ಬಿಜೆಪಿ ಕಾರ್ಯಕರ್ತರ ಸಂಭ್ರಮಾಚರಣೆ

Team Udayavani, May 24, 2019, 3:08 AM IST

bjp

ಬೆಂಗಳೂರು: ಕರ್ನಾಟಕ ಸೇರಿ ದೇಶಾದ್ಯಂತ ಬಿಜೆಪಿ ಅಭೂತಪೂರ್ವ ಗೆಲವು ಸಾಧಿಸಿದ ಹಿನ್ನೆಲೆಯಲ್ಲಿ ಮಲ್ಲೇಶ್ವರದಲ್ಲಿರುವ ರಾಜ್ಯ ಬಿಜೆಪಿ ಕಚೇರಿಯಲ್ಲಿ ಸಂಭ್ರಮಾಚರಣೆ ಮನೆ ಮಾಡಿತ್ತು. ಪಕ್ಷದ ಹುರಿಯಾಳುಗಳ ಭವಿಷ್ಯ ಪ್ರಕಟವಾಗುತ್ತಿದ್ದಂತೆ ಸಾವಿರಾರು ಕಾರ್ಯಕರ್ತರು ಪಕ್ಷದ ಕಚೇರಿ ಬಳಿ ಧಾವಿಸಿ ಸಿಹಿ ಹಂಚಿ ಸಂಭ್ರಮಿಸಿದರು.

ಕಚೇರಿ ಮುಂಭಾಗದಲ್ಲಿ ಪಟಾಕಿ ಸಿಡಿಸಿ ಸಂತಸ ವ್ಯಕ್ತಪಡಿಸಿದರು. ಇದೇ ವೇಳೆ ವಾದ್ಯದೊಂದಿಗೆ ಹೆಜ್ಜಿ ಹಾಕಿದ ಕಾರ್ಯಕರ್ತರು ಪ್ರಧಾನಿ ನರೇಂದ್ರ ಮೋದಿ, ಪಕ್ಷದ ರಾಷ್ಟ್ರೀಯ ಅಧ್ಯಕ್ಷ ಅಮಿತ್‌ ಶಾ ಹಾಗೂ ಬಿಜೆಪಿ ರಾಜ್ಯಾಧ್ಯಕ್ಷ ಬಿ.ಎಸ್‌.ಯಡಿಯೂರಪ್ಪ ಅವರ ಭಾವಚಿತ್ರ ಹಿಡಿದು ಜೈಕಾರ ಹಾಕಿದರು.

ಮಧ್ಯಾಹ್ನದ ವೇಳೆಗೆ ಆಗಮಿಸಿದ ಮಾಜಿ ಉಪಮುಖ್ಯಮಂತ್ರಿ, ಶಾಸಕ ಆರ್‌.ಅಶೋಕ್‌, ರಾಜ್ಯ ಬಿಜೆಪಿ ಪ್ರಧಾನ ಕಾರ್ಯದರ್ಶಿ ಸಿ.ಟಿ.ರವಿ ಕಾರ್ಯಕರ್ತರ ಜತೆ ಗೆಲುವಿನ ಹಬ್ಬ ಆಚರಿಸಿದರು. ಈ ವೇಳೆ ಶಾಸಕ ಆರ್‌.ಅಶೋಕ್‌, ದೇಶಾದ್ಯಂತ ಮತ್ತೂಮ್ಮೆ ಮೋದಿ ಅವರನ್ನು ಆಯ್ಕೆ ಮಾಡಿರುವುದಕ್ಕೆ ಮತದಾರನಿಗೆ ಧನ್ಯವಾದಗಳನ್ನು ಹೇಳುತ್ತೇನೆ ಎಂದು, ಒಮ್ಮೆಲೆ ಹತ್ತಾರು ಲಾಡುಗಳನ್ನು ಹಿಡಿದು ತಿನ್ನಲು ಮುಂದಾದರು.

