ಕೈ ತೊರೆದು ಕಮಲ ಹಿಡಿತಾರಾ ಶಾಸಕ ಡಾ.ಸುಧಾಕರ್‌?

ಲೋಕ ಫ‌ಲಿತಾಂಶದ ಬಳಿಕ ಆಪರೇಷನ್‌ ಕಮಲ ಚುರುಕು • ಸುಧಾಕರ್‌ ಎಸ್ಸೆಎಂಕೆ ಭೇಟಿ ತಂದ ಕುತೂಹಲ

Team Udayavani, May 27, 2019, 8:01 AM IST

cb-tdy-1

ಚಿಕ್ಕಬಳ್ಳಾಪುರ: ಲೋಕಸಭಾ ಚುನಾವಣೆಯ ಫ‌ಲಿತಾಂಶದ ಬಳಿಕ ರಾಜ್ಯದಲ್ಲಿ ಮತ್ತೆ ಆಪರೇಷನ್‌ ಕಮಲ ಭಾರೀ ಸದ್ದು ಮಾಡುತ್ತಿರುವ ಬೆನ್ನಲ್ಲೇ ಚಿಕ್ಕಬಳ್ಳಾಪುರ ಶಾಸಕ ಡಾ.ಕೆ.ಸುಧಾಕರ್‌ ಆಪರೇಷನ್‌ ಕಮಲದ ಮುಂಚೂಣಿಯಲ್ಲಿರುವ ಅತೃಪ್ತ ಶಾಸಕ ರಮೇಶ್‌ ಜಾರಕಿಹೊಳಿ ಜೊತೆ ಸೇರಿ ಮಾಜಿ ಮುಖ್ಯಮಂತ್ರಿ ಹಾಗೂ ಬಿಜೆಪಿ ಹಿರಿಯ ನಾಯಕ ರಾಗಿರುವ ಎಸ್‌.ಎಂ.ಕೃಷ್ಣರನ್ನು ಭೇಟಿ ಮಾಡಿರುವುದು ಜಿಲ್ಲೆಯ ರಾಜಕೀಯ ವಲಯದಲ್ಲಿ ಕುತೂಹಲ ಮೂಡಿಸಿದೆ.

ಮೈತ್ರಿ ಸರ್ಕಾರದಲ್ಲಿ ಸಚಿವ ಸ್ಥಾನ ಹಾಗೂ ನಿಗಮ ಮಂಡಳಿ ಅವಕಾಶ ಸಿಗದಿದ್ದಕ್ಕೆ ಅಸಮಾಧಾನ ಗೊಂಡಿರುವ ಶಾಸಕ ಡಾ.ಕೆ.ಸುಧಾಕರ್‌ ಕಾಂಗ್ರೆಸ್‌ ತೊರೆದು ಕಮಲ ಹಿಡಿತಾರಾ ಎಂಬ ಊಹಾಪೋಹದ ಚರ್ಚೆ ಲೋಕಸಭಾ ಚುನಾವಣೆಫ‌ಲಿತಾಂಶ ಹೊರ ಬಿದ್ದ ಬಳಿಕ ಬಿರುಸುಗೊಂಡಿದ್ದು, ಶಾಸಕರ ಸದ್ಯದ ರಾಜಕೀಯ ನಡೆ ಕುತೂಹಲಕಾರಿಯಾಗಿದೆ.

ಸುಧಾಕರ್‌ ನೇಮಕಕ್ಕೆ ಸಿಎಂ ಅಡ್ಡಿ: ರಾಜ್ಯದಲ್ಲಿ ಮೈತ್ರಿ ಸರ್ಕಾರ ಅಸ್ತಿತ್ವಕ್ಕೆ ಬಂದಾಗಿನಿಂದಲೂ ಸಚಿವ ಸಚಿವ ಸ್ಥಾನಕ್ಕಾಗಿ ನಿರಂತರ ಪ್ರಯತ್ನದಲ್ಲಿರುವ ಸುಧಾಕರ್‌ಗೆ ಹಲವು ಬಾರಿ ಹಿನ್ನಡೆಯಾಗಿದ್ದು, ಕಾಂಗ್ರೆಸ್‌ನ ಅನೇಕ ನಾಯಕರ ಅಡ್ಡಗಾಲಿನಿಂದ ಸಚಿವ ಸ್ಥಾನ ಕೊನೆ ಗಳಿಗೆಯಲ್ಲಿ ಕೈ ತಪ್ಪುವಂತಾಯಿತು.

ಬಳಿಕ ನಿಗಮ ಮಂಡಳಿಗಳಲ್ಲಿ ಅವಕಾಶ ಸಿಗುತ್ತೆ ಯೆಂಬ ನಿರೀಕ್ಷೆಯಲ್ಲಿದ್ದಾಗಲೂ ಪಕ್ಷದ ರಾಷ್ಟ್ರೀಯ ನಾಯಕರೇ ಪರಿಸರ ಮಾಲಿನ್ಯ ನಿಯಂತ್ರಣ ಮಂಡಳಿಗೆ ಶಿಫಾರಸು ಮಾಡಿದರೂ ಮುಖ್ಯಮಂತ್ರಿ ಹೆಚ್.ಡಿ. ಕುಮಾರಸ್ವಾಮಿ ಸುಧಾಕರ್‌ ನೇಮಕಕ್ಕೆ ತಡೆಯೊಡ್ಡಿದ್ದರಿಂದ ಕೈಗೆ ಬಂದ ತುತ್ತು ಬಾಯಿಗೆ ಬರಲಿಲ್ಲ.

