ಪ್ರಚಾರಕ್ಕೆ ಕಳೆ ತಂದಿದ್ದ ರಾಜ್ಯ, ರಾಷ್ಟ್ರ ನಾಯಕರು


Team Udayavani, May 24, 2019, 6:04 AM IST

nayakaru

ಉಡುಪಿ: ರಾಜ್ಯದ ಪ್ರತಿಷ್ಠಿತ ಕಣವಾಗಿ ಗುರುತಿಸಿಕೊಂಡಿರುವ ಉಡುಪಿ-ಚಿಕ್ಕಮಗಳೂರು ಲೋಕಸಭಾ ಕ್ಷೇತ್ರದ ಚುನಾವಣೆ ಪ್ರಚಾರಕ್ಕೆ ಆಗಮಿಸಿದ ರಾಜ್ಯ ಮತ್ತು ರಾಷ್ಟ್ರದ ನಾಯಕರು ಕ್ಷೇತ್ರದ ಅಭ್ಯರ್ಥಿಗಳ ಭವಿಷ್ಯ ನಿರ್ಧರಿಸುವಲ್ಲಿ ಮಹತ್ವದ ಪಾತ್ರ ವಹಿಸಿದ್ದಾರೆ.

ಬಿಜೆಪಿ ಮತ್ತು ಮೈತ್ರಿ ಪಕ್ಷದ ಅಭ್ಯರ್ಥಿ ಪರ ಕಾರ್ಯಕರ್ತರಲ್ಲಿ ಅಸಮಾಧಾನವಿತ್ತು. ಆದರೆ ಕ್ಷೇತ್ರಕ್ಕೆ ಆಗಮಿಸಿದ ರಾಜ್ಯ ಮತ್ತು ರಾಷ್ಟ್ರಮಟ್ಟದ ನಾಯಕರು ಅಸಮಾಧಾನವನ್ನು ಹೋಗಲಾಡಿಸಿದ್ದರು ಎನ್ನುವುದು ಗಮನಾರ್ಹ.

ನಿರ್ಮಲಾ ಸೀತಾರಾಮನ್‌ ಭೇಟಿ ಹೊಸ ತಿರುವು
ಬಿಜೆಪಿ ಅಭ್ಯರ್ಥಿ ಶೋಭಾ ಕರಂದ್ಲಾಜೆ ವಿರುದ್ಧ ಬಿಜೆಪಿ ಪಕ್ಷದ ಕಾರ್ಯಕರ್ತರೇ ವಿರೋಧ ವ್ಯಕ್ತಪಡಿಸಿದ್ದರು. ಆದರೆ ಕೇಂದ್ರ ಸಚಿವೆ ನಿರ್ಮಲಾ ಸೀತಾರಾಮನ್‌ ಅವರ ಭೇಟಿ ಕಾರ್ಯಕರ್ತರನ್ನು ಒಗ್ಗೂಡಿಸಿದ್ದಲ್ಲದೆ, ಪಕ್ಷದ ಏಳಿಗೆಗೆ ಶ್ರಮಿಸುವಂತೆಯೂ ಮಾಡಿತ್ತು. ಅದರ ಫ‌ಲವಾಗಿ ಕಾರ್ಯಕರ್ತರು ಒಂದಾಗಿ ಪ್ರಚಾರದಲ್ಲಿ ತೊಡಗಿಸಿಕೊಂಡಿದ್ದರು. ಸುವರ್ಣ ತ್ರಿಭುಜ ಬೋಟ್‌ನಲ್ಲಿ ನಾಪತ್ತೆಯಾದ ಮಲ್ಪೆಯ ಮೀನುಗಾರರ ಕುಟುಂಬದವರನ್ನು ಭೇಟಿ ಮಾಡಿ ಸಾಂತ್ವನ ಹೇಳುವ ಮೂಲಕ ಸಾರ್ವಜನಿಕರ ವಿಶ್ವಾಸ ಗಳಿಸುವ ಮೂಲಕ ಮತದಾರರ ಪ್ರಭುಗಳ ವಿಶ್ವಾಸ ಗಳಿಸಿದ್ದಾರೆ.

