ಕಂಪ್ಲಿ: ಮೂರು ಸರ್ಕಾರಿ ಇಂಗ್ಲಿಷ್ ಶಾಲೆಗಳಿಗೆ ಅನುಮತಿ
ಜೂ.1ರಿಂದ ಆಂಗ್ಲ ಮಾಧ್ಯಮದಲ್ಲಿ ತರಬೇತಿ ಪಡೆದ ಶಿಕ್ಷಕರಿಂದ ಬೋಧನೆ
Team Udayavani, May 25, 2019, 4:17 PM IST
ಕಂಪ್ಲಿ: ಇಂಗ್ಲಿಷ್ ಮಾಧ್ಯಮ ಆರಂಭವಾಗಲಿರುವ ಸತ್ಯನಾರಾಯಣ ಪೇಟೆ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆ.
ಕಂಪ್ಲಿ: ರಾಜ್ಯ ಮೈತ್ರಿ ಸರ್ಕಾರದ ಮಹತ್ವಾಕಾಂಕ್ಷಿ ಯೋಜನೆಗಳಲ್ಲಿ ಒಂದಾದ ಸರ್ಕಾರಿ ಶಾಲೆಗಳಲ್ಲಿ 1ನೇ ತರಗತಿಯಿಂದ ಆಂಗ್ಲ ಮಾಧ್ಯಮ ತರಗತಿ ಆರಂಭಿಸುವ ಸರ್ಕಾರದ ಯೋಜನೆಯಂತೆ ಪ್ರತಿ ವಿಧಾನಸಭಾ ಕ್ಷೇತ್ರಕ್ಕೆ ನಾಲ್ಕರಂತೆ ಸರ್ಕಾರಿ ಆಂಗ್ಲ ಮಾಧ್ಯಮ ಶಾಲೆಗಳಿಗೆ ಅನುಮತಿ ದೊರಕಿದ್ದು, ಇದರಲ್ಲಿ ಕಂಪ್ಲಿ ತಾಲೂಕಿಗೆ 3 ಸೇರಿದಂತೆ ಕಂಪ್ಲಿ ವಿಧಾನಸಭಾ ಕ್ಷೇತ್ರಕ್ಕೆ 5 ಸರ್ಕಾರಿ ಆಂಗ್ಲ ಮಾಧ್ಯಮ ಶಾಲೆಗಳು ಮಂಜೂರಾಗಿವೆ.
ಇದರಲ್ಲಿ ವಿಧಾನಸಭಾ ಕೇತ್ರದ ಕೇಂದ್ರ ಸ್ಥಾನದಲ್ಲಿ ಕಡ್ಡಾಯವಾಗಿ ಒಂದಿರಬೇಕೆನ್ನುವ ನಿಯಮದಂತೆ ಪಟ್ಟಣದ ಸತ್ಯನಾರಾಯಣ ಪೇಟೆ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆ, ರಾಮಸಾಗರದ ಸರ್ಕಾರಿ ಮಾದರಿ ಹಿರಿಯ ಪ್ರಾಥಮಿಕ ಶಾಲೆ, ಎಮ್ಮಿಗನೂರು ಸಹಿಪ್ರಾ ಶಾಲೆ ಮತ್ತು ಬಾದನಹಟ್ಟಿ, ವದ್ದಟ್ಟಿ ಸಹಿಪ್ರಾ ಶಾಲೆಗಳಲ್ಲಿ ಜೂ.1ರಿಂದ ಆಂಗ್ಲ ಮಾಧ್ಯಮ ಶಾಲೆಗಳು ಆರಂಭವಾಗಲಿವೆ.
ಈ ಮುಂಚಿನ ಪ್ರಕಟಣೆಯಂತೆ ಪಟ್ಟಣದ ಷಾಮಿಯಾಚಂದ್ ಸರ್ಕಾರಿ ಪಪೂ ಬಾಲಕರ ಕಾಲೇಜಿ(ಪ್ರೌಢಶಾಲಾ ವಿಭಾಗ)ಗೆ ಆಂಗ್ಲ ಮಾಧ್ಯಮ ಶಾಲೆ ತೆರೆಯಲು ಆದೇಶ ನೀಡಲಾಗಿತ್ತು. ಆದರೆ ಇಲ್ಲಿ 1ನೇ ತರಗತಿಯಿಂದ ಆಂಗ್ಲ ಮಾಧ್ಯಮ ಶಾಲೆ ಆರಂಭಿಸಲು ಸಾಧ್ಯವಿಲ್ಲದ ಕಾರಣ ಸಮೀಪದಲ್ಲಿರುವ ಸತ್ಯನಾರಾಯಣ ಪೇಟೆಯ ಸಹಿಪ್ರಾ ಶಾಲೆಗೆ ಆಂಗ್ಲ ಮಾಧ್ಯಮ ಶಾಲೆಗೆ ಅನುಮತಿ ಸಿಕ್ಕಿದೆ.
