ನಳಿನ್‌ಗೆ ಗರಿಷ್ಠ ಲೀಡ್‌ ಕೊಟ್ಟ ಸುಳ್ಯ

ಅತಿ ಹೆಚ್ಚು ಮತದಾನವಾದ ಕ್ಷೇತ್ರದಲ್ಲಿ ಹಲವು ದಾಖಲೆಗಳು

Team Udayavani, May 25, 2019, 6:00 AM IST

w-2

ಸಂಸದ ನಳಿನ್‌ ಕುಮಾರ್‌ ಕಟೀಲು ಅವರು ತಮ್ಮ ಪಕ್ಷದ ಮುಖಂಡರು ಕಾರ್ಯಕರ್ತರ ಜತೆಸೇರಿ ದೇಗುಲಗಳಿಗೆ ಭೇಟಿ ನೀಡಿ ಪ್ರಾರ್ಥನೆ ಸಲ್ಲಿಸಿದರು.

ಸುಳ್ಯ: ಲೋಕಸಭಾ ಚುಣಾವಣ ಫಲಿತಾಂಶಕ್ಕೆ ಸಂಬಂಧಿಸಿ ಸುಳ್ಯ ವಿಧಾನಸಭಾ ಕ್ಷೇತ್ರ ಹಲವು ಕಾರಣಗಳಿಗೆ ಜಿಲ್ಲೆಯಲ್ಲಿ ಅಗ್ರಸ್ಥಾನ ಪಡೆದಿದೆ. ಲೋಕಸಭಾ ಚುನಾವಣೆಯಲ್ಲಿ ದಾಖಲಾದ ಮತದಾನ ಪ್ರಮಾಣ, ಗೆದ್ದ ಅಭ್ಯರ್ಥಿಯ ಮುನ್ನಡೆಯ ಅಂತರ, ಗರಿಷ್ಠ ಸಂಸದರನ್ನು ಕೊಟ್ಟ ಕ್ಷೇತ್ರ ಎನ್ನುವ ಎಲ್ಲ ಕಾರಣಗಳಿಂದ ಸುಳ್ಯ ಈ ಬಾರಿ ಗಮನ ಸೆಳೆದಿದೆ.

ಹಿನ್ನಡೆಯಲ್ಲಿ ಟಾಪರ್‌
ಲೋಕಸಭಾ ಚುನಾವಣೆಯಲ್ಲಿ ಜಿಲ್ಲೆಯ ವಿಧಾನಸಭಾ ಕ್ಷೇತ್ರಗಳ ಪೈಕಿ ಸುಳ್ಯದಲ್ಲಿ ಅತಿ ಹೆಚ್ಚು ಮತದಾನವಾಗಿತ್ತು. ಶೇ. 84.21ರಷ್ಟು ಮತ ಚಲಾವಣೆಗೊಂಡಿದ್ದವು. ಮತ ಎಣಿಕೆ ಬಳಿಕ ವಿಜೇತ ಅಭ್ಯರ್ಥಿ ನಳಿನ್‌ ಕುಮಾರ್‌ ಕಟೀಲು ಅವರಿಗೆ ಜಿಲ್ಲೆಯಲ್ಲೇ 47,159 ಅತಿ ಹೆಚ್ಚು ಮತಗಳ ಲೀಡ್‌ ದೊರಕಿದ್ದು ಸುಳ್ಯದಲ್ಲೇ. ಪರಾಜಿತ ಅಭ್ಯರ್ಥಿ ಮಿಥುನ್‌ ರೈ ಅತಿ ಕಡಿಮೆ ಮತಗಳನ್ನು ಪಡೆದ ಕ್ಷೇತ್ರವೂ ಸುಳ್ಯವೇ ಆಗಿದೆ.

ಮತ್ತೆ ಮೂವರು ಸಂಸದರು!
ಕ್ಷೇತ್ರದ ಮೂವರು ಈ ಬಾರಿಯೂ ಬೇರೆ ಬೇರೆ ಕ್ಷೇತ್ರಗಳಲ್ಲಿ ಸಂಸದರಾಗಿ ಆಯ್ಕೆಯಾಗಿದ್ದಾರೆ. ಇದೂ ಒಂದು ದಾಖಲೆಯೇ. ಸುಳ್ಯ ವಿಧಾನಸಭಾ ಕ್ಷೇತ್ರದ ಪಾಲ್ತಾಡಿ ಗ್ರಾಮದ ಕುಂಜಾಡಿ ನಿವಾಸಿ ನಳಿನ್‌ ಕುಮಾರ್‌ ಕಟೀಲು (ದ.ಕ.), ಮಂಡೆಕೋಲು ಗ್ರಾಮದ ದೇವರಗುಂಡ ನಿವಾಸಿ ಡಿ.ವಿ. ಸದಾನಂದ ಗೌಡ (ಬೆಂಗಳೂರು- ಉತ್ತರ) ಚಾರ್ವಾಕ ಗ್ರಾಮದ ಕರಂದ್ಲಾಜೆ ನಿವಾಸಿ ಶೋಭಾ ಕರಂದ್ಲಾಜೆ (ಉಡುಪಿ – ಚಿಕ್ಕಮಗಳೂರು) ಸಂಸದರಾಗಿದ್ದಾರೆ.

