ಒಗ್ಗಟ್ಟಿನ ಕೊರತೆ, ಅತಿಯಾದ ವಿಶ್ವಾಸ ಶಾಪವಾಯ್ತು

Team Udayavani, May 24, 2019, 3:30 PM IST

Udayavani Kannada Newspaper

ಚಿತ್ರದುರ್ಗ: 2014ರ ಲೋಕಸಭಾ ಚುನಾವಣೆಯಲ್ಲಿ ದೇಶಾದ್ಯಂತ ಮೋದಿ ಅಲೆ ಇದ್ದರೂ ಚಿತ್ರದುರ್ಗ ಲೋಕಸಭಾ ಕ್ಷೇತ್ರದಿಂದ ಬಿ.ಎನ್‌. ಚಂದ್ರಪ್ಪ ಸಂಸದರಾಗಿ ಆಯ್ಕೆಯಾಗಿದ್ದರು. ಮೂಲತಃ ಚಿಕ್ಕಮಗಳೂರು ಜಿಲ್ಲೆಯ ಮೂಡಿಗೆರೆ ತಾಲೂಕಿನವರಾದ ಚಂದ್ರಪ್ಪ, ಜಿಲ್ಲೆಯಿಂದ ಕಣಕ್ಕಿಳಿದು ಒಂದು ಲಕ್ಷಕ್ಕೂ ಹೆಚ್ಚು ಮತದ ಅಂತರದಿಂದ ಜಯಶಾಲಿಯಾಗಿದ್ದರು. ಕಾಂಗ್ರೆಸ್‌-ಜೆಡಿಎಸ್‌ ಮೈತ್ರಿಕೂಟದಿಂದ ಈ ಬಾರಿಯೂ ಸ್ಪರ್ಧಿಸಿದ್ದ ಅವರು, ಪುನರಾಯ್ಕೆಯಾಗುವ ಕನಸು ಕಂಡಿದ್ದರು. ಆದರೆ ಈ ಸಲ ಮೋದಿ ಅಲೆ ಹಾಗೂ ಪ್ರಬಲ ಪೈಪೋಟಿಯಿಂದಾಗಿ ಮತ್ತೆ ಸಂಸತ್‌ ಪ್ರವೇಶಿಸುವ ಅವರ ಆಸೆ ಭಗ್ನಗೊಂಡಿದೆ. ಚಂದ್ರಪ್ಪ ಸೋಲಿಗೆ ಹಲವಾರು ಕಾರಣಗಳಿವೆ. ವೈಯಕ್ತಿಕವಾಗಿ ಸರಳ-ಸಜ್ಜನ ಎನ್ನಿಸಿಕೊಂಡು ಐದು ವರ್ಷಗಳಲ್ಲಿ ಸಾಕಷ್ಟು ಅಭಿವೃದ್ಧಿ ಕಾರ್ಯ ಮಾಡಿದ್ದರೂ ಅದು ಮತವಾಗಿ ಪರಿವರ್ತನೆಯಾಗಲೇ ಇಲ್ಲ. ಅಲ್ಲದೆ ಕಾಂಗ್ರೆಸ್‌ ಪಕ್ಷದ ಕಾರ್ಯಕರ್ತರು, ಮುಖಂಡರು, ಮಾಜಿ, ಹಾಲಿ ಶಾಸಕರು ಕ್ರಿಯಾಶೀಲವಾಗಿ ಕೆಲಸ ಮಾಡದೇ ಇರುವುದು ಸೋಲಿನಲ್ಲಿ ಪ್ರಮುಖ ಪಾತ್ರ ವಹಿಸಿತು.

