ಪ್ರಕೃತಿ ವಿಕೋಪ ನಿರ್ವಹಣೆಗೆ ತಯಾರಿ ಅಗತ್ಯ
ಜನ-ಜಾನುವಾರು ರಕ್ಷಣೆಗೆ ಕೈಗೊಳ್ಳಬೇಕಾದ ಮುಂಜಾಗ್ರತಾ ಕ್ರಮ ಸಾರ್ವಜನಿಕರಿಗೆ ತಿಳಿಸಿ: ಕೂರ್ಮಾರಾವ್
Team Udayavani, May 25, 2019, 3:54 PM IST
ಯಾದಗಿರಿ: ಜಿಲ್ಲಾ ಪಂಚಾಯಿತಿ ಸಭಾಂಗಣದಲ್ಲಿ ಆಯೋಜಿಸಿದ್ದ ಜಿಲ್ಲಾ ವಿಕೋಪ ನಿರ್ವಹಣಾ ಪ್ರಾಧಿಕಾರ ಹಾಗೂ ಜಿಲ್ಲಾ ಅಧಿಕಾರಿಗಳ ಸಹಯೋಗದಲ್ಲಿ ಜಿಲ್ಲಾ ವಿಕೋಪ ನಿರ್ವಹಣಾ ಯೋಜನೆ ಪರಿಷ್ಕರಣೆ ಹಾಗೂ ವಿಕೋಪ ಮಿತಗೊಳಿಸುವಿಕೆ, ಪೂರ್ವಸಿದ್ಧತೆ ಹಾಗೂ ಸ್ಪಂದನಾ ಯೋಜನೆಯ ಕುರಿತ ಕಾರ್ಯಾಗಾರದಲ್ಲಿ ಜಿಲ್ಲಾಧಿಕಾರಿ ಎಂ. ಕೂರ್ಮಾರಾವ್ ಮಾತನಾಡಿದರು.
ಯಾದಗಿರಿ: ಮುಂಗಾರು ಪೂರ್ವ ಮತ್ತು ನಂತರದಲ್ಲಿ ಸಂಭವಿಸುವ ಹಲವು ರೀತಿಯ ಪ್ರಾಕೃತಿಕ ವಿಕೋಪಗಳ ನಿರ್ವಹಣೆಗೆ ಸಂಬಂಧಪಟ್ಟ ಇಲಾಖೆಗಳು ಪೂರ್ವಭಾವಿಯಾಗಿ ಯೋಜನೆಯನ್ನು ರೂಪಿಸಿ, ಸನ್ನದ್ಧರಾಗಬೇಕಿದೆ ಎಂದು ಜಿಲ್ಲಾಧಿಕಾರಿಎಂ. ಕೂರ್ಮಾರಾವ್ ಸೂಚಿಸಿದರು.
ಜಿಲ್ಲಾ ಪಂಚಾಯಿತಿ ಸಭಾಂಗಣದಲ್ಲಿ ಶುಕ್ರವಾರ ಜಿಲ್ಲಾ ವಿಕೋಪ ನಿರ್ವಹಣಾ ಪ್ರಾಧಿಕಾರ ಹಾಗೂ ಜಿಲ್ಲಾ ಅಧಿಕಾರಿಗಳ ಸಹಯೋಗದಲ್ಲಿ ಜಿಲ್ಲಾ ವಿಕೋಪ ನಿರ್ವಹಣಾ ಯೋಜನೆ ಪರಿಷ್ಕರಣೆ ಹಾಗೂ ವಿಕೋಪ ಮಿತಗೊಳಿಸುವಿಕೆ, ಪೂರ್ವಸಿದ್ಧತೆ ಹಾಗೂ ಸ್ಪಂದನಾ ಯೋಜನೆಯ ಕುರಿತು ಹಮ್ಮಿಕೊಂಡಿದ್ದ ಕಾರ್ಯಾಗಾರದಲ್ಲಿ ಅವರು ಮಾತನಾಡಿದರು.
