ಜಿಎಸ್‌ಟಿಯಿಂದ ಹೊರಗುಳಿದವರ ಮೇಲೆ ಕಟ್ಟುನಿಟ್ಟಿನ ಕ್ರಮ

• ಸರ್ಟಿಫಿಕೇಟ್ ಜಿಎಸ್‌ಟಿ ಕೋರ್ಸ್‌ ಉದ್ಘಾಟನೆ • ಜನರ ಅನುಮಾನಗಳನ್ನು ನಿವಾರಿಸುವಲ್ಲಿ ಲೆಕ್ಕ ಪರಿಶೋಧಕರ ಪಾತ್ರ ಮಹತ್ವದ್ದು: ಡಾ| ರಶ್ಮಿ

Team Udayavani, May 26, 2019, 9:45 AM IST

hubali-tdy-2..

ಹುಬ್ಬಳ್ಳಿ: ನಗರದ ಭಾರತೀಯ ಲೆಕ್ಕಪರಿಶೋಧಕರ ಸಂಸ್ಥೆಯ ಐಸಿಎಐ ಭವನದಲ್ಲಿ ನಡೆದ ಕಾರ್ಯಕ್ರಮದಲ್ಲಿ ಕೇಂದ್ರೀಯ ತೆರಿಗೆ ಇಲಾಖೆ ಧಾರವಾಡ ವಿಭಾಗದ ಉಪ ಆಯುಕ್ತರಾದ ಡಾ| ರಶ್ಮಿ 'ಜಿಎಸ್‌ಟಿ ಸರ್ಟಿಫಿಕೇಟ್ ಕೋರ್ಸ್‌' ಉದ್ಘಾಟಿಸಿದರು.

ಹುಬ್ಬಳ್ಳಿ: ಜಿಎಸ್‌ಟಿ (ಸರಕು ಹಾಗೂ ಸೇವಾ ತೆರಿಗೆ) ಜಾಲದಿಂದ ಹೊರಗುಳಿದ ವ್ಯಾಪಾರಿಗಳು ಹಾಗೂ ಉದ್ಯಮಿಗಳ ಮೇಲೆ ಕಟ್ಟುನಿಟ್ಟಿನ ಕ್ರಮ ಕೈಗೊಳ್ಳಲಾಗುತ್ತಿದ್ದು, ದಂಡ, ಶಿಕ್ಷೆ ತಪ್ಪಿಸಿಕೊಳ್ಳಲು ಸಮರ್ಪಕವಾಗಿ ತೆರಿಗೆ ಭರಿಸುವುದು ಕಡ್ಡಾಯ ಎಂದು ಕೇಂದ್ರೀಯ ತೆರಿಗೆ ಇಲಾಖೆ ಧಾರವಾಡ ವಿಭಾಗದ ಉಪ ಆಯುಕ್ತರಾದ ಡಾ| ರಶ್ಮಿ ಹೇಳಿದರು.

ಕೇಶ್ವಾಪುರದ ಭಾರತೀಯ ಲೆಕ್ಕಪರಿಶೋಧಕರ ಸಂಸ್ಥೆಯ ಐಸಿಎಐ ಭವನದಲ್ಲಿ ಶನಿವಾರ ನಡೆದ ಕಾರ್ಯಕ್ರಮದಲ್ಲಿ ‘ಸರ್ಟಿಫಿಕೇಟ್ ಜಿಎಸ್‌ಟಿ ಕೋರ್ಸ್‌’ ಉದ್ಘಾಟಿಸಿ ಅವರು ಮಾತನಾಡಿದರು. ಯಾವುದೇ ವ್ಯಾಪಾರಸ್ಥರು ಸರಕಾರಕ್ಕೆ ಮೋಸ ಮಾಡಲು ಸಾಧ್ಯವಿಲ್ಲ. ಎಲ್ಲ ವ್ಯಾಪಾರಿಗಳ ವಹಿವಾಟಿನ ಮಾಹಿತಿ ಇಲಾಖೆಗೆ ಇರುತ್ತದೆ. ಜಿಎಸ್‌ಟಿ ವ್ಯಾಪ್ತಿಗೆ ಬರುವ ಎಲ್ಲ ವ್ಯಾಪಾರಿಗಳು ಹಾಗೂ ವಹಿವಾಟುದಾರರು ಸರಿಯಾಗಿ ತೆರಿಗೆ ಪಾವತಿಸಬೇಕು. ಎಲ್ಲ ವ್ಯಾಪಾರಿಗಳು ಜಿಎಸ್‌ಟಿ ನೋಂದಣಿ ಮಾಡಿಕೊಳ್ಳುವುದು ಅವಶ್ಯ. ವ್ಯವಹಾರ ಇರಲಿ ಅಥವಾ ಇಲ್ಲದಿರಲಿ ಪ್ರತಿ ತಿಂಗಳು 20ನೇ ದಿನಾಂಕದೊಳಗೆ ರಿಟರ್ನ್ ದಾಖಲಿಸುವುದು ಕಡ್ಡಾಯವಾಗಿದೆ ಎಂದರು.

