ಜಿಲ್ಲೆಯಲ್ಲಿ ಇಂದು, ನಾಳೆ ಮಾವು ಮೇಳ

ನಂದಿಗಿರಿಧಾಮ, ಚದಲುಪುರ ಕ್ರಾಸ್‌ನಲ್ಲಿ ಆಯೋಜನೆ • ತರಹೇವಾರಿ ಮಾವು ಪ್ರದರ್ಶನ • ಮಾವು ತಿನ್ನುವ ಸ್ಪರ್ಧೆ

Team Udayavani, May 25, 2019, 2:24 PM IST

cb-tdy-1..

ಚಿಕ್ಕಬಳ್ಳಾಪುರ: ಹಲವು ವರ್ಷಗಳ ಬಳಿಕ ತೋಟಗಾರಿಕೆ ಇಲಾಖೆ ಜಿಲ್ಲೆಯಲ್ಲಿ ಮಾವು ಮಾರಾಟ ಹಾಗೂ ಪ್ರದರ್ಶನ ಮೇಳ ಆಯೋಜಿಸುವ ಮೂಲಕ ಮಾವು ಬೆಳೆಗಾರರಿಗೆ ನೇರ ಮಾರುಕಟ್ಟೆ ಒದಗಿಸಲು ಮುಂದಾಗಿದ್ದು, ಜಿಲ್ಲೆಯ ಮಾವು ಪ್ರಿಯರು ತಪ್ಪದೇ ಮಾವು ಮೇಳಕ್ಕೆ ಆಗಮಿಸಿ ನೈಸರ್ಗಿಕವಾಗಿ ಹಣ್ಣಾದ ಮಾವುನ್ನು ಸೇವಿಸಬಹುದು.

ಜಿಲ್ಲೆಯ ತೋಟಗಾರಿಕಾ ಇಲಾಖೆ ಮಾವು ಬೆಳೆಗಾರರನ್ನು ಉತ್ತೇಜಿಸಿ ಅವರಿಗೆ ಸೂಕ್ತ ಮಾರುಕಟ್ಟೆ ಕಲ್ಪಿಸುವ ಮಹತ್ವಕಾಂಕ್ಷೆ ಹೊತ್ತು ಶನಿವಾರ ಹಾಗೂ ಭಾನುವಾರ ಎರಡು ದಿನಗಳ ಕಾಲ ಜಿಲ್ಲೆಯ ಚದಲುಪುರ ಹಾಗೂ ತಾಲೂಕಿನ ಐತಿಹಾಸಿಕ ವಿಶ್ವ ವಿಖ್ಯಾತ ನಂದಿ ಗಿರಿಧಾಮದಲ್ಲಿ ಮಾವು ಮೇಳ ತಲೆ ಎತ್ತಲಿದ್ದು, ತೋಟಗಾರಿಕೆ ಇಲಾಖೆ ಈಗಾಗಲೇ ಮೇಳವನ್ನು ಯಶಸ್ವಿಗೊಳಿಸುವ ನಿಟ್ಟಿನಲ್ಲಿ ಭರದ ಸಿದ್ಧತೆಗಳನ್ನು ಕೈಗೊಂಡು ವ್ಯಾಪಕ ಪ್ರಚಾರಕ್ಕೂ ಮುಂದಾಗಿದೆ.

ಜಿಲ್ಲಾಡಳಿತ ಕಾಳಜಿ: ಸಾಮಾನ್ಯವಾಗಿ ಮಾವು ಮೇಳ ಬೆಂಗಳೂರು, ಮೈಸೂರು ಮತ್ತಿತರ ಮಹಾನಗರ ಪಾಲಿಕೆಗಳಲ್ಲಿ ಮಾತ್ರ ನಡೆಯುವುದು ಸಾಮಾನ್ಯ. ಆದರೆ ಮಾವು ಬೆಳೆಯುವುದರಲ್ಲಿ ಏಷ್ಯಾ ಖಂಡದಲ್ಲಿಯೇ ಮುಂಚೂಣಿಯಲ್ಲಿರುವಅವಿಭಜಿತ ಕೋಲಾರ, ಚಿಕ್ಕಬಳ್ಳಾಪುರ ಜಿಲ್ಲೆಗಳು ವಾರ್ಷಿಕ ಲಕ್ಷಾಂತರ ಟನ್‌ ಮಾವು ಬೆಳೆಯಲಾಗುತ್ತಿದ್ದು, ಜಿಲ್ಲೆಯಲ್ಲಿ ಮಾವು ಮೇಳ ಜಿಲ್ಲಾಡಳಿತ ಮರೆತಿತ್ತು.

