ಗೆಲುವಿನ ಹಾದಿಯಲ್ಲಿ ನಳಿನ್ ವಿಜಯೋತ್ಸವ
ಧರ್ಮಸ್ಥಳ, ಕೊಕ್ಕಡ, ಕನ್ಯಾಡಿ, ಸೌತಡ್ಕ ಕ್ಷೇತ್ರ ದರ್ಶನ; ತಾಯಿಯಿಂದ ಆಶೀರ್ವಾದ
Team Udayavani, May 25, 2019, 6:00 AM IST
ನಳಿನ್ ಕುಮಾರ್ ಕಟೀಲು ಅವರು ಡಾ| ಹೆಗ್ಗಡೆಯವರನ್ನು ಭೇಟಿ ಮಾಡಿ ಆಶೀರ್ವಾದ ಪಡೆದರು.
ಬೆಳ್ತಂಗಡಿ: ಹ್ಯಾಟ್ರಿಕ್ ವಿಜಯ ವನ್ನು ಗುರುವಾರ ದಾಖಲಿಸಿದ ನಳಿನ್ ಕುಮಾರ್ ಕಟೀಲು ಶುಕ್ರವಾರ ಜಿಲ್ಲೆಯ ಪ್ರಸಿದ್ಧ ದೇವಸ್ಥಾನಗಳಿಗೆ ಭೇಟಿ ನೀಡಿ ದೇವರ ದರ್ಶನ ಪಡೆದರು. ಜತೆಗೆ ಪಾಲ್ತಾಡಿಯ ಮನೆಗೆ ಭೇಟಿ ನೀಡಿ ತಾಯಿಯ ಆಶೀರ್ವಾದ ಪಡೆದರು.
ಮಧ್ಯಾಹ್ನ ಕೊಕ್ಕಡ ಶ್ರೀ ವೈದ್ಯನಾಥ ವಿಷ್ಣು ಮೂರ್ತಿ ದೇವಸ್ಥಾನದಿಂದ ವಿಜಯೋತ್ಸವ ಆರಂಭಗೊಂಡಿತು. ಕೊಕ್ಕಡ ಶ್ರೀ ಸೌತಡ್ಕ ಮಹಾ ಗಣಪತಿ ದೇವಸ್ಥಾನ ಭೇಟಿ ನೀಡಿ ಪೂಜೆ ಸಲ್ಲಿಸಿದರು. ಸಂಜೆ ಶ್ರೀ ಕ್ಷೇತ್ರ ಧರ್ಮಸ್ಥಳ ಮಂಜುನಾಥ ಸ್ವಾಮಿಯ ದರ್ಶನ ಪಡೆದು ಡಾ| ಡಿ. ವೀರೇಂದ್ರ ಹೆಗ್ಗಡೆ ಅವರನ್ನು ಭೇಟಿ ಮಾಡಿ ಆಶೀರ್ವಾದ ಪಡೆದರು. ಈ ವೇಳೆ ಡಾ| ಹೆಗ್ಗಡೆಯವರು ಕ್ಷೇತ್ರದ ವತಿಯಿಂದ ಅವರನ್ನು ಗೌರವಿಸಿ ಶುಭಹಾರೈಸಿದರು. ಬಳಿಕ ಜನಾರ್ದನ ಸ್ವಾಮಿ ದೇವಸ್ಥಾನಕ್ಕೆ ಭೇಟಿ ನೀಡಿ ಉಜಿರೆ ಮುಖೇನ ಬೆಳ್ತಂಗಡಿ ರಸ್ತೆಯಲ್ಲಿ ತೆರೆದ ವಾಹನದಲ್ಲಿ ಮೆರವಣಿಗೆ ನಡೆಸಿದರು.