ಉಚಿತ ಆಂಗ್ಲ ಮಾಧ್ಯಮ ಶಾಲೆ: ತಾಲೂಕಿನ ಕಂಪ್ಲಿ ಮತ್ತು ರಾಮಸಾಗರ, ಎಮ್ಮಿಗನೂರು ಮತ್ತು ಕ್ಷೇತ್ರ ವ್ಯಾಪ್ತಿಯ ಬಾದನಹಟ್ಟಿ, ವದ್ದಟ್ಟಿ ಸಹಿಪ್ರಾ ಶಾಲೆಗಳಲ್ಲಿ ಆಂಗ್ಲ ಮಾಧ್ಯಮ 1ನೇ ತರಗತಿ ಆರಂಭಗೊಳ್ಳಲಿವೆ. ಇದರಿಂದಾಗಿ ಬಡ ಮಕ್ಕಳು ಸರ್ಕಾರಿ ಶಾಲೆಗಳಲ್ಲಿ ಉಚಿತ ಮತ್ತು ಕಡ್ಡಾಯ ಶಿಕ್ಷಣದಡಿಯಲ್ಲಿ ಸರ್ಕಾರದ ಎಲ್ಲಾ ಸೌಲಭ್ಯಗಳನ್ನು ಪಡೆದುಕೊಂಡು ಉಚಿತವಾಗಿ ಆಂಗ್ಲ ಮಾಧ್ಯಮ ಶಿಕ್ಷಣ ಪಡೆಯಲು ಸಾಧ್ಯವಾಗಲಿವೆ.
ಶಿಕ್ಷಕರಿಗೆ ಸೂಕ್ತ ತರಬೇತಿ: ಆಂಗ್ಲ ಮಾಧ್ಯಮ ಆರಂಭಗೊಳ್ಳುವ ಸಹಿಪ್ರಾ ಶಾಲೆಗಳ ಆಯ್ದ ಶಿಕ್ಷಕರಿಗೆ ಸದ್ಯ ಡಯೆಟ್‌ನಲ್ಲಿ ತರಬೇತಿ ನೀಡಲಾಗುತ್ತಿದ್ದು, ಜೂ.1ರಿಂದ ಆಂಗ್ಲ ಮಾಧ್ಯಮದಲ್ಲಿ ತರಬೇತಿ ಪಡೆದ ಶಿಕ್ಷಕರು ಬೋಧಿಸಲಿದ್ದಾರೆ.
ಸರ್ಕಾರಿ ಶಾಲೆಗಳಲ್ಲಿನ ಕನ್ನಡ ಮಾಧ್ಯಮದ ಮಕ್ಕಳನ್ನು ಆಂಗ್ಲ ಮಾಧ್ಯಮ ಶಾಲೆಗೆ ಸೇರಿಸುವ ಪಾಲಕರ ಇಂಗಿತ ಅರಿತ ಸರ್ಕಾರವು ಸರ್ಕಾರಿ ಶಾಲೆಗಳಲ್ಲಿ ಆಂಗ್ಲ ಮಾಧ್ಯಮ ಆರಂಭಿಸುವ ಮೂಲಕ ಸರ್ಕಾರಿ ಶಾಲೆಗಳಲ್ಲಿ ಮಕ್ಕಳನ್ನು ಉಳಿಸಿಕೊಳ್ಳಲೂ ಮುಂದಾಗಿದೆಯಲ್ಲದೆ, ಸರ್ಕಾರಿ ಇಂಗ್ಲಿಷ್ ಶಾಲೆಗಳ ಆರಂಭದಿಂದಾಗಿ ಆರ್ಥಿಕವಾಗಿ ಹಿಂದುಳಿದ ಪಾಲಕರಿಗೆ ವರದಾನವಾಗಿದೆ.
ಇಂಗ್ಲಿಷ್ ಶಾಲೆಗೆ ಬೇಕಾದ ಪಠ್ಯ ಪುಸ್ತಕಗಳ ಸಂಗ್ರಹವಿದ್ದು, ಈ ಶಾಲೆಗೆ ದಾಖಲಾಗುವ ಮಕ್ಕಳಿಗೆ ಸಕಾಲಕ್ಕೆ ಪಠ್ಯಪುಸ್ತಕ ಒದಗಿಸುವ ವ್ಯವಸ್ಥೆಯನ್ನು ಶಿಕ್ಷಣ ಇಲಾಖೆ ಕೈಗೊಂಡಿದೆ.
