ಆನಂದ ಜಿಗಜಿನ್ನಿ ಕುಟುಂಬದಲ್ಲಿ ಮುಗಿಲು ಮುಟ್ಟಿದ ಆಕ್ರಂದನ

•ಪುತ್ರಿಯ ಸಾವಿನ ಸುದ್ದಿಯಿಂದ ದುಃಖೀತರಾದ ಆನಂದ ದಂಪತಿ

Team Udayavani, May 27, 2019, 7:03 AM IST

bk-tdy-2..

ಬಾಗಲಕೋಟೆ: ನಗರದ ಹಿರಿಯ ಪತ್ರಕರ್ತ, ಕಾಂಗ್ರೆಸ್‌ ಪಕ್ಷದ ಜಿಲ್ಲಾ ವಕ್ತಾರರೂ ಆಗಿರುವ ಆನಂದ ಜಿಗಜಿನ್ನಿ ಕುಟುಂಬದಲ್ಲಿ ಆಕ್ರಂದನ ಮುಗಿಲು ಮುಟ್ಟಿದೆ.

ಘಟನೆಯಲ್ಲಿ ಆನಂದ ಅವರ ಪುತ್ರಿ ವರ್ಷಾ ಜಿಗಜಿನ್ನಿ (12), ಸಹೋದರ ವಿನೋದ ಅವರ ಪುತ್ರ ಶರಣ (7), ಆನಂದ ಅವರ ಅಕ್ಕನ ಪತಿ ರವಿ ಹಂಡಿ (40), ಪುತ್ರಿ ಲೇಖಾಶ್ರೀ ಹಂಡಿ (18), ಪುತ್ರ ನವೀನಕುಮಾರ ಹಂಡಿ (14)ಮೃತಪಟ್ಟಿದ್ದು, ಇವರೆಲ್ಲರೂ ದಾವಣಗೆರೆಯಲ್ಲಿ ರವಿ ಹಂಡಿ ಅವರ ಸಹೋದರಿಯನ್ನು ಭೇಟಿ ಮಾಡಿ ಬಾಗಲಕೋಟೆಗೆ ಮರಳುತ್ತಿದ್ದರು. ಈ ವೇಳೆ ನರಗುಂದ-ನವಲಗುಂದ ಮಧ್ಯದ ಅಮರಗೋಳ ಬಳಿ ಕಾರಿನ ಟೈರ್‌ ಸಿಡಿದು ಲಾರಿಗೆ ಡಿಕ್ಕಿ ಹೊಡೆದ ಪರಿಣಾಮ ಈ ಘಟನೆ ಸಂಭವಿಸಿದ್ದು, ಜಿಗಜಿನ್ನಿಯವರ ಕುಟುಂಬದಲ್ಲಿ ದುಃಖ ಸಹಿಸಿಕೊಳ್ಳಲಾಗುತ್ತಿಲ್ಲವಾಗಿದೆ.

ಆನಂದ ಅವರ ಪುತ್ರಿ ವರ್ಷಾ ಬಸವೇಶ್ವರ ಸಿಬಿಎಸ್‌ಇ ಶಾಲೆಯಲ್ಲಿ 5ನೇ ತರಗತಿ ಓದುತ್ತಿದ್ದು, ಕಳೆದ ಫೆಬ್ರವರಿಯಲ್ಲಿ ಶಾಲೆಯ ಅತ್ಯುತ್ತಮ ವಿದ್ಯಾರ್ಥಿ ಪ್ರಶಸ್ತಿ ಪಡೆದಿದ್ದಳು. ಪುತ್ರಿಯ ಸಾವಿನ ಸುದ್ದಿ ತಿಳಿದು ತೀವ್ರ ದುಃಖೀತರಾಗಿದ್ದ ಆನಂದ ಮತ್ತು ಪತ್ನಿ ಹಾಗೂ ಪುತ್ರನನ್ನು ಕಳೆದುಕೊಂಡ ವಿನೋದ ಮತ್ತು ಅವರ ಪತ್ನಿಯ ಆಕ್ರಂದನ ಮುಗಿಲು ಮುಟ್ಟಿತ್ತು. ಸಾಂತ್ವನ ಹೇಳಲು ಬಂದವರಿಗೂ ದುಃಖ ಉಮ್ಮಳಿಸಿ ಬಂದಿತ್ತು.

