ಪ್ರಧಾನಿ ಮೋದಿ ಭೇಟಿಯಾದ ಜಗನ್ ; ಪರಸ್ಪರ ಅಭಿನಂದನೆ
Team Udayavani, May 26, 2019, 12:19 PM IST
ಹೊಸದಿಲ್ಲಿ : ಆಂಧ್ರಪ್ರದೇಶದ ನೂತನ ಮುಖ್ಯಮಂತ್ರಿಯಾಗಿ ಅಧಿಕಾರ ಸ್ವೀಕರಿಸಲಿರುವ ವೈಎಸ್‌ಆರ್ ಕಾಂಗ್ರೆಸ್ ಪಕ್ಷದ ನಾಯಕ ಜಗನ್ ಮೋಹನ್ ರೆಡ್ಡಿ ಅವರು ಭಾನುವಾರ ಪ್ರಧಾನಿ ನರೇಂದ್ರ ಮೋದಿ ಅವರನ್ನುಭೇಟಿಯಾಗಿ ಮಾತುಕತೆ ನಡೆಸಿದರು.
ಲೋಕಮಾನ್ಯ ರಸ್ತೆಯಲ್ಲಿರುವ ಪ್ರಧಾನಿ ನಿವಾಸದಲ್ಲಿ ಉಭಯ ನಾಯಕರು ಭೇಟಿಯಾಗಿ ಮಹತ್ವದ ಮಾತುಕತೆ ನಡೆಸಿದರು.ಚುನಾವಣೆಯ ಅಭೂತಪೂರ್ವ ಗೆಲುವಿಗಾಗಿ ಇಬ್ಬರೂ ಪರಸ್ಪರ ಅಭಿನಂದಿಸಿದರು.
ಜಗನ್ ಅವರು ಪ್ರಧಾನಿ ಅವರಿಗೆ ಹೂಗುಚ್ಛದೊಂದಿಗೆ ಶಾಲೊಂದನ್ನು ಹೊದೆಸಿದರು.
ಆಂಧ್ರಕ್ಕೆ ವಿಶೇಷ ಸ್ಥಾನ ಮಾನ ನೀಡುವಂತೆ ಪ್ರಧಾನಿ ಅವರನ್ನು ಜಗನ್ ಕೇಳಿಕೊಂಡಿದ್ದಾರೆ ಎಂದು ವರದಿಯಾಗಿದೆ. ಆಂಧ್ರಕ್ಕೆ ವಿಶೇಷ ಸ್ಥಾನಮಾನ ನೀಡುವುದು ಜಗನ್ ಅವರ ಪ್ರಣಾಳಿಕೆಯ ಮೊದಲ ಅಂಶವಾಗಿತ್ತು.
ಆಂಧ್ರದ 175 ಸದಸ್ಯ ಬಲದ ವಿಧಾನಸಭೆಯಲ್ಲಿ ಜಗನ್ ನೇತೃತ್ವದ ವೈಎಸ್‌ಆರ್ ಪಕ್ಷ 151 ಸೀಟು ಗಳನ್ನು ಗೆದ್ದು ಅಧಿಕಾರ ಹಿಡಿದಿದೆ. 25 ಲೋಕಸಭಾ ಸ್ಥಾನಗಳ ಪೈಕಿ 22 ಸ್ಥಾನಗಳನ್ನು ಗೆದ್ದುಕೊಂಡಿತ್ತು.
ವಿಜಯವಾಡಾದಲ್ಲಿ ಮೇ 30 ರಂದು ಜಗನ್ ಪ್ರಮಾಣವಚನ ಸ್ವೀಕರಿಸಲಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Pollution: ದಿಲ್ಲಿಯಲ್ಲಿ ಈಗ ನಿರ್ಮಾಣಕ್ಕೆ ಬ್ರೇಕ್, ಬಸ್‌ಗಳಿಗೆ ನಿರ್ಬಂಧ
Video: ಕಾರಿನ ಟಯರ್ ಒಳಗಿತ್ತು ಒಂದಲ್ಲ, ಎರಡಲ್ಲ ಬರೋಬ್ಬರಿ 50 ಲಕ್ಷ… ದಂಗಾದ ಅಧಿಕಾರಿಗಳು
Notice: ಸಂಗೀತ ಕಾರ್ಯಕ್ರಮಕ್ಕೂ ಮುನ್ನ ಪಂಜಾಬಿ ಗಾಯಕ ದಿಲ್ಜಿತ್ ದೋಸಾಂಜ್ ಗೆ ನೋಟಿಸ್
Media powerhouse: ರಿಲಯನ್ಸ್- ಡಿಸ್ನಿ ಕಂಪನಿ ವಿಲೀನ ಈಗ ಅಧಿಕೃತ
PM ನರೇಂದ್ರ ಮೋದಿಗೆ ಡೊಮಿನಿಕಾದ ಅತ್ಯುನ್ನತ ರಾಷ್ಟ್ರೀಯ ಪ್ರಶಸ್ತಿ ಗೌರವ
MUST WATCH
ಹೊಸ ಸೇರ್ಪಡೆ
Udupi: ಮೀನುಗಾರರಿಗೆ ಎನ್‌ಎಫ್ಡಿಪಿ ಪೋರ್ಟಲ್‌ನಲ್ಲಿ ಶುಲ್ಕರಹಿತ ನೋಂದಣಿ
ಏಕನಿವೇಶನ ನಕ್ಷೆ ಅನುಮೋದನೆ ಅಧಿಕಾರ ಗ್ರಾಮ ಪಂಚಾಯತ್‌ಗೆ ನೀಡಲು ಸಿಎಂಗೆ ಸಂಸದ ಕೋಟ ಪತ್ರ
ಅಕ್ಕಿ ಗಿರಣಿ ಮುಂದೆ ಭತ್ತ ತುಂಬಿದ ವಾಹನಗಳ ಸಾಲು… ಮುಂಗಾರು ಮುಗಿದರೂ ನಿಲ್ಲದ ಕೃಷಿಕರ ಗೋಳು
Bengaluru: ಇ-ಖಾತಾ ಗೊಂದಲದಿಂದ ಲಂಚಕ್ಕೆ ದಾರಿ: ಆರ್. ಅಶೋಕ್
Pollution: ದಿಲ್ಲಿಯಲ್ಲಿ ಈಗ ನಿರ್ಮಾಣಕ್ಕೆ ಬ್ರೇಕ್, ಬಸ್‌ಗಳಿಗೆ ನಿರ್ಬಂಧ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.