ಪ್ರತಿ ನಿತ್ಯಾ ರಾಮ್‌

Team Udayavani, May 26, 2019, 6:00 AM IST

RAM

ನೀವೇನಾದರೂ ಕಿರುತೆರೆ ವೀಕ್ಷಕರಾಗಿದ್ದಾರೆ, ಧಾರಾವಾಹಿ ಪ್ರಿಯರಾಗಿದ್ದರೆ, ನಿತ್ಯಾ ರಾಮ್‌ ಎನ್ನುವ ಈ ಚೆಲುವೆಯನ್ನ ಖಂಡಿತ ನೋಡಿರುತ್ತೀರಿ. ತನ್ನ ಧಾರಾವಾಹಿಗಳ ಮೂಲಕವೇ ಅಸಂಖ್ಯಾತ ಕಿರುತೆರೆ ಪ್ರೇಕ್ಷಕರ ಮನಗೆದ್ದ ನಿತ್ಯಾರಾಮ್‌, ಕನ್ನಡ ಮಾತ್ರವಲ್ಲದೆ ತೆಲುಗು, ತಮಿಳಿನಲ್ಲೂ ಕೂಡ ಜನಪ್ರಿಯ ಕಿರುತೆರೆ ನಟಿ.

ನಿತ್ಯಾ ರಾಮ್‌ ಹುಟ್ಟಿದ್ದು, ಬೆಳೆದಿದ್ದು ಎಲ್ಲವೂ ಬೆಂಗಳೂರಿನಲ್ಲಿ. ಶಾಲಾ ದಿನಗಳಿಂದಲೇ ಕಲೆಯ ಕಡೆಗೆ ಆಸಕ್ತಿಯನ್ನು ಬೆಳೆಸಿಕೊಂಡ ನಿತ್ಯಾ ರಾಮ್‌, ಭರತನಾಟ್ಯ ಕಲಾವಿದೆ ಕೂಡ ಹೌದು. ಬಯೋ ಟೆಕ್ನಾಲಜಿಯಲ್ಲಿ ಪದವಿ ಪಡೆದ ನಿತ್ಯಾ ಬಳಿಕ ತನ್ನ ಆಸೆಯಂತೆ ಅಭಿನಯದ ಕಡೆಗೆ ಮುಖ ಮಾಡಿದರು.

2010ರಲ್ಲಿ ಜೀ ಕನ್ನಡ ವಾಹಿನಿಯಲ್ಲಿ ಪ್ರಸಾರವಾಗುತ್ತಿದ್ದ ಬೆಂಕಿಯಲ್ಲಿ ಆರಳಿದ ಹೂವು ಧಾರಾವಾಹಿಯ ಮೂಲಕ ಕಿರುತೆರೆಗೆ ಪಾದಾರ್ಪಣೆ ಮಾಡಿದ ನಿತ್ಯಾ, ನಿಧಾನವಾಗಿ ತನ್ನ ಅಭಿನಯದ ಮೂಲಕ ಕಿರುತೆರೆ ಪ್ರೇಕ್ಷಕರ ಮನೆ ಮಾತಾದರು. ಬಳಿಕ ಕರ್ಪೂರದ ಗೊಂಬೆ, ರಾಜಕುಮಾರಿ, ಎರಡು ಕನಸು ಹಾಗೂ ಗಿರಿಜಾ ಕಲ್ಯಾಣ ಮೊದಲಾದ ಧಾರಾವಾಹಿಗಳಲ್ಲಿ ನಟಿಸಿ ಸೈ ಎನಿಸಿಕೊಂಡ ನಿತ್ಯಾ, ಕಿರುತೆರೆಯಲ್ಲಿ ತನ್ನ ಸ್ಥಾನವನ್ನು ಭದ್ರಪಡಿಸಿಕೊಂಡರು. ನಂತರ ತೆಲುಗು ಮತ್ತು ತಮಿಳಿನತ್ತ ವಾಲಿದ ನಿತ್ಯಾಗೆ ಅಲ್ಲಿ ಪ್ರಸಾರವಾಗುತ್ತಿದ್ದ ಮುದ್ದು ಬಿಡ್ಡ, ಅಮ್ಮ ನಾ ಕೊಡಲ, ಅವಳ್‌ ಧಾರಾವಾಹಿಗಳು ಸಾಕಷ್ಟು ಹೆಸರು ತಂದುಕೊಟ್ಟವು.

