ಎಲ್ಲರಿಗೂ ಕಾನೂನು ಅರಿವು ಅಗತ್ಯ
ವೃತ್ತಿಗೆ ಸಂಬಂಧಿಸಿದ ಕಾನೂನು ಮೊದಲು ತಿಳಿದುಕೊಳ್ಳಿ: ಎ.ಎಸ್.ಸದಲಗೆ
Team Udayavani, May 26, 2019, 3:51 PM IST
ಚಿಕ್ಕಮಗಳೂರು: ವಿಶ್ವ ಚಿತ್ತವಿಕಲತೆ ದಿನಾಚರಣೆ ಅರಿವು ಕಾರ್ಯಕ್ರಮವನ್ನು ಕಾರ್ಮಿಕ ನ್ಯಾಯಾಲಯದ ನ್ಯಾಯಾಧೀಶರಾದ ಎ.ಎಸ್.ಸದಲಗೆ ಉದ್ಘಾಟಿಸಿದ
ಚಿಕ್ಕಮಗಳೂರು: ಪ್ರತಿಯೊಬ್ಬ ಭಾರತೀಯ ನಾಗರಿಕನು ಕಾನೂನಿನ ಅರಿವು ಹೊಂದುವುದು ಅತೀ ಮುಖ್ಯ ಎಂದು ಕಾರ್ಮಿಕ ನ್ಯಾಯಾಲಯದ ನ್ಯಾಯಾಧೀಶರಾದ ಎ.ಎಸ್.ಸದಲಗೆ ತಿಳಿಸಿದರು.
ನಗರದ ರಾಮಕೃಷ್ಣ ನರ್ಸಿಂಗ್ ಕಾಲೇಜಿನ ಸಭಾಂಗಣದಲ್ಲಿ ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರ, ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ, ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆ ಸಂಯುಕ್ತಾಯಶ್ರಯದಲ್ಲಿ ಆಯೋಜಿಸಿದ್ದ ವಿಶ್ವ ಚಿತ್ತವಿಕಲತೆ ದಿನಾಚರಣೆ ಅರಿವು ಕಾರ್ಯಕ್ರಮವನ್ನು ಉದ್ಘಾಟಿಸಿ ಅವರು ಮಾತನಾಡಿದರು.
ಯಾವುದೇ ವ್ಯಕ್ತಿ ಕಾನೂನನ್ನು ಉಲ್ಲಂಘಿಸಿ ಆ ಕಾನೂನಿನ ಬಗ್ಗೆ ನನಗೆ ತಿಳಿದಿಲ್ಲ ಎಂದು ನ್ಯಾಯಾಲಯಕ್ಕೆ ಮನವಿ ಮಾಡಿದರೆ ನ್ಯಾಯಾಲಯ ಕ್ಷಮಿಸುವುದಿಲ್ಲ. ಆದ್ದರಿಂದ ಎಲ್ಲಾ ನಾಗರಿಕರು ಕಾನೂನು ತಿಳಿದುಕೊಂಡು ನಡೆಯುವುದು ಒಳಿತು ಎಂದು ಹೇಳಿದರು.
ಕಾನೂನು ಕ್ಲಿಷ್ಟಕರವಾದಂತಹ ಸಮಸ್ಯೆಯಲ್ಲ. ಅಹಿತಕರ ಘಟನೆಗಳಿಗೆ ಅಸ್ಪದ ನೀಡದೆ ಸಮಾಜದಲ್ಲಿ ಯಾವುದು ಒಳಿತು, ಯಾವುದು ಕೆಡುಕು ಎಂಬುದನ್ನು ಅರಿತು ಬಾಳಿದರೆ ಸಾಕು. ಅದೇ ಕಾನೂನು ಪಾಲಿಸಿದಂತೆ ಎಂದರು.
