ಹತ್ಯೆಗೀಡಾದ ಆಪ್ತನ ಶವಯಾತ್ರೆ;ಹೆಗಲು ಕೊಟ್ಟ ಸಚಿವೆ ಸ್ಮೃತಿ
Team Udayavani, May 26, 2019, 4:19 PM IST
ಅಮೇಥಿ: ಇಲ್ಲಿನ ಬರೌಲಿಯಲ್ಲಿ ಶನಿವಾರ ರಾತ್ರಿ ದುಷ್ಕರ್ಮಿಗಳ ಗುಂಡಿಗೆ ಬಲಿಯಾಗಿದ್ದ ಆಪ್ತಿ ಬಿಜೆಪಿ ನಾಯಕಸುರೇಂದ್ರ ಸಿಂಗ್ ಅವರ ಅಂತಿಮ ಯಾತ್ರೆಯಲ್ಲಿ ಕೇಂದ್ರ ಸಚಿವೆ ಸ್‌ಮೃತಿ ಇರಾನಿ ಭಾಗಿಯಾಗಿ ಅಂತಿಮ ನಮನ ಸಲ್ಲಿಸಿದರು. ಶವಯಾತ್ರೆಯಲ್ಲಿಸುರೇಂದ್ರಸಿಂಗ್ ಅವರಶವವಕ್ಕೆ ಹೆಗಲುಕೊಟ್ಟವರಲ್ಲಿ ತಾವೂ ಒಬ್ಬರಾಗಿ ತಮ್ಮ ಗೆಲುವಿಗಾಗಿ ಹಗಲಿರುಳು ದುಡಿದ ನಾಯಕನನ್ನು ನೆನೆದು ಕಣ್ಣೀರು ಹಾಕಿದರು.
ಈಗಾಗಲೇ ಪೊಲೀಸರು ಪ್ರಕರಣ ಉನ್ನತ ಮಟ್ಟದ ತನಿಖೆ ಆರಂಭಿಸಿದ್ದು 6 ಮಂದಿ ಶಂಕಿತ ಆರೋಪಿಗಳನ್ನು ವಶಕ್ಕೆ ಪಡೆದಿದ್ದಾರೆ.
ಸ್ಮೃತಿ ಇರಾನಿ ಅವರ ಗೆಲುವಿನ ಸಂಭ್ರಮಾಚರಣೆಗೆ ತೆರಳಿ ಮನೆಗೆ ವಾಪಾಸಾಗಿ ಮನೆಯ ಹೊರಗೆ ಮಲಗಿದ್ದ ವೇಳೆ ಬೈಕ್‌ನಲ್ಲಿ ಬಂದ ದುಷ್ಕರ್ಮಿಗಳು ಗುಂಡು ಹಾರಿಸಿ ಪರಾರಿಯಾಗಿದ್ದಾರೆ.ಲಕ್ನೋದ ಆಸ್ಪತ್ರೆಯಲ್ಲಿ ಚಿಕಿತ್ಸೆಗೆ ಸ್ಪಂದಿಸದೆ ಸುರೇಂದ್ರ ಸಿಂಗ್ ಕೊನೆಯುಸಿರೆಳೆದಿದ್ದರು.
#WATCH BJP MP from Amethi, Smriti Irani lends a shoulder to mortal remains of Surendra Singh, ex-village head of Barauli, Amethi, who was shot dead last night. pic.twitter.com/jQWV9s2ZwY
— ANI (@ANI) May 26, 2019
ಸುರೇಂದ್ರ ಸಿಂಗ್ ಅವರು ಸ್ಮೃತಿ ಇರಾನಿ ಅವರ ಆಪ್ತರಾಗಿ ಗುರುತಿಸಿಕೊಂಡಿದ್ದು ತಳಮಟ್ಟದಲ್ಲಿ ಭಾರೀ ಶ್ರಮ ವಹಿಸಿದ್ದರು ಎಂದು ಹೇಳಲಾಗಿದೆ.
