ಕಡಿಮೆ ಪರಿಶ್ರಮದ ಬೆಳೆ ದೀವಿ ಹಲಸು

Team Udayavani, May 26, 2019, 6:10 AM IST

ge-gujja

ದೀವಿ ಹಲಸು ಒಂದು ಜನಪ್ರಿಯ ತರಕಾರಿ. ಅವಿಭಜಿತ ದಕ್ಷಿಣ ಕನ್ನಡ, ಮಲೆನಾಡು, ಕೊಡಗು ಮೊದಲಾದ ಕಡೆಗಳಲ್ಲಿ ಇದನ್ನು ತೆಂಗು, ಅಡಿಕೆ ತೋಟಗಳ ಮಧ್ಯೆ ಬೆಳೆಯಲಾಗುತ್ತದೆ.

ಅತ್ಯಂತ ಕಡಿಮೆ ಪರಿಶ್ರಮ, ಖರ್ಚು, ಆರೈಕೆ ಅಗತ್ಯವಿರುವ ದೀವಿ ಹಲಸಿನ ಬೇಸಾಯ ತೀರಾ ಸರಳ. ಮನೆಯ ಸುತ್ತಮುತ್ತ ಖಾಲಿ ಜಾಗ ಇದ್ದಲ್ಲಿ ಇದನ್ನು ನೆಟ್ಟು ಬೆಳೆಸಬಹುದು. ಇದೊಂದು ವಿಶಾಲವಾಗಿ ಕೊಂಬೆಗಳನ್ನು ಚಾಚಿ ಬೆಳೆಯುವ ಮರವಾಗಿದ್ದು, ಸುಮಾರು 15ರಿಂದ 20 ಮೀಟರ್‌ಗಳಷ್ಟು ಎತ್ತರಕ್ಕೆ ಬೆಳೆಯುತ್ತದೆ.

ದೀವಿ ಹಲಸು ಮೋರೆಸಿ ಸಸ್ಯ ಕುಟುಂಬಕ್ಕೆ ಸೇರಿದ್ದು, ಇದರ ವೈಜ್ಞಾನಿಕ ಹೆಸರು ಆಟೋìಕಾರ್ಪಸ್‌ ಆಲ್ತಿಲಿಸ್‌. ಇದು ಹಲಸಿನ ಮರದ ವರ್ಗಕ್ಕೆ ಸೇರಿದರೂ ದೀವಿ ಹಲಸಿನಲ್ಲಿ ಬೀಜಗಳಿಲ್ಲ, ಮೇಣವೂ ಕಡಿಮೆ. ಹಾಗಾಗಿ ಗುಣಧರ್ಮದಲ್ಲಿ ವೈರುಧ್ಯಗಳಿವೆ.

ಕನ್ನಡದಲ್ಲಿ ದೀವಿ ಹಲಸು, ತುಳುವಿನಲ್ಲಿ ಜೀಗುಜ್ಜೆ, ಆಂಗ್ಲ ಭಾಷೆಯಲ್ಲಿ ಬ್ರೆಡ್‌ ಫ್ರುಟ್‌, ತಮಿಳಿನಲ್ಲಿ ಕರಿಪಾಲ ಎಂದು ಕರೆಯುತ್ತಾರೆ. ಬೇರಿನಿಂದಲೇ ಸಸ್ಯಾಭಿವೃದ್ಧಿ ಮಾಡುವ ಕಾರಣ ಬೇರು ಹಲಸು ಎಂದೂ ಕರೆಯಲಾಗುತ್ತದೆ. ದೀವಿ ಹಲಸಿನಲ್ಲಿ ವಿಟಮಿನ್‌ ಸಿ, ಅಯೋಡಿನ್‌, ಕಾರ್ಬನ್‌, ಹೈಡ್ರೇಟ್‌, ಶರ್ಕರ ಪಿಷ್ಟ, ಕ್ಯಾಲ್ಸಿಯಂ, ಕ್ಯಾರೊಟಿನ್‌ ಮೊದಲಾದವುಗಳು ಅಧಿಕ ಪ್ರಮಾಣದಲ್ಲಿವೆ.