ಇ-ವೇ ಬಿಲ್ ಅನ್ನು 3ಬಿಯಲ್ಲಿ ತೋರಿಸುವುದು ಅವಶ್ಯಕ. ಜಿಎಸ್‌ಟಿ ಅರ್‌-1 ಹಾಗೂ ಬಿ-3 ಇವುಗಳ ಲೆಕ್ಕದಲ್ಲಿ ಹೊಂದಾಣಿಕೆ ಇರಬೇಕು. ಜಿಎಸ್‌ಟಿ ಕಾಯ್ದೆಯಲ್ಲಿ ಸಾಕಷ್ಟು ಮಾರ್ಪಾಡು ಮಾಡಲಾಗುತ್ತಿದೆ. ಇದನ್ನು ಇನ್ನಷ್ಟು ಸರಳೀಕರಣಗೊಳಿಸಲಾಗುತ್ತಿದೆ. ಆದ್ದರಿಂದ ಜಿಎಸ್‌ಟಿ ಬಗೆಗಿನ ಅನುಮಾನಗಳನ್ನು ನಿವಾರಿಸುವಲ್ಲಿ ಲೆಕ್ಕಪರಿಶೋಧಕರ ಪಾತ್ರ ಮಹತ್ವದ್ದಾಗಿದೆ ಎಂದು ಹೇಳಿದರು.

ಜಿಎಸ್‌ಟಿ ಅನುಷ್ಠಾನಕ್ಕೆ ತಂದ ಸರಕಾರವೇ ಮತ್ತೆ ಅಧಿಕಾರ ಪಡೆದಿರುವುದರಿಂದ ಜಿಎಸ್‌ಟಿಯನ್ನು ಇನ್ನಷ್ಟು ಪರಿಣಾಮಕಾರಿಯಾಗಿ ಅನುಷ್ಠಾನಗೊಳಿಸುವ ನಿರೀಕ್ಷೆಯಿದೆ. ಸರಕಾರ ಜನರ ಮೇಲೆ ವಿಶ್ವಾಸ ಇಟ್ಟಿದ್ದು, ಅವರು ನೀಡಿದ ಮಾಹಿತಿಯನ್ನು ಸಂಪೂರ್ಣವಾಗಿ ನಂಬುತ್ತದೆ. ಆದರೆ ತಪ್ಪು ಮಾಹಿತಿ ನೀಡಿರುವುದು ಕಂಡುಬಂದರೆ ನಿರ್ದಾಕ್ಷಿಣ್ಯ ಕ್ರಮ ಕೈಗೊಳ್ಳಲಾಗುವುದು. ಇದರಿಂದ ವ್ಯಾಪಾರಿಗಳ ಲಾಭದ ಪ್ರಮಾಣ ಕುಸಿಯಬಹುದಾಗಿದೆ ಎಂದರು.

ಭಾರತೀಯ ಲೆಕ್ಕ ಪರಿಶೋಧಕರ ಸಂಸ್ಥೆ ಹುಬ್ಬಳ್ಳಿ ಶಾಖೆ ಚೇರ್ಮನ್‌ ಕೆ.ವಿ. ದೇಶಪಾಂಡೆ ಮಾತನಾಡಿ, ಜಿಎಸ್‌ಟಿ ಹಾಗೂ ಪರೋಕ್ಷ ತೆರಿಗೆ ಸಮಿತಿ ನೋಯ್ಡಾದಿಂದ ಅನುಮತಿ ಪಡೆದುಕೊಂಡು ಜಿಎಸ್‌ಟಿ ಸರ್ಟಿಫಿಕೇಟ್ ನೂತನ ಕೋರ್ಸ್‌ ಆರಂಭಿಸಲಾಗುತ್ತಿದೆ. 30 ಜನರಿಗೆ ಪ್ರವೇಶಕ್ಕೆ ಅವಕಾಶ ನೀಡಲಾಗಿದೆ ಎಂದರು. ಸಂಪನ್ಮೂಲ ವ್ಯಕ್ತಿಗಳಾದ ಸೌರಭ ಸಿಂಘಾಲ್, ಎಚ್.ಎನ್‌. ಆಡಿನವರ ಇದ್ದರು.

