ಬಸವನಾಡಲ್ಲಿ ಕೇಸರಿ ಪತಾಕೆ

ಕೈ' ಮೇಲೆ ವಿಶ್ವಾಸವಿಟ್ಟು ಹೊರೆ ಹೊತ್ತಿದ್ದ ಮಹಿಳೆಗೆ 'ಕಮಲ' ಕೋಟೆಯಲ್ಲಿ ಮುಖಭಂಗ

Team Udayavani, May 24, 2019, 11:05 AM IST

24-May-8

ಮುದ್ದೇಬಿಹಾಳ: ಅಂಬೇಡ್ಕರ್‌ ವೃತ್ತದಲ್ಲಿ ಬಿಜೆಪಿ ಕಾರ್ಯಕರ್ತರು ವಿಜಯೋತ್ಸವ ಆಚರಿಸಿದರು.

ವಿಜಯಪುರ: ಪರಿಶಿಷ್ಟ ಜಾತಿಗೆ ಮೀಸಲಾದ ವಿಜಯಪುರ ಕ್ಷೇತ್ರದಲ್ಲಿ ಸತತ ಮೂರನೇ ಬಾರಿಗೆ ವಿಜಯ ಸಾಧಿಸುವ ಮೂಲಕ ಸಂಸತ್‌ ರಾಜಕೀಯ ಜೀವನದಲ್ಲಿ 6ನೇ ಬಾರಿಗೆ ಲೋಕಸಭೆ ಪ್ರವೇಶಿಸಿರುವ ರಮೇಶ ಜಿಗಜಿಣಗಿ ವಿಶಿಷ್ಟ ಸಾಧನೆ ಮಾಡಿದ್ದಾರೆ. ಈ ಕ್ಷೇತ್ರದಲ್ಲಿ ನಿರಂತರ 5 ಬಾರಿ ತನ್ನ ಅಭ್ಯರ್ಥಿಗಳನ್ನು ಗೆಲ್ಲಿಸಿರುವ ಬಿಜೆಪಿ ಭದ್ರಕೋಟೆಯಲ್ಲಿ ಕಾಂಗ್ರೆಸ್‌ ಪಕ್ಷವನ್ನು ನಂಬಿ ಹೊರೆ ಹೊತ್ತು ಬಂದಿದ್ದ ಮಹಿಳೆ ಡಾ| ಸುನೀತಾ ಚವ್ಹಾಣ ‘ಕೈ’ ಕಟ್ಟಿಸಿಕೊಳ್ಳುವಂತಾಗಿದೆ.

2009ಕ್ಕೂ ಮುನ್ನ ಎರಡು ಬಾರಿ ಬಿಜೆಪಿಯಿಂದ ಸ್ಪರ್ಧಿಸಿದ್ದ ಬಸನಗೌಡ ಪಾಟೀಲ ಯತ್ನಾಳ ಸತತ ವಿಜಯ ಸಾಧಿಸಿದ್ದರು. ಅಲ್ಲದೇ ಅಟಲ್ ಬಿಹಾರಿ ವಾಜಪೇಯಿ ಸರ್ಕಾರದಲ್ಲಿ ರೈಲ್ವೆ ಹಾಗೂ ಜವಳಿ ಖಾತೆ ರಾಜ್ಯ ಸಚಿವರೂ ಅಗಿದ್ದರು. 2009ರಲ್ಲಿ ಕ್ಷೇತ್ರ ಮರು ವಿಂಗಡಣೆ ಸಂದರ್ಭದಲ್ಲಿ ವಿಜಯಪುರ ಲೋಕಸಭೆ ಕ್ಷೇತ್ರ ಪರಿಶಿಷ್ಟ ಜಾತಿಗೆ ಮೀಸಲಾದಾಗ ಚಿಕ್ಕೋಡಿ ಮೀಸಲು ಕ್ಷೇತ್ರದ ಸಂದಸರಾಗಿದ್ದ ರಮೇಶ ಜಿಗಜಿಣಗಿ ಬಿಜೆಪಿ ಸೇರಿ, ವಿಜಯಪುರ ಕ್ಷೇತ್ರದ ಅಭ್ಯರ್ಥಿಯಾಗಿದ್ದರು. 2014 ಹಾಗೂ 2019ರಲ್ಲಿ ಸತತ ಮೂರು ಬಾರಿ ಆಯ್ಕೆಯಾಗುವ ಮೂಲಕ ವಿಜಯಪುರ ಲೋಕಸಭೆ ಕ್ಷೇತ್ರ ಬಿಜೆಪಿ ಭದ್ರಕೋಟೆ ಎಂಬುದನ್ನು ಮತ್ತೂಮ್ಮೆ ಸಾಬೀತಾಗಿದೆ.

