ಕಲಬುರಗಿಯಲ್ಲಿ ಕಮಲ ಕಮಾಲ್‌

ಎರಡನೇ ಬಾರಿಗೆ ಕೇಸರಿ ಪಡೆಯ ಕೇಕೆಮಹದೇವಪ್ಪ ವೈ. ಅವರಿಂದ ಮಾತ್ರ ಹ್ಯಾಟ್ರಿಕ್‌ ಸಾಧನೆ

Team Udayavani, May 24, 2019, 10:01 AM IST

24-May-2

ಕಲಬುರಗಿ: ನಗರದ ಗುಲಬರ್ಗಾ ವಿಶ್ವವಿದ್ಯಾಲಯದ ಸ್ಥಾಪಿಸಲಾದ ಮತ ಎಣಿಕೆ ಕೇಂದ್ರದಲ್ಲಿ ಮತ ಎಣಿಕೆಯಲ್ಲಿ ತೊಡಗಿರುವ ಸಿಬ್ಬಂದಿ.

ಕಲಬುರಗಿ: ಲೋಕಸಭಾ ಚುನಾವಣಾ ಇತಿಹಾಸದಲ್ಲೇ ಕಲಬುರಗಿ ಕ್ಷೇತ್ರದ ಜನತೆ ಐತಿಹಾಸಿಕ ತೀರ್ಪು ಕೊಟ್ಟಿದ್ದಾರೆ. ಸೋಲಿಲ್ಲದ ಸರದಾರ ಖ್ಯಾತಿಯ ಕಾಂಗ್ರೆಸ್‌ ಹಿರಿಯ ನಾಯಕ ಮಲ್ಲಿಕಾರ್ಜುನ ಖರ್ಗೆ ಅವರಿಗೆ ಬಿಜೆಪಿಯಿಂದ ಸ್ಪರ್ಧಿಸಿದ್ದ ಡಾ| ಉಮೇಶ ಜಾಧವ್‌ ಸೋಲಿನ ರುಚಿ ತೋರಿಸುವ ಮೂಲಕ ಹೊಸ ಇತಿಹಾಸ ನಿರ್ಮಿಸಿದ್ದಾರೆ. ಈ ಮೂಲಕ ಕಾಂಗ್ರೆಸ್‌ನ ಭದ್ರಕೋಟೆಯಲ್ಲಿ ಎರಡನೇ ಬಾರಿಗೆ ಕಮಲದ ಬಾವುಟ ಹಾರಿದೆ.

ಕ್ಷೇತ್ರದ ಸಂಕ್ಷಿಪ್ತ ಇತಿಹಾಸ: 1957ರಿಂದ ಇದುವರೆಗೆ ಒಟ್ಟು 18 ಸಾರ್ವತ್ರಿಕ ಚುನಾವಣೆಗಳನ್ನು ಕಲಬುರಗಿ ಕಂಡಿದೆ. 1957ರಿಂದ 1991ರ ವರೆಗೂ ಕಾಂಗ್ರೆಸ್‌ ಅಭ್ಯರ್ಥಿಗಳೇ ಗೆಲುವು ಸಾಧಿಸಿದ್ದರು. 1957, 1962 ಮತ್ತು 1967ರಲ್ಲಿ ಸತತ ಮೂರು ಬಾರಿ ಗೆಲುವು ಕಂಡಿದ್ದ ಮಹದೇವಪ್ಪ ಯಶವಂತರಾಯ ಅವರು ಹ್ಯಾಟ್ರಿಕ್‌ ಸಾಧನೆ ಮಾಡಿದ್ದರು. ಇವರ
ದಾಖಲೆಯನ್ನು ಇದುವರೆಗೂ ಯಾರೂ ಸರಿಗಟ್ಟಲು ಅಥವಾ ಮೀರಿಸಲು ಆಗಿಲ್ಲ.