“ಪಾಂಚಜನ್ಯ’ ಸಮಾವೇಶ
ಮಲ್ಪೆಯಲ್ಲಿ ನಮೋ ಭಾರತ್‌ ಅವರು ಆಯೋಜಿಸಿದ್ದ “ಪಾಂಚಜನ್ಯ’ ಸಮಾವೇಶ ಬಿಜೆಪಿ ಅಭ್ಯರ್ಥಿಗೆ ವರವಾಗಿ ಪರಿಣಮಿಸಿದೆ. ಇದು ಯುವ ಮತದಾರರನ್ನು ಕೇಂದ್ರೀಕರಿಸುವ ನಿಟ್ಟಿನಲ್ಲಿ ಹಮ್ಮಿಕೊಂಡ ವಿಶೇಷವಾದ ಕಾರ್ಯಕ್ರಮವಾಗಿದೆ. ನರೇಂದ್ರ ಮೋದಿ ಕೇಂದ್ರದಲ್ಲಿ ಮತ್ತೆ ಅಧಿಕಾರ ಸ್ವೀಕರಿಸಬೇಕೆನ್ನುವ ನಿಟ್ಟಿನಲ್ಲಿ “ನಿಮ್ಮ ಆಯ್ಕೆ ಮೋದಿಯಾಗಿರಲಿ’ ಎಂದು ಹೇಳುವ ಮೂಲಕ ಬಿಜೆಪಿ ಅಭ್ಯರ್ಥಿಗೆ ಪರೋಕ್ಷವಾಗಿ ಬೆಂಬಲ ಸೂಚಿಸಿ ಎನ್ನುವ ಸಂದೇಶವನ್ನು ಯುವಜನರಿಗೆ ನೀಡಿದರು. ಇಲ್ಲಿ ಕ್ಷೇತ್ರದ ಅಭ್ಯರ್ಥಿಗಿಂತಲೂ ಹೆಚ್ಚಾಗಿ ಪ್ರಧಾನಿ ಮೋದಿ ಅವರಿಗೆ ಹೆಚ್ಚಿನ ಪ್ರಚಾರ ನೀಡಲಾಗಿತ್ತು. ಇದು ಶೋಭಾ ಕರಂದ್ಲಾಜೆಯ ಅವರ ಗೆಲುವಿಗೆ ಪೂರಕವಾಗಿತ್ತು.

ಉಡುಪಿಗೆ ಆಗಮಿಸಿದ ಮುಖ್ಯಮಂತ್ರಿ
ಜೆಡಿಎಸ್‌ ಅನೇಕ ವರ್ಷದಿಂದ ಕರಾವಳಿ ಜಿಲ್ಲೆಯಲ್ಲಿ ಅಸ್ತಿತ್ವ ಪಡೆದುಕೊಳ್ಳುವಲ್ಲಿ ವಿಫ‌ಲವಾಗಿತ್ತು. ಇದರಿಂದಾಗಿ ಪಕ್ಷದ ರಾಜ್ಯಮಟ್ಟದ ನಾಯಕರು ಹಾಗೂ ಪಕ್ಷದ ಮುಖಂಡರು ಕರಾವಳಿಯಿಂದ ತುಸು ಅಂತರ ಕಾಯ್ದುಕೊಂಡಿದ್ದರು. ಆದರೆ ಜಿಲ್ಲೆಯಲ್ಲಿ ಪ್ರಮೋದ್‌ ಮಧ್ವರಾಜ್‌ ಅವರು ಜೆಡಿಎಸ್‌-ಕಾಂಗ್ರೆಸ್‌ ಮೈತ್ರಿ ಅಭ್ಯರ್ಥಿಯಾಗಿ ಸ್ಪರ್ಧಿಸುತ್ತಿದ್ದಂತೆ ಜಿಲ್ಲೆಯಲ್ಲಿ ಪಕ್ಷವನ್ನು ಬಲಿಷ್ಠಗೊಳಿಸಲು ಮೊದಲ ಬಾರಿಗೆ ಅವಕಾಶ ಸಿಕ್ಕಿತ್ತು. ಅದನ್ನು ಸದುಪಯೋಗ ಪಡಿಸುವ ನಿಟ್ಟಿನಲ್ಲಿ ಜೆಡಿಎಸ್‌ ಮುಖ್ಯಮಂತ್ರಿ ಎಚ್‌.ಡಿ. ಕುಮಾರಸ್ವಾಮಿ ಜಿಲ್ಲಾ ಕಾಂಗ್ರೆಸ್‌ ಕಚೇರಿಗೆ ಭೇಟಿ ನೀಡಿ ಕಾರ್ಯಕರ್ತರನ್ನು ಹುರಿದುಂಬಿಸಿದ್ದರು. ಅಲ್ಲದೆ ಕಾರ್ಕಳ, ಕುಂದಾಪುರ ಸೇರಿದಂತೆ ವಿವಿಧ ಕಡೆಗಳಲ್ಲಿ ಅಭ್ಯರ್ಥಿಯ ಪರ ಮಾತವನ್ನೂ ಯಾಚಿಸಿದ್ದರು.

