ರಂಗೇರಿದ ನಗರಸಭೆ ಚುನಾವಣೆ ಪ್ರಚಾರ

Team Udayavani, May 26, 2019, 12:38 PM IST

26-May-13

ಬಸವಕಲ್ಯಾಣ ನಗರಸಭೆ ಕಚೇರಿ

ವೀರಾರೆಡ್ಡಿ ಆರ್‌.ಎಸ್‌.
ಬಸವಕಲ್ಯಾಣ:
ಲೋಕಸಭೆ ಚುನಾವಣೆಯಲ್ಲಿ ಬಿಜೆಪಿಗೆ ನಿರೀಕ್ಷೆ ಮೀರಿ ಫಲಿತಾಂಶ ಬಂದ ಹಿನ್ನೆಲೆಯಲ್ಲಿ ನಗರಸಭೆ ಚುನಾವಣೆಯ ಪ್ರಚಾರ ಮತ್ತಷ್ಟು ರಂಗೇರಿದೆ.

ಒಟ್ಟು 50,541 ಮತದಾರರು ಇರುವ ನಗರಸಭೆಯ 31 ವಾರ್ಡ್‌ ಗಳಿಗೆ ಚುನಾವಣೆ ನಡೆಯುತ್ತಿದ್ದು, 128 ಅಭ್ಯರ್ಥಿಗಳು ಕಣದಲ್ಲಿದ್ದಾರೆ. ಬಸವಕಲ್ಯಾಣದಲ್ಲಿ ನಗರಸಭೆ ಆರಂಭದಿಂದಲೂ ಕಾಂಗ್ರೆಸ್‌, ಜೆಡಿಎಸ್‌ ಅಭ್ಯರ್ಥಿಗಳಿಗೆ ಮತದಾರರು ಹೆಚ್ಚು ಮಣೆ ಹಾಕಿದ್ದಾರೆ ಹೊರತು ಬಿಜೆಪಿಗಿಲ್ಲ ಎಂಬುದಕ್ಕೆ ಹಿಂದೆ ನಡೆದ ಚುನಾವಣೆ ಫಲಿತಾಂಶವೇ ಸಾಕ್ಷಿಯಾಗಿವೆ.

ಆದರೆ ಲೋಕಸಭೆ ಚುನಾವಣೆಯಲ್ಲಿ ಮೈತ್ರಿ ಸರ್ಕಾರದಿಂದ ರಾಜ್ಯದಲ್ಲಿ ಕಣಕ್ಕಳಿಸಿದ ಅಭ್ಯರ್ಥಿಗಳ ಪೈಕಿ ಕೇವಲ ಇಬ್ಬರು ಅಭ್ಯರ್ಥಿಗಳು ಗೆಲುವು ಸಾಧಿಸಿದ್ದು, ಉಳಿದ ಕ್ಷೇತ್ರಗಳಲ್ಲಿ ಕಮಲ ಅರಳಿರುವುದು ನಗಸಭೆ ಚುನಾವಣೆಯ ಬಿಜೆಪಿ ಅಭ್ಯರ್ಥಿಗಳ ಆತ್ಮವಿಶ್ವಾಸ ಹೆಚ್ಚಿಸಿದೆ. ಉಳಿದ ಅಭ್ಯರ್ಥಿಗಳ ನಿದ್ದೆ ಕೆಡುವಂತೆ ಮಾಡಿದೆ.