ಟಾಪ್ ನ್ಯೂಸ್

1-ree

Karkala; ಕಸದಲ್ಲಿದ್ದ 25 ಗ್ರಾಂ ಚಿನ್ನದ ಸರ ಮರಳಿಸಿ ಪ್ರಾಮಾಣಿಕತೆ ಮೆರೆದ SLRM ಸಿಬಂದಿಗಳು

BBK11: ಬಿಗ್‌ ಬಾಸ್‌ ಮನೆಯಿಂದ ಹೊರಗಡೆ ಬರಲು ನಿರ್ಧರಿಸಿದ ಚೈತ್ರಾ ಕುಂದಾಪುರ

BBK11: ಬಿಗ್‌ ಬಾಸ್‌ ಮನೆಯಿಂದ ಹೊರಗಡೆ ಬರಲು ನಿರ್ಧರಿಸಿದ ಚೈತ್ರಾ ಕುಂದಾಪುರ

Keerthy Suresh: ಪೋಷಕರು ನಿಶ್ಚಯಿಸಿದ ಹುಡುಗನ ಜತೆ ನಡೆಯಲಿದೆ ಕೀರ್ತಿ ಸುರೇಶ್‌ ಮದುವೆ?

Keerthy Suresh: ಪೋಷಕರು ನಿಶ್ಚಯಿಸಿದ ಹುಡುಗನ ಜತೆ ನಡೆಯಲಿದೆ ಕೀರ್ತಿ ಸುರೇಶ್‌ ಮದುವೆ?

ಕಿರುತೆರೆ To ಹಿರಿತೆರೆ.. ಧಾರಾವಾಹಿಯಿಂದ ನೇಮ್‌ ಪಡೆದು ಸಿನಿಮಾದಲ್ಲಿ ಫೇಮ್‌ ಆದ ಕಲಾವಿದರು

ಕಿರುತೆರೆ To ಹಿರಿತೆರೆ.. ಧಾರಾವಾಹಿಯಿಂದ ನೇಮ್‌ ಪಡೆದು ಸಿನಿಮಾದಲ್ಲಿ ಫೇಮ್‌ ಆದ ಕಲಾವಿದರು

ec-aa

Poll code violations ; ಖರ್ಗೆ, ನಡ್ಡಾ ಪ್ರತಿಕ್ರಿಯೆ ಕೇಳಿದ ಚುನಾವಣ ಆಯೋಗ

Gundlupet-Arrest

Gundlupet: ಜಿಂಕೆ ಮಾಂಸ ಸಾಗಾಣೆ: ಐವರ ಬಂಧಿಸಿದ ಅರಣ್ಯಾಧಿಕಾರಿಗಳು

amit Shah (2)

Rahul Gandhi ಭರವಸೆಗಳನ್ನು ನೀಡುತ್ತಾರೆ ಮತ್ತು ವಿದೇಶಕ್ಕೆ ಹಾರುತ್ತಾರೆ: ಶಾ ವಾಗ್ದಾಳಿ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Hubli: ವಿದ್ಯಾರ್ಥಿನಿಗೆ ಚುಡಾಯಿಸಿದ ಇಬ್ಬರು, ಸಹಕರಿಸಿದ ಮೂವರ ಬಂಧನ