ಅನಂತರ ಕಚೇರಿಗೆ ಆಗಮಿಸಿದ ರಾಜ್ಯಾಧ್ಯಕ್ಷ ಬಿ.ಎಸ್‌.ಯಡಿಯೂರಪ್ಪ, ಪುತ್ರ ವಿಜಯೇಂದ್ರ ಅವರಿಗೆ ರಾಜ್ಯ ಬಿಜೆಪಿ ಪ್ರಧಾನ ಕಾರ್ಯದರ್ಶಿ ಎನ್‌.ರವಿಕುಮಾರ್‌ ಹಾಗೂ ವಿಧಾನಪರಿಷತ್‌ ಸದಸ್ಯ ಲೆಹರ್‌ ಸಿಂಗ್‌ ಪರಸ್ಪರ ಸಿಹಿ ತಿನ್ನಿಸಿ ಶುಭಾಶಯ ಕೋರಿದರು. ಸಂಜೆ ವೇಳೆಗೆ ಬೆಂಗಳೂರು ಕೇಂದ್ರ ಲೋಕಸಭಾ ಕ್ಷೇತ್ರದ ಸಂಸದ ಪಿ.ಸಿ.ಮೋಹನ್‌, ಉತ್ತರ ಕ್ಷೇತ್ರದ ಡಿ.ವಿ.ಸದಾನಂದಗೌಡ ಆಗಮಿಸಿದರು.

ಕುಣಿದು ಕುಪ್ಪಳಿಸಿದ ಕಾರ್ಯಕರ್ತರು: ಕಾರ್ಯಕರ್ತರಿಗಾಗಿ ಪಕ್ಷದ ಕಚೇರಿ ಮುಂಭಾಗ ಮೂರು ಎಲ್‌ಇಡಿ ಪರದೆಯನ್ನೊಳಗೊಂಡ ವಾಹನಗಳನ್ನು ನಿಲ್ಲಿಸಲಾಗಿತ್ತು. ದೇಶಾದ್ಯಂತ ಪಕ್ಷ 300ಕ್ಕೂ ಹೆಚ್ಚು ಸ್ಥಾನಗಳಿಸಿದರಿಂದ ಕಾರ್ಯಕರ್ತರ ಹಮ್ಮಸ್ಸು ಹಿಮ್ಮುಡಿಗೊಂಡಿತು.

ರಾಜ್ಯದಲ್ಲಿಯೂ ಪಕ್ಷ ಹೆಚ್ಚು ಸ್ಥಾನಗಳಸಿದ ಸಂಭ್ರಮದಲ್ಲಿ ಕಾರ್ಯಕರ್ತರು, ಮಹಿಳಾ ಕಾರ್ಯಕರ್ತೆಯರು, ಮಕ್ಕಳು ಮತ್ತು ಬೆಂಬಲಿಗರು ಬಿಜೆಪಿ ಕಚೇರಿಯ ಮುಂದೆ ಬಿಜೆಪಿ ಬಾವುಟ ಹಿಡಿದು, ಕೇಸರಿ ಬಣ್ಣದ ಹೋಳಿ ಹಚ್ಚುವ ಮೂಲಕ ಕುಣಿದು ಕುಪ್ಪಳಿಸಿದರು. ನೂರಾರು ಕಾರ್ಯಕರ್ತರು ಬೈಕ್‌ಗಳಲ್ಲಿ ಬಿಜೆಪಿ ಬಾವುಟ ಹಿಡಿದು ರ್ಯಾಲಿ ಮಾಡುವ ಮೂಲಕ ಖುಷಿಪಟ್ಟರು.