ವಿಧಿಯ ಆಟ: ಕಳೆದ ರವಿವಾರ ನಡೆದ ಪತ್ರಕರ್ತರ ಕ್ರಿಕೆಟ್ ಪಂದ್ಯಾವಳಿ ವೇಳೆ, ಈ ಮಕ್ಕಳು ಹಾಗೂ ಆನಂದ ಅವರ ಮಾವ ಮೈದಾನಕ್ಕೆ ಬಂದು ಪತ್ರಕರ್ತರ ತಂಡಕ್ಕೆ ಶುಭ ಹಾರೈಸಿ ಕೆಲ ಕಾಲ ಕಳೆದಿದ್ದರು. ಅಲ್ಲದೇ ದಾವಣಗೆರೆಗೆ ಕಾರಿನಲ್ಲಿ ತೆರಳಿದ್ದ ಈ ಐವರು ಕಾರಿನಲ್ಲಿ ಕುಳಿತು ಸೆಲ್ಫಿ ತೆಗೆದು ತಮ್ಮ ತಂದೆಗೆ ಕಳುಹಿಸಿ, ಖುಷಿ ಹಂಚಿಕೊಂಡಿದ್ದರು. ಆದರೆ, ಮರಳಿ ಬರುವ ವೇಳೆ ಮಕ್ಕಳು, ಹಂಡಿ ಮತ್ತು ಜಿಗಜಿನ್ನಿ ಕುಟುಂಬದಲ್ಲಿ ವಿಧಿಯ ಆಟ ಮೆರೆದಿದೆ.

ಆಘಾತ ವ್ಯಕ್ತಪಡಿಸಿದ ಸಿದ್ದರಾಮಯ್ಯ: ಆನಂದ ಜಿಗಜಿನ್ನಿ ಅವರ ಕುಟುಂಬದವರ ಸಾವಿನ ಸುದ್ದಿ ತಿಳಿದು ಮಾಜಿ ಸಿಎಂ ಸಿದ್ದರಾಮಯ್ಯ ಕೂಡ ತೀವ್ರ ಆಘಾತ ವ್ಯಕ್ತಪಡಿಸಿ, ಕುಟುಂಬಕ್ಕೆ ದುಃಖ ಸಹಿಸುವ ಶಕ್ತಿ ನೀಡಲಿ ಎಂದು ಪ್ರಾರ್ಥಿಸಿದ್ದಾರೆ.

ಗಣ್ಯರ ಸಾಂತ್ವನ: ಮಾಜಿ ಸಚಿವ ಎಚ್.ವೈ. ಮೇಟಿ, ನಗರದ ಹಲವು ಗಣ್ಯರು, ವೈದ್ಯರು, ಗೆಳೆಯರು, ಸಂಬಂಧಿಕರು, ಪತ್ರಕರ್ತರು ಮನೆಗೆ ಭೇಟಿ ನೀಡಿ, ಜಿಗಜಿನ್ನಿ ಕುಟುಂಬಕ್ಕೆ ಸಾಂತ್ವನ ಹೇಳುವ ಪ್ರಯತ್ನ ಮಾಡಿದರು.

ಟಾಪ್ ನ್ಯೂಸ್

1-chali

Dakshina Kannada and Udupi: ಮುಂಜಾನೆ ಚುಮುಚುಮು ಚಳಿ

1-deee

Udupi; ಪೊಲೀಸ್‌ ಇಲಾಖೆ ವಿರುದ್ಧ ಹಿಂದೂ ಸಂಘಟನೆಗಳ ಪ್ರತಿಭಟನೆ

Shiralakoppa: ಹೋರಿ ತಿವಿದು ಬೈಕ್‌ ಸವಾರ ಸಾವು

Shiralakoppa: ಹೋರಿ ತಿವಿದು ಬೈಕ್‌ ಸವಾರ ಸಾವು

Kamsale-kumaraswami

Mysuru: ‘ಕೋಲು ಮಂಡೆ ಜಂಗಮ’ ಹಾಡು ನೃತ್ಯ ಸಂಯೋಜಕ ಕಂಸಾಳೆ ಕಲಾವಿದ ಕುಮಾರಸ್ವಾಮಿ ನಿಧನ

Khadri–cm

Gift: ಶಿಗ್ಗಾವಿಯಲ್ಲಿ ನಾಮಪತ್ರ ವಾಪಸ್‌ ಪಡೆದ ಖಾದ್ರಿಗೆ ಹೆಸ್ಕಾಂ ಅಧ್ಯಕ್ಷಗಿರಿ ಹುದ್ದೆ!