ಕಿರುತೆರೆಯಲ್ಲಿ ಸಾಕಷ್ಟು ಜನಪ್ರಿಯ ಜೊತೆಗೆ ಬ್ಯುಸಿಯಾಗಿರುವಾಗಲೇ ಹಿರಿತೆರೆಯತ್ತ ಮುಖ ಮಾಡಿದ ನಿತ್ಯಾ ರಾಮ್‌, ಸಾಕಷ್ಟು ನಿರೀಕ್ಷೆಯೊಂದಿಗೆ ಮುದ್ದು ಮನಸೆ ಚಿತ್ರದಲ್ಲಿ ಆರು ಗೌಡಗೆ ನಾಯಕಿಯಾಗಿ ಬೆಳ್ಳೆತೆರೆಗೆ ಪಾದಾರ್ಪಣೆ ಮಾಡಿದರು. ಆದರೆ, ಮುದ್ದು ಮನಸೆ ಚಿತ್ರದ ಬಗ್ಗೆ ಒಂದಷ್ಟು ಮಿಶ್ರ ಪ್ರತಿಕ್ರಿಯೆಗಳು ವ್ಯಕ್ತವಾದರೂ, ಚಿತ್ರ ಬಾಕ್ಸಾಫೀಸ್‌ನಲ್ಲಿ ಸದ್ದು ಮಾಡಲಿಲ್ಲ. ಬಳಿಕ ಒಂದಷ್ಟು ಚಿತ್ರಗಳಲ್ಲಿ ನಿತ್ಯಾ ರಾಮ್‌ ನಾಯಕಿಯಾಗಿ ಅಭಿನಯಿಸಲಿದ್ದಾರೆ ಎಂಬ ಸುದ್ದಿ ಚಿತ್ರರಂಗದಲ್ಲಿ ಕೆಲಕಾಲ ಹರಿದಾಡಿದ್ದರೂ, ದುರದೃಷ್ಟವಶಾತ್‌ ನಿತ್ಯಾ ಅಭಿನಯದ ಯಾವ ಚಿತ್ರಗಳೂ ಸೆಟ್ಟೇರಲೇ ಇಲ್ಲ.

ಆನಂತರ ಬ್ಯಾಕ್‌ ಟು ಫೆವಿಲಿಯನ್‌ ಎನ್ನುವಂತೆ, ಮತ್ತೆ ಕಿರುತೆರೆಗೆ ಮರಳಿದ ನಿತ್ಯಾರಾಮ್‌ ಅಲ್ಲಿಯೇ ಬ್ಯುಸಿಯಾಗಿದ್ದಾರೆ. ಸದ್ಯ ಕಿರುತೆರೆ ವಾಹಿನಿಯೊಂದರಲ್ಲಿ ಕನ್ನಡ ಮತ್ತು ತಮಿಳಿನಲ್ಲಿ ಪ್ರಸಾರವಾಗುತ್ತಿರುವ ನಂದಿನಿ ಧಾರಾವಾಹಿಯಲ್ಲಿ ಮುಖ್ಯ ಪಾತ್ರದಲ್ಲಿ ಅಭಿನಯಿ ಸುತ್ತಿರುವ ನಿತ್ಯಾ ರಾಮ್‌, ಕೆಲ ಕಾರ್ಯಕ್ರಮಗಳಲ್ಲಿ ನಿರೂಪಕಿಯಾಗಿಯೂ ಕಾಣಿಸಿಕೊಳ್ಳುತ್ತಿದ್ದಾರೆ. ಒಟ್ಟಾರೆ ನಿತ್ಯಾರಾಮ್‌ ಕಿರುತೆರೆಯಲ್ಲಿ ಬಹುಬೇಡಿಕೆಯ ನಟಿಯಾದರೆ, ನಿತ್ಯಾ ರಾಮ್‌ ಸೋದರಿ ರಚಿತಾ ರಾಮ್‌ ಕನ್ನಡ ಚಿತ್ರರಂಗದಲ್ಲಿ ಬಹುಬೇಡಿಕೆಯ ನಟಿಯಾಗಿ ಮಿಂಚುತ್ತಿದ್ದಾರೆ.