ಸೆಲ್ಫಿಗೆ ಮುಗಿಬಿದ್ದ ಕಾರ್ಯಕರ್ತರು: ಬೆಂಗಳೂರಿನ ಮೂರು ಲೋಕಸಭಾ ಕ್ಷೇತ್ರಗಳಲ್ಲಿ ಭರ್ಜರಿ ಗೆಲುವು ಸಾಧಿಸಿದ ಪಿ.ಸಿ.ಮೋಹನ್‌, ಡಿ.ವಿ.ಸದಾನಂದಗೌಡ ಹಾಗೂ ತೇಜಸ್ವಿಸೂರ್ಯ ಜತೆ ಕೆಲ ಕಾರ್ಯಕರ್ತರು ಸೆಲ್ಫಿ ತೆಗೆದುಕೊಂಡು ಸಂಭ್ರಮಿಸಿದರು. ಇನ್ನು ಕೆಲವರು ಪಕ್ಷದ ಕಚೇರಿ ಮುಂಭಾಗ ನರೇಂದ್ರ ಮೋದಿಯ ಮುಖವಾಡ ಧರಿಸಿ ಸೆಲ್ಫಿ ತೆಗೆದುಕೊಂಡರು.

ಟಾಪ್ ನ್ಯೂಸ್

Maharashtra: ಉದ್ದವ್‌ ಬಣದ 36 ಅಭ್ಯರ್ಥಿ ಸೋಲಿಸಿದ ಶಿಂಧೆ ಶಿವ ಸೇನೆ

Maharashtra: ಉದ್ದವ್‌ ಬಣದ 36 ಅಭ್ಯರ್ಥಿ ಸೋಲಿಸಿದ ಶಿಂಧೆ ಶಿವ ಸೇನೆ

Bisanala-Dairy

Achievement: ಮಹಾಲಿಂಗಪುರದ ಬಿಸನಾಳ ಹಾಲಿನ ಡೇರಿಗೆ ಕೇಂದ್ರದ ಪ್ರಶಸ್ತಿ ಗರಿ!

PM Modi: ಜ.11ರಿಂದ 2 ದಿನ ವಿಕಸಿತ ಭಾರತ ಯುವ ನಾಯಕರ ಸಮಾವೇಶ

PM Modi: ಜ.11ರಿಂದ 2 ದಿನ ವಿಕಸಿತ ಭಾರತ ಯುವ ನಾಯಕರ ಸಮಾವೇಶ

Bantwala-Crime

Bantwala: ತುಂಬೆ ದೇವಸ್ಥಾನ ಕಳ್ಳತನ ಪ್ರಕರಣ: ಮೂವರು ಖದೀಮರ ಸೆರೆ

Mayawati: ಇನ್ನು ಮುಂದೆ ಉಪಚುನಾವಣೆಯಲ್ಲಿ ಸ್ಪರ್ಧೆ ಇಲ್ಲ

Mayawati: ಇನ್ನು ಮುಂದೆ ಉಪಚುನಾವಣೆಯಲ್ಲಿ ಸ್ಪರ್ಧೆ ಇಲ್ಲ

1-rcb

RCB ತಂಡಕ್ಕೆ ಸೇರಿದ ಫಿಲ್ ಸಾಲ್ಟ್, ಜಿತೇಶ್ ಶರ್ಮ, ಹ್ಯಾಜಲ್‌ವುಡ್‌

Central Govt: ಸಂಸದೀಯ ಸಮಿತಿ ಪರೀಕ್ಷಿಸಲಿದೆ ಲ್ಯಾಟರಲ್‌ ಎಂಟ್ರಿ ನೇಮಕಾತಿ

Central Govt: ಸಂಸದೀಯ ಸಮಿತಿ ಪರೀಕ್ಷಿಸಲಿದೆ ಲ್ಯಾಟರಲ್‌ ಎಂಟ್ರಿ ನೇಮಕಾತಿ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Commissioner: ಗೂಂಡಾ ವರ್ತನೆ ತೋರಿದರೆ ಕ್ರಮ; ಕಮಿಷನರ್‌ ಎಚ್ಚರಿಕೆ