ಕಾಂಗ್ರೆಸ್‌ ಪಾರುಪತ್ಯಕ್ಕೆ ಮೊದಲ ಬಾರಿಗೆ ಜನತಾ ದಳ ತಡೆಯೊಡ್ಡಿತ್ತು. 1996ರ ಚುನಾವಣೆಯಲ್ಲಿ ಜನತಾ ದಳದಿಂದ ಸ್ಪರ್ಧಿಸಿದ್ದ ಖಮರುಲ್‌ ಇಸ್ಲಾಂ ಜಯಭೇರಿ ಬಾರಿಸಿದ್ದರು. ನಂತರದ 1998ರ ಚುನಾವಣೆಯಲ್ಲಿ ಬಿಜೆಪಿಯ ಬಸವರಾಜ ಪಾಟೀಲ ಸೇಡಂ ಗೆಲುವು ಸಾಧಿಸುವ ಮೂಲಕ ಮೊದಲ ಬಾರಿಗೆ ಕೇಸರಿ ಬಾವುಟವನ್ನು ಹಾರಿಸಿದ್ದರು. ಅಂದು ಜೆಡಿಎಸ್‌ನಿಂದ ಖಮರುಲ್‌ ಇಸ್ಲಾಂ ಮತ್ತು ಕಾಂಗ್ರೆಸ್‌ ನಿಂದ ಡಾ| ಬಿ.ಜಿ. ಜವಳಿ ಸ್ಪರ್ಧಿಸಿದ್ದರು. ಖಮರುಲ್‌ ಇಸ್ಲಾಂ
1.97 ಲಕ್ಷ ಮತ ಪಡೆದರೆ, ಡಾ| ಜವಳಿ 1.40 ಲಕ್ಷ ಮತಗಳನ್ನು ಪಡೆದಿದ್ದರು. ಬಸವರಾಜ ಪಾಟೀಲ ಸೇಡಂ 3.28 ಲಕ್ಷ ಮತಗಳನ್ನು ಪಡೆಯುವ ಮೂಲಕ ಅತ್ಯಧಿಕ 1.31 ಲಕ್ಷ ಮತಗಳ ಅಂತರದಿಂದ ಗೆಲುವು ಸಾಧಿಸಿದ್ದರು. ಬಸವರಾಜ ಪಾಟೀಲ ಸೇಡಂ ಅವರ ಜಯ ಕ್ಷೇತ್ರದ ಇತಿಹಾಸದಲ್ಲಿ ದಾಖಲಾಗಿದೆ.

1998ರಲ್ಲಿ ಚುನಾವಣೆಯ ಮರು ವರ್ಷವೇ ನಡೆದ ಚುನಾವಣೆಯಲ್ಲಿ ಬಿಜೆಪಿಯನ್ನು ಸೋಲಿಸುವ ಕಾಂಗ್ರೆಸ್‌ ಕಲಬುರಗಿಯನ್ನು ಮತ್ತೆ ತಕ್ಕೆಗೆ ತೆಗೆದುಕೊಳ್ಳುವಲ್ಲಿ ಸಫಲವಾಗಿತ್ತು. ಕಾಂಗ್ರೆಸ್‌ನಿಂದ ಸ್ಪರ್ಧಿಸಿದ್ದ ಇಕ್ಬಾಲ್‌ ಅಹ್ಮದ್‌ ಸರಡಗಿ ಗೆಲುವು ಸಾಧಿಸಿದ್ದರು. ಅಂದಿನಿಂದ 2019ರವರೆಗೂ ಕಾಂಗ್ರೆಸ್‌ ತನ್ನ ಗೆಲುವಿನ ಓಟವನ್ನು ಮುಂದುವರಿಸಿತ್ತು. ಈ ಗೆಲುವಿನ ಓಟಕ್ಕೆ ಬಿಜೆಪಿ ಬ್ರೇಕ್‌ ಹಾಕಿದೆ. ಅದರಲ್ಲೂ 9 ಬಾರಿ ಶಾಸಕರಾಗಿ ಮತ್ತು ಎರಡು ಬಾರಿ ಸಂಸದರಾಗಿದ್ದ ಮಲ್ಲಿಕಾರ್ಜುನ ಖರ್ಗೆ ಅವರನ್ನು ಬಿಜೆಪಿ ಮಕಾಡೆ ಮಲಗಿಸಿದೆ.

ಮಹದೇವಪ್ಪನವರು ಹ್ಯಾಟ್ರಿಕ್‌ ಗೆಲುವಿನ ನಂತರ ಸಿದ್ದರಾಮರೆಡ್ಡಿ, ಡಾ| ಬಿ.ಜಿ.ಜವಳಿ ಮತ್ತು ಇಕ್ಬಾಲ್‌ ಅಹ್ಮದ್‌ ಸರಡಗಿ ಹಾಗೂ ಮಲ್ಲಿಕಾರ್ಜುನ ಖರ್ಗೆ ಸತತ ಎರಡು ಗೆಲುವು ಸಾಧಿಸಿದ್ದರು. 1974 ಮತ್ತು 1977ರಲ್ಲಿ ಸಿದ್ದರಾಮರೆಡ್ಡಿ, 1989 ಮತ್ತು 1991ರಲ್ಲಿ ಡಾ| ಜವಳಿ ಹಾಗೂ 1999 ಮತ್ತು 2011ರಲ್ಲಿ ಇಕ್ಬಾಲ್‌ ಅಹ್ಮದ್‌ ಸರಡಗಿ ಜಯ ದಾಖಲಿಸಿದ್ದರು. 2009 ಮತ್ತು 2014ರಲ್ಲಿ ಮಲ್ಲಿಕಾರ್ಜುನ ಖರ್ಗೆ ಗೆಲುವು ಸಾಧಿಸಿದ್ದರು.

