ಬೆಳ್ತಂಗಡಿ: ವಿದ್ಯಾರ್ಥಿಗಳ ಹೊಡೆದಾಟ, 11 ಮಂದಿ ಮೇಲೆ ಪ್ರಕರಣ ದಾಖಲು
Team Udayavani, May 27, 2019, 6:10 AM IST
ಬೆಳ್ತಂಗಡಿ: ಮೊಬೈಲ್ ಸಂದೇಶದ ವಿಚಾರವಾಗಿ ಇಲ್ಲಿನ ಖಾಸಗಿ ಕಾಲೇಜೊಂದರ ವಿದ್ಯಾರ್ಥಿಗಳಿಬ್ಬರ ಜಗಳಕ್ಕೆ ಸಂಬಂಧಿಸಿದಂತೆ ಸಿಎಫ್‌ಐ ಹಾಗೂ ಪಿಎಫ್‌ಐನ 11 ಮಂದಿ ಕಾರ್ಯಕರ್ತರ ಮೇಲೆ ಪ್ರಕರಣ ದಾಖಲಿಸಲಾಗಿದ್ದು, ಅವರನ್ನು ಠಾಣೆಯಿಂದಲೇ ಜಾಮೀನು ಮೇಲೆ ಬಿಡುಗಡೆಗೊಳಿಸಲಾಗಿದೆ.
ಮಹಮ್ಮದ್ ನೌಫಾಲ್ (21), ನಜೀರ್ (19), ಮಹಮ್ಮದ್ ಮುಸ್ತಫಾ (20), ಜಾಯಿದ್ ಅಲಿ (21), ಮಹಮ್ಮದ್ ಸೈಫಲ್ (19), ಉಸ್ಮಾನ್ (20), ಸಫಾನ್ (23), ಇಮ್ರಾನ್ (19), ಆಸಿಫ್ (20), ಮಹಮ್ಮದ್ ಯಾಸಿನ್ (18), ಅಜಂ (19) ವಿರುದ್ಧ ಪ್ರಕರಣ ದಾಖಲಾಗಿದೆ.
ವಾಯ್ಸ ಮೆಸೇಜ್ ಕಳಿಸಿರುವ ವಿಚಾರವಾಗಿ ಶನಿವಾರ ಬೆಳಗ್ಗೆ ಇಬ್ಬರ ನಡುವೆ ಜಗಳವಾಗಿದ್ದು, ಅವರು ಆಸ್ಪತ್ರೆ ದಾಖಲಾಗಿದ್ದರು. ಬಳಿಕ ಪರಸ್ಪರ ರಾಜಿ ಮಾಡಿಕೊಂಡು, ಪ್ರಕರಣ ದಾಖಲಿಸದಂತೆ ಪೊಲೀಸರಲ್ಲಿ ಮನವಿ ಮಾಡಿ ತೆರಳಿದ್ದರು.
ಆದರೆ ಸಂಜೆ ಅನುಮತಿ ಪಡೆಯದೆ ಪ್ರತಿಭಟನೆಗೆ ಮುಂದಾದಾಗ ತಡೆಯಲು ಬಂದ ಪೊಲೀಸರ ಮೇಲೆ ಕೆಲವರು ಹಲ್ಲೆಗೆ ಮುಂದಾಗಿದ್ದರು. ಈ ಹಿನ್ನೆಲೆಯಲ್ಲಿ ಬೆಳ್ತಂಗಡಿ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Missing Case ಶಿರ್ವ: ವ್ಯಕ್ತಿ ನಾಪತ್ತೆ; ಪ್ರಕರಣ ದಾಖಲು
Rule; 5, 8ನೇ ತರಗತಿಯಲ್ಲಿ ಫೈಲ್ ಆದರೆ ಭಡ್ತಿ ನೀಡುವಂತಿಲ್ಲ; ಅದೇ ಕ್ಲಾಸಲ್ಲಿ ಮುಂದುವರಿಕೆ!
Manipur; ಪೊಲೀಸ್ ಇಲಾಖೆಯಲ್ಲಿ ಮೈತೇಯಿ ಮತ್ತು ಕುಕಿಗಳು ಒಟ್ಟಾಗಿ ಕೆಲಸ ಮಾಡಬೇಕು
Team India; ಅಶ್ವಿನ್ ಬದಲಿಯಾಗಿ ಟೀಂ ಇಂಡಿಯಾ ಸೇರಿದ ಕರ್ನಾಟಕ ಕರಾವಳಿ ಮೂಲದ ಸ್ಪಿನ್ನರ್
Kerala; ಸರಕಾರಿ ಶಾಲೆಯಲ್ಲಿ ಕ್ರಿಸ್ಮಸ್ ಆಚರಣೆಗೆ ಅಡ್ಡಿ,ಗೋದಲಿ ಧ್ವಂಸ: ವ್ಯಾಪಕ ಆಕ್ರೋಶ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.