ಸನಿಹದಲ್ಲಿ ಕಾಂಗ್ರೆಸ್‌
2019ರ ಚುನಾವಣೆಯಲ್ಲಿ ಶೇ. 84.21ರಷ್ಟು ಮತದಾನವಾಗಿತ್ತು. 2,00,579 ಮತದಾರರ ಪೈಕಿ 1,78,912 ಮಂದಿ ಮತ ಚಲಾಯಿಸಿದ್ದರು. 1,00,948 ಮಹಿಳಾ ಮತದಾರರ ಪೈಕಿ 94,557 ಮಂದಿ ಹಾಗೂ 99,631 ಪುರುಷ ಮತದಾರರ ಪೈಕಿ 84,355 ಮಂದಿ ತಮ್ಮ ಹಕ್ಕು ಚಲಾಯಿಸಿದ್ದರು. ಬಿಜೆಪಿ ಇಲ್ಲಿ 1,05,109 ಮತಗಳಿಸಿದರೆ, ಕಾಂಗ್ರೆಸ್‌ 57,950 ಮತ ಗಳಿಸಿತ್ತು. ಇಲ್ಲಿ ಬಿಜೆಪಿ 47,159 ಮತ ಮುನ್ನಡೆ ಗಳಿಸಿತ್ತು. ಅಂದರೆ ಇಲ್ಲಿ ಕಾಂಗ್ರೆಸ್‌ ಬಿಜೆಪಿ ಕಾಯ್ದುಕೊಂಡ ಮುನ್ನಡೆ ಮತಗಳಿಗಿಂತ 10,791 ಮತಗಳನ್ನಷ್ಟೇ ಹೆಚ್ಚು ಪಡೆಯಲು ಶಕ್ತವಾಗಿದೆ.

ಈ ಹಿಂದಿನ ಎಲ್ಲ ಚುನಾವಣೆಗೆ ಹೋಲಿಸಿದರೆ ಬಿಜೆಪಿ ಭಾರೀ ಮುನ್ನಡೆ ಪಡೆದಿದ್ದರೆ, ಕಾಂಗ್ರೆಸ್‌ ಭಾರೀ ಹಿನ್ನಡೆ ಅನುಭವಿಸಿದೆ. ಬಿಜೆಪಿಗೆ ಪವರ್‌ ಬ್ಯಾಂಕ್‌ ಎಂದೇ ಜನಜನಿತವಾಗಿರುವ ಸುಳ್ಯ ವಿಧಾನಸಭಾ ಕ್ಷೇತ್ರ ಅದನ್ನು ಮಗದೊಮ್ಮೆ ಸಾಬೀತುಪಡಿಸಿದೆ. ಈ ಬಾರಿ ಇದು ಬಿಜೆಪಿ ಈ ತನಕದ ಚುನಾವಣೆಯಲ್ಲಿ ಪಡೆದ ಗರಿಷ್ಠ ಮುನ್ನಡೆ ಮತವಿದು ಮತ್ತು ದ.ಕ. ಜಿಲ್ಲೆಯಲ್ಲಿನ ಗರಿಷ್ಠ ಅಂತರವೂ ಹೌದು.

ದೇವಾಲಯಗಳಿಗೆ ಸಂಸದ ನಳಿನ್‌ ಭೇಟಿ
ಪುತ್ತೂರು: ಮೂರನೇ ಬಾರಿಗೆ ದ.ಕ. ಜಿಲ್ಲಾ ಸಂಸದರಾಗಿ ಆಯ್ಕೆಯಾದ ನಳಿನ್‌ ಕುಮಾರ್‌ ಕಟೀಲು ಶುಕ್ರವಾರ ನಗರಕ್ಕೆ ಆಗಮಿಸಿ ವಿವಿಧ ದೇವಾಲಯಗಳಲ್ಲಿ ಪ್ರಾರ್ಥನೆ ಸಲ್ಲಿಸಿದರು. ನೂರಾರು ಕಾರ್ಯಕರ್ತರು ಹಾಗೂ ಪಕ್ಷದ ಮುಖಂಡರು ನಳಿನ್‌ ಕುಮಾರ್‌ ಕಟೀಲು ಅವರನ್ನು ಸ್ವಾಗತಿಸಿ ಅವರ ಜತೆ ದೇವಾಲಯಗಳಿಗೆ ತೆರಳಿ, ಗೆಲುವು ಸಾಧಿಸಿದ ಹಿನ್ನೆಲೆಯಲ್ಲಿ ವಿಶೇಷ ಪ್ರಾರ್ಥನೆ ಸಲ್ಲಿಸಿದರು.

