ಬಿಜೆಪಿ ಕಾರ್ಯಕರ್ತರ ವಿಜಯೋತ್ಸವ
ಪಟಾಕಿ ಸಿಡಿಸಿ ಸಿಹಿ ಹಂಚಿ ಹರ್ಷ•ಮೊಳಗಿದ ನಮೋ ಹರ್ಷೋದ್ಘಾರ
Team Udayavani, May 24, 2019, 3:21 PM IST
ಚಿಕ್ಕಮಗಳೂರು: ಲೋಕಸಭಾ ಚುನಾವಣೆಯಲ್ಲಿ ಬಿಜೆಪಿ ಅಭೂತಪೂರ್ವ ಗೆಲುವು ಸಾಧಿಸಿದ ಹಿನ್ನೆಲೆಯಲ್ಲಿ ಬಿಜೆಪಿ ಕಾರ್ಯಕರ್ತರು ವಿಜಯೋತ್ಸವ ಆಚರಿಸಿದರು.
ಚಿಕ್ಕಮಗಳೂರು: ಲೋಕಸಭಾ ಚುನಾವಣೆಯಲ್ಲಿ ಪಕ್ಷಕ್ಕೆ ದೇಶದಲ್ಲಿ ದೊರೆತ ಅಭೂತಪೂರ್ವ ಗೆಲುವಿನಿಂದಾಗಿ ನಗರದಲ್ಲಿ ಬಿಜೆಪಿ ಕಾರ್ಯಕರ್ತರು ಗುರುವಾರ ಪಟಾಕಿ ಸಿಡಿಸಿ, ಸಿಹಿ ಹಂಚುವ ಮೂಲಕ ವಿಜಯೋತ್ಸವ ಆಚರಿಸಿದರು.
ನಗರದ ಜಿಲ್ಲಾ ಬಿಜೆಪಿ ಕಚೇರಿಯಿಂದ ಪಕ್ಷದ ಬಾವುಟ, ಪ್ರಧಾನಿ ನರೇಂದ್ರ ಮೋದಿ ಅವರ ದೊಡ್ಡ ಭಾವಚಿತ್ರವಿದ್ದ ಕಟೌಟನ್ನು ಹಿಡಿದು ಮೆರವಣಿಗೆ ಹೊರಟ ಕಾರ್ಯಕರ್ತರು ಬಿಜೆಪಿ ಹಾಗೂ ನರೇಂದ್ರ ಮೋದಿ ಪರ ಘೋಷಣೆಗಳನ್ನು ಕೂಗುತ್ತ ಆಜಾದ್ ಪಾರ್ಕ್ ವೃತ್ತವನ್ನು ತಲುಪಿದರು.
ಆಜಾದ್ ಪಾರ್ಕ್ ವೃತ್ತದಲ್ಲಿ ನೆರೆದ ಕಾರ್ಯಕರ್ತರು ಪಕ್ಷದ ಪರ ಘೋಷಣೆ ಕೂಗುತ್ತ ವೃತ್ತದಲ್ಲಿ ಪಟಾಕಿ ಸಿಡಿಸಿ ಕುಣಿದು ಕುಪ್ಪಳಿಸಿದರು. ಬಿಜೆಪಿ ಪರ ಘೋಷಣೆ ಕೂಗುತ್ತಲೇ ವೃತ್ತದಲ್ಲಿ ನೆರೆದಿದ್ದ ಸಾರ್ವಜನಿಕರು ಹಾಗೂ ವಾಹನಗಳಲ್ಲಿ ತೆರಳುತ್ತಿದ್ದವರಿಗೆ ಸಿಹಿ ವಿತರಿಸಿ ಕಾರ್ಯಕರ್ತರು ಸಂಭ್ರಮಿಸಿದರು.
