ತಲಪಾಡಿ: ವಿಜಯೋತ್ಸವ ವೇಳೆ ಕಲ್ಲುತೂರಾಟ, ಲಾಠಿಚಾರ್ಜ್
Team Udayavani, May 26, 2019, 6:20 AM IST
ಉಳ್ಳಾಲ: ವಿಜಯಿ ಅಭ್ಯರ್ಥಿ ರಾಜ ಮೋಹನ್ ಉಣ್ಣಿತ್ತಾನ್ ಪರ ಮಂಜೇಶ್ವರದ ಮುಸ್ಲಿಂ ಲೀಗ್ ಕಾರ್ಯಕರ್ತರು ತಲಪಾಡಿಯಲ್ಲಿ ವಿಜಯೋತ್ಸವ ಆಚರಿಸುವುದನ್ನು ತಡೆದ ಉಳ್ಳಾಲ ಪೊಲೀಸರ ವಿರುದ್ಧ ಯುಡಿಎಫ್ ಕಾರ್ಯಕರ್ತರು ಕಲ್ಲುತೂರಾಟ ನಡೆಸಿದ ಘಟನೆ ಶನಿವಾರ ಸಂಜೆ ನಡೆದಿದೆ. ಪರಿಸ್ಥಿತಿಯನ್ನು ನಿಯಂತ್ರಿಸಲು ಪೊಲೀಸರು ಲಾಠಿಚಾರ್ಜ್ ನಡೆಸಿ ವಾಹನಗಳನ್ನು ವಶಕ್ಕೆ ತೆಗೆದುಕೊಂಡಿದ್ದಾರೆ.
ಉಣ್ಣಿತ್ತಾನ್ ಜಯ ಗಳಿಸಿದ ಹಿನ್ನೆಲೆಯಲ್ಲಿ ಮುಸ್ಲಿಂ ಲೀಗ್ ಧ್ವಜವನ್ನು ಹಿಡಿದ ನಾಲ್ವರು ಎರಡು ಬೈಕ್‌ಗಳಲ್ಲಿ ತಲಪಾಡಿ ಟೋಲ್‌ಗೇಟ್ ಬಳಿ ಬಂದಾಗ ಸ್ಥಳೀಯರು ವಿರೋಧಿಸಿದ್ದು, ಮಾತಿನ ಚಕಮಕಿ ನಡೆಯಿತು. ಸ್ಥಳೀಯರ ವಿರೋಧದಿಂದ ಮರಳಿದ ತಂಡ ಮಂಜೇಶ್ವರದಲ್ಲಿದ್ದ ಇತರ ಕಾರ್ಯಕರ್ತರಿಗೆ ಮಾಹಿತಿ ನೀಡಿತು. ಆ ಬಳಿಕ ಅವರೆಲ್ಲ ಸುಮಾರು 50 ದ್ವಿಚಕ್ರ ವಾಹನಗಳಲ್ಲಿ ಮುಸ್ಲಿಂ ಲೀಗ್ ಧ್ವಜ ಹಿಡಿದು ತಲಪಾಡಿಗೆ ಆಗಮಿಸಿ ವಿಜಯೋತ್ಸವ ಆಚರಿಸಿದರು. ಈ ಸಂದರ್ಭ ಪೊಲೀಸರು ಕಾರ್ಯಕರ್ತರನ್ನು ಹಿಂದಕ್ಕೆ ಹೋಗುವಂತೆ ತಿಳಿಸಿದರೂ ಕೇಳಲಿಲ್ಲ. ಬದಲಾಗಿ ಪೊಲೀಸರು ಮತ್ತು ಪೊಲೀಸ್ ವಾಹನದ ಮೇಲೆ ಕಲ್ಲು ತೂರಾಟ ನಡೆಸಲು ಮುಂದಾದರು. ಈ ವೇಳೆ ಪರಿಸ್ಥಿತಿಯನ್ನು ಹತೋಟಿಗೆ ತರಲು ಪೊಲೀಸರು ಲಾಠಿ ಚಾರ್ಜ್ ನಡೆಸಿ ಹಲವು ವಾಹನಗಳನ್ನು ವಶಕ್ಕೆ ತೆಗೆದುಕೊಂಡರು.