Hubli: ವಿದ್ಯಾರ್ಥಿನಿಗೆ ಚುಡಾಯಿಸಿದ ಇಬ್ಬರು, ಸಹಕರಿಸಿದ ಮೂವರ ಬಂಧನ

KLE Technological University: Awarded Honorary Doctorate to Murugesh Nirani

KLE Technological University: ಮುರುಗೇಶ್‌ ನಿರಾಣಿ ಅವರಿಗೆ ಗೌರವ ಡಾಕ್ಟರೇಟ್ ಪ್ರದಾನ

5-

NABARD ನಿರ್ಧಾರದಿಂದ ಕೃಷಿಗೆ ಹಿನ್ನಡೆ; ಸಾಲದ ಮೊತ್ತ ಕಡಿತ ಮಾಡದಿರಲು ಸಚಿವ ಪಾಟೀಲ ಆಗ್ರಹ

4-

ಸಿಎಂ ಆಗಿದ್ದವರು ಈ‌ ರೀತಿ ಹೇಳಿಕೆ ನೀಡುವ ಬದಲು, ಸ್ಪಷ್ಟ ಹೇಳಿಕೆ ನೀಡಲಿ: ಸಚಿವ ಶಿವಾನಂದ

ಪೊಲೀಸ್ ಪೇದೆ ಮೇಲೆ ಕೈ ಮುಖಂಡ ತಮಟಗಾರ ಸಹೋದರ ಬ್ಲೇಡ್‌ ನಿಂದ ಹಲ್ಲೆ

dharwad: ಪೊಲೀಸ್ ಪೇದೆ ಮೇಲೆ ಕೈ ಮುಖಂಡ ತಮಟಗಾರ ಸಹೋದರ ಬ್ಲೇಡ್‌ ನಿಂದ ಹಲ್ಲೆ

MUST WATCH

udayavani youtube

ಇಂಗ್ಲೀಷ್ ಒಂದು ಭಾಷೆ ಅನ್ನೋದೇ ತಪ್ಪು -ಪ್ರಕಾಶ್ ಬೆಳವಾಡಿ

udayavani youtube

ಕಾರಿನ ಟಯರ್ ಒಳಗಿತ್ತು ಬರೋಬ್ಬರಿ 50 ಲಕ್ಷ

udayavani youtube

ಹೊಸ ತಂತ್ರಜ್ಞಾನಕ್ಕೆ ತೆರೆದುಕೊಂಡ ತುಳುನಾಡ ಕಂಬಳ

udayavani youtube

ಉಡುಪಿಯ ಶ್ರೀ ಕೃಷ್ಣ ಮಠದಲ್ಲಿ ಕಾರ್ತಿಕ ಲಕ್ಷದೀಪೋತ್ಸವ

udayavani youtube

ಪುಂಗನೂರು ತಳಿಯ ಹಾಲು ಯಾವೆಲ್ಲ ಕಾಯಿಲೆಗಳನ್ನು ಗುಣಪಡಿಸುತ್ತದೆ ?

ಹೊಸ ಸೇರ್ಪಡೆ

1-ree

Karkala; ಕಸದಲ್ಲಿದ್ದ 25 ಗ್ರಾಂ ಚಿನ್ನದ ಸರ ಮರಳಿಸಿ ಪ್ರಾಮಾಣಿಕತೆ ಮೆರೆದ SLRM ಸಿಬಂದಿಗಳು

BBK11: ಬಿಗ್‌ ಬಾಸ್‌ ಮನೆಯಿಂದ ಹೊರಗಡೆ ಬರಲು ನಿರ್ಧರಿಸಿದ ಚೈತ್ರಾ ಕುಂದಾಪುರ

BBK11: ಬಿಗ್‌ ಬಾಸ್‌ ಮನೆಯಿಂದ ಹೊರಗಡೆ ಬರಲು ನಿರ್ಧರಿಸಿದ ಚೈತ್ರಾ ಕುಂದಾಪುರ

Keerthy Suresh: ಪೋಷಕರು ನಿಶ್ಚಯಿಸಿದ ಹುಡುಗನ ಜತೆ ನಡೆಯಲಿದೆ ಕೀರ್ತಿ ಸುರೇಶ್‌ ಮದುವೆ?

Keerthy Suresh: ಪೋಷಕರು ನಿಶ್ಚಯಿಸಿದ ಹುಡುಗನ ಜತೆ ನಡೆಯಲಿದೆ ಕೀರ್ತಿ ಸುರೇಶ್‌ ಮದುವೆ?

ಕಿರುತೆರೆ To ಹಿರಿತೆರೆ.. ಧಾರಾವಾಹಿಯಿಂದ ನೇಮ್‌ ಪಡೆದು ಸಿನಿಮಾದಲ್ಲಿ ಫೇಮ್‌ ಆದ ಕಲಾವಿದರು

ಕಿರುತೆರೆ To ಹಿರಿತೆರೆ.. ಧಾರಾವಾಹಿಯಿಂದ ನೇಮ್‌ ಪಡೆದು ಸಿನಿಮಾದಲ್ಲಿ ಫೇಮ್‌ ಆದ ಕಲಾವಿದರು

Omission in egg distribution, head teacher, physical education teacher suspended

Davanagere: ಮೊಟ್ಟೆ ವಿತರಣೆಯಲ್ಲಿ ಲೋಪ; ಮುಖ್ಯ ಶಿಕ್ಷಕಿ, ದೈಹಿಕ ಶಿಕ್ಷಣ ಶಿಕ್ಷಕ ಅಮಾನತು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.