ಬಿಜೆಪಿ ಕೂಡ ಮಾದಿಗ ಸಮುದಾಯದವರಿಗೆ ಟಿಕೆಟ್ ನೀಡಿದ್ದು, ಮಾದಿಗ ಸಮುದಾಯದವರೇ ಆದ ಚಂದ್ರಪ್ಪಗೆ ಮುಳುವಾಯಿತು. ಶಿರಾ, ಪಾವಗಡ ಕ್ಷೇತ್ರಗಳ ವಿಧಾನಸಭಾ ಚುನಾವಣೆಯಲ್ಲಿ ಬಿಜೆಪಿ ಅಭ್ಯರ್ಥಿಗಳು ಪಡೆದ ಮತಗಳನ್ನು ಗಣನೆಗೆ ತೆಗೆದುಕೊಳ್ಳಲಾಯಿತು. ಈ ಎರಡು ಕ್ಷೇತ್ರಗಳಲ್ಲಿ ಕಾಂಗ್ರೆಸ್‌ಗೆ ಹೆಚ್ಚಿನ ಲಾಭವಾಗುತ್ತದೆ ಎಂದು ಬಲವಾಗಿ ನಂಬಿ ಕೂರಲಾಯಿತು. ಮಾಜಿ ಶಾಸಕರ ಮೇಲೆ ಹೆಚ್ಚು ಅವಲಂಬಿತವಾದರೂ ನಿರೀಕ್ಷಿತ ಪ್ರಮಾಣದಲ್ಲಿ ಅವರು ಸರಿಯಾಗಿ ಕೆಲಸ ಮಾಡಲಿಲ್ಲ. ಲೋಕಸಭಾ ಕ್ಷೇತ್ರ ವ್ಯಾಪ್ತಿಯ ಎಂಟು ವಿಧಾನಸಭಾ ಕ್ಷೇತ್ರಗಳಲ್ಲಿ ಕಾಂಗ್ರೆಸ್‌ನ ಇಬ್ಬರು, ಜೆಡಿಎಸ್‌ನ ಒಬ್ಬರು ಶಾಸಕರಿದ್ದರೂ ನಿರೀಕ್ಷಿತ ಪ್ರಮಾಣದಲ್ಲಿ ಮತ ದೊರೆತಿಲ್ಲ. ಜಿಲ್ಲೆಯಲ್ಲಿ ಜೆಡಿಎಸ್‌ ಮತಗಳ ಸಂಖ್ಯೆ ಕಡಿಮೆ ಇರುವುದು, ಲಿಂಗಾಯತ ಮತಗಳು ಹೆಚ್ಚಾಗಿ ಬಿಜೆಪಿಗೆ ಬಂದಿರುವುದು. ಲಿಂಗಾಯತ ಸಮುದಾಯ ಕಾಂಗ್ರೆಸ್‌ ವಿರೋಧಿ ಎನ್ನುವಂತೆ ಬಿಂಬಿಸಿದ್ದರಿಂದ ಚಂದ್ರಪ್ಪ ಪರಾಜಯ ಅನುಭವಿಸಬೇಕಾಯಿತು ಎಂದು ವಿಶ್ಲೇಷಿಸಲಾಗುತ್ತಿದೆ.