Commissioner: ಗೂಂಡಾ ವರ್ತನೆ ತೋರಿದರೆ ಕ್ರಮ; ಕಮಿಷನರ್‌ ಎಚ್ಚರಿಕೆ

FIR: ಮಹಿಳಾ ಉದ್ಯಮಿ ಆತ್ಮಹತ್ಯೆ ಕೇಸ್‌: ಲೇಡಿ ಡಿವೈಎಸಿ ವಿರುದ್ಧ ಎಫ್ಐಆರ್‌

FIR: ಮಹಿಳಾ ಉದ್ಯಮಿ ಆತ್ಮಹತ್ಯೆ ಕೇಸ್‌: ಲೇಡಿ ಡಿವೈಎಸಿ ವಿರುದ್ಧ ಎಫ್ಐಆರ್‌

1

Arrested: ಉದ್ಯಮಿ ಅಪಹರಣ: ಪ್ರೇಯಸಿ ಸೇರಿ 7 ಮಂದಿ ಸೆರೆ

3-darshan

Renukaswamy Case: ಹತ್ಯೆ ಸ್ಥಳದಲ್ಲಿ ನಟ ದರ್ಶನ್‌: ಫೋಟೋ ಸಾಕ್ಷ್ಯ

10-bng

Bengaluru: ಠಾಣೆಯಲ್ಲಿ ಪೊಲೀಸ್‌ ಸಿಬ್ಬಂದಿ ನಡುವೆ ಜಗಳ: ವಿಡಿಯೋ ವೈರಲ್‌

MUST WATCH

udayavani youtube

ಎದೆ ನೋವು, ಮಧುಮೇಹ, ಥೈರಾಯ್ಡ್ ,ಸಮಸ್ಯೆಗಳಿಗೆ ಪರಿಹಾರ ತೆಂಗಿನಕಾಯಿ ಹೂವು

udayavani youtube

ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು

udayavani youtube

ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?

udayavani youtube

ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್‌ |

udayavani youtube

ಕೊಲ್ಲೂರಿನಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಡಿಸಿಎಂ ಡಿ ಕೆ ಶಿವಕುಮಾರ್

ಹೊಸ ಸೇರ್ಪಡೆ

Maharashtra: ಉದ್ದವ್‌ ಬಣದ 36 ಅಭ್ಯರ್ಥಿ ಸೋಲಿಸಿದ ಶಿಂಧೆ ಶಿವ ಸೇನೆ

Maharashtra: ಉದ್ದವ್‌ ಬಣದ 36 ಅಭ್ಯರ್ಥಿ ಸೋಲಿಸಿದ ಶಿಂಧೆ ಶಿವ ಸೇನೆ

Bisanala-Dairy

Achievement: ಮಹಾಲಿಂಗಪುರದ ಬಿಸನಾಳ ಹಾಲಿನ ಡೇರಿಗೆ ಕೇಂದ್ರದ ಪ್ರಶಸ್ತಿ ಗರಿ!

PM Modi: ಜ.11ರಿಂದ 2 ದಿನ ವಿಕಸಿತ ಭಾರತ ಯುವ ನಾಯಕರ ಸಮಾವೇಶ

PM Modi: ಜ.11ರಿಂದ 2 ದಿನ ವಿಕಸಿತ ಭಾರತ ಯುವ ನಾಯಕರ ಸಮಾವೇಶ

Bantwala-Crime

Bantwala: ತುಂಬೆ ದೇವಸ್ಥಾನ ಕಳ್ಳತನ ಪ್ರಕರಣ: ಮೂವರು ಖದೀಮರ ಸೆರೆ

Mayawati: ಇನ್ನು ಮುಂದೆ ಉಪಚುನಾವಣೆಯಲ್ಲಿ ಸ್ಪರ್ಧೆ ಇಲ್ಲ

Mayawati: ಇನ್ನು ಮುಂದೆ ಉಪಚುನಾವಣೆಯಲ್ಲಿ ಸ್ಪರ್ಧೆ ಇಲ್ಲ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.