ಪ್ರಧಾನಿ ನರೇಂದ್ರ ಮೋದಿ ಅಲೆಯಿಂದ ಇತರ ಪಕ್ಷಗಳ ಹಲವು ಘಟಾನುಘಟಿ ನಾಯಕರು ಸೋತಿದ್ದಾರೆ. ಹೀಗಾಗಿ ಆಯಾ ಪಕ್ಷದ ಅಭ್ಯರ್ಥಿಗಳು ಹಗಲು ರಾತ್ರಿ ತಮ್ಮ ಗೆಲುವಿಗಾಗಿ ಬಿರುಸಿನ ಪ್ರಚಾರ ಕೈಗೊಂಡಿದ್ದಾರೆ. ಬಿಜೆಪಿ ಅಭ್ಯರ್ಥಿಗಳು ನರೇಂದ್ರ ಮೋದಿ ಅವರನ್ನು ಮುಂದಿಟ್ಟುಕೊಂಡು ಪ್ರಚಾರ ಮಾಡಿದರೆ, ಕಾಂಗ್ರೆಸ್‌ ಮತ್ತು ಜೆಡಿಎಸ್‌ ಅಭ್ಯರ್ಥಿಗಳು ಎಚ್.ಡಿ.ಕುಮಾರಸ್ವಾಮಿ ಹಾಗೂ ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಜಾರಿಗೊಳಿಸಿದ ಯೋಜನೆಗಳನ್ನು ತಿಳಿಸುತ್ತ ಮತಯಾಚನೆ ಮಾಡುತ್ತಿದ್ದಾರೆ. ಆಟೋಗಳಿಗೆ ಧ್ವನಿ ವರ್ಧಕಗಳನ್ನು ಅಳವಡಿಸಿ, ಕರಪತ್ರಗಳನ್ನು ಹಂಚಲಾಗುತ್ತಿದೆ. ಅಭ್ಯರ್ಥಿಗಳು ಬಿಸಿಲು ಲೆಕ್ಕಿಸದೇ ಪಾದಯಾತ್ರೆ ಮೂಲಕ ಮನೆ-ಮನೆಗೆ ತೆರಳಿ ಭರವಸೆಗಳು ನೀಡುತ್ತ ಮತದಾರರಿಗೆ ಮನವಿ ಮಾಡುತ್ತಿದ್ದಾರೆ.

ಪ್ರಚಾರಕ್ಕೆ ಇನ್ನೂ ಮೂರು ದಿನಗಳು ಮಾತ್ರ ಉಳಿದಿರುವುದರಿಂದ ಆಯಾ ಪಕ್ಷದ ಅಭ್ಯರ್ಥಿಗಳು ಹೇಗಾದರೂ ಮಾಡಿ ಗೆಲುವು ಸಾಧಿಸಬೇಕು ಎಂದು ಪಣ ತೊಟ್ಟು, ತಮ್ಮ ಶಕ್ತಿಗೂ ಮೀರಿ ಪ್ರಚಾರ ಮಾಡುತ್ತಿದ್ದಾರೆ. ಆದರೆ ಲೋಕಸಭೆ ಚುನಾವಣೆಯಲ್ಲಿ ಪ್ರಧಾನಿ ನರೇಂದ್ರ ಮೋದಿ ಅವರ ಪರವಾಗಿ ಬೀಸಿದ ಗಾಳಿ ಸ್ಥಳೀಯ ಚುನಾವಣೆಯಲ್ಲಿ ಮುಂದುವರಿಯುತ್ತದೊ ಅಥವಾ ಮತದಾರರು ಕಾಂಗ್ರೆಸ್‌-ಜೆಡಿಎಸ್‌ ಅಭ್ಯರ್ಥಿಗಳಿಗೆ ಒಲಿಯುತ್ತಾರೊ ಎಂಬುದನ್ನು ತಿಳಿಯಲು ಮೇ 31ರ ಫಲಿತಾಂಶದ ವರೆಗೆ ಕಾಯಬೇಕಾಗಿದೆ.

ಲೋಕಸಭೆ ಹಾಗೂ ನಗಸಭೆ ಚುನಾವಣೆಗಳಲ್ಲಿ ಬಹಳ ವ್ಯತ್ಯಾಸವಿದೆ. ಹೀಗಾಗಿ ಸ್ಥಳೀಯ ಸಂಸ್ಥೆ ಚುನಾವಣೆ ಮೇಲೆ ಪ್ರಧಾನಿ ನರೇಂದ್ರ ಮೋದಿ ಅವರ ಪ್ರಭಾವ ನಡೆಯುವುದಿಲ್ಲ. ಇದರಿಂದ ಜೆಡಿಎಸ್‌ ಅಭ್ಯರ್ಥಿಗಳು ಹೆಚ್ಚು ಸಂಖ್ಯೆಯಲ್ಲಿ ಗೆಲ್ಲಬಹುದು ಎಂಬ ಭರವಸೆ ನನಗಿದೆ.
ಶಬ್ಬೀರ್‌ ಪಾಶಾ,
ಜೆಡಿಎಸ್‌ ಅಧ್ಯಕ್ಷ ಬಸವಕಲ್ಯಾಣ

