ಮಡಿಕೇರಿ: ಪೊಲೀಸ್ ಕಟ್ಟಡಗಳ ನವೀಕರಣಕ್ಕೆ ಶಂಕುಸ್ಥಾಪನೆ
Team Udayavani, May 24, 2019, 6:13 AM IST
ಮಡಿಕೇರಿ: ಕಳೆದ ಸಾಲಿನಲ್ಲಿ ಸುರಿದ ಮಹಾಮಳೆಯಿಂದ ಹಾನಿಗೀಡಾದ ಕೊಡಗು ಪೊಲೀಸ್ ಇಲಾಖೆಯ ಕಟ್ಟಡಗಳ ಪುನರ್ ನಿರ್ಮಾಣ ಮತ್ತು ನವೀಕರಣ ಕಾರ್ಯಕ್ಕೆ ಪೊಲೀಸ್ ಹೌಸಿಂಗ್ ಕಾರ್ಪೊàರೇಷನ್‌ನ ಪ್ರಧಾನ ವ್ಯವಸ್ಥಾಪಕ ಹಾಗೂ ಪೊಲೀಸ್ ಮಹಾ ನಿರ್ದೇಶಕ ಕಿಶೋರ್ ಚಂದ್ರ ಅವರು ಮಡಿಕೇರಿಯಲ್ಲಿ ಶಂಕುಸ್ಥಾಪನೆ ನೆರವೇರಿಸಿದರು.
ಕಳೆದ ಸಾಲಿನ ಆಗಸ್ಟ್ ತಿಂಗಳಲ್ಲಿ ಸಂಭವಿಸಿದ ಪ್ರಕೃತಿ ವಿಕೋಪದಲ್ಲಿ ಕೊಡಗು ಜಿಲ್ಲಾ ಪೊಲೀಸ್ ಇಲಾಖೆಗೂ ಅಪಾರ ನಷ್ಟವಾಗಿದ್ದು, ಹಾನಿಯ ಕುರಿತಂತೆ ಕೊಡಗು ಜಿಲ್ಲಾ ಪೊಲೀಸ್ ಇಲಾಖೆ ರಾಜ್ಯ ಪೊಲೀಸ್ ಹೌಸಿಂಗ್ ಕಾರ್ಪೊàರೇಷನ್‌ಗೆ ವಿಸ್ತತ ವರದಿ ಸಲ್ಲಿಸಿತ್ತು. ಈ ಹಿನ್ನಲೆಯಲ್ಲಿ ವಿಶೇಷ ತಂತ್ರಜ್ಞರ ತಂಡ ಈ ಹಿಂದೆ ಜಿಲ್ಲೆಗೆ ಆಗಮಿಸಿ ಮಡಿಕೇರಿ, ಸೋಮವಾರಪೇಟೆ, ಶನಿವಾರಸಂತೆ ಮತ್ತು ಕುಟ್ಟ ಪೊಲೀಸ್ ಠಾಣೆಗಳಿಗೆ ತೆರಳಿ ಪರಿಶೀಲನೆ ನಡೆಸಿತ್ತು. ಅತಿಯಾದ ಮಳೆಯಿಂದ ಪೊಲೀಸ್ ವಸತಿ ಗೃಹ, ಠಾಣೆಗಳು ಮತ್ತು ಕಚೇರಿಗಳಿಗಾದ ಹಾನಿ, ಮುಂದೆ ಕೈಗೊಳ್ಳಬೇಕಾದ ಕ್ರಮಗಳ ಕುರಿತು ತಂತ್ರಜ್ಞರು ಇಲಾಖೆ ಮೂಲಕ ಸರಕಾರಕ್ಕೆ ವರದಿ ಸಲ್ಲಿಸಿದ್ದರು.
ರಾಜ್ಯ ಸರಕಾರ, ರಾಜ್ಯ ಪೊಲೀಸ್ ಹೌಸಿಂಗ್ ಕಾರ್ಪೊàರೇಷನ್‌ಗೆ r 10 ಕೋಟಿ ರೂ.ಗಳನ್ನು ಬಿಡುಗಡೆ ಮಾಡಿತ್ತು. ಮಡಿಕೇರಿ ಪೊಲೀಸ್ ವಸತಿ ಗೃಹ, ಸೋಮವಾರಪೇಟೆ, ಶನಿವಾರಸಂತೆ ಮತ್ತು ಕುಟ್ಟ ಪೊಲೀಸ್ ಠಾಣೆ, ಕಚೇರಿ ಮತ್ತು ಪೊಲೀಸ್ ವಸತಿ ಗೃಹಗಳ ಆಧುನೀಕರಣ, ತಡೆಗೋಡೆ, ಕಾಂಕ್ರೀಟ್ ರಸ್ತೆ, ಒಳಚರಂಡಿ ವ್ಯವಸ್ಥೆ, ದುರಸ್ಥಿ ಮತ್ತು ಅಗತ್ಯ ಕಾಮಗಾರಿಗಳನ್ನು ನಿರ್ವಹಿಸುವ ಹೊಣೆಯನ್ನು ಪೊಲೀಸ್ ಹೌಸಿಂಗ್ ಕಾರ್ಪೊàರೇಷನ್‌ಗೆ ವಹಿಸಲಾಗಿತ್ತು.