ಇದೀಗ ಜಿಲ್ಲೆಗೆ ನೂತನವಾಗಿ ಆಗಮಿಸಿರುವ ಜಿಲ್ಲಾಧಿಕಾರಿ ಅನಿರುದ್ಧ್ ಶ್ರವಣ್‌, ನಂದಿಗಿರಿಧಾಮಕ್ಕೆ ಬರುವ ಪ್ರವಾಸಿಗರಿಗೆ ವಿದೇಶಿಯರಿಗೆ ಹಾಗೂ ಹೆದ್ದಾರಿಯಲ್ಲಿ ನಿತ್ಯ ಸಂಚರಿಸುವ ಹೊರ ಭಾಗದ ಪ್ರಯಾಣಿಕರಿಗೆ ಜಿಲ್ಲೆಯ ಮಾವು ಪರಿಚಯಿಸುವುದರ ಜೊತೆಗೆ ಖರೀದಿಗೂ ಅವಕಾಶ ಮಾಡಿಕೊಡುವ ನಿಟ್ಟಿನಲ್ಲಿ ಜಿಲ್ಲಾಡಳಿತ ವಿಶೇಷ ಕಾಳಜಿ ವಹಿಸಿ ಎರಡು ದಿನಗಳ ಮಾವು ಮೇಳ ನಡೆಸುವ ನಿರ್ಧಾರಕ್ಕೆ ಬಂದಿದೆ.

ವಿವಿಧ ತಳಿಗಳ ಪ್ರದರ್ಶನ: ಜಿಲ್ಲಾಡಳಿತ ಮಾವು ಮೇಳವನ್ನು ಪ್ರಾಯೋಗಿಕವಾಗಿ ಹಮ್ಮಿಕೊಂಡಿದ್ದು, ಆರೋಗ್ಯಕ್ಕೆ ಪೂರಕವಾದ ನೈಸರ್ಗಿಕ ಪದ್ಧತಿಯಲ್ಲಿಯೇ ಮಾಗಿಸಿದ ಮಾವಿನ ಹಣ್ಣನ್ನು ರೈತರಿಂದ ಗ್ರಾಹಕರಿಗೆ ನೇರವಾಗಿ ತಲುಪಿಸಲು, ಮಧ್ಯವರ್ತಿಗಳ ಹಾವಳಿ ತಪ್ಪಿಸಿ ಬೆಳೆಗಾರರಿಂದ ಗ್ರಾಹಕರಿಗೆ ನೇರ ಮಾರಾಟ ಕಲ್ಪಿಸುವುದರ ಜೊತೆಗೆ ವಿವಿಧ ಮಾವಿನ ತಳಿಗಳ ಪ್ರದರ್ಶನ ಹಾಗೂ ವಿವಿಧ ತಳಿಗಳು ಒಂದೇ ಸೂರಿನಲ್ಲಿ ಲಭ್ಯವಾಗಲಿದೆ.

ಮಾವು ಮೇಳದಲ್ಲಿ ರೈತರಿಗೆ ಲಾಭದಾಯಕ ಕೃಷಿ, ಇಳುವರಿ ಹೆಚ್ಚು ಪಡೆಯುವ ವಿಧಾನ ಮಾವುಗಳ ತಳಿ, ಮಾಗಿಸುವಿಕೆ ಸೇರಿದಂತೆ ವಿವಿಧ ವಿಷಯಗಳ ಬಗ್ಗೆ ಅರಿವು ಮೂಡಿಸುವ ದಿಸೆಯಲ್ಲಿ ಮಾವು ಮೇಳ ನಡೆಸಲು ತೋಟಗಾರಿಕೆ ಇಲಾಖೆ ಮುಂದಾಗಿದೆ.