ಇಂಥ ಬಿಜೆಪಿ ಭದ್ರಕೋಟೆಗೆ ಲಗ್ಗೆ ಇಡಲು ಮುಂದಾಗಿದ್ದ ಮಾಜಿ ಕ್ರಿಕೆಟಿಗ ಪ್ರಕಾಶ ರಾಠೊಡ ಕಾಂಗ್ರೆಸ್‌ನಿಂದ ಸತತ ಮೂರು ಬಾರಿ ಸ್ಪರ್ಧಿಸಿ ಸೋಲು ಆನುಭವಿಸಿದ್ದರು. ಪ್ರಸಕ್ತ ಲೋಕಸಭೆ ಚುನಾವಣೆ ಸಂದರ್ಭದಲ್ಲಿ ಕಾಂಗ್ರೆಸ್‌-ಜೆಡಿಎಸ್‌ ಮೈತ್ರಿ ಮಾಡಿಕೊಂಡು ವಿಜಯಪುರ ಕ್ಷೇತ್ರವನ್ನು ಜೆಡಿಎಸ್‌ ಪಕ್ಷಕ್ಕೆ ಬಿಟ್ಟು ಕೊಟ್ಟಿತ್ತು. ಕಳೆದ ಬಾರಿ ಕಾಂಗ್ರೆಸ್‌ ಹಾಗೂ ಜೆಡಿಎಸ್‌ ಪಡೆದಿರುವ ಎರಡೂ ಅಭ್ಯರ್ಥಿಗಳ ಮತ ಸೇರಿದರೆ ಆಡಳಿತ ವಿರೋಧಿ ಅಲೆ ಹೊಂದಿರುವ ಕೇಂದ್ರದ ಹಾಲಿ ಸಚಿವ ಹಾಗೂ ಬಿಜೆಪಿ ಅಭ್ಯರ್ಥಿ ಜಿಗಜಿಣಗಿ ಅವರನ್ನು ಕಾಡುತ್ತಿತ್ತು. ಇದನ್ನು ಸರಿಯಾಗಿ ಬಳಸಿಕೊಂಡರೆ ಬಿಜೆಪಿಯನ್ನು ಸುಲಭವಾಗಿ ಸೋಲಿಸಬಹುದು ಎಂಬುದು ಜೆಡಿಎಸ್‌ ಆಭ್ಯರ್ಥಿ ಡಾ| ಸುನೀತಾ ಲೆಕ್ಕಚಾರ ಅಗಿತ್ತು. ಆ ಮೂಲಕ ಜಿಗಜಿಣಗಿ ಗೆಲುವಿನ ನಾಗಾಲೋಟಕ್ಕೆ ಕಡಿವಾಣ ಹಾಕಬಹದು ಎಂಬ ಲೆಕ್ಕಾಚಾರ ಇರಿಸಿಕೊಂಡಿದ್ದ ಜೆಡಿಎಸ್‌ ನಾಯಕರ ಲೆಕ್ಕಾಚಾರ ಹುಸಿಯಾಗಿ, ಹೊರ ಹೊತ್ತ ಮಹಿಳೆ ಬಿಜೆಪಿ ಭದ್ರಕೋಟೆಯಲ್ಲಿ ಕೈ ಕಟ್ಟಿಸಿಕೊಳ್ಳುವಂತಾಗಿದೆ.