ಪ್ರಸ್ತುತ ದಿನಗಳಲ್ಲಿ ಯುವ ಜನರಲ್ಲಿ ನೈತಿಕತೆಯ ಕೊರತೆ ಕಂಡು ಬರುತ್ತಿದೆ. ಇದರ ಬಗ್ಗೆ ಅವರಿಗೆ ಶಿಕ್ಷಣ ನೀಡಬೇಕು. ಆಗ ಮಾತ್ರ ಅವರು ಸಮಾಜದಲ್ಲಿ ಉತ್ತಮ ವ್ಯಕ್ತಿಗಳಾಗಿ ಭವ್ಯ ಭಾರತ ನಿರ್ಮಾಣ ಮಾಡಲು ಸಾಧ್ಯವಾಗಲಿದೆ ಎಂದರು.
ನಿಮ್ಮ ವೃತ್ತಿಗೆ ಸಂಬಂಧಿಸಿದಂತಹ ಕಾನೂನುಗಳನ್ನು ಮೊದಲು ತಿಳಿದುಕೊಳ್ಳಿ. ಅದು ತಮ್ಮ ಮುಂದಿನ ವೃತ್ತಿ ಜೀವನದಲ್ಲಿ ಸಹಕಾರಿಯಾಗುತ್ತದೆ ಎಂದು ವಿದ್ಯಾರ್ಥಿಗಳಿಗೆ ಕಿವಿಮಾತು ಹೇಳಿದರು.
ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರದ ಸದಸ್ಯ ಕಾರ್ಯದರ್ಶಿ ಬಸವರಾಜ್ ಚೇಂಗಟಿ ಮಾತನಾಡಿ, ವಿಶ್ವ ಮಾನಸಿಕ ಚಿತ್ತ ದಿನಾಚರಣೆಯನ್ನು 1986 ರಿಂದಲೇ ಆಚರಣೆ ಮಾಡುತ್ತಿದ್ದೇವೆ. ಆದರೂ ಸಹ ಮಾನಸಿಕ ಚಿತ್ತ ಕಾಯಿಲೆ ದಿನದಿಂದ ದಿನಕ್ಕೆ ಹೆಚ್ಚಾಗುತ್ತಿದ್ದು, ದೇಶದಲ್ಲಿ ಸುಮಾರು ಎರಡೂವರೆ ಕೋಟಿಗಿಂತಲೂ ಅಧಿಕ ಜನರು ಈ ರೋಗದಿಂದ ಬಳಲುತ್ತಿರುವುದು ವಿಷಾದನೀಯ. ಇಂತಹ ಕಾಯಿಲೆಗೆ ಒಳಪಟ್ಟವರನ್ನು ಗುರುತಿಸಿ ಚಿಕಿತ್ಸೆ ಕೊಡಿಸುವುದು ಪ್ರತಿಯೊಬ್ಬ ನಾಗರಿಕರ ಕರ್ತವ್ಯವಾಗಿದೆ ಎಂದರು.
ದೈಹಿಕ, ಮಾನಸಿಕ, ಆಧ್ಯಾತ್ಮಿಕ ಮತ್ತು ಸಾಮಾಜಿಕವಾಗಿ ಪ್ರತಿಯೊಬ್ಬರು ಆರೋಗ್ಯವಾಗಿರಬೇಕು. ಹಾಗಾದರೆ ಮಾತ್ರ ಪ್ರತಿಯೊಂದು ಕಾನೂನು ತಿಳಿಯುವ ಮೂಲಕ ಸದೃಢ ರಾಷ್ಟ್ರ ಕಟ್ಟಬಹುದು ಎಂದ ಅವರು, ಮನುಷ್ಯರು ಆಸೆ-ದುರಾಸೆ ಬಿಟ್ಟು ಸಮಾಜದ ಒಳಿತಿಗೆ ದೊಡ್ಡ ಕನಸನ್ನು ಹೊಂದಿ ತಮ್ಮ ಗುರಿಯನ್ನು ಸಾಧಿಸಬೇಕು ಎಂದು ಸಲಹೆ ನೀಡಿದರು.