ಇತಿಹಾಸ ಪ್ರಸಿದ್ಧ ಪುತ್ತೂರು ಶ್ರೀ ಮಹಾಲಿಂಗೇಶ್ವರ ದೇವಾಲಯಕ್ಕೆ ಭೇಟಿ ನೀಡಿದ ಸಂಸದರನ್ನು ವ್ಯವಸ್ಥಾಪನ ಸಮಿತಿ ಅಧ್ಯಕ್ಷ ಸುಧಾಕರ ಶೆಟ್ಟಿ ಸ್ವಾಗತಿಸಿದರು. ಬಳಿಕ ಶ್ರೀ ಲಕ್ಷ್ಮೀವೆಂಕಟರಮಣ ದೇವಾಲಯ, ಮಹಾಮ್ಮಾಯ ದೇವಿ ದೇವಸ್ಥಾನಕ್ಕೆ ಭೇಟಿ ನೀಡಿದರು. ಅನಂತರ ಪಕ್ಷದ ಕಚೇರಿಯಲ್ಲಿ ನಡೆದ ಅಭಿನಂದನ ಸಭೆಯಲ್ಲಿ ಭಾಗವಹಿಸಿದರು.

ದ.ಕ.ಜಿ.ಪಂ. ಅಧ್ಯಕ್ಷೆ ಮೀನಾಕ್ಷಿ ಶಾಂತಿಗೋಡು, ಮಾಜಿ ಶಾಸಕಿ ಮಲ್ಲಿಕಾ ಪ್ರಸಾದ್‌, ಲೋಕಸಭಾ ಚುನಾವಣೆಯ ಜಿಲ್ಲಾ ಸಂಚಾಲಕ ಗೋಪಾಲಕೃಷ್ಣ ಹೇರಳೆ, ಬಿಜೆಪಿ ಪುತ್ತೂರು ನಗರ ಮಂಡಲ ಅಧ್ಯಕ್ಷ ಜೀವಂಧರ್‌ ಜೈನ್‌, ಗ್ರಾಮಾಂತರ ಮಂಡಲ ಅಧ್ಯಕ್ಷ ಚನಿಲ ತಿಮ್ಮಪ್ಪ ಶೆಟ್ಟಿ, ನಗರ ಮಹಿಳಾ ಮೋರ್ಚಾ ಅಧ್ಯಕ್ಷೆ ವಿದ್ಯಾಗೌರಿ ಸಹಿತ ಸ್ಥಳೀಯ ಜನಪ್ರತಿನಿಧಿಗಳು, ಪಕ್ಷ ಮುಖಂಡರು, ಕಾರ್ಯಕರ್ತರು ಪಾಲ್ಗೊಂಡರು.