13,886 ಹೆಕ್ಟೇರ್‌ ಪ್ರದೇಶದಲ್ಲಿ ಮಾವು: ಜಿಲ್ಲೆಯಲ್ಲಿ ಸುಮಾರು 13,886 ಹೆಕೇrರ್‌ಗಳಲ್ಲಿ ಮಾವು ಬೆಳೆಯುತ್ತಿದ್ದು, ಇದರಿಂದ ಪ್ರತಿ ವರ್ಷ ಸುಮಾರು 1.18 ಲಕ್ಷ ಟನ್‌ ನಷ್ಟು ಮಾವಿನ ಹಣ್ಣನ್ನು ಉತ್ಪಾದಿಸಲಾಗುತ್ತಿದೆ. ವಿಶೇಷವಾಗಿ ಬಾದಾಮಿ, ರಸಪುರಿ, ಸೇಂದೂರ, ತೋತಾಪುರಿ, ಮಲ್ಲಿಕಾ, ನೀಲಂ ಮುಂತಾದ ತಳಿಗಳನ್ನು ಬೆಳೆಯಲಾಗುತ್ತಿದೆ.

ಮಾವು ಮೇಳದಲ್ಲಿ ಈ ಎಲ್ಲಾ ತರಹದ ಮಾವಿನ ಹಣ್ಣುಗಳ ಪ್ರದರ್ಶನ ಮತ್ತು ಮಾರಾಟ ನಡೆಯಲಿದೆ. ಜಿಲ್ಲೆಯ 8 ರೈತರು ಮಾವು ಮೇಳದಲ್ಲಿ ಮಳಿಗೆ ತೆರೆಯಲು ಒಪ್ಪಿದ್ದಾರೆ. ಎಲ್ಲಾ ರೀತಿಯ ತರದ ತರಹೇವಾರಿ ಮಾವು ಮಾರಾಟ ಹಾಗೂ ಪ್ರದರ್ಶನ ನಡೆಯಲಿದೆ.

ಇಂದು ಡೀಸಿರಿಂದ ಉದ್ಘಾಟನೆ: ಹಲವು ವರ್ಷಗಳ ಬಳಿಕ ಜಿಲ್ಲೆಯಲ್ಲಿ ಇದೇ ಮೊದಲ ಬಾರಿಗೆ ಮಾವು ಮಾರಾಟ ಹಾಗೂ ಪ್ರದರ್ಶನ ಮೇಳ ಆಯೋಜಿಸಿದ್ದೇವೆ. ಶನಿವಾರ ಹಾಗೂ ಭಾನುವಾರ ವೀಕೆಂಡ್‌ ಆಗಿರುವುದರಿಂದ ಮೇಳಕ್ಕೆ ಉತ್ತಮ ಪ್ರತಿಕ್ರಿಯೆ ಸಿಗುವ ಭರವಸೆ ಇದೆ.

25 ರಂದು ಬೆಳಗ್ಗೆ 8:30ಕ್ಕೆ ನಂದಿಬೆಟ್ಟದಲ್ಲಿ ಜಿಲ್ಲಾಧಿಕಾರಿ ಅನಿರುದ್ಧ್ ಶ್ರವಣ್‌ ಹಾಗೂ ಪೊಲೀಸ್‌ ವರಿಷ್ಠಾಧಿಕಾರಿ ಸಂತೋಷ್‌ ಬಾಬು ಮಾವು ಮಾರಾಟ ಹಾಗೂ ಪ್ರದರ್ಶನಕ್ಕೆ ಚಾಲನೆ ನೀಡಲಿದ್ದಾರೆ.

ಮೇಳ ಯಶಸ್ವಿಯಾದರೆ ಪ್ರತಿ ವರ್ಷ ಮಾವು ಸುಗ್ಗಿಯಲ್ಲಿ ಮೇಳ ಆಯೋಜಿಸಿ ಗ್ರಾಹಕರಿಗೆ ನೇರವಾಗಿ ಮಾವು ಬೆಳೆಗಾರರಿಂದ ಮಾರಾಟ ಮಾಡುವ ವ್ಯವಸ್ಥೆ ಕಲ್ಪಿಸುವ ಮೂಲಕ ಬೆಳೆಗಾರರಿಗೆ ಉತ್ತಮ ಧಾರಣೆ ಸಿಗಲಿಯೆಂಬ ಉದ್ದೇಶ ಹೊಂದಲಾಗಿದೆ ಎಂದು ಜಿಲ್ಲಾ ತೋಟಗಾರಿಕೆ ಇಲಾಖೆ ಉಪ ನಿರ್ದೇಶಕ ಕುಮಾರಸ್ವಾಮಿ ಉದಯವಾಣಿಗೆ ತಿಳಿಸಿದರು.

