ದೇಶದ ಕೀರ್ತಿ ಪತಾಕೆ ಹಾರಿಸಿದ ಪ್ರಧಾನಿ ಮೋದಿ
Team Udayavani, May 24, 2019, 12:28 PM IST
ಗೋಕಾಕ: ಲೋಕಸಭಾ ಚುನಾವಣೆಯಲ್ಲಿ ಬಿಜೆಪಿ ನೇತೃತ್ವದ ಎನ್‌ಡಿಎ ಮೈತ್ರಿಕೂಟ ಬಹುಮತ ಪಡೆದ ಹಿನ್ನೆಲೆಯಲ್ಲಿ ಇಲ್ಲಿಯ ಶ್ರೀರಾಮ ಸೇನಾ, ಬಿಜೆಪಿ ನಗರ ಘಟಕ ಪದಾಧಿಕಾರಿಗಳು ನಗರದ ಸಂಗೊಳ್ಳಿ ರಾಯಣ್ಣ ವೃತ್ತದಲ್ಲಿ ಸೇರಿ ಪಟಾಕಿ ಸಿಡಿಸಿ ಸಂಭ್ರಮಿಸಿದರು.
ನಂತರ ಬಸ್ ನಿಲ್ದಾಣ ಮಾರ್ಗವಾಗಿ ಮೆರವಣಿಗೆ ಮೂಲಕ ಶ್ರೀ ಬಸವೇಶ್ವರ ವೃತ್ತದಲ್ಲಿ ಸಾರ್ವಜನಿಕರಿಗೆ ಸಿಹಿ ಹಂಚಿ ವಿಜಯೋತ್ಸವ ಆಚರಿಸಿದರು. ನಂತರ ಮಾತನಾಡಿದ ಬಿಜೆಪಿ ಮುಖಂಡ ಅಶೋಕ ಪೂಜಾರಿ, ಇಂದಿನ ಫಲಿತಾಂಶದಿಂದ ಭಾರತ ಕೀರ್ತಿ ಪತಾಕೆ ಅಂತಾರಾಷ್ಟ್ರೀಯ ಮಟ್ಟದಲ್ಲಿ ಗೌರವ ಹೆಚ್ಚಿದ್ದು, ನರೇಂದ್ರ ಮೋದಿ ಅವರ ನಾಯಕತ್ವವನ್ನು ದೇಶದ ಜನತೆ ಮನಪೂರ್ವಕವಾಗಿ ಒಪ್ಪಿ ಬೆಂಬಲಿಸಿದ್ದಾರೆ. ಸಮಗ್ರ ಭಾರತ ಅಭಿವೃದ್ಧಿ ಪಥದತ್ತ ಸಾಗಲಿದ್ದು, ಇದಕ್ಕೆ ಕಾರಣಿಭೂತರಾದ ಪ್ರಬುದ್ಧ ಮತದಾರರನ್ನು ಅಭಿನಂದಿಸುತ್ತೇನೆ ಎಂದು ತಿಳಿಸಿದರು.
ಬಿಜೆಪಿ ನಗರ ಘಟಕದ ಅಧ್ಯಕ್ಷ ಎಸ್.ವಿ.ದೇಮಶೆಟ್ಟಿ, ಶ್ರೀರಾಮ ಸೇನೆಯ ಮುಖಂಡರಾದ ರಾಜು ಜಾಧವ, ಸುನೀಲ ಮುರ್ಕಿಭಾಂವಿ, ಡಾ| ರಮೇಶ ಪಟಗುಂದಿ, ಶ್ರೀದೇವಿ ತಡಕೋಡ ಮಾತನಾಡಿ, ಈ ವಿಜಯವನ್ನು ಇಡಿ ಜಗತ್ತೆ ನಿಬ್ಬೆರಗಾಗಿ ನೋಡುತ್ತಿದ್ದು, ಭಾರತದ ಇತಿಹಾಸದಲ್ಲಿ ಸುವರ್ಣಾಕ್ಷರಗಳಲ್ಲಿ ಬರೆದಿಡುವ ದಿನವಾಗಿದೆ. ಇನ್ನು ಮುಂದಿನ 5 ವರ್ಷಗಳಲ್ಲಿ ನಮ್ಮ ದೇಶ ಅಭಿವೃದ್ಧಿ ಹೊಂದಿ ವಿಶ್ವ ಗುರುವಾಗಿ ಸಂಭ್ರಮಿಸಲಿದೆ ಎಂದರು.
