ಕಾರ್ಯಕರ್ತನಾಗಿ ಬೆಂಬಲಿಸಿದ ಮತದಾರ

ತವರು ನೆಲದ ಅಭಿನಂದನ ಸಭೆಯಲ್ಲಿ ನಳಿನ್‌ ಕುಮಾರ್‌ ಕಟೀಲು ಅಭಿಮತ

Team Udayavani, May 25, 2019, 6:00 AM IST

47132405RJH1

ಪುತ್ತೂರು: ಸಂಘ ಪರಿವಾರದ ತವರು ನೆಲ ಎನಿಸಿರುವ ದಕ್ಷಿಣ ಕನ್ನಡ ಜಿಲ್ಲೆಯ ಪುತ್ತೂರು ಮತ್ತು ಸುಳ್ಯ ತಾಲೂಕುಗಳಲ್ಲಿ ಬಿಜೆಪಿ ಅತಿ ಹೆಚ್ಚು ಮತಗಳನ್ನು ಗಳಿಸುವ ಮೂಲಕ ಸಂಘಟನೆಯ ತಂತ್ರಗಳು ಇಲ್ಲಿ ಇಂದಿಗೂ ಉಳಿದಿವೆ ಎನ್ನುವುದು ಸಾಬೀತಾಗಿದೆ. ಇಂದು ಮತದಾರನು ಕಾರ್ಯಕರ್ತನಾಗಿ ಬೆಳೆದು ನಿಂತಿದ್ದಾನೆ ಎಂದು ಸಂಸದ ನಳಿನ್‌ ಕುಮಾರ್‌ ಕಟೀಲು ಹೇಳಿದ್ದಾರೆ.

ಶುಕ್ರವಾರ ಪುತ್ತೂರು ಬಿಜೆಪಿ ಕಚೇರಿಗೆ ಭೇಟಿ ನೀಡಿದ ಅವರು ಕಾರ್ಯಕರ್ತರು, ಮುಖಂಡರ ಅಭಿ ನಂದನ ಸಭೆಯಲ್ಲಿ ಮಾತನಾಡಿದರು.

ದೇಶ, ರಾಜ್ಯ, ಜಿಲ್ಲೆ ಇಂದು ಕಾಂಗ್ರೆಸ್‌ ಮುಕ್ತವಾಗಿದೆ. ಯಾವುದೇ ಸರ್ವೇಗೂ ನಿಲುಕದ ಫಲಿತಾಂಶವನ್ನು ಜಿಲ್ಲೆಯ ಮತದಾರರು ನೀಡಿದ್ದಾರೆ. ಮೋದಿಯವರ ತ್ಯಾಗಮಯಿ ಜೀವನ, ರಾಷ್ಟ್ರಕ್ಕಾಗಿ ಸಿದ್ಧಾಂತವನ್ನು ಜನತೆ ಸ್ವೀಕಾರ ಮಾಡಿದ್ದಾರೆ. ಪರಮ ವೈಭವದ ಭಾರತದತ್ತ ನಾವು ಹೆಜ್ಜೆ ಹಾಕುತ್ತಿದ್ದೇವೆ ಎಂದರು.

ಆತ್ಮಾವಲೋಕನ ಮಾಡಲಿ
ವಿಧಾನಸಭೆಯಲ್ಲಿ ಅಪವಿತ್ರ ಮೈತ್ರಿ ಮಾಡಿಕೊಂಡಾಗಲೇ ಸಿದ್ದ ರಾಮಯ್ಯ ಮತ್ತು ಕಾಂಗ್ರೆಸ್‌ ನಾಯಕರು ಎಚ್ಚೆತ್ತುಕೊಳ್ಳಬೇಕಿತ್ತು. ಈಗಲಾದರೂ ಎಚ್ಚೆತ್ತುಕೊಂಡರೆ ಲೋಕಸಭೆಯಲ್ಲಿ ಗೆದ್ದಿರುವ ಒಂದು ಸ್ಥಾನವಾದರೂ ಉಳಿದೀತು. ಕಾಂಗ್ರೆಸ್‌ ಆತ್ಮಾವಲೋಕನ ಮಾಡಿಕೊಳ್ಳುವ ಸಮಯವಿದು ಎಂದರು.

ಪ್ರಾಮಾಣಿಕ ಪ್ರಯತ್ನ
ಟೀಕೆಯಲ್ಲೂ ಇರುವ ಒಳ್ಳೆಯ ಅಂಶಗಳನ್ನು ತೆಗೆದುಕೊಂಡು ಮುಂದಿನ 5 ವರ್ಷಗಳಲ್ಲಿ ಜಿಲ್ಲೆಯಲ್ಲಿ ಅಭಿವೃದ್ಧಿಪರ ಕೆಲಸ ಮಾಡುವ ಪ್ರಾಮಾಣಿಕ ಪ್ರಯತ್ನ ಮಾಡುತ್ತೇನೆ ಎಂದ ನಳಿನ್‌, ಮತದಾರರಿಗೆ ಅಭಿನಂದನೆ ಸಲ್ಲಿಸಿದರು.