ರಾಜ್ಯದ ಮೈತ್ರಿ ಸರ್ಕಾರದ ಆಡಳಿತ ಪಕ್ಷದಿಂದ ಜಿಲ್ಲೆಯ 8 ವಿಧಾನಸಭೆ ಕ್ಷೇತ್ರಗಳಲ್ಲಿ ಕಾಂಗ್ರೆಸ್‌ 3, ಜೆಡಿಎಸ್‌ 2 ಕ್ಷೇತ್ರಗಳಲ್ಲಿ ವಿಜಯ ಸಾಧಿಸಿದೆ. ಇದರಲ್ಲಿ ಕಾಂಗ್ರೆಸ್‌ ಪಕ್ಷದಿಂದ ಗೃಹ ಸಚಿವ ಎಂ.ಬಿ. ಪಾಟೀಲ, ಆರೋಗ್ಯ ಸಚಿವ ಶಿವಾನಂದ ಪಾಟೀಲ ಹಾಗೂ ಸಂಪುಟ ದರ್ಜೆಯ ಸ್ಥಾನ ಇರುವ ಮಂಡಳಿಯೊಂದಕ್ಕೆ ಇಂಡಿ ಶಾಸಕ ಯಶವಂತರಾಯಗೌಡ ಪಾಟೀಲ ಆಧ್ಯಕ್ಷರಾಗಿದ್ದಾರೆ. ಇದಲ್ಲದೇ ಜೆಡಿಎಸ್‌ ಪಕ್ಷದಿಂದ ಆಯ್ಕೆ ಆಗಿರುವ ಇಬ್ಬರಲ್ಲಿ ಒಬ್ಬರಾದ ಎಂ.ಸಿ. ಮನಗೂಳಿ ಸಚಿವರಾಗಿದ್ದಾರೆ. ಇನ್ನೊಬ್ಬರು ಶಿಕ್ಷಣ ಇಲಾಖೆಯ ಮುಖ್ಯಮಂತ್ರಿಗಳ ಸಂಸದೀಯ ಕಾರ್ಯದರ್ಶಿಯಾಗಿರುವ ದೇವಾನಂದ ಚವ್ಹಾಣ ಜೆಡಿಎಸ್‌ ಅಭ್ಯರ್ಥಿಯ ಪತಿಯೂ ಹೌದು.

ಹೀಗಾಗಿ ಜಿಲ್ಲೆಯ ಅಧಿಕಾರದಲ್ಲಿ ಹಿಡಿತ ಹೊಂದಿರುವ ಮೂವರು ಸಚಿವರು, ಸಂಪುಟ ದರ್ಜೆಯ ಇಬ್ಬರು ಶಾಸಕರಿದ್ದು, ಬಿಜೆಪಿ ಕೇವಲ 3 ಶಾಸಕರನ್ನು ಹೊಂದಿದ್ದು, ಅದರಲ್ಲಿ ಶಾಸಕ ಬಸನಗೌಡ ಪಾಟೀಲ ಯತ್ನಾಳ ಬಿಜೆಪಿ ಅಭ್ಯರ್ಥಿ ಜಿಗಜಿಣಗಿ ವಿರುದ್ಧ ಬಹಿರಂಗ ಅಸಮಾಧಾನ ಹೊಂದಿದ್ದಾರೆ. ಈ ಎಲ್ಲ ಆಂಶಗಗಳಿಂದ ಈ ಬಾರಿ ಬಿಜೆಪಿ ಅಶ್ವಮೇಧದ ಕುದುರೆಯನ್ನು ಸುಲಭವಾಗಿ ಕಟ್ಟಿಹಾಕುವ ಮಹತ್ವಾಕಾಂಕ್ಷೆಗೆ ತಣ್ಣೀರು ಬಿದ್ದಿದೆ.