ಬೆಳ್ತಂಗಡಿ ಬಿಜೆಪಿ ಕಚೇರಿಗೆ ಭೇಟಿ ನೀಡಿದಾಗ ಕಾರ್ಯಕರ್ತರು ಮತ್ತು ಮುಖಂಡರು ಜಯಘೋಷ ಕೂಗಿದರು. ಗುರುವಾಯನಕೆರೆ ಯಾಗಿ ಮಡಂತ್ಯಾರು, ಪುಂಜಾಲಕಟ್ಟೆಯ ವರೆಗೆ ವಿಜಯ ಯಾತ್ರೆ ಅದ್ದೂರಿಯಾಗಿ ನಡೆಯಿತು. ಮೆರವಣಿಗೆಯಲ್ಲಿ ಸಂಸದರೊಂದಿಗೆ ಬಿಜೆಪಿ ಜಿಲ್ಲಾಧ್ಯಕ್ಷ ಶಾಸಕ ಸಂಜೀವ ಮಠಂದೂರು, ಬೆಳ್ತಂಗಡಿ ಶಾಸಕ ಹರೀಶ್ ಪೂಂಜ, ಮಂಡಲ ಅಧ್ಯಕ್ಷ ಜಯಂತ ಕೋಟ್ಯಾನ್, ವಿಭಾಗ ಸಹಪ್ರಭಾರಿ ಪ್ರತಾಪಸಿಂಹ ನಾಯಕ್, ವಿಭಾಗ ಸಂಘಟನಾ ಕಾರ್ಯದರ್ಶಿ ಪ್ರಸಾದ್ ಕುಮಾರ್, ಮಂಡಲದ ಪದಾಧಿಕಾರಿಗಳು, ಜಿ.ಪಂ., ತಾ.ಪಂ. ಸದಸ್ಯರು, ಸಂಘಟನೆಯ ಪ್ರಮುಖರು ಕಾರ್ಯಕರ್ತರು ಭಾಗವಹಿಸಿದರು.
ಕನ್ಯಾಡಿ ಕ್ಷೇತ್ರ ಭೇಟಿ
ಶುಕ್ರವಾರ ಸಂಜೆ ನಳಿನ್ ಅವರು ಧರ್ಮಸ್ಥಳ ಕನ್ಯಾಡಿ ನಿತ್ಯಾನಂದ ನಗರ ಶ್ರೀರಾಮ ಕ್ಷೇತ್ರಕ್ಕೆ ಭೇಟಿ ನೀಡಿದ ನಳಿನ್, ಶ್ರೀ ಬ್ರಹ್ಮಾನಂದ ಸರಸ್ವತಿ ಸ್ವಾಮೀಜಿಯವರ ಆಶೀರ್ವಾದ ಪಡೆದರು. ಸ್ವಾಮೀಜಿ ಕ್ಷೇತ್ರದ ವತಿಯಿಂದ ಸಂಸದರನ್ನು ಗೌರವಿಸಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಎದೆ ನೋವು, ಮಧುಮೇಹ, ಥೈರಾಯ್ಡ್ ,ಸಮಸ್ಯೆಗಳಿಗೆ ಪರಿಹಾರ ತೆಂಗಿನಕಾಯಿ ಹೂವು
ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು
ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?
ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್ |
ಕೊಲ್ಲೂರಿನಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಡಿಸಿಎಂ ಡಿ ಕೆ ಶಿವಕುಮಾರ್
ಹೊಸ ಸೇರ್ಪಡೆ
Drink & Drive Case: ಕುಡಿದು ವಾಹನ ಚಾಲನೆ; ʼಮಂಜುಮ್ಮೆಲ್ ಬಾಯ್ಸ್ʼ ನಟ ಬಂಧನ
Dandeli: ಬೇಡರ ಶಿರಗೂರಿನ ರೈತರ ಗದ್ದೆಗಳಲ್ಲಿ ಮತ್ತೆ ಕಾಣಿಕೊಂಡ ಕಾಡಾನೆಗಳು
IPL Mega Auction: ಮೊದಲ ದಿನದ ಹರಾಜಿನ ಬಳಿಕ ಆರ್ ಸಿಬಿ ತಂಡ ಹೀಗಿದೆ ನೋಡಿ
Arrested: ಹೊಯ್ಸಳ ಪೊಲೀಸ್ ಮೇಲೆ ಹಲ್ಲೆ; ಬಂಧನ
Sambhal Violence: ಮೃತರ ಸಂಖ್ಯೆ ನಾಲ್ಕಕ್ಕೆ, ಇಂಟರ್ನೆಟ್ ಸ್ಥಗಿತ, ನಿಷೇಧಾಜ್ಞೆ ಜಾರಿ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.