ಟಾಪ್ ನ್ಯೂಸ್

Udupi: “ವಕ್ಫ್ ‘ ಸಮಸ್ಯೆ ಶೀರ್ಘ‌ ಪರಿಹಾರಕ್ಕೆ ಪುತ್ತಿಗೆ ಶೀ ಆಗ್ರಹ

Udupi: “ವಕ್ಫ್ ‘ ಸಮಸ್ಯೆ ಶೀರ್ಘ‌ ಪರಿಹಾರಕ್ಕೆ ಪುತ್ತಿಗೆ ಶೀ ಆಗ್ರಹ

1-CJI-BG

Supreme Court; CJI ಡಿ.ವೈ.ಚಂದ್ರಚೂಡ್ ಅವರಿಗೆ ಭಾವನಾತ್ಮಕ ವಿದಾಯ

BSY-Ballari

By Election: ಸಿದ್ದರಾಮಯ್ಯ ಜೈಲಿಗೆ ಹೋಗುವುದು ನಿಶ್ಚಿತ: ಬಿ.ಎಸ್‌.ಯಡಿಯೂರಪ್ಪ ಭವಿಷ್ಯ

Udupi: ಬೆಂಬಲ ಬೆಲೆ ಯೋಜನೆಯಡಿ ಭತ್ತ ಖರೀದಿ

Udupi: ಬೆಂಬಲ ಬೆಲೆ ಯೋಜನೆಯಡಿ ಭತ್ತ ಖರೀದಿ

Stock-market-Exchange

NSE, BSE; ಷೇರು ಮಾರುಕಟ್ಟೆಗೆ ನವೆಂಬರ್‌ 20 ರಂದು ರಜೆ ಘೋಷಣೆ

Sagara: ದನ ಕಳವು ಪ್ರಕರಣ; ಇಬ್ಬರು ಆರೋಪಿಗಳ ಬಂಧನ

Sagara: ದನ ಕಳವು ಪ್ರಕರಣ; ಇಬ್ಬರು ಆರೋಪಿಗಳ ಬಂಧನ

Women-Mesure

Proposes: ಪುರುಷ ಟೈಲರ್‌ ಮಹಿಳೆಯರ ಬಟ್ಟೆ ಅಳತೆ ತೆಗೆದುಕೊಳ್ಳುವಂತಿಲ್ಲ: ಮಹಿಳಾ ಆಯೋಗ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

3

Uppinangady: ಕಬ್ಬಿಣದ ರಾಡಿನಿಂದ ಹಲ್ಲೆ; ದೂರು ದಾಖಲು

dw

Puttur: ಕೆರೆಗೆ ಬಿದ್ದು ವ್ಯಕ್ತಿ ಸಾವು

1(1)

Vitla: ನಾಲ್ಕೂ ದಿಕ್ಕಿನಿಂದ ಬರುವ ರಸ್ತೆಗಳಲ್ಲಿ ಗುಂಡಿಯೋ ಗುಂಡಿ

Aranthodu: ಕಾನೂನು ವಿದ್ಯಾರ್ಥಿ ನೇಣು ಬಿಗಿದುಕೊಂಡು ಆತ್ಮಹ*ತ್ಯೆ

Aranthodu: ಕಾನೂನು ವಿದ್ಯಾರ್ಥಿ ನೇಣು ಬಿಗಿದುಕೊಂಡು ಆತ್ಮಹ*ತ್ಯೆ

Untitled-5

Puttur: ತಲೆಮರೆಸಿಕೊಂಡಿದ್ದ ಆರೋಪಿ ಬಂಧನ

MUST WATCH

udayavani youtube

ಗೋವಿನ ಪೂಜೆ ಯಾಕಾಗಿ ಮಾಡಬೇಕು?

udayavani youtube

ಮೇಲುಕೋಟೆಯಲ್ಲಿ ದೀಪಾವಳಿ ಆಚರಿಸುವುದಿಲ್ಲ ಎಂಬ ಮಾತು ನಿಜವೋ ಸುಳ್ಳೋ

udayavani youtube

ಗಣಪತಿ ಸಹಕಾರಿ ವ್ಯವಸಾಯಕ ಸಂಘ ‘ನಿ.’ ಕೆಮ್ಮಣ್ಣು ಶತಾಭಿವಂದನಂ ಸಮಾರೋಪ ಸಂಭ್ರಮ ಸಂಪನ್ನ

udayavani youtube

ಉದಯವಾಣಿ’ಚಿಣ್ಣರ ಬಣ್ಣ -2024

udayavani youtube

ಹಬ್ಬದ ಊಟವೇ ಈ ಹೋಟೆಲ್ ನ ಸ್ಪೆಷಾಲಿಟಿ

ಹೊಸ ಸೇರ್ಪಡೆ

Udupi: “ವಕ್ಫ್ ‘ ಸಮಸ್ಯೆ ಶೀರ್ಘ‌ ಪರಿಹಾರಕ್ಕೆ ಪುತ್ತಿಗೆ ಶೀ ಆಗ್ರಹ

Udupi: “ವಕ್ಫ್ ‘ ಸಮಸ್ಯೆ ಶೀರ್ಘ‌ ಪರಿಹಾರಕ್ಕೆ ಪುತ್ತಿಗೆ ಶೀ ಆಗ್ರಹ

4

Mangaluru: ಗಾಂಜಾ ಮಾರಾಟ; ಇಬ್ಬರು ಯುವಕರ ಬಂಧನ

3

Uppinangady: ಕಬ್ಬಿಣದ ರಾಡಿನಿಂದ ಹಲ್ಲೆ; ದೂರು ದಾಖಲು

1-CJI-BG

Supreme Court; CJI ಡಿ.ವೈ.ಚಂದ್ರಚೂಡ್ ಅವರಿಗೆ ಭಾವನಾತ್ಮಕ ವಿದಾಯ

BSY-Ballari

By Election: ಸಿದ್ದರಾಮಯ್ಯ ಜೈಲಿಗೆ ಹೋಗುವುದು ನಿಶ್ಚಿತ: ಬಿ.ಎಸ್‌.ಯಡಿಯೂರಪ್ಪ ಭವಿಷ್ಯ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.