ಇಡೀ ದೇಶದ ಜನತೆ ಪ್ರಧಾನಿ ನರೇಂದ್ರ ಮೋದಿ ಅವರ ಪರವಾಗಿದೆ. ಅದು ಸ್ಥಳೀಯ ಚುನಾವಣೆಯಲ್ಲೂ ಮುಂದುವರಿಯಲಿದ್ದು, ಈ ಬಾರಿ ಬಿಜೆಪಿ ಅಭ್ಯರ್ಥಿಗಳು ಹೆಚ್ಚು ಸಂಖ್ಯೆಯಲ್ಲಿ ಗೆಲವು ಸಾಧಿಸಿ ನಗಸಭೆಗೆ ಪ್ರವೇಶಿಸಲಿದ್ದಾರೆ ಎಂಬ ನಂಬಿಕೆ ನನಗಿದೆ.
ಶಿವಪುತ್ರ ಗೌರ,
ಬಿಜೆಪಿ ಅಧ್ಯಕ್ಷ ಬಸವಕಲ್ಯಾಣ

ಟಾಪ್ ನ್ಯೂಸ್

IND VS PAK

Champions Trophy; ಭಾರತ ತಂಡ ಪಾಕಿಸ್ಥಾನಕ್ಕೆ ತೆರಳುವುದು ಅಸಂಭವ: ದೃಢಪಡಿಸಿದ MEA

Madikeri: ಮನೆಯ ಆವರಣದಲ್ಲಿ ಗಾಂಜಾ ಬೆಳೆದ ಆರೋಪಿಯ ಬಂಧನ

Madikeri: ಮನೆಯ ಆವರಣದಲ್ಲಿ ಗಾಂಜಾ ಬೆಳೆದ ಆರೋಪಿಯ ಬಂಧನ

1-aaa

PM Modi ಭೇಟಿಯಾಗಿ ವಿಶೇಷ ಮನವಿ ಸಲ್ಲಿಸಿದ ಸಿಎಂ ಸಿದ್ದರಾಮಯ್ಯ

Haveri: ಮುಖ್ಯಮಂತ್ರಿಯಾಗುವ ಆಸೆಯಿದೆ, ಆದರೆ…: ಸತೀಶ್‌ ಜಾರಕಿಹೊಳಿ

Haveri: ಮುಖ್ಯಮಂತ್ರಿಯಾಗುವ ಆಸೆಯಿದೆ, ಆದರೆ…: ಸತೀಶ್‌ ಜಾರಕಿಹೊಳಿ

18-bng

Bengaluru: ಕಂಕಣ ಕಾಲ-2 ಅರಮನೆ ಮೈದಾನದಲ್ಲೂ ಬಜೆಟ್‌ ವಿವಾಹ ಸಾಧ್ಯ!

Maharstra: ಬೈಕ್‌ಗೆ ಢಿಕ್ಕಿ ಹೊಡೆಯುವುದನ್ನು ತಪ್ಪಿಸಲು ಹೋಗಿ ಬಸ್ ಪಲ್ಟಿ: 10ಮಂದಿ ಮೃತ್ಯು

Maharashtra: ಬೈಕ್ ಸವಾರನನ್ನು ತಪ್ಪಿಸಲು ಹೋಗಿ ಬಸ್ ಪಲ್ಟಿ… 10 ಮಂದಿ ಮೃತ್ಯು

ಯತ್ನಾಳ್‌

Vijayapura: ಸಿದ್ದರಾಮಯ್ಯ ಈಗ ದ್ವೇಷ ರಾಜಕಾರಣ ಮಾಡುತ್ತಿದ್ದಾರೆ: ಯತ್ನಾಳ್‌ ಟೀಕೆ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1(4