ಟಾಪ್ ನ್ಯೂಸ್

Sulya-Elephant

Sulya: ಆನೆಗುಂಡಿ: ಹೆದ್ದಾರಿ ಬದಿ ಎರಡು ಕಾಡಾನೆ ಸಂಚಾರ

Udupi: ಗೀತಾರ್ಥ ಚಿಂತನೆ-92: ಮಾನಸಿಕ ನಿದ್ದೆಯಿಂದ ಹೊರಬರಲು “ಉತ್ತಿಷ್ಠ’ ಕರೆ

Udupi: ಗೀತಾರ್ಥ ಚಿಂತನೆ-92: ಮಾನಸಿಕ ನಿದ್ದೆಯಿಂದ ಹೊರಬರಲು “ಉತ್ತಿಷ್ಠ’ ಕರೆ

America; ಮೈಸೂರು ಯೋಗ ಗುರು ಶರತ್‌ ಜೋಯಿಸ್‌ ನಿಧನ

America; ಮೈಸೂರು ಯೋಗ ಗುರು ಶರತ್‌ ಜೋಯಿಸ್‌ ನಿಧನ

Priyank Kharge: ಇ-ಸ್ವತ್ತು ಗೊಂದಲ ನಿವಾರಣೆಗೆ ಕಾರ್ಯಪಡೆ

Priyank Kharge: ಇ-ಸ್ವತ್ತು ಗೊಂದಲ ನಿವಾರಣೆಗೆ ಕಾರ್ಯಪಡೆ

JDS protest: ಎಚ್‌ಡಿಕೆ ಕರಿಯ: ಜಮೀರ್‌ ವಿರುದ್ಧ ಆಕ್ರೋಶ; ಸಂಪುಟದಿಂದ ಕೈಬಿಡಲು ಆಗ್ರಹ

JDS protest: ಎಚ್‌ಡಿಕೆ ಕರಿಯ: ಜಮೀರ್‌ ವಿರುದ್ಧ ಆಕ್ರೋಶ; ಸಂಪುಟದಿಂದ ಕೈಬಿಡಲು ಆಗ್ರಹ

ಚುನಾವಣೆ ಹೊತ್ತಲ್ಲೇ ಗೃಹಲಕ್ಷ್ಮಿ ಹಣ ಜಮೆ: ಬೊಮ್ಮಾಯಿ ಆಕ್ಷೇಪಚುನಾವಣೆ ಹೊತ್ತಲ್ಲೇ ಗೃಹಲಕ್ಷ್ಮಿ ಹಣ ಜಮೆ: ಬೊಮ್ಮಾಯಿ ಆಕ್ಷೇಪ

BY Election; ಹೊತ್ತಲ್ಲೇ ಗೃಹಲಕ್ಷ್ಮಿ ಹಣ ಜಮೆ: ಬೊಮ್ಮಾಯಿ ಆಕ್ಷೇಪ

Uddhav Thackeray’s bag inspection by election commission, controversy

Maha Election; ಚು.ಆಯೋಗದಿಂದ ಉದ್ಧವ್‌ ಠಾಕ್ರೆ ಬ್ಯಾಗ್‌ ಪರಿಶೀಲನೆ, ವಿವಾದ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Jnanpith Award: ಭೃಂಗದ ಬೆನ್ನೇರಿ ಬಂತು ಜ್ಞಾನಪೀಠ!

Jnanpith Award: ಭೃಂಗದ ಬೆನ್ನೇರಿ ಬಂತು ಜ್ಞಾನಪೀಠ!

6

ಐರನ್‌ ಮ್ಯಾನ್: ರೀಲ್‌ ಅಲ್ಲ, ರಿಯಲ್‌ ಹೀರೋಗಳ ಕಥೆ!