ಪ್ರತಿಯೊಬ್ಬರೂ ನೈತಿಕ ಗುಣಗಳನ್ನು ಬೆಳೆಸಿಕೊಂಡು ಸ್ವಾಸ್ಥ್ಯ ಸಮಾಜ ನಿರ್ಮಾಣ ಮಾಡುವ ಮೂಲಕ ಆರೋಗ್ಯ ಮತ್ತು ಅದರ ನಿವಾರಣೆ ಕುರಿತು ಕಾನೂನು ತಿಳಿಯುವುದು ಅತ್ಯವಶ್ಯಕ ಎಂದರು.
ರಾಮಕೃಷ್ಣ ನರ್ಸಿಂಗ್ ಕಾಲೇಜಿನ ಆಡಳಿತಾಧಿಕಾರಿ ಉಮಾಮಹೇಶ್ವರ್ ಅಧ್ಯಕ್ಷತೆ ವಹಿಸಿ ಮಾತನಾಡಿ, ಮಾನಸಿಕ ಸ್ಥಿರ ಆರೋಗ್ಯ ಹಾಗೂ ಮಾನಸಿಕ ವ್ಯಕ್ತಿಗಳ ಹಕ್ಕುಗಳ ಕುರಿತಾಗಿ ಹಲವು ವಿಷಯಗಳನ್ನು ಕಾನೂನಿನ ಚೌಕಟ್ಟಿನಲ್ಲಿ ವಿದ್ಯಾರ್ಥಿಗಳು ತಿಳಿದುಕೊಂಡಾಗ ಮಾತ್ರ ಭವಿಷ್ಯದ ದಿನಗಳಲ್ಲಿ ಬಹಳ ಉಪಯುಕ್ತವಾಗುತ್ತದೆ ಎಂದು ಹೇಳಿದರು.
ಈ ಸಂದರ್ಭದಲ್ಲಿ ಮಾನಸಿಕ ಚಿತ್ತ ಕುರಿತ ಪ್ರಬಂಧ ಸ್ಪರ್ಧೆ ವಿಜೇತರಿಗೆ ಬಹುಮಾನ ವಿತರಣೆ ಮಾಡಲಾಯಿತು.
ಜಿಲ್ಲಾ ಆಸ್ಪತ್ರೆಯ ಮನೋಶಾಸ್ತ್ರಜ್ಞ ಡಾ| ವಿನಯ್ ಕುಮಾರ್ ಮನೋವ್ಯಾಧಿಯ ಕಾರಣಗಳು ಮತ್ತು ಚಿಕಿತ್ಸೆಗಳ ಕುರಿತು ಹಾಗೂ ನ್ಯಾಯಾವಾಧಿ ಕೆ.ಎನ್.ಚಂದ್ರಶೇಖರ್ ಮಾನಸಿಕ ಆರೋಗ್ಯ ಕಾಯ್ದೆಯ ಕುರಿತು ಉಪನ್ಯಾಸ ನೀಡಿದರು.
ಸಾಮಾಜಿಕ ಭದ್ರತಾ ನಿರೀಕ್ಷಕಿ ಶಶಿಕಲಾ, ಕಾಲೇಜಿನ ಪ್ರಾಚಾರ್ಯೆ ಪ್ರೀತಿ ಹಾಗೂ ಸಿಬ್ಬಂದಿ ವರ್ಗದವರು ಉಪಸ್ಥಿತರಿದ್ದರು.