ಯಾವುದಾದರೂ ಪ್ರಕೃತಿ ವಿಕೋಪ ಸಂಭವಿಸಿದಾಗ ಮಾತ್ರ ಎಚ್ಚೆತ್ತುಕೊಳ್ಳದೆ, ಪೂರ್ವಭಾವಿಯಾಗಿ ವಿಕೋಪ ನಿರ್ವಹಣೆಗೆ ಸಿದ್ಧರಾಗಿರಬೇಕು. ನೆರೆ ಹಾವಳಿ ಅಥವಾ ಇನ್ನಿತರ ಸಂದರ್ಭಗಳಲ್ಲಿ ಪೊಲೀಸ್ ಇಲಾಖೆ, ಅಗ್ನಿಶಾಮಕ ದಳ, ಕಂದಾಯ ಇಲಾಖೆ, ಪಶುಪಾಲನಾ ಇಲಾಖೆ, ಆರೋಗ್ಯ ಇಲಾಖೆ, ಅರಣ್ಯ ಇಲಾಖೆ ಸೇರಿದಂತೆ ಇನ್ನಿತರ ಇಲಾಖೆಗಳು ಏನು ಮಾಡಬೇಕೆಂಬುದರ ಬಗ್ಗೆ ತಿಳಿದಿರಬೇಕು. ಮಳೆ, ಗಾಳಿ, ಸಿಡಿಲಿನಂತಹ ಸಂದರ್ಭಗಳಲ್ಲಿ ಜನ- ಜಾನುವಾರು ರಕ್ಷಣೆಗೆ ಕೈಗೊಳ್ಳಬೇಕಾದ ಮುಂಜಾಗ್ರತಾ ಕ್ರಮಗಳ ಕುರಿತಂತೆ ಸಾರ್ವಜನಿಕರಲ್ಲಿ ಅರಿವು ಮೂಡಿಸಬೇಕು ಎಂದು ಹೇಳಿದರು.
ಜಿಲ್ಲೆಯಲ್ಲಿ 2009ರಲ್ಲಿ ಸಂಭವಿಸಿದ ನೆರೆ ಹಾವಳಿ ಸಂದರ್ಭದಲ್ಲಿ ಯಾವ ಹಳ್ಳಿಗಳಿಗೆ ತೊಂದರೆ ಉಂಟಾಗಿತ್ತು ಎನ್ನುವುದರ ಕುರಿತು ಪಟ್ಟಿ ಮಾಡಬೇಕು. ಹಿಂದಿನ ವರ್ಷಗಳಲ್ಲಿ ಸಿಡಿಲಿನಿಂದ ಮೃತಪಟ್ಟವರು, ನೆರೆ ಹಾವಳಿ ಮತ್ತು ಅದರ ಪರಿಣಾಮದ ಕುರಿತು ಮಾಹಿತಿ ಸಂಗ್ರಹಿಸಿ, ಇದರ ಆಧಾರದ ಮೇಲೆ ಮುಂದೆ ಸಂಭವಿಸುವ ವಿಕೋಪಗಳ ನಿರ್ವಹಣೆಗೆ ಸನ್ನದ್ಧರಾಗಬೇಕು ಎಂದು ನಿರ್ದೇಶಿಸಿದರು.
ಜಿಲ್ಲೆಯಲ್ಲಿ ಸರ್ಕಾರಿ ಬೋಟ್‌ಗಳ ಜೊತೆಗೆ ಖಾಸಗಿ ಬೋಟ್‌ಗಳು ಎಷ್ಟಿವೆ?. ಈಜು ತಜ್ಞರು ಎಷ್ಟು ಜನ ಇದ್ದಾರೆ ಮತ್ತು ಅವರ ವಿವರಗಳು ಜಿಲ್ಲಾ ವಿಪತ್ತು ನಿರ್ವಹಣಾ ಕೇಂದ್ರದಲ್ಲಿ ಸಂಗ್ರಹ ಇರಬೇಕು. ಇದರಿಂದ ನೆರೆ ಹಾವಳಿ ಮತ್ತು ಇನ್ನಿತರ ಸಂದರ್ಭಗಳಲ್ಲಿ ಅನುಕೂಲವಾಗುತ್ತದೆ ಎಂದು ಸಲಹೆ ನೀಡಿದರು.