ಕಾರ್ಯಕರ್ತರ ಪರಿಶ್ರಮ
ಬಿಜೆಪಿ ಪಕ್ಷದಲ್ಲಿ ಅಭ್ಯರ್ಥಿ ಪರ ಕಾರ್ಯಕರ್ತರಿಗೆ ಅಸಮಾಧಾನವಿದ್ದರೂ, ಪಕ್ಷದ ಮುಖಂಡರು ಕಾರ್ಯಕರ್ತರ ಮನವೋಲಿಸಿ ಪಕ್ಷದ ಪರವಾಗಿ ಪ್ರಚಾರ ಮಾಡಿಸುವಲ್ಲಿ ಯಶಸ್ವಿಯಾಗಿದ್ದಾರೆ.

ಕಾಂಗ್ರೆಸ್‌ ಭಿನ್ನಮತ ಸ್ಫೋಟ
ಪ್ರಮೋದ್‌ ಮಧ್ವರಾಜ್‌ ಅವರು ಜೆಡಿಎಸ್‌-ಕಾಂಗ್ರೆಸ್‌ ಪಕ್ಷದ ಮೈತ್ರಿ ಅಭ್ಯರ್ಥಿ ಎಂದು ಘೋಷಿಸುತ್ತಿದಂತೆ ಕಾಂಗ್ರೆಸ್‌ ಪಕ್ಷದಲ್ಲಿ ಭಿನ್ನಮತ ಭುಗಿಲೆದ್ದಿತ್ತು. ಜೆಡಿಎಸ್‌ ಪಕ್ಷದಲ್ಲಿ ಬಲಿಷ್ಠ ಅಭ್ಯರ್ಥಿ ಇಲ್ಲದೆ ಹೋದರೂ ಕಾಂಗ್ರೆಸ್‌ ಪಕ್ಷದ ಅಭ್ಯರ್ಥಿ ಪರ ಅಸಮಾಧಾನವಿದ್ದಿತ್ತು. ಆದರೆ ಪ್ರಮೋದ್‌ ಮಧ್ವರಾಜರ ಬಲದಿಂದ ಅಸಮಾಧಾನ ಬಹಿರಂಗಗೊಂಡಿರಲಿಲ್ಲ.

ಪಕ್ಷೇತರ ಅಭ್ಯರ್ಥಿ ಪೈಪೋಟಿ
ಕಾಂಗ್ರೆಸ್‌ ಪಕ್ಷದ ಕಾರ್ಯಕರ್ತ ಅಮೃತ್‌ ಶೆಣೈ ಅವರು ಕಾಂಗ್ರೆಸ್‌ ಹೈಕಮಾಂಡ್‌ ಟಿಕೆಟ್‌ ನೀಡುವಲ್ಲಿ ಕೈಗೊಂಡ ನಿರ್ಧಾರವನ್ನು ವಿರೋಧಿಸಿ ಪಕ್ಷೇತರ ಅಭ್ಯರ್ಥಿಯಾಗಿ ಸ್ಪರ್ಧಿಸಿದ್ದರು. ರಾಜ್ಯ, ರಾಷ್ಟ್ರಮಟ್ಟದ ನಾಯಕರು ಮಹತ್ವದ ಪಾತ್ರವನ್ನು ವಹಿಸಿದ್ದಾರೆ ಎನ್ನುವುದಕ್ಕೆ ಬಿಜೆಪಿ ಅಭ್ಯರ್ಥಿ ಶೋಭಾ ಕರಂದ್ಲಾಜೆ ಭಾರೀ ಅಂತರದ ಗೆಲುವು ಸಾಕ್ಷಿಯಾಗಿದೆ.

“ಸಹಬಾಳ್ವೆ’ ಸಮಾವೇಶ
ಕಲ್ಸಂಕ ರಾಯಲ್‌ ಗಾರ್ಡನ್‌ನಲ್ಲಿ ಮಾಜಿ ಮುಖ್ಯಮಂತ್ರಿ ಸಿದ್ಧರಾಮಯ್ಯ ಮತ್ತು ಜೆಡಿಎಸ್‌ ಸಚಿವರ ನೇತೃತ್ವದಲ್ಲಿ ಸಹಬಾಳ್ವೆ ಸಮಾವೇಶ ನಡೆದಿತ್ತು. ಸಹಬಾಳ್ವೆ ಹೆಸರಿನ ಸಮಾವೇಶದಲ್ಲಿ ಮಾತನಾಡಿದ ಹಲವರ ವಿರುದ್ಧ ಪ್ರಕರಣವೂ ದಾಖಲಾಗಿತ್ತು.