ಕೃಷಿ ಹೇಗೆ?
ದೀವಿ ಹಲಸಿನ ಸಸ್ಯಾಭಿವೃದ್ಧಿಯನ್ನು ಸಾಮಾನ್ಯವಾಗಿ ಬೇರುಗಳಿಂದ ಮಾಡಲಾಗುತ್ತದೆ. ನೆಲದ ಆಳದಲ್ಲಿ ಹರಡಿ ಬೆಳೆಯುವ ಗಿಡದ ಬೇರನ್ನು ಸ್ವಲ್ಪ$ ಗಾಯಗೊಳಿಸಿ ಅನಂತರ ಅದನ್ನು ಮಣ್ಣಿನಿಂದ ಮುಚ್ಚಬೇಕು. ತೇವಾಂಶ ನೋಡಿ ಕೊಂಡು ನೀರು ಹಾಕಬೇಕು. ಗಾಯಗೊಳಿಸಿದ ಜಾಗದಿಂದ ಚಿಗುರೊಡೆದು ಗಿಡವಾಗುತ್ತದೆ. ಗಿಡದ ಬೇರನ್ನು ಉಳಿಯುವಂತೆ ಮಾಡಿ, ಬೇರು ಸಹಿತ ಸಸ್ಯವನ್ನು ಕತ್ತರಿಸಿ ಕುಂಡದಲ್ಲಿ ನೆಟ್ಟು ಬೆಳೆಸಿ, ಅನಂತರ ಸೂಕ್ತ ಸ್ಥಳದಲ್ಲಿ ಎರಡು ಅಡಿ ಉದ್ದ ಮತ್ತು ಅಗಲ ಹಾಗೂ ಒಂದೂವರೆ ಅಡಿ ಆಳದ ಗುಂಡಿ ತೋಡಿ ಅದಕ್ಕೆ ಸುಡುಮಣ್ಣು ಮಿಶ್ರ ಮಾಡಿ ನೆಡಬೇಕು. ಬಳಿಕ ಗಿಡ ಚೆನ್ನಾಗಿ ಚಿಗುರುವ ವರೆಗೆ ಪ್ರತಿ ದಿನ ಸ್ವಲ್ಪ ನೀರುಣಿಸುವುದು ಉತ್ತಮ. ಬಳಿಕ ಅದಕ್ಕೆ ಹಟ್ಟಿಗೊಬ್ಬರ, ಸೊಪ್ಪು, ಹಾಕಿದರೆ ಗಿಡ ಚೆನ್ನಾಗಿ ಬೆಳೆಯುವುದು. ಗಿಡನೆಟ್ಟು ನಾಲ್ಕೈದು ವರ್ಷಗಳಲ್ಲಿ ಕಾಯಿ ಬಿಡಲಾರಂಭಿಸುತ್ತದೆ. 15- 20 ವರ್ಷಗಳವರೆಗೂ ಫ‌ಲ ನೀಡುತ್ತದೆ. ಸ್ಥಳೀಯ ತಳಿಯಲ್ಲದೇ ಕಸಿ ಕಟ್ಟುವ ಮೂಲಕ ಕೆಲವೊಂದು ಹೈಬ್ರಿಡ್‌ ತಳಿಗಳನ್ನೂ ಈಗ ಅಭಿವೃದ್ಧಿ ಪಡಿಸಲಾಗಿದೆ.

ಹವಾಗುಣ, ಮಣ್ಣು
ನೀರು ಹರಿಯುತ್ತಿರುವ ಹಳ್ಳಗಳ ಬದಿ, ತೋಟದ ತಂಪು ವಾತಾವರಣ ಬೆಳೆಗೆ ಅವಶ್ಯ. ಬೇಸಗೆಯಲ್ಲಿ ಬಿಸಿಲಿನ ಝಳ ಹೆಚ್ಚಾದರೆ ದೀವಿ ಹಲಸು ಪಕ್ವವಾಗುವ ಮೊದಲೇ ಬಾಡಿ ಬೀಳುವುದುಂಟು. ಕಪ್ಪು, ಕೆಂಪು ಸಹಿತ ಅಧಿಕ ತೇವಾಂಶವಿರುವ ಮಣ್ಣಿನಲ್ಲಿ ಇದು ಚೆನ್ನಾಗಿ ಬೆಳೆಯುತ್ತದೆ.

ಗೊಬ್ಬರ, ಕಾಯಿಲೆ
ಹಟ್ಟಿಗೊಬ್ಬರ, ಆಡಿನ ಹಿಕ್ಕೆ, ಕೋಳಿ ಗೊಬ್ಬರ, ವಿವಿಧ ಹಿಂಡಿಗಳು, ಕುರಿಗೊಬ್ಬರ, ಸುಡುಮಣ್ಣು, ಸೊಪ್ಪು, ಸಾವಯವ ಗೊಬ್ಬರಗಳನ್ನು ಬಳಸಬಹುದು.

