯತ್ಯಯ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.