ಸ್ಕಿಜೋಫ್ರೇನಿಯಾ ಜಾಗೃತಿ ಅಗತ್ಯ
Team Udayavani, May 25, 2019, 2:28 PM IST
ಶಿಡ್ಲಘಟ್ಟ ನಗರದ ಸಾರ್ವಜನಿಕ ಆಸ್ಪತ್ರೆ ಆವರಣದಲ್ಲಿ ವಿಶ್ವ ಸ್ಕಿಜೋಫ್ರೇನಿಯಾ ಅರಿವು ಸಪ್ತಾಹಕ್ಕೆ ಚಾಲನೆ ನೀಡಿ ಜಾಗೃತಿ ಮೂಡಿಸಲಾಯಿತು.
ಶಿಡ್ಲಘಟ್ಟ: ಮಾನಸಿಕ ಒತ್ತಡದಲ್ಲಿ ಸಿಲುಕಿ ಸಂಕಷ್ಟ ಎದುರಿಸುತ್ತಿರುವ ಮನೋ ರೋಗಿಗಳನ್ನು ಗುರುತಿಸಿ ಚಿಕಿತ್ಸೆ ನೀಡುವ ವ್ಯವಸ್ಥೆಯನ್ನು ಸಾರ್ವಜನಿಕ ಆಸ್ಪತ್ರೆ ಹಾಗೂ ಪ್ರಾಥಮಿಕ ಆರೋಗ್ಯ ಕೇಂದ್ರದಲ್ಲಿ ಮಾಡಲಾಗಿದೆ ಎಂದು ತಾಲೂಕು ಆರೋಗ್ಯಾಧಿಕಾರಿ ಡಾ.ವೆಂಕಟೇಶ್‌ಮೂರ್ತಿ ತಿಳಿಸಿದರು.
ನಗರದ ಸಾರ್ವಜನಿಕ ಆಸ್ಪತ್ರೆಯ ಆವರಣದಲ್ಲಿ ವಿಶ್ವ ಸ್ಕಿಜೋಫ್ರೇನಿಯಾ ಅರಿವು ಸಪ್ತಾಹಕ್ಕೆ ಚಾಲನೆ ನೀಡಿ ಮಾತನಾಡಿದ ಅವರು, ಶಿಡ್ಲಘಟ್ಟ ನಗರ ಸಹಿತ ತಾಲೂಕಿನಾದ್ಯಂತ ಮಾನಸಿಕ ರೋಗಿಗಳನ್ನು ಗುರುತಿಸಿ ಚಿಕಿತ್ಸೆ ಕುರಿತು ಅರಿವು ಮೂಡಿಸಲು ಮೇ 27ರ ವರೆಗೆ ವಿಶ್ವ ಸ್ಕಿಜೋಫ್ರೇನಿಯಾ ಅರಿವು ಸಪ್ತಾಹ ಮುಂದು ವರಿಯಲಿದೆ. ಆರೋಗ್ಯ ಇಲಾಖೆಯ ಸಿಬ್ಬಂದಿ ಮಾನಸಿಕ ರೋಗಿಗಳನ್ನು ಗುರುತಿಸಿ ಚಿಕಿತ್ಸೆ ನೀಡುವ ಕೆಲಸವನ್ನು ಪರಿಣಾಮಕಾರಿಯಾಗಿ ಮಾಡಲಿದ್ದು, ನಾಗರಿಕರು ಆರೋಗ್ಯ ಇಲಾಖೆಯ ಸಿಬ್ಬಂದಿಗೆ ಸಹಕಾರ ನೀಡಬೇಕೆಂದು ಮನ ಮಾಡಿದರು. ಸಾಮಾನ್ಯವಾಗಿ ಕೋಪ, ಉದ್ರೇಕ, ನಗುವುದು, ಸಂಶಯದಿಂದ ನೋಡುವುದು, ಆತ್ಮಹತ್ಯೆ ಮಾಡಿ ಕೊಳ್ಳುವುದು, ಮಾನಸಿಕ ಕಾಲೆಗಳಿಗೆ ನಿಮ್ಹಾನ್ಸ್ ಆಸ್ಪತ್ರೆಗೆ ಕಳುಹಿಸಿ ನುರಿತ ತಜ್ಞರಿಂದ ಚಿಕಿತ್ಸೆ ನೀಡುವುದು ಜಾರಿಯಲ್ಲಿತ್ತು. ಆದರೆ ಸುಪ್ರೀಂ ಕೋರ್ಟ್ ತೀರ್ಮಾನದಂತೆ ಪ್ರಾಥಮಿಕ ಆರೋಗ್ಯ ಕೇಂದ್ರದ ವೈದ್ಯರಿಗೆ ತರಬೇತಿ ನೀಡಲಾಗಿದೆ. ಇದೀಗ ಗ್ರಾಮೀಣ ಪ್ರದೇಶದಲ್ಲಿ ಮಾನಸಿಕ ರೋಗಿಗಳನ್ನು ಗುರುತಿಸಿ ಅವರಿಗೆ ಮಾಸಿಕವಾಗಿ ಔಷಧೋಪಚಾರ ನೀಡುವ ಮೂಲಕ ರೋಗವನ್ನು ಗುಣಪಡಿಸುವ ಕಾರ್ಯ ನಡೆಸಲಾಗುತ್ತದೆ ಎಂದರು. ಡಾ.