ಕಾಂಗ್ರೆಸ್‌-ಜೆಡಿಎಸ್‌ ಮೈತ್ರಿ ಸಂದರ್ಭದಲ್ಲಿ ಸ್ಥಾನ ಹಂಚಿಕೆ, ಕ್ಷೇತ್ರ ಹಂಚಿಕೆ ಹಾಗೂ ಅಭ್ಯರ್ಥಿ ಘೋಷಣೆಯಲ್ಲಿ ವಿಳಂಬ ಮಾಡಿದ್ದು ಜೆಡಿಎಸ್‌ಗೆ ಮುಳುವಾಯಿತು. ಎಲ್ಲಕ್ಕಿಂತ ಹೆಚ್ಚಾಗಿ ದೇವಾನಂದ ಚವ್ಹಾಣ ಶಾಸಕರಿದ್ದರೂ ತಮ್ಮ ಪತ್ನಿಗೆ ಟಿಕೆಟ್ ತರುವ ಮೂಲಕ ಕುಟುಂಬ ರಾಜಕಾರಣಕ್ಕೆ ಅಂಟಿಕೊಂಡರು ಎಂಬ ಅಸಮಾಧಾನ ಉಭಯ ಪಕ್ಷಗಳ ನಾಯಕರಲ್ಲಿ ಮನೆ ಮಾಡಿತ್ತು. ಇದೆಲ್ಲಕ್ಕಿಂತ ಹೆಚ್ಚಾಗಿ ವಿಜಯಪುರ ಕ್ಷೇತ್ರವನ್ನು ಕಾಂಗ್ರೆಸ್‌ ಪಕ್ಷಕ್ಕೆ ಪಡೆದುಕೊಂಡು, ಮಾಜಿ ಶಾಸಕರಾದ ಪ್ರೊ| ರಾಜು ಆಲಗೂರ ಅಥವಾ ವಿಠuಲ ಕಟಕದೊಂಡ ಅವರನ್ನು ಕಣಕ್ಕಿಳಿಸಲು ಭರ್ಜರಿ ಸಿದ್ಧತೆ ಮಾಡಿಕೊಳ್ಳಲಾಗಿತ್ತು. ಆದರೆ ಅಂತಿಮ ಕ್ಷಣದಲ್ಲಿ ಕ್ಷೇತ್ರವನ್ನು ಜೆಡಿಎಸ್‌ ಪಕ್ಷಕ್ಕೆ ಬಿಟ್ಟು, ರಾಜಕೀಯದ ಆನುಭವವೇ ಇಲ್ಲದ ಡಾ| ಸುನೀತಾ ಚವ್ಹಾಣ ಅವರನ್ನು ಕಣಕ್ಕೆ ಇಳಿಸಿದ್ದು ಮೈತ್ರಿ ಗೆಲುವಿಗೆ ಮುಳುವಾಯಿತು.

ಇನ್ನು ಆಡಳಿತ ವಿರೋಧಿ ಅಲೆ ಇದ್ದು, ಸ್ವಪಕ್ಷೀಯರಾದ ವಿಜಯಪುರ ನಗರ ಶಾಸಕ ಬಸನಗೌಡ ಪಾಟೀಲ ಯತ್ನಾಳ ಅವರು, ಬಿಜೆಪಿ ಅಭ್ಯರ್ಥಿ ರಮೇಶ ಜಿಗಜಿಣಗಿ ಬಹಿರಂಗ ಬಂಡಾಯ ಘೋಷಿಸಿದರೂ ಕಾಂಗ್ರೆಸ್‌-ಜೆಡಿಎಸ್‌ ನಾಯಕರು ಹಾಗೂ ಕಾರ್ಯಕರ್ತರಲ್ಲಿ ಒಗ್ಗಟ್ಟು ಕಂಡು ಬರಲಿಲ್ಲ. ಹೀಗಾಗಿ ಬಿಜೆಪಿ ಬಂಡಾಯವನ್ನು ಸದ್ಬಳಕೆ ಮಾಡಿಕೊಂಡು ಬಲಿಷ್ಠ ರಣ ತಂತ್ರ ರೂಪಿಸುವಲ್ಲಿ ವಿಫ‌ಲವಾದ ಜೆಡಿಎಸ್‌ ಹೀನಾಯ ಸೋಲಿಗೆ ಬಲಿಯಾಗುವಂತಾಯಿತು.