ಜಿಲ್ಲಾ ಬಿಜೆಪಿ ವಕ್ತಾರ ಸಿ.ಎಚ್.ಲೋಕೇಶ್, ನಗರಸಭೆ ಮಾಜಿ ಅಧ್ಯಕ್ಷರಾದ ದೇವರಾಜ ಶೆಟ್ಟಿ, ಮುತ್ತಯ್ಯ, ಬಿ.ರಾಜಪ್ಪ, ವಿಕ್ರಮ್, ವೀಣಾಶೆಟ್ಟಿ ಇತರರು ಇದ್ದರು.
ಸ್ವಚ್ಛತೆ: ನಗರದ ಆಜಾದ್ ಪಾರ್ಕ್ ವೃತ್ತದಲ್ಲಿ ವಿಜಯೋತ್ಸವದ ಸಂದರ್ಭದಲ್ಲಿ ಪಟಾಕಿ ಸಿಡಿಸಿದ ನಂತರ ಕೆಲ ಬಿಜೆಪಿ ಕಾರ್ಯಕರ್ತರುಗಳೇ ಕೈಯಲ್ಲಿ ಪೊರಕೆ ಹಿಡಿದು ರಸ್ತೆಯಲ್ಲಿ ಬಿದ್ದಿದ್ದ ಪಟಾಕಿ ಗುಡಿಸಿ ಸ್ವಚ್ಛಗೊಳಿಸುವ ಮೂಲಕ ಸಾರ್ವಜನಿಕರ ಮೆಚ್ಚುಗೆಗೆ ಪಾತ್ರರಾದರು
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Bengaluru: ಎಸ್‌ಎಸ್‌ಎಲ್‌ಸಿ ಫೇಲ್ ಆಗಿದ್ದಕ್ಕೆ ಭುವನೇಶ್ವರಿ ವಿಗ್ರಹ ವಿರೂಪಗೊಳಿಸಿದ ಯುವಕ
Fraud: ಡ್ರಗ್ಸ್ ಕೇಸ್ ಹೆಸರಲ್ಲಿ ಟೆಕಿಗೆ ಬೆದರಿಸಿ 40 ಲಕ್ಷ ವಂಚನೆ
Bengaluru Krishi Mela: ಜಿಕೆವಿಕೆ ಕೃಷಿ ಮೇಳಕ್ಕೆ 34.13 ಲಕ್ಷ ಜನರ ಭೇಟಿ
Puttur: ಮಹಿಳೆಯ ಮಾನಭಂಗಕ್ಕೆ ಯತ್ನ; ಆರೋಪಿಗೆ ಜೈಲು ಶಿಕ್ಷೆ
Bantwala: ಕೆದಿಲ ಗ್ರಾಮದಲ್ಲಿ ಸಿಡಿಲು ಬಡಿದು ಬಾಲಕ ಸಾವು
MUST WATCH
ಹೊಸ ಸೇರ್ಪಡೆ
BBK11: ಮುಖವಾಡ ಬಯಲು ಮಾಡುತ್ತೇವೆ..ಆರಂಭದಲ್ಲೇ ರೊಚ್ಚಿಗೆದ್ದ ವೈಲ್ಡ್ ಕಾರ್ಡ್ ಸ್ಪರ್ಧಿಗಳು
Bengaluru: ಎಸ್‌ಎಸ್‌ಎಲ್‌ಸಿ ಫೇಲ್ ಆಗಿದ್ದಕ್ಕೆ ಭುವನೇಶ್ವರಿ ವಿಗ್ರಹ ವಿರೂಪಗೊಳಿಸಿದ ಯುವಕ
Fraud: ಡ್ರಗ್ಸ್ ಕೇಸ್ ಹೆಸರಲ್ಲಿ ಟೆಕಿಗೆ ಬೆದರಿಸಿ 40 ಲಕ್ಷ ವಂಚನೆ
Bengaluru Krishi Mela: ಜಿಕೆವಿಕೆ ಕೃಷಿ ಮೇಳಕ್ಕೆ 34.13 ಲಕ್ಷ ಜನರ ಭೇಟಿ
Mangaluru: ಕೇರಳ ಏಜೆನ್ಸಿಯಿಂದ ಇಸ್ರೇಲ್‌ನಲ್ಲಿ ಉದ್ಯೋಗದ ಆಮಿಷ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.