ಟಾಪ್ ನ್ಯೂಸ್

ಬೆಂಗಳೂರಿನಿಂದ ಹೊರನಾಡು ದೇವಸ್ಥಾನಕ್ಕೆ ಬರುತ್ತಿದ್ದ ವಾಹನ ಪಲ್ಟಿ… ನಾಲ್ವರಿಗೆ ಗಂಭೀರ ಗಾಯ

Mudigere: ಹೊರನಾಡು ದೇವರ ದರ್ಶನಕ್ಕೆ ಬರುತ್ತಿದ್ದವರ ವಾಹನ ಪಲ್ಟಿ… ನಾಲ್ವರಿಗೆ ಗಂಭೀರ ಗಾಯ

Kundapura: ನಾಪತ್ತೆಯಾಗಿದ್ದ ಬೋಟ್ ರೈಡರ್ ಶವ 36 ಗಂಟೆಗಳ ಬಳಿಕ ಪತ್ತೆ

Trasi: ನಾಪತ್ತೆಯಾಗಿದ್ದ ಬೋಟ್ ರೈಡರ್ ಶವ 36 ಗಂಟೆಗಳ ಬಳಿಕ ಪತ್ತೆ

Shivamogga: ಭೀಕರ ರಸ್ತೆ ಅಪಘಾತ… ಬೈಕ್ ನಲ್ಲಿದ್ದ ಇಬ್ಬರು ಯುವಕರು ಮೃ*ತ್ಯು

Shivamogga: ತಡರಾತ್ರಿ ಭೀಕರ ರಸ್ತೆ ಅಪಘಾತ… ಬೈಕ್ ನಲ್ಲಿದ್ದ ಇಬ್ಬರು ಯುವಕರು ಮೃ*ತ್ಯು

Plane Mishap: ಲಘು ವಿಮಾನ ಪತನ… ಬ್ರೆಜಿಲ್ ನ ಉದ್ಯಮಿ ಸೇರಿ ಹತ್ತು ಮಂದಿ ಮೃತ್ಯು

Plane Mishap: ಲಘು ವಿಮಾನ ಪತನ… ಬ್ರೆಜಿಲ್ ನ ಉದ್ಯಮಿ ಸೇರಿ ಹತ್ತು ಮಂದಿ ಮೃತ್ಯು

‌BBK11: ಬಾಯಿ ಮುಚ್ಕೊಂಡು ಇರು..‌ ಫೈಯರ್‌ ಬ್ರ್ಯಾಂಡ್ ಚೈತ್ರಾ ಕೋಪಕ್ಕೆ ಮನೆಮಂದಿ ಶಾಕ್.!

‌BBK11: ಬಾಯಿ ಮುಚ್ಕೊಂಡು ಇರು..‌ ಫೈಯರ್‌ ಬ್ರ್ಯಾಂಡ್ ಚೈತ್ರಾ ಕೋಪಕ್ಕೆ ಮನೆಮಂದಿ ಶಾಕ್.!

1-chali

Kashmir cold: 34 ವರ್ಷಗಳಲ್ಲೇ ಕನಿಷ್ಠ ತಾಪಮಾನ ದಾಖಲು!

Hemmadi-Sevantige

Natural Disaster: ಅನಿರೀಕ್ಷಿತ ಮಳೆಗೆ ಸೊರಗಿದ ವಿಶಿಷ್ಟ ಗುಣದ ಹೆಮ್ಮಾಡಿ ಸೇವಂತಿಗೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಮಾನಸಿಕ ಆರೋಗ್ಯಕ್ಕೆ “ಈಶಾ’ ಮಿರಾಕಲ್‌ ಆ್ಯಪ್‌: ಸದ್ಗುರು

Chikkaballapur: ಮಾನಸಿಕ ಆರೋಗ್ಯಕ್ಕೆ “ಈಶಾ’ ಮಿರಾಕಲ್‌ ಆ್ಯಪ್‌: ಸದ್ಗುರು

9

Dr MC Sudhakar: ‘ಹೈಕಮಾಂಡ್‌ ಎಷ್ಟು ದಿನ ಜವಾಬ್ದಾರಿ ಕೊಡುತ್ತೋ ಅಷ್ಟು ದಿನ ಸಚಿವ’