ಯಾವುದೇ ವ್ಯಕ್ತಿ ಕಾನೂನನ್ನು ಉಲ್ಲಂಘಿಸಿ ಆ ಕಾನೂನಿನ ಬಗ್ಗೆ ನನಗೆ ತಿಳಿದಿಲ್ಲ ಎಂದು ನ್ಯಾಯಾಲಯಕ್ಕೆ ಮನವಿ ಮಾಡಿದರೆ ನ್ಯಾಯಾಲಯ ಕ್ಷಮಿಸುವುದಿಲ್ಲ. ಆದ್ದರಿಂದ ಎಲ್ಲಾ ನಾಗರಿಕರು ಕಾನೂನು ತಿಳಿದುಕೊಂಡು ನಡೆಯುವುದು ಒಳಿತು.
•ಎ.ಎಸ್.ಸದಲಗೆ, ನ್ಯಾಯಾಧೀಶರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
ವಿಷಸೇವಿಸಿ ಆತ್ಯಹ*ತ್ಯೆಗೆ ಯತ್ನಿಸಿದ ವಿದ್ಯಾರ್ಥಿನಿ,ಚಿಕಿತ್ಸೆಗೆ ಸ್ಪಂದಿಸದೆ ಸಾವು
Vitla: ರಿಕ್ಷಾ- ಬೈಕ್ ಢಿಕ್ಕಿ; ಮೂವರಿಗೆ ಗಾಯ
Congress: ದ.ಕ ಗ್ರಾಮ ಪಂಚಾಯತ್; 24ರಲ್ಲಿ 19 ಸ್ಥಾನ ಕಾಂಗ್ರೆಸ್ ಬೆಂಬಲಿತರಿಗೆ ಗೆಲುವು
Siddapura: ಬುಲೆಟ್ ಬೈಕಿಗೆ ಜೆಸಿಬಿ ಡಿಕ್ಕಿ; ಸವಾರರಿಗೆ ಗಾಯ
Moodabidri: ನಿವೃತ್ತ ದೈಹಿಕ ಶಿಕ್ಷಣ ನಿರ್ದೇಶಕ ಪಿ.ನೇಮಿರಾಜ ಹೆಗ್ಡೆ ನಿಧನ
MUST WATCH
ಬಳಂಜದ ಪುಟ್ಟ ಪೋರನ ಕೃಷಿ ಪ್ರೇಮ | ಕಸಿ ಕಟ್ಟುವಿಕೆಯಲ್ಲಿ ಬಲು ಪರಿಣಿತ ಈ 6 ನೇ ತರಗತಿ ಬಾಲಕ
ಎದೆ ನೋವು, ಮಧುಮೇಹ, ಥೈರಾಯ್ಡ್ ,ಸಮಸ್ಯೆಗಳಿಗೆ ಪರಿಹಾರ ತೆಂಗಿನಕಾಯಿ ಹೂವು
ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು
ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?
ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್ |
ಹೊಸ ಸೇರ್ಪಡೆ
ವಿಷಸೇವಿಸಿ ಆತ್ಯಹ*ತ್ಯೆಗೆ ಯತ್ನಿಸಿದ ವಿದ್ಯಾರ್ಥಿನಿ,ಚಿಕಿತ್ಸೆಗೆ ಸ್ಪಂದಿಸದೆ ಸಾವು
Vitla: ರಿಕ್ಷಾ- ಬೈಕ್ ಢಿಕ್ಕಿ; ಮೂವರಿಗೆ ಗಾಯ
Old Parliament House: ಭಾರತದ ಸಂವಿಧಾನವು ಜೀವಂತಿಕೆಯ, ಪ್ರಗತಿಪರ ದಾಖಲೆ: ರಾಷ್ಟ್ರಪತಿ
Cleanliness: ಮನೆ ಮನೆಯಿಂದ ದೇಶವೇ ಸ್ವಚ್ಚ
Congress: ದ.ಕ ಗ್ರಾಮ ಪಂಚಾಯತ್; 24ರಲ್ಲಿ 19 ಸ್ಥಾನ ಕಾಂಗ್ರೆಸ್ ಬೆಂಬಲಿತರಿಗೆ ಗೆಲುವು
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.