ಈ ಸಂದರ್ಭದಲ್ಲಿ ಬಿಜೆಪಿ ಮಹಿಳಾ ಘಟಕದ ಅಧ್ಯಕ್ಷೆ ಕುಸಮಾ ಖನಗಾಂವಿ, ಮಹಾಂತೇಶ ತಾಂವಶಿ, ಕೇದಾರಿ ಜಾಧವ, ಬಸು ಪಡತಾರೆ, ಅಮಿತ್ ವಣ್ಣೂರ, ಪ್ರಸಾದ ಬಡಿಗೇರ, ಕೃಷ್ಣಾ ಗುಡ್ಡದಮನಿ, ಸುನೀಲ ಸುಭಂಜಿ, ಶಿವು ಪೂಜೇರಿ, ಪ್ರೊ. ಬಿಕ್ಕನ್ನವರ, ದಸ್ತಗೀರ ಪೈಲವಾನ, ಸತೀಶ ಗೋಳಸಂಗಿ, ಸುನೀಲ ಘೋರ್ಪಡೆ, ಮಹೇಶ ಕರೋಶಿ, ವಿಶ್ವನಾಥ ಸುಣಧೋಳಿ, ಸಮೀರ ಸುಣಧೋಳಿ, ಲಕ್ಷ್ಮೀಕಾಂತ ದನದವರ ಸೇರಿದಂತೆ ಅನೇಕರು ಇದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Tragedy: ಆನೆ ತುಳಿದು ಮಾವುತನ ಸಹಾಯಕ ಮೃತ್ಯು… ಮುಗಿಲು ಮುಟ್ಟಿದ ಕುಟುಂಬಸ್ಥರ ಆಕ್ರಂದನ
Belagavi; ಬಹಳ ನೋವಾಗಿದೆ, ನೂರು ಸಿ.ಟಿ.ರವಿ ಬಂದರೂ ಹೆದರುವುದಿಲ್ಲ: ಲಕ್ಷ್ಮೀ ಹೆಬ್ಬಾಳಕರ
Belagavi: ಕಾಂಗ್ರೆಸ್ ಅಧಿವೇಶನ ಶತಮಾನೋತ್ಸವ ದೇಶದ ಇತಿಹಾಸ ಸಂಭ್ರಮಿಸುವ ಕಾರ್ಯಕ್ರಮ: ಡಿಕೆಶಿ
Mrinal Hebbalkar: ನನ್ನ ತಾಯಿಗೆ ರವಿ ಬಳಸಿದ ಪದದಿಂದ ನೋವಾಗಿದೆ: ಮೃಣಾಲ್
Belgavi: ಸಿ.ಟಿ.ರವಿ ಪ್ರಕರಣ ಮುಂದುವರಿಸುವಲ್ಲಿ ಅರ್ಥವೇ ಇಲ್ಲ: ಸಚಿವ ಸತೀಶ್ ಜಾರಕಿಹೊಳಿ
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
INDvAUS: ಬಿಸಿಸಿಐ ಬಗ್ಗೆ ವಿವಾದಾತ್ಮಕ ಹೇಳಿಕೆ ನೀಡಿದ್ರಾ ಟ್ರಾವಿಸ್ ಹೆಡ್? Video
Sheikh ಹಸೀನಾರನ್ನು ಬಾಂಗ್ಲಾದೇಶಕ್ಕೆ ವಾಪಸ್ ಕಳುಹಿಸಿ: ಭಾರತಕ್ಕೆ ಬಾಂಗ್ಲಾ ಮನವಿ
Seema Haider; 4 ಮಕ್ಕಳೊಂದಿಗೆ ಭಾರತಕ್ಕೆ ಬಂದಿದ್ದ ಸೀಮಾ ಈಗ ಗರ್ಭಿಣಿ!!
Shimoga; ನಿತ್ಯ ಸುದ್ದಿಯಲ್ಲಿರಬೇಕೆಂದು ಸಿ.ಟಿ ರವಿ ʼಆʼ ಹೇಳಿಕೆ ನೀಡಿದ್ದಾರೆ: ಆಯನೂರು
Tragedy: ಆನೆ ತುಳಿದು ಮಾವುತನ ಸಹಾಯಕ ಮೃತ್ಯು… ಮುಗಿಲು ಮುಟ್ಟಿದ ಕುಟುಂಬಸ್ಥರ ಆಕ್ರಂದನ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.