‘ಸಾರ್ವಜನಿಕರಲ್ಲಿ ವಿನಂತಿ’ ; ಈ ಚಿತ್ರವನ್ನು ನೋಡಲು ಮರೆಯದಿರಿ!
Team Udayavani, May 25, 2019, 4:26 PM IST
ಕನ್ನಡದಲ್ಲಿ ಇನ್ನೊಂದು ಪ್ರಯೋಗಾತ್ಮಕ ಚಿತ್ರ ತೆರೆಗೆ ಬರಲು ಸಿದ್ಧವಾಗಿದೆ. ಕೃಪಾ ಸಾಗರ್ ಅವರ ಚೊಚ್ಚಲ ನಿರ್ದೇಶನದಲ್ಲಿ ಮೂಡಿಬರುತ್ತಿರುವ ಈ ಚಿತ್ರಕ್ಕೆ ‘ಸಾರ್ವಜನಿಕರಲ್ಲಿ ವಿನಂತಿ’ ಎಂಬ ಶೀರ್ಷಿಕೆ ಇಡಲಾಗಿದೆ.
ನಮ್ಮ ಸಮಾಜದಲ್ಲಿ ದಿನನಿತ್ಯವೆಂಬಂತೆ ನಡೆಯುವ ಅಪರಾಧ ಘಟನೆಗಳ ಸುತ್ತ ಈ ಚಿತ್ರದ ಕಥೆ ಸುತ್ತುತ್ತದೆ ಎಂಬ ಮಾಹಿತಿಯನ್ನು ಈ ಚಿತ್ರದ ನಿರ್ದೇಶಕರು ನೀಡುತ್ತಾರೆ. ಈ ಪ್ರಯೋಗಾತ್ಮಕ ಚಿತ್ರದಲ್ಲಿ ಹೊಸಬರ ತಂಡವೇ ಕೆಲಸ ಮಾಡಿರುವುದು ಇನ್ನೊಂದು ವಿಶೇಷ. ಮದನ್ ರಾಜಾ ಮತ್ತು ಅಮೃತಾ ಎಂಬ ಹೊಸ ಪ್ರತಿಭೆಗಳು ಈ ಚಿತ್ರದ ಮೂಲಕ ಸ್ಯಾಂಡಲ್ ವುಡ್ ಗೆ ಪರಿಚಯಗೊಳ್ಳುತ್ತಿದ್ದಾರೆ.
ಈ ಚಿತ್ರದಲ್ಲಿ ಪೊಲೀಸ್ ಪಾತ್ರವೇ ಹೈಲೈಟ್ ಆಗಿರುವುದರಿಂದ ಈ ಚಿತ್ರವನ್ನು ಕರುನಾಡಿನ ಸಮಸ್ತ ಪೊಲೀಸ್ ಬಳಗಕ್ಕೆ ಅರ್ಪಿಸುವುದಾಗಿ ನಿರ್ದೇಶಕರು ಹೆಮ್ಮೆಯಿಂದ ಹೇಳುತ್ತಾರೆ.
ಇಷ್ಟು ಮಾತ್ರವಲ್ಲದೇ ಪೊಲೀಸರಿಗಾಗಿಯೇ ಒಂದು ಹಾಡನ್ನು ಕಂಪೋಸ್ ಮಾಡಲಾಗಿದ್ದು ಖ್ಯಾತ ಗಾಯಕ ವಿಜಯ ಪ್ರಕಾಶ್ ಅವರಿಂದ ಹಾಡಿಸಲಾಗಿದೆ. ಈ ಚಿತ್ರದಲ್ಲಿ ಮಂಡ್ಯ ರಮೇಶ್, ರಮೇಶ್ ಪಂಡಿತ್ ಸೇರಿದಂತೆ ಹಲವರು ಈ ಚಿತ್ರದಲ್ಲಿ ಕಾಣಿಸಿಕೊಂಡಿದ್ದಾರೆ.
‘ಸಾರ್ವಜನಿಕರಲ್ಲಿ ವಿನಂತಿ’ ಚಿತ್ರದ ಟ್ರೈಲರ್ ಈಗಾಗಲೇ ಬಿಡುಗಡೆಗೊಂಡಿದೆ, ಮತ್ತು ಸೋಷಿಯಲ್ ಮೀಡಿಯಾದಲ್ಲಿ ಸದ್ದು ಮಾಡುತ್ತಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Megha Movie: ನಾನು ಎಂಟು ಸಾರಿ ಕೇಳಿದ ಕಥೆಯಿದು…: ಕಿರಣ್ ರಾಜ್
Sudeep: ʼಮ್ಯಾಕ್ಸ್ʼ ರಿಲೀಸ್ ದಿನ ಫಿಕ್ಸ್: ಕಿಚ್ಚನ ಸಿಟ್ಟಿಗೆ ಎಚ್ಚೆತ್ತ ನಿರ್ಮಾಣ ಸಂಸ್ಥೆ
BBK11: ಕಣ್ಣೀರುಡುತ್ತಲೇ ಬಿಗ್ ಬಾಸ್ ಮನೆಯಿಂದ ಆಚೆ ಬಂದ ಧರ್ಮ ಕೀರ್ತಿರಾಜ್
Kannada Cinema: ‘ರುದ್ರಾಭಿಷೇಕಂ’ನಲ್ಲಿ ವಿಜಯ್ ರಾಘವೇಂದ್ರ
Health Issue: ಸರ್ಜರಿಗಾಗಿ ಮುಂದಿನ ತಿಂಗಳು ಅಮೆರಿಕಕ್ಕೆ ಹೋಗುವೆ: ನಟ ಶಿವರಾಜ್‌ಕುಮಾರ್
MUST WATCH
ಎದೆ ನೋವು, ಮಧುಮೇಹ, ಥೈರಾಯ್ಡ್ ,ಸಮಸ್ಯೆಗಳಿಗೆ ಪರಿಹಾರ ತೆಂಗಿನಕಾಯಿ ಹೂವು
ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು
ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?
ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್ |
ಕೊಲ್ಲೂರಿನಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಡಿಸಿಎಂ ಡಿ ಕೆ ಶಿವಕುಮಾರ್
ಹೊಸ ಸೇರ್ಪಡೆ
Election: ಶಿಂಧೆ ವಿರುದ್ಧ ಸೋತಿದ್ದ ಕಾಂಗ್ರೆಸ್ ಬಂಡಾಯ ಅಭ್ಯರ್ಥಿ ಶಿವಸೇನೆಗೆ
warrant: ಇಸ್ರೇಲಿ ನಾಯಕರಿಗೆ ವಾರಂಟ್ ಬೇಡ, ಗಲ್ಲು ವಿಧಿಸಿ: ಇರಾನ್
Gold Price Decline: ಚಿನ್ನದ ದರ ಮತ್ತೆ 1,000 ರೂ.ಇಳಿಕೆ: 10 ಗ್ರಾಂಗೆ 78,550 ರೂ.
Assembly Election: ನಾನು ಪ್ರಚಾರ ಮಾಡದ್ದಕ್ಕೆ ನೀನು ಶಾಸಕನಾದೆ: ಸಂಬಂಧಿಗೆ ಅಜಿತ್
Scheme: ದಿಲ್ಲಿಯಲ್ಲಿ ಆಮ್ ಆದ್ಮಿ ಸರಕಾರ-ಬಿಜೆಪಿ ಮಧ್ಯೆ ವೃದ್ಧಾಪ್ಯ ವೇತನ ಕದನ!
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.