ಕಾಂಗ್ರೆಸ್‌ ನಾಯಕರು, ಕಾರ್ಯಕರ್ತರಿಗಿಂತ ಹೆಚ್ಚಾಗಿ ಕ್ಷೇತ್ರದ ಕಾಂಗ್ರೆಸ್‌ ಸಾಂಪ್ರದಾಯಿಕ ಮತದಾರರು ಮೈತ್ರಿಯನ್ನು ಒಪ್ಪಲು ಸಿದ್ಧ ಇರಲಿಲ್ಲ. ಮತದಾನದ ಸಂದರ್ಭದಲ್ಲಿ ಮತಯಂತ್ರದಲ್ಲಿ ಹಸ್ತದ ಚಿಹ್ನೆ ಇಲ್ಲದಿರುವುದನ್ನು ಕಂಡು ಬೆರಗಾಗಿದ್ದ ಕಾಂಗ್ರೆಸ್‌ ಸಾಂಪ್ರದಾಯಿಕ ಮತದಾರರು ಬೇಸರಗೊಂಡಿದ್ದು ಮತದಾನದ ಸಂದರ್ಭದಲ್ಲಿ ಬಹಿರಂಗವಾಗಿತ್ತು. ಮತಯಂತ್ರದಲ್ಲಿ ಹಸ್ತ ಕಾಣದ ಕಾಂಗ್ರೆಸ್‌ ಮತಗಳು ಅಂತಿಮವಾಗಿ ಮೋದಿ ಅಲೆಯಲ್ಲಿ ರಾಷ್ಟ್ರೀಯ ಪಕ್ಷವಾದ ಬಿಜೆಪಿಯನ್ನು ಬೆಂಬಲಿಸಿರುವುದು ಸ್ಪಷ್ಟವಾಗಿದೆ.

ಕ್ಷೇತ್ರದಲ್ಲಿ ತಮ್ಮ ವಿರುದ್ಧ ಆಡಳಿತ ವಿರೋಧಿ ಅಲೆ ಇದ್ದರೂ ಮೋದಿ ಅಲೆ, 1 ಲಕ್ಷಕ್ಕೂ ಅಧಿಕ ಸಂಖ್ಯೆಯಲ್ಲಿದ್ದ ಹೊಸ ಹಾಗೂ ಯುವ ಮತದಾರರು ಮೋದಿ ಅಲೆಯಲ್ಲಿ ಬಿಜೆಪಿ ಆಭ್ಯರ್ಥಿಯನ್ನು ಬೆಂಬಲಿಸಿದ್ದು, ಮೈತ್ರಿ ಪಕ್ಷಗಳ ನಾಯಕರಲ್ಲಿ ಕಂಡು ಬರದ ಒಗ್ಗಟ್ಟಿನ ಪರಿಸ್ಥಿತಿ. ಹೀಗೆ ಹಲವು ಕಾರಣಗಳಿಂದ ಬಿಜೆಪಿ ಪಕ್ಷಕ್ಕೆ ವಿಜಯಪುರ ಭದ್ರಕೋಟೆ ಎಂಬ ಕೀರ್ತಿಯನ್ನು ಸಂಪಾದಿಸಲು ಸಾಧ್ಯವಾಯಿತು.