ಸೋತ ಪ್ರಮುಖರು: ಕಲಬುರಗಿ ಲೋಕಸಭಾ ಕ್ಷೇತ್ರದಲ್ಲಿ ಘಟಾನುಘಟಿ ನಾಯಕರು ಸೋಲನ್ನು ಕಂಡಿದ್ದಾರೆ. 1971ರ ಸಾರ್ವತ್ರಿಕ ಚುನಾವಣೆಯಲ್ಲಿ ಶರಣಬಸವೇಶ್ವರ ಸಂಸ್ಥಾನದ ಪೀಠಾಧಿಪತಿ ಶರಣಬಸವಪ್ಪ ಅಪ್ಪ ಅವರು
ಸ್ಪರ್ಧಿಸಿ ಸೋಲು ಕಂಡಿದ್ದರು. ವೈಜನಾಥ ಪಾಟೀಲರು 1980, 1991ರಲ್ಲಿ ಸೋಲು ಅನುಭವಿಸಿದ್ದರು. 1998ರಲ್ಲಿ ಬಸವರಾಜ ಪಾಟೀಲ ಸೇಡಂ ಗೆಲುವು ಸಾಧಿಸುವ ಮುನ್ನ 1991ರಲ್ಲಿ ಸೋತಿದ್ದರು. ಅಲ್ಲದೇ, 1999 ಹಾಗೂ 2004ರ ಚುನಾವಣೆಯಲ್ಲೂ ಬಸವರಾಜ ಪಾಟೀಲ ಸೇಡಂ ಪರಾಭವಗೊಂಡಿದ್ದರು. ಈಗ ಮಲ್ಲಿಕಾರ್ಜುನ ಖರ್ಗೆ ಕೂಡ ಸೋತ ಗಣ್ಯರ ಸಾಲಿಗೆ ಸೇರ್ಪಡೆಯಾಗಿದ್ದಾರೆ.

ಟಾಪ್ ನ್ಯೂಸ್

NITK-Padavi-pradana

Surathkal: ಎಐಯಿಂದ ಉದ್ಯೋಗ, ನಂಬಿಕೆಗೆ ಕುತ್ತು: ಪ್ರೊ| ಗೋವಿಂದನ್‌ ರಂಗರಾಜನ್‌

Nalin-Kateel

Result: ಮಹಾರಾಷ್ಟ್ರದಲ್ಲಿ ಎನ್‌ಡಿಎಗೆ ಜಯಭೇರಿ; ಮೋದಿ ನಾಯಕತ್ವಕ್ಕೆ ಮನ್ನಣೆ: ನಳಿನ್‌

Padmaraj–JPoojary

Mangaluru: ಗೊಂದಲ ಮೂಡಿಸುವ ಬಿಜೆಪಿಗೆ ತಕ್ಕ ಪಾಠ: ಕೆಪಿಸಿಸಿ ಪ್ರ.ಕಾರ್ಯದರ್ಶಿ ಪದ್ಮರಾಜ್‌

Sanjeev-Matandoor

Putturu: ಬಜೆಟ್‌ನಲ್ಲಿ ಹೊರಡಿಸಿರುವ ಆದೇಶ ಅನುಷ್ಠಾನಿಸದೆ ಕೃಷಿಕರಿಗೆ ವಂಚನೆ: ಮಠಂದೂರು

Sri-Home-minister

Udupi: ಪೇಜಾವರ ಶ್ರೀವಿಶ್ವಪ್ರಸನ್ನತೀರ್ಥ ಸ್ವಾಮೀಜಿ -ಗೃಹ ಸಚಿವ ಅಮಿತ್‌ ಶಾ ಭೇಟಿ

Udupi-DC-Dr.-Vidya-kumari

Udupi: ಮಂಗನಕಾಯಿಲೆ ಪ್ರಕರಣ: ಮುನ್ನೆಚ್ಚರಿಕೆ ಕ್ರಮ ಕೈಗೊಳ್ಳಿ: ಡಿಸಿ ಡಾ.ವಿದ್ಯಾಕುಮಾರಿ

adani (2)