Chintamani: ದ್ವಿಚಕ್ರ ವಾಹನಕ್ಕೆ ಡಿಕ್ಕಿ ಹೊಡೆದ ಕಾರು… ಪತಿ ಸಾ*ವು, ಪತ್ನಿಗೆ ಗಾಯ

Chintamani: ದ್ವಿಚಕ್ರ ವಾಹನಕ್ಕೆ ಡಿಕ್ಕಿ ಹೊಡೆದ ಕಾರು… ಪತಿ ಸಾ*ವು, ಪತ್ನಿ ಗಂಭೀರ

1-cbl

Chintamani: ರಸ್ತೆ ಅಪಘಾ*ತದಲ್ಲಿ ಯುವಕ ಸಾ*ವು,ಇಬ್ಬರಿಗೆ ಗಂಭೀರ ಗಾಯ

7

Chikkaballapur: 5 ವರ್ಷದಲ್ಲಿ 514 ತಾಯಿ-ಮಗು ಸಾವಿನ ಪ್ರಕರಣ!

MUST WATCH

udayavani youtube

ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ

udayavani youtube

ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ

udayavani youtube

ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ

udayavani youtube

ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ

udayavani youtube

ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ

ಹೊಸ ಸೇರ್ಪಡೆ

ಬೆಂಗಳೂರಿನಿಂದ ಹೊರನಾಡು ದೇವಸ್ಥಾನಕ್ಕೆ ಬರುತ್ತಿದ್ದ ವಾಹನ ಪಲ್ಟಿ… ನಾಲ್ವರಿಗೆ ಗಂಭೀರ ಗಾಯ

Mudigere: ಹೊರನಾಡು ದೇವರ ದರ್ಶನಕ್ಕೆ ಬರುತ್ತಿದ್ದವರ ವಾಹನ ಪಲ್ಟಿ… ನಾಲ್ವರಿಗೆ ಗಂಭೀರ ಗಾಯ

Kundapura: ನಾಪತ್ತೆಯಾಗಿದ್ದ ಬೋಟ್ ರೈಡರ್ ಶವ 36 ಗಂಟೆಗಳ ಬಳಿಕ ಪತ್ತೆ

Trasi: ನಾಪತ್ತೆಯಾಗಿದ್ದ ಬೋಟ್ ರೈಡರ್ ಶವ 36 ಗಂಟೆಗಳ ಬಳಿಕ ಪತ್ತೆ

Shivamogga: ಭೀಕರ ರಸ್ತೆ ಅಪಘಾತ… ಬೈಕ್ ನಲ್ಲಿದ್ದ ಇಬ್ಬರು ಯುವಕರು ಮೃ*ತ್ಯು

Shivamogga: ತಡರಾತ್ರಿ ಭೀಕರ ರಸ್ತೆ ಅಪಘಾತ… ಬೈಕ್ ನಲ್ಲಿದ್ದ ಇಬ್ಬರು ಯುವಕರು ಮೃ*ತ್ಯು

Plane Mishap: ಲಘು ವಿಮಾನ ಪತನ… ಬ್ರೆಜಿಲ್ ನ ಉದ್ಯಮಿ ಸೇರಿ ಹತ್ತು ಮಂದಿ ಮೃತ್ಯು

Plane Mishap: ಲಘು ವಿಮಾನ ಪತನ… ಬ್ರೆಜಿಲ್ ನ ಉದ್ಯಮಿ ಸೇರಿ ಹತ್ತು ಮಂದಿ ಮೃತ್ಯು

‌BBK11: ಬಾಯಿ ಮುಚ್ಕೊಂಡು ಇರು..‌ ಫೈಯರ್‌ ಬ್ರ್ಯಾಂಡ್ ಚೈತ್ರಾ ಕೋಪಕ್ಕೆ ಮನೆಮಂದಿ ಶಾಕ್.!

‌BBK11: ಬಾಯಿ ಮುಚ್ಕೊಂಡು ಇರು..‌ ಫೈಯರ್‌ ಬ್ರ್ಯಾಂಡ್ ಚೈತ್ರಾ ಕೋಪಕ್ಕೆ ಮನೆಮಂದಿ ಶಾಕ್.!

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.