ಟಾಪ್ ನ್ಯೂಸ್

1-aaammm

Jammu and Kashmir; ಉಗ್ರವಾದ ಪರಿಸರ ವ್ಯವಸ್ಥೆ ಬಹುತೇಕ ಕೊನೆಗೊಂಡಿದೆ: ಶಾ

1-lok-sabha

BJP vs Congress; ಸಂಸತ್ತಿನಲ್ಲಿ ಕೋಲಾಹಲ: ಪೊಲೀಸರಿಗೆ ದೂರು,ಕಾಂಗ್ರೆಸ್ ಪ್ರತಿದೂರು

CT Ravi

Laxmi Hebbalkar; ಅವಾಚ್ಯ ಪದ ಬಳಕೆ ಕೇಸ್: ಸಿ.ಟಿ.ರವಿ ಬಂಧನ

Gadaga: ನೀರಿನ ಟ್ಯಾಂಕರ್ ಹರಿದು 2 ವರ್ಷದ ಮಗು ಸಾವು

Gadaga: ನೀರಿನ ಟ್ಯಾಂಕರ್ ಹರಿದು 2 ವರ್ಷದ ಮಗು ಸಾವು

dhankar (2)

Jagdeep Dhankhar; ರಾಜ್ಯಸಭಾ ಸಭಾಪತಿ ವಿರುದ್ದದ ಪ್ರತಿಪಕ್ಷಗಳ ಅವಿಶ್ವಾಸ ನಿರ್ಣಯ ತಿರಸ್ಕೃತ

Mollywood: ಸೂಪರ್‌ ಸ್ಟಾರ್ ಮೋಹನ್‌ ಲಾಲ್‌ಗೆ ‘ಆವೇಶಮ್‌ʼ ನಿರ್ದೇಶಕ ಆ್ಯಕ್ಷನ್ ಕಟ್

Mollywood: ಸೂಪರ್‌ ಸ್ಟಾರ್ ಮೋಹನ್‌ ಲಾಲ್‌ಗೆ ‘ಆವೇಶಮ್‌ʼ ನಿರ್ದೇಶಕ ಆ್ಯಕ್ಷನ್ ಕಟ್

ಅಮಿತ್ ಶಾಗೆ ಹುಚ್ಚು ಹಿಡಿದಿದೆ, ರಾಜೀನಾಮೆ ನೀಡುವುದು ಉತ್ತಮ: ಲಾಲು ಪ್ರಸಾದ್ ಯಾದವ್

ಅಮಿತ್ ಶಾಗೆ ಹುಚ್ಚು ಹಿಡಿದಿದೆ, ರಾಜೀನಾಮೆ ನೀಡುವುದು ಉತ್ತಮ: ಲಾಲು ಪ್ರಸಾದ್ ಯಾದವ್ ಕಿಡಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

2011

ಬೆಂಗಳೂರಿನಲ್ಲೊಂದು ಟೈ ರೋಮಾಂಚನ

rajani-kanth

ಮೋದಿಯೂ ವರ್ಚಸ್ವಿ ನಾಯಕ

smruthi-irani

ಬರಿಗಾಲಲ್ಲೇ ವಿನಾಯಕ ದೇಗುಲಕ್ಕೆ ತೆರಳಿದ್ದ ಸ್ಮತಿ!

Asshivrda

ಮಾಜಿ ರಾಷ್ಟ್ರಪತಿ ಪ್ರಣಬ್ ರ ಆಶೀರ್ವಾದ ಪಡೆದ ಪ್ರಧಾನಿ ನರೇಂದ್ರ ಮೋದಿ

Lalu-head-scratch-700

ರಾಜೀನಾಮೆ ನೀಡುವ ರಾಹುಲ್‌ ನಿರ್ಧಾರ ಆತ್ಮಾಹುತಿಯದ್ದು : ಲಾಲು

MUST WATCH

udayavani youtube

ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ

udayavani youtube

ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ

udayavani youtube

ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ

udayavani youtube

ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ

udayavani youtube

ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ

ಹೊಸ ಸೇರ್ಪಡೆ

accident

Kundapura: ಕಾರು ಢಿಕ್ಕಿ; ಸ್ಕೂಟರ್‌ ಸವಾರನಿಗೆ ಗಾಯ

1-aaammm

Jammu and Kashmir; ಉಗ್ರವಾದ ಪರಿಸರ ವ್ಯವಸ್ಥೆ ಬಹುತೇಕ ಕೊನೆಗೊಂಡಿದೆ: ಶಾ

1-eeee

Bhadravathi:ಬಾಯ್ಲರ್ ಸ್ಫೋ*ಟದಿಂದ ರೈಸ್‌ಮಿಲ್ ಕುಸಿತ:7 ಮಂದಿಗೆ ಗಾಯ

rape

Sringeri; ಅಸ್ಸಾಂ ಕಾರ್ಮಿಕನಿಂದ ಅಪ್ರಾಪ್ತ ಬಾಲಕಿ ಮೇಲೆ ಲೈಂಗಿ*ಕ ದೌರ್ಜನ್ಯ

1-lok-sabha

BJP vs Congress; ಸಂಸತ್ತಿನಲ್ಲಿ ಕೋಲಾಹಲ: ಪೊಲೀಸರಿಗೆ ದೂರು,ಕಾಂಗ್ರೆಸ್ ಪ್ರತಿದೂರು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.