DVG-Tagaru

Davanagere: ʼಸೋಲಿಲ್ಲದ ಸರದಾರʼ ಎನಿಸಿದ್ದ ʼಬೆಳ್ಳೂಡಿ ಕಾಳಿʼ ಟಗರು ಅನಾರೋಗ್ಯದಿಂದ ನಿಧನ

1-IFFI

IFFI 2024; ಫಿಲ್ಮ್ ಬಜಾರ್: ಮತ್ತೊಂದು ಯಶಸ್ವಿ ಮುನ್ನುಡಿಯೊಂದಿಗೆ ಉತ್ಸವ ಸಮಾಪನ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಮುಧೋಳ: ಹಲಗಲಿಯಲ್ಲಿ ಸಾಂಸ್ಕೃತಿಕ ಭವನ ನಿರ್ಮಾಣಕ್ಕೆ ಸಾಥ್‌

ಮುಧೋಳ: ಹಲಗಲಿಯಲ್ಲಿ ಸಾಂಸ್ಕೃತಿಕ ಭವನ ನಿರ್ಮಾಣಕ್ಕೆ ಸಾಥ್‌

Bisanala-Dairy

Achievement: ಮಹಾಲಿಂಗಪುರದ ಬಿಸನಾಳ ಹಾಲಿನ ಡೇರಿಗೆ ಕೇಂದ್ರದ ಪ್ರಶಸ್ತಿ ಗರಿ!

Bagalakote-Dryer

Bagalakote: ಪ್ರೇಯಸಿ ಗೆಳತಿ ಹ*ತ್ಯೆಗೆ ಸಂಚು; ಕೊನೆಗೆ ಕೈ ಕಳೆದುಕೊಂಡಿದ್ದು ಪ್ರೇಮಿಯೇ!  

70 ವಿದ್ಯಾರ್ಥಿಗಳಿಗೆ ಒಂದೇ ಶೌಚಾಲಯ; ಮೂತ್ರ ವಿಸರ್ಜನೆಗೆ ಬಯಲೇ ಗತಿ

70 ವಿದ್ಯಾರ್ಥಿಗಳಿಗೆ ಒಂದೇ ಶೌಚಾಲಯ; ಮೂತ್ರ ವಿಸರ್ಜನೆಗೆ ಬಯಲೇ ಗತಿ

Mudhol: ಕೈಕೊಟ್ಟ ಬೆಳೆ… ಸಾಲಬಾಧೆಗೆ ಹೆದರಿ ನೇಣಿಗೆ ಶರಣಾದ ರೈತ

Mudhol: ಕೈಕೊಟ್ಟ ಬೆಳೆ… ಸಾಲಬಾಧೆಗೆ ಹೆದರಿ ನೇಣಿಗೆ ಶರಣಾದ ರೈತ

MUST WATCH

udayavani youtube

ಎದೆ ನೋವು, ಮಧುಮೇಹ, ಥೈರಾಯ್ಡ್ ,ಸಮಸ್ಯೆಗಳಿಗೆ ಪರಿಹಾರ ತೆಂಗಿನಕಾಯಿ ಹೂವು

udayavani youtube

ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು

udayavani youtube

ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?

udayavani youtube

ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್‌ |

udayavani youtube

ಕೊಲ್ಲೂರಿನಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಡಿಸಿಎಂ ಡಿ ಕೆ ಶಿವಕುಮಾರ್

ಹೊಸ ಸೇರ್ಪಡೆ

1-chali

Dakshina Kannada and Udupi: ಮುಂಜಾನೆ ಚುಮುಚುಮು ಚಳಿ

1-deee

Udupi; ಪೊಲೀಸ್‌ ಇಲಾಖೆ ವಿರುದ್ಧ ಹಿಂದೂ ಸಂಘಟನೆಗಳ ಪ್ರತಿಭಟನೆ

Shikaripur: ಊಟ ಮಾಡುತ್ತಿದ್ದ ತಂದೆಯ ಕೊಂದ ಮಗ

Shikaripur: ಊಟ ಮಾಡುತ್ತಿದ್ದ ತಂದೆಯ ಕೊಂದ ಮಗ

Mandya: ಕದ್ದ ಚಿನ್ನ ಮನೆ ಮುಂದೆ ಇಟ್ಟು ಹೋದ ಕಳ್ಳರು!

Mandya: ಕದ್ದ ಚಿನ್ನ ಮನೆ ಮುಂದೆ ಇಟ್ಟು ಹೋದ ಕಳ್ಳರು!

Shiralakoppa: ಹೋರಿ ತಿವಿದು ಬೈಕ್‌ ಸವಾರ ಸಾವು

Shiralakoppa: ಹೋರಿ ತಿವಿದು ಬೈಕ್‌ ಸವಾರ ಸಾವು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.