ಜಿಲ್ಲೆಯಲ್ಲಿ ಭೀಮಾ ಮತ್ತು ಕೃಷ್ಣಾ ನದಿಗಳು ಹರಿಯುತ್ತಿದ್ದು, ನದಿ ದಂಡೆಯ ಗ್ರಾಮಗಳು ಮಳೆಗಾಲದಲ್ಲಿ ನೆರೆ ಹಾವಳಿಗೆ ಒಳಗಾಗುವ ಸಂಭವ ಇರುತ್ತದೆ. ಆದ್ದರಿಂದ ಅಂತಹ ಗ್ರಾಮಗಳ ಜನರಲ್ಲಿ ನದಿಗೆ ಜಾನುವಾರು ಮತ್ತು ಜನ ಇಳಿಯದಂತೆ ಅರಿವು ಮೂಡಿಸಬೇಕು. ರೈತರು, ಕುರಿ ಮತ್ತು ದನಗಾಹಿಗಳು ಹೆಚ್ಚು ಸಿಡಿಲು ಬಡಿದು ಸಾವನ್ನಪ್ಪುತ್ತಾರೆ. ಆದ್ದರಿಂದ ಅವರಿಗೆ ಗುಡುಗು ಸಹಿತ ಮಳೆ ಬರುವ ಸಂದರ್ಭದಲ್ಲಿ ಗಿಡದ ಕೆಳಗಡೆ ನಿಲ್ಲದಂತೆ ಮತ್ತು ಇನ್ನಿತರ ಸಲಹೆಗಳನ್ನು ನೀಡಬೇಕು ಎಂದು ಸೂಚಿಸಿದರು.
ಅಪರ ಜಿಲ್ಲಾಕಾರಿ ಪ್ರಕಾಶ ಜಿ.ರಜಪೂತ ಮಾತನಾಡಿ, ಕರ್ನಾಟಕ ಸರ್ಕಾರದಿಂದ ತಯಾರಿಸಿದ ಸಿಡಿಲು ಆ್ಯಪ್ ಅನ್ನು ಪ್ರತಿಯೊಬ್ಬರೂ ಡೌನ್‌ಲೋಡ್ ಮಾಡಿಕೊಳ್ಳಬೇಕು. ಇದರಿಂದ ಹವಾಮಾನ ಮುನ್ಸೂಚನೆ ಮತ್ತು ಮುಂಜಾಗ್ರತಾ ಕ್ರಮಗಳ ಮಾಹಿತಿ ಪಡೆದುಕೊಳ್ಳಬಹುದು ಎಂದು ತಿಳಿಸಿದರು.
ಮೈಸೂರು ಆಡಳಿತ ತರಬೇತಿ ಸಂಸ್ಥೆಯ ವಿಕೋಪ ನಿರ್ವಹಣಾ ಕೇಂದ್ರದ ತರಬೇತಿ ನಿರ್ದೇಶಕರಾದ ಅಲೆಕ್ ಲೋಬೋ ಅವರು ಜಿಲ್ಲಾ ಮಟ್ಟದ ವಿಕೋಪ ನಿರ್ವಹಣೆಯ ಯೋಜನೆ ತಯಾರಿಕೆ, ಪುನರ್ ಪರಿಶೀಲನೆಯಲ್ಲಿ ಜಿಲ್ಲಾಡಳಿತದ ಜವಾಬ್ದಾರಿಗಳು ಹಾಗೂ ಜಿಲ್ಲಾ ಮಟ್ಟದ ವಿಕೋಪ ನಿರ್ವಹಣಾ ಯೋಜನೆಯ ವಿವಿಧ ಹಂತಗಳು, ವಿಕೋಪ ನಿರ್ವಹಣೆಯ ವಿವಿಧ ಹಂತಗಳಲ್ಲಿ ಅಧಿಕಾರಿಗಳು, ಸರ್ಕಾರೇತರ ಸಂಸ್ಥೆಗಳು, ಸಮುದಾಯ, ಶಾಲಾ- ಕಾಲೇಜುಗಳು, ಸಂಘ-ಸಂಸ್ಥೆಗಳ ಪಾತ್ರ ಕುರಿತು ತರಬೇತಿ ನೀಡಿದರು.