ನಳಿನ್‌ ಅವರಿಗೆ ಹಾರಾರ್ಪಣೆ ಮಾಡಿ ಅಭಿನಂದಿಸಲಾಯಿತು. ಮೀನಾಕ್ಷಿ ಶಾಂತಿಗೋಡು, ಮಲ್ಲಿಕಾ ಪ್ರಸಾದ್‌, ಗೋಪಾಲಕೃಷ್ಣ ಹೇರಳೆ, ಜೀವಂಧರ್‌ ಜೈನ್‌ ಉಪಸ್ಥಿತರಿದ್ದರು.

ಪುತ್ತೂರಲ್ಲಿ ವಿಜಯೋತ್ಸವ
ಗ್ರಾಮಾಂತರ ಮಂಡಲ ಅಧ್ಯಕ್ಷ ಚನಿಲ ತಿಮ್ಮಪ್ಪ ಶೆಟ್ಟಿ ಮಾತನಾಡಿ, ಸಂಜೀವ ಮಠಂದೂರು ಶಾಸಕರಾಗಿ ವರ್ಷ ಪೂರೈಸಿದ ಮತ್ತು ನಳಿನ್‌ ಸಂಸದರಾಗಿ ಆಯ್ಕೆಯಾದ ಹಿನ್ನೆಲೆಯಲ್ಲಿ ಶೀಘ್ರದಲ್ಲಿ ಪುತ್ತೂರಿನಲ್ಲಿ ವಿಜಯೋತ್ಸವ ನಡೆಯಲಿದೆ ಎಂದರು. ಡಿ. ಶಂಭು ಭಟ್‌ ವಂದಿಸಿದರು.

ಪ್ರಜಾಪ್ರಭುತ್ವ ಹಬ್ಬದ ಸಾರ್ಥಕತೆ
ದ.ಕ. ಜಿಲ್ಲಾ ಬಿಜೆಪಿ ಅಧ್ಯಕ್ಷ ಹಾಗೂ ಪುತ್ತೂರು ಶಾಸಕ ಸಂಜೀವ ಮಠಂದೂರು ಮಾತನಾಡಿ, ದಿಗ್ವಿಜಯದ ಮೂಲಕ ದೇಶದಲ್ಲಿ ಇತಿಹಾಸ ನಿರ್ಮಾಣವಾಗಿದೆ. ತಾಯಿ-ಮಗ, ತಂದೆ-ಮಗನ ವಂಶಾಡಳಿತ ಬೇಡ ಎಂದು ತಿರಸ್ಕರಿಸಿರುವ ಜನತೆ ಪ್ರಜಾಪ್ರಭುತ್ವ ವ್ಯವಸ್ಥೆಯಲ್ಲಿ ಕಟ್ಟ ಕಡೆಯ ವ್ಯಕ್ತಿ ಆಡಳಿತ ಮಾಡಲು ಅವಕಾಶ ನೀಡಿದ್ದಾರೆ. ಆ ಮೂಲಕ ಪ್ರಜಾಪ್ರಭುತ್ವದ ಹಬ್ಬ ಆತ್ಮಾವಲೋಕನಕ್ಕೆ ಅವಕಾಶ ಎಂದವರು ಭಾವಿಸಬೇಕು ಎಂದರು.

ಟಾಪ್ ನ್ಯೂಸ್

1-ree

IPL Mega Auction:1.1 ಕೋಟಿ ರೂ.ಗೆ ಹರಾಜಾದ 13ರ ಬಾಲಕ !!