Adani; 2,200 ಕೋಟಿ ರೂ. ಲಂಚ: ಅಮೆರಿಕ ಸಮನ್ಸ್‌


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Kalaburagi: Shigavi result unexpected; We do not agree: C.T. Ravi

Kalaburagi: ಶಿಗ್ಗಾವಿ ಫಲಿತಾಂಶ ಅನಿರೀಕ್ಷಿತ; ನಾವು ಒಪ್ಪುವುದಿಲ್ಲ: ಸಿ.ಟಿ.ರವಿ

1-motte

School; ಮೊಟ್ಟೆ-ಬಾಳೆಹಣ್ಣು ವಿತರಣಾ ಜವಾಬ್ದಾರಿಯಿಂದ ಶಿಕ್ಷಕರ ಬಿಡುಗಡೆಗೊಳಿಸಿ

Karnataka: 18 ತಿಂಗಳಲ್ಲಿ 18 ಎಸ್‌ಐಟಿ ರಚಿಸಿದ ಕಾಂಗ್ರೆಸ್‌: ಛಲವಾದಿ

Karnataka: 18 ತಿಂಗಳಲ್ಲಿ 18 ಎಸ್‌ಐಟಿ ರಚಿಸಿದ ಕಾಂಗ್ರೆಸ್‌: ಛಲವಾದಿ

Contracters-Assoi

Report: ರಾಜ್ಯ ಗುತ್ತಿಗೆದಾರರ ಸಂಘದಿಂದ ಲೋಕಾಯುಕ್ತಕ್ಕೆ ದೂರು ಕೊಟ್ಟಿಲ್ಲ: ಜಗನ್ನಾಥ ಶೇಗಜಿ

ರಸ್ತೆ ಅಪಘಾತ: ಮುದ್ದೇಬಿಹಾಳದ ಯುವಕ ಕಲಬುರ್ಗಿಯಲ್ಲಿ ಮೃತ್ಯು

Road Mishap: ಕಲಬುರ್ಗಿಯಲ್ಲಿ ರಸ್ತೆ ಅಪಘಾತ… ಮುದ್ದೇಬಿಹಾಳದ ಯುವಕ ಮೃತ್ಯು

MUST WATCH

udayavani youtube

ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು

udayavani youtube

ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?

udayavani youtube

ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್‌ |

udayavani youtube

ಕೊಲ್ಲೂರಿನಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಡಿಸಿಎಂ ಡಿ ಕೆ ಶಿವಕುಮಾರ್

udayavani youtube

ಉಡುಪಿ ಶ್ರೀ ಕೃಷ್ಣ ಮಠದಲ್ಲಿ ಬೃಹತ್ ಗೀತೋತ್ಸವಕ್ಕೆ ಅದ್ದೂರಿ ಚಾಲನೆ|

ಹೊಸ ಸೇರ್ಪಡೆ

NITK-Padavi-pradana

Surathkal: ಎಐಯಿಂದ ಉದ್ಯೋಗ, ನಂಬಿಕೆಗೆ ಕುತ್ತು: ಪ್ರೊ| ಗೋವಿಂದನ್‌ ರಂಗರಾಜನ್‌

Nalin-Kateel

Result: ಮಹಾರಾಷ್ಟ್ರದಲ್ಲಿ ಎನ್‌ಡಿಎಗೆ ಜಯಭೇರಿ; ಮೋದಿ ನಾಯಕತ್ವಕ್ಕೆ ಮನ್ನಣೆ: ನಳಿನ್‌

Padmaraj–JPoojary

Mangaluru: ಗೊಂದಲ ಮೂಡಿಸುವ ಬಿಜೆಪಿಗೆ ತಕ್ಕ ಪಾಠ: ಕೆಪಿಸಿಸಿ ಪ್ರ.ಕಾರ್ಯದರ್ಶಿ ಪದ್ಮರಾಜ್‌

Sanjeev-Matandoor

Putturu: ಬಜೆಟ್‌ನಲ್ಲಿ ಹೊರಡಿಸಿರುವ ಆದೇಶ ಅನುಷ್ಠಾನಿಸದೆ ಕೃಷಿಕರಿಗೆ ವಂಚನೆ: ಮಠಂದೂರು

Sri-Home-minister

Udupi: ಪೇಜಾವರ ಶ್ರೀವಿಶ್ವಪ್ರಸನ್ನತೀರ್ಥ ಸ್ವಾಮೀಜಿ -ಗೃಹ ಸಚಿವ ಅಮಿತ್‌ ಶಾ ಭೇಟಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.