ಶೀಘ್ರದಲ್ಲಿಯೇ ಮುಖ್ಯಗುರುಗಳ ಸಭೆ ಕರೆದು ಆಂಗ್ಲ ಮಾಧ್ಯಮ ಆರಂಭಿಸುವ ವಿಷಯವನ್ನು ಪಾಲಕ, ಪೋಷಕರಿಗೆ ತಿಳಿಸಿ ಹೆಚ್ಚಿನ ಸಂಖ್ಯೆಯಲ್ಲಿ ಆಂಗ್ಲ ಮಾಧ್ಯಮದ 1ನೇ ತರಗತಿಗೆ ಪ್ರವೇಶ ಪಡೆಯಲು ಕರಪತ್ರ ವಿತರಣೆ, ಬ್ಯಾನರ್ ಪ್ರದರ್ಶನ ಸೇರಿದಂತೆ ಸೂಕ್ತ ಕ್ರಮ ಕೈಗೊಳ್ಳಲಾಗುವುದು. ಆಂಗ್ಲ ಮಾಧ್ಯಮಕ್ಕೆ ಮಕ್ಕಳನ್ನು ಸೇರಿಸುವ ಪಾಲಕರು ಸರ್ಕಾರಿ ಶಾಲೆಯಲ್ಲಿ ಆರಂಭಗೊಂಡ ಆಂಗ್ಲ ಮಾಧ್ಯಮಕ್ಕೆ ಸೇರಿಸುವ ಮೂಲಕ ಸರ್ಕಾರದ ಸೌಲಭ್ಯ ಪಡೆದುಕೊಳ್ಳಬೇಕು.
• ಎಲ್.ಡಿ.ಜೋಶಿ,
ಹೊಸಪೇಟೆ ಕ್ಷೇತ್ರ ಶಿಕ್ಷಣಾಧಿಕಾರಿ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Udupi: ಗೀತೋತ್ಸವದಲ್ಲಿ ಹಾಸ್ಯೋತ್ಸವ; ನಕ್ಕು ನಲಿದ ಜನಸ್ತೋಮ
Chikkaballapur: 5 ವರ್ಷದಲ್ಲಿ 514 ತಾಯಿ-ಮಗು ಸಾವಿನ ಪ್ರಕರಣ!
ಪರ್ಯಾಯ ಶ್ರೀ ಪುತ್ತಿಗೆ ಶ್ರೀಕೃಷ್ಣ ಮಠ: ಸ್ಮೃತಿ ಪ್ರತಿಭಾ,ಗೀತಾ ತ್ರಯೋದಶಾವಧಾನ’ ಸಂಪನ್ನ
ಪ್ರಧಾನ ಸಂಪಾದಕ ನ್ಯೂಯಾರ್ಕ್ ನ ಬೆಂಕಿ ಬಸಣ್ಣ ವಿರಚಿತ ‘ವಿಶ್ವಕನ್ನಡ ಕೂಟಗಳ ಕೈಪಿಡಿ’ ಬಿಡುಗಡೆ
Tumkur: ನೀರಾವರಿ ವಿದ್ಯುತ್ ಬಿಲ್ ಪಾವತಿ ಮಾಡುವಂತೆ ಸಿದ್ದಗಂಗಾ ಮಠಕ್ಕೆ ಪತ್ರ
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Mollywood: ಸೂಪರ್ ಸ್ಟಾರ್ ಮೋಹನ್ ಲಾಲ್‌ಗೆ ‘ಆವೇಶಮ್ʼ ನಿರ್ದೇಶಕ ಆ್ಯಕ್ಷನ್ ಕಟ್
ಅಮಿತ್ ಶಾಗೆ ಹುಚ್ಚು ಹಿಡಿದಿದೆ, ರಾಜೀನಾಮೆ ನೀಡುವುದು ಉತ್ತಮ: ಲಾಲು ಪ್ರಸಾದ್ ಯಾದವ್ ಕಿಡಿ
BGT 24: ಆತುರದ ನಿರ್ಧಾರ ಮಾಡಿದ್ರಾ ಅಶ್ವಿನ್ : ಟೀಂ ಇಂಡಿಯಾದಲ್ಲಿ ಕೊಹ್ಲಿ ಬೆಲೆ ಇಷ್ಟೇನಾ?
Belagavi Session ಉದ್ವಿಗ್ನ:ಹೆಬ್ಬಾಳ್ಕರ್ ವಿರುದ್ದ ಅವಾಚ್ಯ ಪದ ಬಳಸಿದರೆ ಸಿ.ಟಿ.ರವಿ?
Year Ender: Horror movies-2024 ರ ಟಾಪ್ 5 ಹಾರರ್ ಚಲನಚಿತ್ರಗಳು
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.