ಟಾಪ್ ನ್ಯೂಸ್

Maharashtra: ಕಾಂಗ್ರೆಸ್‌ ಗೆ ಕೇವಲ 16 ಸ್ಥಾನ; ಕೈ ಅಧ್ಯಕ್ಷ ಸ್ಥಾನಕ್ಕೆ ಪಟೋಲೆ ರಾಜೀನಾಮೆ

Maharashtra: ಕಾಂಗ್ರೆಸ್‌ ಗೆ ಕೇವಲ 16 ಸ್ಥಾನ; ಕೈ ಅಧ್ಯಕ್ಷ ಸ್ಥಾನಕ್ಕೆ ಪಟೋಲೆ ರಾಜೀನಾಮೆ

Ajit Pawar supports Devendra Fadnavis; CM tussle continues in Maharashtra

Politics: ಫಡ್ನವೀಸ್‌ ಗೆ ಬೆಂಬಲ ನೀಡಿದ ಅಜಿತ್;‌ ಮಹಾರಾಷ್ಟ್ರದಲ್ಲಿ ಮುಗಿಯದ ಸಿಎಂ ತಿಕ್ಕಾಟ

Video: ನೋಟಿನ ಮಾಲೆಯಲ್ಲಿ ನೋಟು ಎಗರಿಸಿ ಕಳ್ಳ… ಮದುವೆ ಬಿಟ್ಟು ಕಳ್ಳನ ಹಿಂದೆ ಓಡಿದ ವರ

Video: ನೋಟಿನ ಮಾಲೆಯ ನೋಟು ಎಗರಿಸಿದ ಕಳ್ಳ… ಮದುವೆ ಬಿಟ್ಟು ಕಳ್ಳನ ಹಿಂದೆ ಓಡಿದ ವರ

Sudeep: ‘Max’ release date fixed: Production company wakes up to Kichchan’s anger

Sudeep: ʼಮ್ಯಾಕ್ಸ್‌ʼ ರಿಲೀಸ್‌ ದಿನ ಫಿಕ್ಸ್: ಕಿಚ್ಚನ ಸಿಟ್ಟಿಗೆ ಎಚ್ಚೆತ್ತ ನಿರ್ಮಾಣ ಸಂಸ್ಥೆ

Bidar: Waqf should be removed from India : Yatnal

‌Bidar: ಭಾರತದಿಂದಲೇ ವಕ್ಫ್ ತೊಲಗಿಸಬೇಕು: ಯತ್ನಾಳ್

Veerendra Heggade: ಡಾ.ಡಿ.ವೀರೇಂದ್ರ ಹೆಗ್ಗಡೆಗೆ ಇಂಡಿಯಾ ಬುಕ್ ಆಫ್ ರೆಕಾರ್ಡ್ ಪ್ರಶಸ್ತಿ

Veerendra Heggade: ಡಾ.ಡಿ.ವೀರೇಂದ್ರ ಹೆಗ್ಗಡೆಗೆ ಇಂಡಿಯಾ ಬುಕ್ ಆಫ್ ರೆಕಾರ್ಡ್ ಪ್ರಶಸ್ತಿ

Sambhal Case Follow Up:ಹೊರಗಿನವರಿಗೆ ಸಂಭಾಲ್‌ ಪ್ರವೇಶಕ್ಕೆ ನಿರ್ಬಂಧ,ಜಲ್ಲಿ ಮಾರಾಟ ನಿಷೇಧ

Sambhal Case Follow Up:ಹೊರಗಿನವರಿಗೆ ಸಂಭಾಲ್‌ ಪ್ರವೇಶಕ್ಕೆ ನಿರ್ಬಂಧ,ಜಲ್ಲಿ ಮಾರಾಟ ನಿಷೇಧ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Bidar: Waqf should be removed from India : Yatnal