ಮಳೆಗಾಲದಲ್ಲಿ ದೀವಿ ಮರದ ಕೊಂಬೆಗಳಿಗೆ ಶಿಲೀಂಧ್ರ ರೋಗ ತಗುಲುವ ಸಾಧ್ಯತೆಯಿದೆ. ಅದರಿಂದ ಕೊಂಬೆಗಳು ಸಾಯಲಾರಂಭಿಸುತ್ತವೆ. ನಿವಾರಣೆಗೆ ಬೋಡೋì ದ್ರಾವಣದ ಸಿಂಪಡಣೆ, ರೋಗ ಬಂದ ಕೊಂಬೆ ಕತ್ತರಿಸಿ ಆ ಜಾಗಕ್ಕೆ ಬೋಡೋì ಮಿಶ್ರಣ ಹಚ್ಚುವುದು ಸೂಕ್ತ.

-  ಗಣೇಶ ಕುಳಮರ್ವ

ಟಾಪ್ ನ್ಯೂಸ್

ಬೆಂಗಳೂರಿನಿಂದ ಹೊರನಾಡು ದೇವಸ್ಥಾನಕ್ಕೆ ಬರುತ್ತಿದ್ದ ವಾಹನ ಪಲ್ಟಿ… ನಾಲ್ವರಿಗೆ ಗಂಭೀರ ಗಾಯ

Mudigere: ಹೊರನಾಡು ದೇವರ ದರ್ಶನಕ್ಕೆ ಬರುತ್ತಿದ್ದವರ ವಾಹನ ಪಲ್ಟಿ… ನಾಲ್ವರಿಗೆ ಗಂಭೀರ ಗಾಯ

Kundapura: ನಾಪತ್ತೆಯಾಗಿದ್ದ ಬೋಟ್ ರೈಡರ್ ಶವ 36 ಗಂಟೆಗಳ ಬಳಿಕ ಪತ್ತೆ

Trasi: ನಾಪತ್ತೆಯಾಗಿದ್ದ ಬೋಟ್ ರೈಡರ್ ಶವ 36 ಗಂಟೆಗಳ ಬಳಿಕ ಪತ್ತೆ

Shivamogga: ಭೀಕರ ರಸ್ತೆ ಅಪಘಾತ… ಬೈಕ್ ನಲ್ಲಿದ್ದ ಇಬ್ಬರು ಯುವಕರು ಮೃ*ತ್ಯು

Shivamogga: ತಡರಾತ್ರಿ ಭೀಕರ ರಸ್ತೆ ಅಪಘಾತ… ಬೈಕ್ ನಲ್ಲಿದ್ದ ಇಬ್ಬರು ಯುವಕರು ಮೃ*ತ್ಯು

Plane Mishap: ಲಘು ವಿಮಾನ ಪತನ… ಬ್ರೆಜಿಲ್ ನ ಉದ್ಯಮಿ ಸೇರಿ ಹತ್ತು ಮಂದಿ ಮೃತ್ಯು

Plane Mishap: ಲಘು ವಿಮಾನ ಪತನ… ಬ್ರೆಜಿಲ್ ನ ಉದ್ಯಮಿ ಸೇರಿ ಹತ್ತು ಮಂದಿ ಮೃತ್ಯು

‌BBK11: ಬಾಯಿ ಮುಚ್ಕೊಂಡು ಇರು..‌ ಫೈಯರ್‌ ಬ್ರ್ಯಾಂಡ್ ಚೈತ್ರಾ ಕೋಪಕ್ಕೆ ಮನೆಮಂದಿ ಶಾಕ್.!

‌BBK11: ಬಾಯಿ ಮುಚ್ಕೊಂಡು ಇರು..‌ ಫೈಯರ್‌ ಬ್ರ್ಯಾಂಡ್ ಚೈತ್ರಾ ಕೋಪಕ್ಕೆ ಮನೆಮಂದಿ ಶಾಕ್.!

1-chali

Kashmir cold: 34 ವರ್ಷಗಳಲ್ಲೇ ಕನಿಷ್ಠ ತಾಪಮಾನ ದಾಖಲು!