isrel netanyahu

Israel; ಹೆಜ್ಬುಲ್ಲಾ ಜತೆ ‘ತಾತ್ವಿಕವಾಗಿ’ ಕದನ ವಿರಾಮ ಒಪ್ಪಂದ :ವರದಿ

Madikeri-1

Madikeri: ರೈಲ್ವೆ ಕಂಬಿಯ ಬೇಲಿಗೆ ಸಿಲುಕಿದ ಕಾಡಾನೆಯ ರಕ್ಷಣೆ

Kharge

JPC on Adani issue;ನಿಯಮ 267 ಅಡಿಯಲ್ಲಿ ಪ್ರಸ್ತಾಪಿಸಲು ಅವಕಾಶ ನೀಡದ್ದಕ್ಕೆ ಖರ್ಗೆ ಆಕ್ರೋಶ

ಅಗ್ಗಕ್ಕೆ ಸೇಲಾದ ಪಾಂಡೆ, ಬೆಂಗಳೂರಿಗೆ ಬಂದ ಆಸೀಸ್‌ ಆಟಗಾರ

IPL Auction: ಅಗ್ಗಕ್ಕೆ ಸೇಲಾದ ಪಾಂಡೆ, ಜ್ಯಾಕ್ಸ್‌ ಗೆ ಬಂಪರ್‌, ಬೆಂಗಳೂರಿಗೆ ಬಂದ ಡೇವಿಡ್

1-Chamundeshwari

Mysuru; ಚಾಮುಂಡೇಶ್ವರಿ ದೇವಿಗೆ ಚಿನ್ನದ ರಥ: ಪ್ರಸ್ತಾವನೆ ಸಲ್ಲಿಸುವಂತೆ ಸಿದ್ದರಾಮಯ್ಯ ಸೂಚನೆ

chetah

Kuno National Park; ಮರಿಗಳಿಗೆ ಜನ್ಮ ನೀಡಿದ ಚೀತಾ ನೀರ್ವಾ: ಸಂಖ್ಯೆ ಹೆಚ್ಚಳ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Udupi: ಶ್ರೀ ಕೃಷ್ಣಮಠ; 18 ದಿನಗಳ ಭಗವದ್ಗೀತಾ ಹರಿಕಥಾ ಸರಣಿ ಕಾರ್ಯಕ್ರಮಕ್ಕೆ ಚಾಲನೆ

Udupi: ಶ್ರೀ ಕೃಷ್ಣಮಠ; 18 ದಿನಗಳ ಭಗವದ್ಗೀತಾ ಹರಿಕಥಾ ಸರಣಿ ಕಾರ್ಯಕ್ರಮಕ್ಕೆ ಚಾಲನೆ

4

Kaup ಪುರಸಭೆ: ರಸ್ತೆ ಬದಿಯಲ್ಲಿ ಖಾಲಿ ಬಿಯರ್‌ ಬಾಟಲಿ ಸದ್ದು  

Untitled-1

Katpadi: ಹೆದ್ದಾರಿ ಅಂಚಿನಲ್ಲಿ ಅಪಾಯ!; ರಸ್ತೆ ಬದಿಯಲ್ಲಿ ಉದ್ದಕ್ಕೂ ಹೊಂಡಗುಂಡಿ

KMC

Health Card: ಮಣಿಪಾಲ ಆರೋಗ್ಯಕಾರ್ಡ್ ನೋಂದಾವಣೆಗೆ ಐದು ದಿನ ಬಾಕಿ: ನ.30 ಕೊನೆಯ ದಿನ 

ಉಡುಪಿ: ಶಿಕ್ಷಣ ಇಲಾಖೆಯಲ್ಲಿ ಪ್ರತ್ಯೇಕ ಪರಿಹಾರ ನಿಧಿಯೇ ಇಲ್ಲ !

ಉಡುಪಿ: ಶಿಕ್ಷಣ ಇಲಾಖೆಯಲ್ಲಿ ಪ್ರತ್ಯೇಕ ಪರಿಹಾರ ನಿಧಿಯೇ ಇಲ್ಲ !

MUST WATCH

udayavani youtube

ಎದೆ ನೋವು, ಮಧುಮೇಹ, ಥೈರಾಯ್ಡ್ ,ಸಮಸ್ಯೆಗಳಿಗೆ ಪರಿಹಾರ ತೆಂಗಿನಕಾಯಿ ಹೂವು

udayavani youtube

ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು

udayavani youtube

ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?

udayavani youtube

ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್‌ |

udayavani youtube

ಕೊಲ್ಲೂರಿನಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಡಿಸಿಎಂ ಡಿ ಕೆ ಶಿವಕುಮಾರ್

ಹೊಸ ಸೇರ್ಪಡೆ

1-ree

IPL Mega Auction:1.1 ಕೋಟಿ ರೂ.ಗೆ ಹರಾಜಾದ 13ರ ಬಾಲಕ !!

Udupi: ಶ್ರೀ ಕೃಷ್ಣಮಠ; 18 ದಿನಗಳ ಭಗವದ್ಗೀತಾ ಹರಿಕಥಾ ಸರಣಿ ಕಾರ್ಯಕ್ರಮಕ್ಕೆ ಚಾಲನೆ

Udupi: ಶ್ರೀ ಕೃಷ್ಣಮಠ; 18 ದಿನಗಳ ಭಗವದ್ಗೀತಾ ಹರಿಕಥಾ ಸರಣಿ ಕಾರ್ಯಕ್ರಮಕ್ಕೆ ಚಾಲನೆ

isrel netanyahu

Israel; ಹೆಜ್ಬುಲ್ಲಾ ಜತೆ ‘ತಾತ್ವಿಕವಾಗಿ’ ಕದನ ವಿರಾಮ ಒಪ್ಪಂದ :ವರದಿ

Untitled-1

Mangaluru: ಸೆಕ್ಯುರಿಟಿ ಕೆಲಸ ಮಾಡುತ್ತಿದ್ದ ವ್ಯಕ್ತಿ ನಾಪತ್ತೆ

Madikeri-1

Madikeri: ರೈಲ್ವೆ ಕಂಬಿಯ ಬೇಲಿಗೆ ಸಿಲುಕಿದ ಕಾಡಾನೆಯ ರಕ್ಷಣೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.