ಉದ್ಯೋಗಕ್ಕಾಗಿ ಕುವೈಟ್‌ಗೆ ತೆರಳಿದ ಮಂಗಳೂರು ಯುವಕರು ಸಂಕಷ್ಟದಲ್ಲಿ
Team Udayavani, May 25, 2019, 6:00 AM IST
ಕುವೈಟ್‌ನಲ್ಲಿ ಸಂಕಷ್ಟಕ್ಕೆ ಸಿಲುಕಿರುವ ಯುವಕರು.
ಮಂಗಳೂರು: ನೌಕರಿ ಕೊಡಿಸುವುದಾಗಿ ಹೇಳಿ ಕುವೈಟ್‌ಗೆ ಕರೆದುಕೊಂಡು ಹೋಗಿ, 6 ತಿಂಗಳಿನಿಂದ ಉದ್ಯೋಗವಿಲ್ಲದೆ ಮಂಗಳೂರು ಮೂಲದ ಸುಮಾರು 35 ಯುವಕರು ಸಂಕಷ್ಟಕ್ಕೆ ಸಿಲುಕಿದ್ದಾರೆ. ಮಂಗಳೂರು ಮೂಲದವರೇ ಆದ ವ್ಯಕ್ತಿಯೊಬ್ಬರು ಕಂಪೆನಿಯೊಂದರಲ್ಲಿ ಉದ್ಯೋಗ ಕೊಡಿಸುವುದಾಗಿ ಹೇಳಿ ನಂಬಿಸಿ ಕರೆದೊಯ್ದಿದ್ದರು. ಆದರೆ ನೌಕರಿಯೂ ಇಲ್ಲದೆ, ಸಂಬಳವೂ ಇಲ್ಲದೆ ಊಟಕ್ಕೂ ಪರದಾಡುವ ಪರಿಸ್ಥಿತಿ ಈ ಯುವಕರಿಗೆ ಬಂದಿದೆ. ತಮ್ಮನ್ನು ಸಂಕಷ್ಟದಿಂದ ಹೇಗಾದರೂ ಪಾರು ಮಾಡುವಂತೆ ವೀಡಿಯೋ ತೆಗೆದು ಶಾಸಕ ವೇದವ್ಯಾಸ ಕಾಮತ್ ಅವರಿಗೆ ಮನವಿ ಮಾಡಿಕೊಂಡಿದ್ದಾರೆ.
ಈ ಬಗ್ಗೆ ಶಾಸಕ ವೇದವ್ಯಾಸ ಕಾಮತ್ ಅವರು ಪ್ರತಿಕ್ರಿಯಿಸಿ, ವೀಡಿಯೋವನ್ನು ನಾನು ವೀಕ್ಷಿಸಿದ್ದೇನೆ. ಇವರನ್ನು ಸುರಕ್ಷಿತವಾಗಿ ಮರಳಿ ಕರೆತರಲು ಸರಕಾರದ ಮಟ್ಟದಲ್ಲಿ ಪ್ರಯತ್ನಿಸುತ್ತೇನೆ ಎಂದು ಹೇಳಿದ್ದಾರೆ. ಕುವೈಟ್‌ನಲ್ಲಿ ಸಂಕಷ್ಟದಲ್ಲಿರುವ ಯುವಕರಲ್ಲಿ ಒಬ್ಬರ ಸಹೋದರ “ಉದಯವಾಣಿ’ಗೆ ಪ್ರತಿಕ್ರಿಯಿಸಿ, ನನ್ನ ಸಹೋದರ ಸಹಿತ ಇನ್ನೂರು ಮಂದಿ ಉದ್ಯೋಗಕ್ಕಾಗಿ ನಾಲ್ಕು ತಿಂಗಳ ಹಿಂದೆ ಕುವೈಟ್‌ಗೆ ತೆರಳಿದ್ದರು. ಅಲ್ಲಿ ಕೆಲವರಿಗೆ ಕೆಲಸ ನೀಡಿದ್ದರೂ ಸಂಬಳವನ್ನೇ ನೀಡಿಲ್ಲ. ಇನ್ನು ಹಲವಾರು ಮಂದಿಗೆ ಕೆಲಸವನ್ನೂ ನೀಡಲಾಗಿಲ್ಲ. ಅಲ್ಲಿರುವ ಊರಿನವರ ಸಹಾಯದಿಂದ ಇಷ್ಟು ದಿನಗಳನ್ನು ಹೇಗೋ ಕಳೆದಿದ್ದಾರೆ ಎಂದು ಹೇಳಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
National Highway ಅವ್ಯವಸ್ಥೆ ಸಂಬಂಧಿಸಿ ನಾಗರಿಕರ ಅಹವಾಲಿಗೆ ವೇದಿಕೆ
Illegal sand mining: ರಾ. ಹಸುರು ಪ್ರಾಧಿಕಾರದಿಂದ ಸ್ವಯಂಪ್ರೇರಿತ ದೂರು ದಾಖಲು
Winter session: ರಾಜ್ಯದ ಕರಾವಳಿಯ 73.4 ಕಿ.ಮೀ. ಕಡಲ್ಕೊರೆತದಿಂದ ಹಾನಿ: ಸಚಿವ ಸಿಂಗ್
Moodbidri: ಬಾಂಗ್ಲಾದಲ್ಲಿ ಕೃಷ್ಣದಾಸ ಪ್ರಭು ಸೆರೆ: ಮೂಡುಬಿದಿರೆ ಭಟ್ಟಾರಕ ಶ್ರೀ ಖಂಡನೆ
Mangaluru: ಪೌರಕಾರ್ಮಿಕರ ವಿಮೆ 5 ಲಕ್ಷ ರೂ.ಗೆ ಏರಿಕೆ: ಜಿಲ್ಲಾಧಿಕಾರಿ ಸೂಚನೆ
MUST WATCH
ಬಳಂಜದ ಪುಟ್ಟ ಪೋರನ ಕೃಷಿ ಪ್ರೇಮ | ಕಸಿ ಕಟ್ಟುವಿಕೆಯಲ್ಲಿ ಬಲು ಪರಿಣಿತ ಈ 6 ನೇ ತರಗತಿ ಬಾಲಕ
ಎದೆ ನೋವು, ಮಧುಮೇಹ, ಥೈರಾಯ್ಡ್ ,ಸಮಸ್ಯೆಗಳಿಗೆ ಪರಿಹಾರ ತೆಂಗಿನಕಾಯಿ ಹೂವು
ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು
ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?
ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್ |
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.