Hemmadi-Sevantige

Natural Disaster: ಅನಿರೀಕ್ಷಿತ ಮಳೆಗೆ ಸೊರಗಿದ ವಿಶಿಷ್ಟ ಗುಣದ ಹೆಮ್ಮಾಡಿ ಸೇವಂತಿಗೆ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Mandya_SAHITYA

Priority: ಮಂಡ್ಯ ಸಾಹಿತ್ಯ ಸಮ್ಮೇಳನದಲ್ಲಿ ಅವಕಾಶ ವಂಚಿತ ಯಕ್ಷಗಾನ

Mulki-kambla

Mulki: ಕಂಬಳದಿಂದ ಕೃಷಿ, ಧಾರ್ಮಿಕ ನಂಬಿಕೆ ವೃದ್ಧಿ: ನ್ಯಾ. ಎನ್‌. ಸಂತೋಷ್‌ ಹೆಗ್ಡೆ

sand 1

Padubidri: ಮರಳು ಅಕ್ರಮ ಸಾಗಾಟ; ವಶ

6

Mangaluru: ಕ್ರಿಸ್ಮಸ್‌ ಸಂಭ್ರಮ; ‘ಮಿನುಗು ತಾರೆ’ಗಳ ಮೆರುಗು

Mangaluru: Ambedkar – Constitution should not be a tool for anyone: BL Santosh

Mangaluru: ಅಂಬೇಡ್ಕರ್‌ – ಸಂವಿಧಾನ ಯಾರಿಗೂ ಟೂಲ್‌ ಆಗಬಾರದು: ಕೈ ವಿರುದ್ದ ಸಂತೋಷ್‌ ಟೀಕೆ

MUST WATCH

udayavani youtube

ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ

udayavani youtube

ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ

udayavani youtube

ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ

udayavani youtube

ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ

udayavani youtube

ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ

ಹೊಸ ಸೇರ್ಪಡೆ

ಬೆಂಗಳೂರಿನಿಂದ ಹೊರನಾಡು ದೇವಸ್ಥಾನಕ್ಕೆ ಬರುತ್ತಿದ್ದ ವಾಹನ ಪಲ್ಟಿ… ನಾಲ್ವರಿಗೆ ಗಂಭೀರ ಗಾಯ

Mudigere: ಹೊರನಾಡು ದೇವರ ದರ್ಶನಕ್ಕೆ ಬರುತ್ತಿದ್ದವರ ವಾಹನ ಪಲ್ಟಿ… ನಾಲ್ವರಿಗೆ ಗಂಭೀರ ಗಾಯ

Kundapura: ನಾಪತ್ತೆಯಾಗಿದ್ದ ಬೋಟ್ ರೈಡರ್ ಶವ 36 ಗಂಟೆಗಳ ಬಳಿಕ ಪತ್ತೆ

Trasi: ನಾಪತ್ತೆಯಾಗಿದ್ದ ಬೋಟ್ ರೈಡರ್ ಶವ 36 ಗಂಟೆಗಳ ಬಳಿಕ ಪತ್ತೆ

Shivamogga: ಭೀಕರ ರಸ್ತೆ ಅಪಘಾತ… ಬೈಕ್ ನಲ್ಲಿದ್ದ ಇಬ್ಬರು ಯುವಕರು ಮೃ*ತ್ಯು

Shivamogga: ತಡರಾತ್ರಿ ಭೀಕರ ರಸ್ತೆ ಅಪಘಾತ… ಬೈಕ್ ನಲ್ಲಿದ್ದ ಇಬ್ಬರು ಯುವಕರು ಮೃ*ತ್ಯು

Plane Mishap: ಲಘು ವಿಮಾನ ಪತನ… ಬ್ರೆಜಿಲ್ ನ ಉದ್ಯಮಿ ಸೇರಿ ಹತ್ತು ಮಂದಿ ಮೃತ್ಯು

Plane Mishap: ಲಘು ವಿಮಾನ ಪತನ… ಬ್ರೆಜಿಲ್ ನ ಉದ್ಯಮಿ ಸೇರಿ ಹತ್ತು ಮಂದಿ ಮೃತ್ಯು

‌BBK11: ಬಾಯಿ ಮುಚ್ಕೊಂಡು ಇರು..‌ ಫೈಯರ್‌ ಬ್ರ್ಯಾಂಡ್ ಚೈತ್ರಾ ಕೋಪಕ್ಕೆ ಮನೆಮಂದಿ ಶಾಕ್.!

‌BBK11: ಬಾಯಿ ಮುಚ್ಕೊಂಡು ಇರು..‌ ಫೈಯರ್‌ ಬ್ರ್ಯಾಂಡ್ ಚೈತ್ರಾ ಕೋಪಕ್ಕೆ ಮನೆಮಂದಿ ಶಾಕ್.!

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.