ಬಸ್‌ಗೆ ಕಲ್ಲು ತೂರಾಟ
ಈ ಘಟನೆಯ ಬಳಿಕ ಕಾರ್ಯಕರ್ತರು ಕೇರಳ ಗಡಿಪ್ರದೇಶದಲ್ಲಿ ಮೂಡಿಗೆರೆಯಿಂದ ತ್ರಿಕ್ಕರಿಪುರ ವಿವಾಹ ಸಮಾರಂಭಕ್ಕೆ ತೆರಳುತ್ತಿದ್ದ ಕರ್ನಾಟಕ ಸಾರಿಗೆ ಬಸ್ಸಿಗೆ ಕಲ್ಲೆಸೆದು ಗಾಜು ಪುಡಿ ಮಾಡಿದರು. ಕೇರಳ ಪೊಲೀಸರು ಬಸ್‌ಗೆ ರಕ್ಷಣೆ ನೀಡಿ ಕಾರ್ಯಕರ್ತರನ್ನು ಚದುರಿಸಿದರು.
ಘಟನೆ ನಡೆದ ಸ್ಥಳಕ್ಕೆ ಆಗಮಿಸಿದ ಮಂಗಳೂರು ಪೊಲೀಸ್ ಕಮಿಷನರ್ ಸಂದೀಪ್ ಪಾಟೀಲ್ ಅವರು ತಪ್ಪಿತಸ್ಥರ ವಿರುದ್ಧ ಕಠಿನ ಕ್ರಮ ಕೈಗೊಳ್ಳುವಂತೆ ಪೊಲೀಸರಿಗೆ ಮಾರ್ಗದರ್ಶನ ನೀಡಿದರು. ಈ ನಿಟ್ಟಿನಲ್ಲಿ ಕೇರಳ ಪೊಲೀಸರೊಂದಿಗೆ ಚರ್ಚೆ ನಡೆಸಿದರು. ಡಿಸಿಪಿ ಹನುಮಂತರಾಯ, ಎಸಿಪಿ ರಾಮರಾವ್, ಇನ್‌ಸ್ಪೆಕ್ಟರ್ ಗೋಪಿಕೃಷ್ಣ ಟಿ.ಆರ್., ಎಸ್.ಐ. ಗುರುವಪ್ಪ ಕಾಂತಿ ಸ್ಥಳದಲ್ಲಿದ್ದು, ಕೆಎಸ್‌ಆರ್‌ಪಿ ಪೊಲೀಸ್ ಪಡೆಯನ್ನು ತಲಪಾಡಿ ಗಡಿಪ್ರದೇಶದಲ್ಲಿ ನಿಯೋಜಿಸಲಾಗಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಹೊಸ ಸೇರ್ಪಡೆ
Maharashtra; ನಮ್ಮ ಮೈತ್ರಿ ಕೂಟ ಗೆದ್ದು ಮಹಾರಾಷ್ಟ್ರ ಉಳಿಸಲಿದೆ: ಡಿ.ಕೆ. ಶಿವಕುಮಾರ್
Mangaluru: ಕುಮಾರಸ್ವಾಮಿ ಯಾವಾಗ, ಹೇಗೆ ಬೇಕಾದರೂ ಟರ್ನ್ ಆಗುತ್ತಾರೆ: ಜಮೀರ್ ಅಹಮದ್
Kollywood: ಬಹಿರಂಗ ಪತ್ರ ಬರೆದು ಧನುಷ್ ಮೇಲೆ ರೇಗಾಡಿದ ನಟಿ ನಯನತಾರಾ; ಆಗಿರುವುದೇನು?
Nara Ramamurthy: ಆಂಧ್ರ ಸಿಎಂ ಚಂದ್ರಬಾಬು ನಾಯ್ಡು ಸಹೋದರ ನಾರಾ ರಾಮಮೂರ್ತಿ ನಾಯ್ಡು ನಿಧನ
Actor Darshan ವಿರುದ್ದ ಸುಪ್ರೀಂನಲ್ಲಿ ಮೇಲ್ಮನವಿ: ಬೆಂಗ್ಳೂರು ಕಮೀಷನರ್
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.