ಕಾಮಗಾರಿಗಳ ಕುರಿತು ಮಾತನಾಡಿದ ಎಸ್ಪಿ ಡಾ.ಸುಮನ್ ಡಿ.ಪಣ್ಣೇಕರ್, ಜಿಲ್ಲೆಯ 4 ಕಡೆಗಳಲ್ಲಿ 10 ಕೋಟಿ ರೂ.ವೆಚ್ಚದಲ್ಲಿ ವಿವಿಧ ಕಾಮಗಾರಿಗಳು ನಡೆಯಲಿವೆ ಎಂದು ಮಾಹಿತಿ ನೀಡಿದರು. ಎ.ಡಿ.ಜಿ.ಪಿ. ಮಾಲಿನಿ ಕೃಷ್ಣಮೂರ್ತಿ, ನಕ್ಸಲ್ ನಿಗ್ರಹ ದಳದ ಪೊಲೀಸ್ ಮಹಾ ನಿರ್ದೇಶಕ ವಿಕಾಸ್ ಕುಮಾರ್ ವಿಕಾಸ್, ದಕ್ಷಿಣ ವಲಯ ಪೊಲೀಸ್ ಮಹಾ ನಿರ್ದೇಶಕ ಉಮೇಶ್ ಕುಮಾರ್, ಮಡಿಕೇರಿ ವಲಯ ಉಪಅಧೀಕ್ಷಕ ಸುಂದರ್ ರಾಜ್, ಉಪಸ್ಥಿತರಿದ್ದರು.
ಕಚೇರಿಗಳ ದುರಸ್ತಿ
ಪೊಲೀಸ್ ಹೌಸಿಂಗ್ ಕಾರ್ಪೊàರೇಶನ್‌ನ ಪ್ರಧಾನ ಅಭಿಯಂತರ ಏಝಾಜ್ ಹುಸೇನ್ ಮಾತನಾಡಿ, ಕೊಡಗು ಜಿಲ್ಲೆಯ ಮಡಿಕೇರಿ, ಸೋಮವಾರಪೇಟೆ, ಶನಿವಾರಸಂತೆ ಮತ್ತು ಕುಟ್ಟು ಪೊಲೀಸ್ ಠಾಣೆ, ವಸತಿ ಗೃಹ, ಕಚೇರಿಗಳ ದುರಸ್ತಿ ಮತ್ತು ಕೆಲವು ಆಧುನೀಕರಣ ಕಾಮಗಾರಿಗಳೊಂದಿಗೆ ರಸ್ತೆ, ಒಳಚರಂಡಿ, ತಡೆಗೋಡೆ ಕಾಮಗಾರಿಗಳನ್ನು ಮಾಡಲಾಗುತ್ತದೆ. ಈ ಕಾಮಗಾರಿಗಳನ್ನು ಪೂರೈಸಲು 3 ತಿಂಗಳ ಗಡುವು ನೀಡಲಾಗಿದ್ದು, ಕಾಮಗಾರಿ ಆರಂಭಿಸಲಾಗುತ್ತದೆ ಎಂದು ತಿಳಿಸಿದರು. ರಸ್ತೆಗಳಲ್ಲಿ ನಡೆದಾಡುವುದೇ ದುಸ್ತರವಾಗಿ ಪರಿಣಮಿಸಿದೆ. ಸಂಚಾರ ನಿಯಂತ್ರಿಸುವುದೇ ಸವಾಲಾಗಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಎದೆ ನೋವು, ಮಧುಮೇಹ, ಥೈರಾಯ್ಡ್ ,ಸಮಸ್ಯೆಗಳಿಗೆ ಪರಿಹಾರ ತೆಂಗಿನಕಾಯಿ ಹೂವು
ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು
ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?
ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್ |
ಕೊಲ್ಲೂರಿನಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಡಿಸಿಎಂ ಡಿ ಕೆ ಶಿವಕುಮಾರ್
ಹೊಸ ಸೇರ್ಪಡೆ
Maharashtra: ಕಾಂಗ್ರೆಸ್ ಗೆ ಕೇವಲ 16 ಸ್ಥಾನ; ಕೈ ಅಧ್ಯಕ್ಷ ಸ್ಥಾನಕ್ಕೆ ಪಟೋಲೆ ರಾಜೀನಾಮೆ
Politics: ಫಡ್ನವೀಸ್ ಗೆ ಬೆಂಬಲ ನೀಡಿದ ಅಜಿತ್; ಮಹಾರಾಷ್ಟ್ರದಲ್ಲಿ ಮುಗಿಯದ ಸಿಎಂ ತಿಕ್ಕಾಟ
Video: ನೋಟಿನ ಮಾಲೆಯ ನೋಟು ಎಗರಿಸಿದ ಕಳ್ಳ… ಮದುವೆ ಬಿಟ್ಟು ಕಳ್ಳನ ಹಿಂದೆ ಓಡಿದ ವರ
Sudeep: ʼಮ್ಯಾಕ್ಸ್ʼ ರಿಲೀಸ್ ದಿನ ಫಿಕ್ಸ್: ಕಿಚ್ಚನ ಸಿಟ್ಟಿಗೆ ಎಚ್ಚೆತ್ತ ನಿರ್ಮಾಣ ಸಂಸ್ಥೆ
Bidar: ಭಾರತದಿಂದಲೇ ವಕ್ಫ್ ತೊಲಗಿಸಬೇಕು: ಯತ್ನಾಳ್
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.