‌Bidar: ಭಾರತದಿಂದಲೇ ವಕ್ಫ್ ತೊಲಗಿಸಬೇಕು: ಯತ್ನಾಳ್

ಕಡಬ, ಬೆಳ್ತಂಗಡಿ ಸೇರಿದಂತೆ ಅಕ್ರಮ ಮದ್ಯಮಾರಾಟದ ವಿರುದ್ದ ವಿಶೇಷ ಕಾರ್ಯಾಚರಣೆ: ಪ್ರಕರಣ ದಾಖಲು

ಕಡಬ, ಬೆಳ್ತಂಗಡಿ ಸೇರಿದಂತೆ ಹಲವೆಡೆ ಮಾದಕವಸ್ತು, ಅಕ್ರಮ ಮದ್ಯ ಮಾರಾಟ ವಿರುದ್ಧ ಕಾರ್ಯಾಚರಣೆ

Bidar: ವಕ್ಫ್‌ ಹೋರಾಟ ಆರಂಭಿಸಿದ ಯತ್ನಾಳ್- ಜಾರಕಿಹೊಳಿ ತಂಡ

Bidar: ವಕ್ಫ್‌ ಹೋರಾಟ ಆರಂಭಿಸಿದ ಯತ್ನಾಳ್- ಜಾರಕಿಹೊಳಿ ತಂಡ

ಮಕ್ಕಳನ್ನು ಶಾಲೆಗೆ‌ ಸೇರಿಸೋದು ಮುಖ್ಯವಲ್ಲ, ನಿತ್ಯವೂ ಕಳುಹಿಸಿ… :ಶಿಕ್ಷಣ ಸಚಿವರ ಮನವಿ

ಮಕ್ಕಳನ್ನು ಶಾಲೆಗೆ‌ ಸೇರಿಸೋದು ಮುಖ್ಯವಲ್ಲ, ನಿತ್ಯವೂ ಕಳುಹಿಸಿ… :ಸಚಿವ ಮಧು ಬಂಗಾರಪ್ಪ

5,000 tractors blockade Suvarna Soudha on December 10; Kudalasangama Sri

Protest: ಡಿ.10 ರಂದು ಸುವರ್ಣಸೌಧಕ್ಕೆ 5 ಸಾವಿರ ಟ್ರ್ಯಾಕ್ಟರ್ ಮುತ್ತಿಗೆ; ಕೂಡಲಸಂಗಮ ಶ್ರೀ

MUST WATCH

udayavani youtube

ಎದೆ ನೋವು, ಮಧುಮೇಹ, ಥೈರಾಯ್ಡ್ ,ಸಮಸ್ಯೆಗಳಿಗೆ ಪರಿಹಾರ ತೆಂಗಿನಕಾಯಿ ಹೂವು

udayavani youtube

ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು

udayavani youtube

ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?

udayavani youtube

ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್‌ |

udayavani youtube

ಕೊಲ್ಲೂರಿನಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಡಿಸಿಎಂ ಡಿ ಕೆ ಶಿವಕುಮಾರ್

ಹೊಸ ಸೇರ್ಪಡೆ

Maharashtra: ಕಾಂಗ್ರೆಸ್‌ ಗೆ ಕೇವಲ 16 ಸ್ಥಾನ; ಕೈ ಅಧ್ಯಕ್ಷ ಸ್ಥಾನಕ್ಕೆ ಪಟೋಲೆ ರಾಜೀನಾಮೆ

Maharashtra: ಕಾಂಗ್ರೆಸ್‌ ಗೆ ಕೇವಲ 16 ಸ್ಥಾನ; ಕೈ ಅಧ್ಯಕ್ಷ ಸ್ಥಾನಕ್ಕೆ ಪಟೋಲೆ ರಾಜೀನಾಮೆ

Ajit Pawar supports Devendra Fadnavis; CM tussle continues in Maharashtra

Politics: ಫಡ್ನವೀಸ್‌ ಗೆ ಬೆಂಬಲ ನೀಡಿದ ಅಜಿತ್;‌ ಮಹಾರಾಷ್ಟ್ರದಲ್ಲಿ ಮುಗಿಯದ ಸಿಎಂ ತಿಕ್ಕಾಟ

Video: ನೋಟಿನ ಮಾಲೆಯಲ್ಲಿ ನೋಟು ಎಗರಿಸಿ ಕಳ್ಳ… ಮದುವೆ ಬಿಟ್ಟು ಕಳ್ಳನ ಹಿಂದೆ ಓಡಿದ ವರ

Video: ನೋಟಿನ ಮಾಲೆಯ ನೋಟು ಎಗರಿಸಿದ ಕಳ್ಳ… ಮದುವೆ ಬಿಟ್ಟು ಕಳ್ಳನ ಹಿಂದೆ ಓಡಿದ ವರ

Sudeep: ‘Max’ release date fixed: Production company wakes up to Kichchan’s anger

Sudeep: ʼಮ್ಯಾಕ್ಸ್‌ʼ ರಿಲೀಸ್‌ ದಿನ ಫಿಕ್ಸ್: ಕಿಚ್ಚನ ಸಿಟ್ಟಿಗೆ ಎಚ್ಚೆತ್ತ ನಿರ್ಮಾಣ ಸಂಸ್ಥೆ

Bidar: Waqf should be removed from India : Yatnal

‌Bidar: ಭಾರತದಿಂದಲೇ ವಕ್ಫ್ ತೊಲಗಿಸಬೇಕು: ಯತ್ನಾಳ್

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.