Udupi: ಎಂಜಿಎಂ ವಿದ್ಯೆ ಎಂಬ ಅಮೃತ ನೀಡುತ್ತಿದೆ: ಶ್ರೀ ವಿದ್ಯಾಸಾಗರ ತೀರ್ಥ ಸ್ವಾಮೀಜಿ

Guarantee Scheme: ಸರಕಾರದ ಖಜಾನೆ ತುಂಬಲು ಅನಧಿಕೃತ ಲೇಔಟ್ ಸಕ್ರಮಗೊಳಿಸಲಿ:ಜನಾರ್ದನ ರೆಡ್ಡಿ

Guarantee Scheme: ಸರಕಾರದ ಖಜಾನೆ ತುಂಬಲು ಅನಧಿಕೃತ ಲೇಔಟ್ ಸಕ್ರಮಗೊಳಿಸಲಿ:ಜನಾರ್ದನ ರೆಡ್ಡಿ

Madikeri: ಮನೆಯ ಆವರಣದಲ್ಲಿ ಗಾಂಜಾ ಬೆಳೆದ ಆರೋಪಿಯ ಬಂಧನ

Madikeri: ಮನೆಯ ಆವರಣದಲ್ಲಿ ಗಾಂಜಾ ಬೆಳೆದ ಆರೋಪಿಯ ಬಂಧನ

Haveri: ಮುಖ್ಯಮಂತ್ರಿಯಾಗುವ ಆಸೆಯಿದೆ, ಆದರೆ…: ಸತೀಶ್‌ ಜಾರಕಿಹೊಳಿ

Haveri: ಮುಖ್ಯಮಂತ್ರಿಯಾಗುವ ಆಸೆಯಿದೆ, ಆದರೆ…: ಸತೀಶ್‌ ಜಾರಕಿಹೊಳಿ

18-bng

Bengaluru: ಕಂಕಣ ಕಾಲ-2 ಅರಮನೆ ಮೈದಾನದಲ್ಲೂ ಬಜೆಟ್‌ ವಿವಾಹ ಸಾಧ್ಯ!

MUST WATCH

udayavani youtube

ಬಳಂಜದ ಪುಟ್ಟ ಪೋರನ ಕೃಷಿ ಪ್ರೇಮ | ಕಸಿ ಕಟ್ಟುವಿಕೆಯಲ್ಲಿ ಬಲು ಪರಿಣಿತ ಈ 6 ನೇ ತರಗತಿ ಬಾಲಕ

udayavani youtube

ಎದೆ ನೋವು, ಮಧುಮೇಹ, ಥೈರಾಯ್ಡ್ ,ಸಮಸ್ಯೆಗಳಿಗೆ ಪರಿಹಾರ ತೆಂಗಿನಕಾಯಿ ಹೂವು

udayavani youtube

ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು

udayavani youtube

ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?

udayavani youtube

ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್‌ |

ಹೊಸ ಸೇರ್ಪಡೆ

ಬಾಲ್ಯದ ಮಧುರ ನೆನೆಪಿನೊಳಗೆ…: ಆ ಕಾಲ ಹೀಗಿತ್ತು!

ಬಾಲ್ಯದ ಮಧುರ ನೆನೆಪಿನೊಳಗೆ…: ಆ ಕಾಲ ಹೀಗಿತ್ತು!

1(4

Udupi: ಎಂಜಿಎಂ ವಿದ್ಯೆ ಎಂಬ ಅಮೃತ ನೀಡುತ್ತಿದೆ: ಶ್ರೀ ವಿದ್ಯಾಸಾಗರ ತೀರ್ಥ ಸ್ವಾಮೀಜಿ

IND VS PAK

Champions Trophy; ಭಾರತ ತಂಡ ಪಾಕಿಸ್ಥಾನಕ್ಕೆ ತೆರಳುವುದು ಅಸಂಭವ: ದೃಢಪಡಿಸಿದ MEA

Guarantee Scheme: ಸರಕಾರದ ಖಜಾನೆ ತುಂಬಲು ಅನಧಿಕೃತ ಲೇಔಟ್ ಸಕ್ರಮಗೊಳಿಸಲಿ:ಜನಾರ್ದನ ರೆಡ್ಡಿ

Guarantee Scheme: ಸರಕಾರದ ಖಜಾನೆ ತುಂಬಲು ಅನಧಿಕೃತ ಲೇಔಟ್ ಸಕ್ರಮಗೊಳಿಸಲಿ:ಜನಾರ್ದನ ರೆಡ್ಡಿ

Madikeri: ಮನೆಯ ಆವರಣದಲ್ಲಿ ಗಾಂಜಾ ಬೆಳೆದ ಆರೋಪಿಯ ಬಂಧನ

Madikeri: ಮನೆಯ ಆವರಣದಲ್ಲಿ ಗಾಂಜಾ ಬೆಳೆದ ಆರೋಪಿಯ ಬಂಧನ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.