ಇದುವರೆಗೆ ಅಮೇಥಿಯಲ್ಲಿ ಶಾಂತಿಯುತ ವಾತಾವರಣವಿದ್ದು,ಯಾವ ಕಾರಣಕ್ಕಾಗಿ ಕೊಲೆ ನಡೆದಿದೆ ಎನ್ನುವುದು ಇನ್ನಷ್ಟೇ ತಿಳಿದು ಬರಬೇಕಿದೆ.
ಅಮೇಥಿ ಕ್ಷೇತ್ರದಲ್ಲಿ ಇರಾನಿ ಅವರು ಎಐಸಿಸಿ ಅಧ್ಯಕ್ಷ ರಾಹುಲ್ ಗಾಂಧಿ ಅವರ ವಿರುದ್ಧ ಭರ್ಜರಿ ಜಯ ಗಳಿಸಿದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Tirupati;ದುರಂತಕ್ಕೆ ಸಿಎಂ ನಾಯ್ಡು,ಆಡಳಿತ ಮಂಡಳಿ,ಪೊಲೀಸರು ಕಾರಣ: ಮಾಜಿ ಟಿಟಿಡಿ ಮುಖ್ಯಸ್ಥರು
ಏನು ಧೈರ್ಯ..! ರೈಲು ಹಳಿ ಮೇಲೆ ಬಂದ ಸಿಂಹವನ್ನು ಸಾಕು ಪ್ರಾಣಿಯಂತೆ ಓಡಿಸಿದ ಅರಣ್ಯ ಸಿಬ್ಬಂದಿ
Tirupati Tragedy: ಸಾವಿನ ಸಂಖ್ಯೆ ಹೆಚ್ಚಳ ಸಾಧ್ಯತೆ; ಪ್ರತ್ಯಕ್ಷದರ್ಶಿಗಳು ಹೇಳಿದ್ದೇನು?
Bhopal: ಉಗ್ರರನ್ನು ಇರಿಸಲಾಗಿದ್ದ ಕೇಂದ್ರ ಕಾರಾಗೃಹದ ಬಳಿ ಚೀನಾ ನಿರ್ಮಿತ ಡ್ರೋನ್ ಪತ್ತೆ…
Odisha: ‘ಪ್ರವಾಸಿ ಭಾರತೀಯ ದಿವಸ್’ ಉದ್ಘಾಟಿಸಿದ ಪ್ರಧಾನಿ ಮೋದಿ; ವಿಶೇಷ ರೈಲಿಗೂ ಚಾಲನೆ
MUST WATCH
ಹೊಸ ಸೇರ್ಪಡೆ
Toxic Movie: ʼಟಾಕ್ಸಿಕ್ʼನಲ್ಲಿ ನಟಿಸಲು ಯಶ್ ಪಡೆದ ಸಂಭಾವನೆ ಎಷ್ಟು?
Tirupati;ದುರಂತಕ್ಕೆ ಸಿಎಂ ನಾಯ್ಡು,ಆಡಳಿತ ಮಂಡಳಿ,ಪೊಲೀಸರು ಕಾರಣ: ಮಾಜಿ ಟಿಟಿಡಿ ಮುಖ್ಯಸ್ಥರು
ಮೊಳಹಳ್ಳಿ ವ್ಯವಸಾಯ ಸೇವಾ ಸಹಕಾರಿ ಸಂಘ: ನೂತನ ಅಧ್ಯಕ್ಷ, ಉಪಾಧ್ಯಕ್ಷರ ಆಯ್ಕೆ
Dharwad: ಬಂದ್ ಹೆಸರಲ್ಲಿ ವ್ಯಾಪಾರಿಗೆ ಕಪಾಳಮೋಕ್ಷ?: ಕಾಲೇಜು ಪ್ರಾಧ್ಯಾಪಕರಿಗೆ ಅವಾಜ್
Friendship: ಸ್ನೇಹವೇ ಸಂಪತ್ತು
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.