ತಿಮಮೇಗೌಡ, ಡಾ.ಜಯಕುಮಾರ್, ನಗರ ಆರೋಗ್ಯ ಕೇಂದ್ರದ ಡಾ. ಸೋನಾಲಿ, ಆರೋಗ್ಯ ಇಲಾಖೆ ಅಫ್ರೋಜ್ ಪಾಷ, ನಂದಿನಿ, ಚೈತ್ರ ಹಾಗೂ ಸಿಬ್ಬಂದಿ ಮತ್ತು ಆಶಾ ಕಾರ್ಯಕರ್ತರು ಭಾಗವಹಹಿಸಿದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Chikkaballapura: ಕಾರಿನಲ್ಲಿ ಸಾಗಿಸುತ್ತಿದ್ದ 7.20 ಲಕ್ಷ ರೂ. ಮೌಲ್ಯದ ಗಾಂಜಾ ವಶ
Karnataka Govt: ಹಿಂದೂಗಳ ದಮನಕ್ಕೆ ಮುಂದಾದ ಕಾಂಗ್ರೆಸ್: ಆರ್. ಅಶೋಕ್ ಆರೋಪ
Dr. Sudhakar: ಹಿಂದಿನ ಕಾಂಗ್ರೆಸ್‌ರ ಸರ್ಕಾರದ ಭ್ರಷ್ಟಾಚಾರ ಬಿಚ್ಚಿಡುವೆ
Chikkaballapura: ನಮ್ಮನ್ನು ಖಳ ನಾಯಕರನ್ನಾಗಿ ಮಾಡಲು ಹೊರಟಿದ್ದಾರೆ: ಸಂಸದ ಡಾ.ಕೆ.ಸುಧಾಕರ್
Chikkaballapur: ಪರಿಹಾರ ಕೊಡದ ಎಸಿ ಕಚೇರಿ ಸಂತ್ರಸ್ತರಿಂದ ಜಪ್ತಿ!
MUST WATCH
ಎದೆ ನೋವು, ಮಧುಮೇಹ, ಥೈರಾಯ್ಡ್ ,ಸಮಸ್ಯೆಗಳಿಗೆ ಪರಿಹಾರ ತೆಂಗಿನಕಾಯಿ ಹೂವು
ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು
ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?
ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್ |
ಕೊಲ್ಲೂರಿನಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಡಿಸಿಎಂ ಡಿ ಕೆ ಶಿವಕುಮಾರ್
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.