ಹೆಸರಾಯಿತು ಕರ್ನಾಟಕ: ಮರು ನಾಮಕರಣ ಹೋರಾಟದ ಆ ದಿನಗಳು…

ಹೆಸರಾಯಿತು ಕರ್ನಾಟಕ: ಮರು ನಾಮಕರಣ ಹೋರಾಟದ ಆ ದಿನಗಳು…

11

Kannada Rajyotsava: ನಿಂತ ನೆಲವೇ ಕರ್ನಾಟಕ!

ಎಲ್ಲಿಂದಲೋ ಬಂದು ಇಲ್ಲಿನವರೇ ಆದರು!: ಪುಸ್ತಕ ಸೇವೆಯ ಕನಸು, ಸಪ್ನದ ಮೂಲಕ ನನಸು

ಎಲ್ಲಿಂದಲೋ ಬಂದು ಇಲ್ಲಿನವರೇ ಆದರು!: ಪುಸ್ತಕ ಸೇವೆಯ ಕನಸು, ಸಪ್ನದ ಮೂಲಕ ನನಸು

MUST WATCH

udayavani youtube

ಪುಂಗನೂರು ತಳಿಯ ಹಾಲು ಯಾವೆಲ್ಲ ಕಾಯಿಲೆಗಳನ್ನು ಗುಣಪಡಿಸುತ್ತದೆ ?

udayavani youtube

ಪುಸ್ತಕ ನೋಡುವುದಿಲ್ಲ, ಗುರುವಿಲ್ಲ ಆದರೂ ಕಲೆ ತಾನಾಗಿಯೇ ಒಲಿದು ಬಂತು

udayavani youtube

ನನ್ನ ಎದುರು ನೀನು ಬಚ್ಚ ! ಏಕವಚದಲ್ಲಿ ಕಿತ್ತಾಡಿಕೊಂಡ ಲಾಯರ್ ಜಗದೀಶ್ & ಕುಡುಪಲಿ ನಾಗರಾಜ್

udayavani youtube

ಗೋವಿನ ಪೂಜೆ ಯಾಕಾಗಿ ಮಾಡಬೇಕು?

udayavani youtube

ಮೇಲುಕೋಟೆಯಲ್ಲಿ ದೀಪಾವಳಿ ಆಚರಿಸುವುದಿಲ್ಲ ಎಂಬ ಮಾತು ನಿಜವೋ ಸುಳ್ಳೋ

ಹೊಸ ಸೇರ್ಪಡೆ

Sulya-Elephant

Sulya: ಆನೆಗುಂಡಿ: ಹೆದ್ದಾರಿ ಬದಿ ಎರಡು ಕಾಡಾನೆ ಸಂಚಾರ

Udupi: ಗೀತಾರ್ಥ ಚಿಂತನೆ-92: ಮಾನಸಿಕ ನಿದ್ದೆಯಿಂದ ಹೊರಬರಲು “ಉತ್ತಿಷ್ಠ’ ಕರೆ

Udupi: ಗೀತಾರ್ಥ ಚಿಂತನೆ-92: ಮಾನಸಿಕ ನಿದ್ದೆಯಿಂದ ಹೊರಬರಲು “ಉತ್ತಿಷ್ಠ’ ಕರೆ

America; ಮೈಸೂರು ಯೋಗ ಗುರು ಶರತ್‌ ಜೋಯಿಸ್‌ ನಿಧನ

America; ಮೈಸೂರು ಯೋಗ ಗುರು ಶರತ್‌ ಜೋಯಿಸ್‌ ನಿಧನ

Priyank Kharge: ಇ-ಸ್ವತ್ತು ಗೊಂದಲ ನಿವಾರಣೆಗೆ ಕಾರ್ಯಪಡೆ

Priyank Kharge: ಇ-ಸ್ವತ್ತು ಗೊಂದಲ ನಿವಾರಣೆಗೆ ಕಾರ್ಯಪಡೆ

Karnataka by-election: 3 ಕ್ಷೇತ್ರದಲ್ಲಿ 33.33 ಕೋ.ರೂ. ಮೌಲ್ಯದ ಅಕ್ರಮ ವಶ

Karnataka by-election: 3 ಕ್ಷೇತ್ರದಲ್ಲಿ 33.33 ಕೋ.ರೂ. ಮೌಲ್ಯದ ಅಕ್ರಮ ವಶ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.