ಕಾರ್ಯಾಗಾರದಲ್ಲಿ ಜಿಲ್ಲಾ ಪಂಚಾಯಿತಿ ಉಪ ಕಾರ್ಯದರ್ಶಿ ವಸಂತ ವಿ. ಕುಲಕರ್ಣಿ, ಡಿವೈಎಸ್‌ಪಿ ಯು. ಶರಣಪ್ಪ, ಜಿಲ್ಲಾ ತರಬೇತಿ ಸಂಸ್ಥೆಯ ಅಂಬೋಜಿ ನಾಯ್ಕೋಡಿ, ಜಿಲ್ಲಾ ಅಗ್ನಿಶಾಮಕ ಅಧಿಕಾರಿ ಹನುಮನಗೌಡ ಪಾಟೀಲ, ಕೃಷಿ ಇಲಾಖೆಯ ಜಂಟಿ ನಿರ್ದೇಶಕಿ ಆರ್.ದೇವಿಕಾ, ತಹಶೀಲ್ದಾರ್ ಶಿವರಾಜ ಸೇರಿದಂತೆ ವಿವಿಧ ಇಲಾಖೆಗಳ ಅಧಿಕಾರಿಗಳು ಭಾಗವಹಿಸಿದ್ದರು.
ಸರಕಾರದ ಎಲ್ಲಾ ಇಲಾಖೆಗಳು ಸಮನ್ವಯತೆ, ಸಹಕಾರದಿಂದ ಕಾರ್ಯನಿರ್ವಹಿಸಿದಾಗ ಜಿಲ್ಲೆಯಲ್ಲಿ ಸಂಭವಿಸುವ ನೈಸರ್ಗಿಕ ವಿಕೋಪಗಳನ್ನು ಯಶಸ್ವಿಯಾಗಿ ನಿರ್ವಹಿಸಲು ಸಾಧ್ಯವಾಗುತ್ತದೆ. ಹಾಗಾಗಿ, ಸಂಬಂಧಪಟ್ಟ ಇಲಾಖೆ ಅಧಿಕಾರಿಗಳು ಇಂತಹ ತರಬೇತಿ ಕಾರ್ಯಾಗಾರದ ಸದುಪಯೋಗ ಪಡೆದುಕೊಳ್ಳಬೇಕು.
•ಋಷಿಕೇಶ ಭಗವಾನ ಸೋನವಣೆ,
ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಬಳಂಜದ ಪುಟ್ಟ ಪೋರನ ಕೃಷಿ ಪ್ರೇಮ | ಕಸಿ ಕಟ್ಟುವಿಕೆಯಲ್ಲಿ ಬಲು ಪರಿಣಿತ ಈ 6 ನೇ ತರಗತಿ ಬಾಲಕ
ಎದೆ ನೋವು, ಮಧುಮೇಹ, ಥೈರಾಯ್ಡ್ ,ಸಮಸ್ಯೆಗಳಿಗೆ ಪರಿಹಾರ ತೆಂಗಿನಕಾಯಿ ಹೂವು
ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು
ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?
ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್ |
ಹೊಸ ಸೇರ್ಪಡೆ
SPB: ಎಸ್‌ಪಿಬಿ ಸ್ಮಾರಕ ನಿರ್ಮಾಣಕ್ಕಾಗಿ ಡಿ.8ರಂದು ಸಂಗೀತ ಕಛೇರಿ
Sandalwood: ನಿಮ್ಮ ನಿರೀಕ್ಷೆಗೆ ನಾವು ಜವಾಬ್ದಾರರು: ʼನಾ ನಿನ್ನ ಬಿಡಲಾರೆ’ ಇಂದು ತೆರೆಗೆ
ದಕ್ಷಿಣ ಭಾರತದ ವಿವಿಧೆಡೆ ವಿಧ್ವಂಸಕ ಕೃತ್ಯಕ್ಕೆ ಪರಪ್ಪನ ಅಗ್ರಹಾರದಿಂದಲೇ ಸಂಚು?
Pension Fraud: ಕಲ್ಯಾಣ ಪಿಂಚಣಿ ಲಪಟಾವಣೆ; ಸಿಕ್ಕಿ ಬಿದ್ದ 1,458 ಸರಕಾರಿ ಸಿಬಂದಿ
Daily Horoscope: ಉದ್ಯೋಗ, ವ್ಯವಹಾರಗಳಲ್ಲಿ ಯಶಸ್ಸು, ಅನಿರೀಕ್ಷಿತ ಧನಾಗಮ ಸಂಭವ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.