ಟಾಪ್ ನ್ಯೂಸ್

Mumbai: ಚಿಕಿತ್ಸೆಗೆಂದು ಮುಂಬೈಗೆ ಹೋಗಿದ್ದ ನಾಸಿಕ್ ನ ಒಂದೇ ಕುಟುಂಬದ ಮೂವರ ದುರಂತ ಸಾವು

Mumbai: ಚಿಕಿತ್ಸೆಗೆಂದು ಮುಂಬೈಗೆ ಹೋಗಿದ್ದ ನಾಸಿಕ್ ನ ಒಂದೇ ಕುಟುಂಬದ ಮೂವರ ದುರಂತ ಸಾ*ವು

Kadur: ದೇಗುಲ ಕಂಪೌಂಡ್‌ ಪ್ರವೇಶಿಸಿದರೆಂದು ದಲಿತರಿಗೆ ದಂಡ; ಸವರ್ಣೀಯರಿಂದ ದೇಗುಲಕ್ಕೆ ಬೀಗ

Kadur: ದೇಗುಲ ಕಂಪೌಂಡ್‌ ಪ್ರವೇಶಿಸಿದರೆಂದು ದಲಿತರಿಗೆ ದಂಡ; ಸವರ್ಣೀಯರಿಂದ ದೇಗುಲಕ್ಕೆ ಬೀಗ

0055

BBK11: ಮಂಜು ಅವರದ್ದು ಚೀಪ್ ಮೆಂಟಲಿಟಿ‌ ಎಂದ ರಜತ್; ಭವ್ಯ – ಮೋಕ್ಷಿತಾ ವಾಗ್ವಾದ

9-ullala

Ullala: ಸೇತುವೆಗೆ ತೇಪೆ ಹಚ್ಚುವ ಕಾಮಗಾರಿ; ರಾ. ಹೆದ್ದಾರಿಯಲ್ಲಿ ವಾಹನ ಸಂಚಾರ ವ್ಯತ್ಯಯ

BGT: ಆಸೀಸ್‌ ಮಾಧ್ಯಮದ ವಿರುದ್ದ ವಿರಾಟ್‌ ಗರಂ: ಏರ್‌ಪೋರ್ಟ್‌ ನಲ್ಲಿ ವರದಿಗಾರ್ತಿ ಜತೆ ಜಗಳ

BGT: ಆಸೀಸ್‌ ಮಾಧ್ಯಮದ ವಿರುದ್ದ ವಿರಾಟ್‌ ಗರಂ: ಏರ್‌ಪೋರ್ಟ್‌ ನಲ್ಲಿ ವರದಿಗಾರ್ತಿ ಜತೆ ಜಗಳ

8-belthangady

Belthangady: ಕ್ರಿಸ್ಮಸ್‌ ಹಬ್ಬಕ್ಕೆ ವಿದ್ಯುತ್ ಅಲಂಕಾರ ಮಾಡುವ ವೇಳೆ ಶಾಕ್: ಬಾಲಕ ಸಾವು

Chikkamagaluru: ಎಮ್ಮೆ ಹುಡುಕಲು ಹೋದವರ ಮೇಲೆ ಕಾಡಾನೆ ದಾಳಿ; ಮಗ ಪರಾರಿ, ತಂದೆ ಸಾವು

Chikkamagaluru: ಎಮ್ಮೆ ಹುಡುಕಲು ಹೋದವರ ಮೇಲೆ ಕಾಡಾನೆ ದಾಳಿ; ಮಗ ಪರಾರಿ, ತಂದೆ ಸಾವು

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Kadur: ದೇಗುಲ ಕಂಪೌಂಡ್‌ ಪ್ರವೇಶಿಸಿದರೆಂದು ದಲಿತರಿಗೆ ದಂಡ; ಸವರ್ಣೀಯರಿಂದ ದೇಗುಲಕ್ಕೆ ಬೀಗ

Kadur: ದೇಗುಲ ಕಂಪೌಂಡ್‌ ಪ್ರವೇಶಿಸಿದರೆಂದು ದಲಿತರಿಗೆ ದಂಡ; ಸವರ್ಣೀಯರಿಂದ ದೇಗುಲಕ್ಕೆ ಬೀಗ

9

Kaup: ಸಮಸ್ಯೆಗೆ ದೂರು ನೀಡಲು 1912ಗೆ ಕರೆ ಮಾಡಿ

8

Shirva: ಹೊಂಡ ಗುಂಡಿ, ಧೂಳುಮಯ ಕೋಡು-ಪಂಜಿಮಾರು ರಸ್ತೆ

7(1

Udupi: ಉದ್ಘಾಟನೆ ಕಾಣದ ಸರಕಾರಿ ಕಟ್ಟಡಗಳು

9-ullala

Ullala: ಸೇತುವೆಗೆ ತೇಪೆ ಹಚ್ಚುವ ಕಾಮಗಾರಿ; ರಾ. ಹೆದ್ದಾರಿಯಲ್ಲಿ ವಾಹನ ಸಂಚಾರ ವ್ಯತ್ಯಯ

MUST WATCH

udayavani youtube

ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ

udayavani youtube

ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ

udayavani youtube

ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ

udayavani youtube

ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ

udayavani youtube

ಮನೆ ತೊರೆದಿದ್ದ ವ್ಯಕ್ತಿ 14 ವರ್ಷಗಳ ಬಳಿಕ ಮರಳಿ ಗೂಡಿಗೆ.

ಹೊಸ ಸೇರ್ಪಡೆ

Mumbai: ಚಿಕಿತ್ಸೆಗೆಂದು ಮುಂಬೈಗೆ ಹೋಗಿದ್ದ ನಾಸಿಕ್ ನ ಒಂದೇ ಕುಟುಂಬದ ಮೂವರ ದುರಂತ ಸಾವು

Mumbai: ಚಿಕಿತ್ಸೆಗೆಂದು ಮುಂಬೈಗೆ ಹೋಗಿದ್ದ ನಾಸಿಕ್ ನ ಒಂದೇ ಕುಟುಂಬದ ಮೂವರ ದುರಂತ ಸಾ*ವು

Kadur: ದೇಗುಲ ಕಂಪೌಂಡ್‌ ಪ್ರವೇಶಿಸಿದರೆಂದು ದಲಿತರಿಗೆ ದಂಡ; ಸವರ್ಣೀಯರಿಂದ ದೇಗುಲಕ್ಕೆ ಬೀಗ

Kadur: ದೇಗುಲ ಕಂಪೌಂಡ್‌ ಪ್ರವೇಶಿಸಿದರೆಂದು ದಲಿತರಿಗೆ ದಂಡ; ಸವರ್ಣೀಯರಿಂದ ದೇಗುಲಕ್ಕೆ ಬೀಗ

9

Kaup: ಸಮಸ್ಯೆಗೆ ದೂರು ನೀಡಲು 1912ಗೆ ಕರೆ ಮಾಡಿ

8

Shirva: ಹೊಂಡ ಗುಂಡಿ, ಧೂಳುಮಯ ಕೋಡು-ಪಂಜಿಮಾರು ರಸ್ತೆ

0055

BBK11: ಮಂಜು ಅವರದ್ದು ಚೀಪ್ ಮೆಂಟಲಿಟಿ‌ ಎಂದ ರಜತ್; ಭವ್ಯ – ಮೋಕ್ಷಿತಾ ವಾಗ್ವಾದ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.