ಹೀಗಾಗಿ ಮೈತ್ರಿ ಸರ್ಕಾರದ ವಿರುದ್ಧ ಬಹಿರಂಗ ವಾಗಿಯೇ ಅಸಮಾಧಾನ ಹೊರ ಹಾಕುತ್ತಿರುವ ಶಾಸಕರು ಪಕ್ಷ ತೊರೆಯುವ ಚಿಂತನೆಯಲ್ಲಿದ್ದಾರೆಂದು ಅವರ ಆಪ್ತ ಮೂಲಗಳು ಹೇಳುತ್ತಿವೆ.

ಅತೃಪ್ತರ ಜೊತೆ ಸಂಪರ್ಕ: ಲೋಕ ಫ‌ಲಿತಾಂಶ ಬಳಿಕ ಬಿಜೆಪಿ, ರಾಜ್ಯದ ಆಡಳಿತದ ಚುಕ್ಕಾಣಿ ಹಿಡಿಯಲು ಆಪರೇಷನ್‌ ಕಮಲಕ್ಕೆ ಮತ್ತೆ ಕೈ ಹಾಕಿದೆಯೆಂಬ ಮಾತು ಕೇಳಿ ಬರುತ್ತಿರುವ ಬೆನ್ನಲ್ಲೇ ಕ್ಷೇತ್ರಕ್ಕೆ ಕಾಲಿಡದೇ ಬೆಂಗಳೂರಿನಲ್ಲಿ ಬೀಡು ಬಿಟ್ಟು ಕಾಂಗ್ರೆಸ್‌ನ ಕೆಲ ಅತೃಪ್ತ ಶಾಸಕರ ಜೊತೆ ನಿಕಟ ಸಂಪರ್ಕದಲ್ಲಿದ್ದಾರೆಂಬ ಮಾತು ಕೇಳಿ ಬರುತ್ತಿದೆ.

ಹೀಗಾಗಿಯೇ ಮಾಜಿ ಸಚಿವ ಕಾಂಗ್ರೆಸ್‌ನ ಅತೃಪ್ತ ಶಾಸಕರ ಬಣದ ನಾಯಕರಾಗಿರುವ ರಮೇಶ್‌ ಜಾರಕಿಹೊಳಿ ಭಾನುವಾರ ಖುದ್ದು ಶಾಸಕ ಡಾ.ಕೆ.ಸುಧಾಕರ್‌ ಮನೆಗೆ ಭೇಟಿ ನೀಡಿರುವುದು ಆಪರೇಷನ್‌ ಕಮಲಕ್ಕೆ ಒಳಾಗುತ್ತಾರೆಂಬ ಊಹಾಪೋಹಗಳಿಗೆ ರೆಕ್ಕೆಪುಕ್ಕ ಬಂದಂತಾಗಿದೆ.

ಬಿಜೆಪಿ ಸೇರಿದರೆ ಸಚಿವ ಸ್ಥಾನದ ಕನಸು ನನಸು ಮಾಡಿಕೊಳ್ಳಬಹುದೆಂಬ ಆಕಾಂಕ್ಷೆ ಹೊಂದಿದ್ದಾರೆ ಎನ್ನಲಾಗುತ್ತಿದೆ. ಮಾಜಿ ಸಿಎಂ ಎಸ್‌.ಎಂ.ಕೃಷ್ಣರನ್ನು ಭೇಟಿ ಮಾಡಿರುವುದು ಸೌಜನ್ಯದ ಭೇಟಿಯೆಂದು ಹೇಳುತ್ತಿದ್ದರೂ ಇದೇ ಸಂದರ್ಭದಲ್ಲಿ ಎಸ್‌.ಎಂ.ಕೃಷ್ಣ ಮನೆಗೆ ಬಿಜೆಪಿ ರಾಜ್ಯಾಧ್ಯಕ್ಷ ಬಿ.ಎಸ್‌.ಯಡಿಯೂರಪ್ಪ ಮತ್ತಿತರ ಬಿಜೆಪಿ ನಾಯಕರು ಸೇರಿ ಚರ್ಚೆ ನಡೆಸಿರುವುದು ಕುತೂಹಲಕ್ಕೆ ಎಡೆಮಾಡಿ ಕೊಟ್ಟಿದೆ.

ಈ ಹಿಂದೆಯೆಲ್ಲಾ ಆಪರೇಷನ್‌ ಕಮಲದ ಮೊದಲ ಪಟ್ಟಿಯಲ್ಲಿರುವ ಶಾಸಕ ಸುಧಾಕರ್‌ ಅವರು ಹಿಂದೊಮ್ಮೆ ಅತೃಪ್ತ ಶಾಸಕರ ಜೊತೆ ಮುಂಬೈಗೂ ಹೋಗಿದ್ದರು. ಈ ವಿಚಾರವನ್ನು ಖುದ್ದು ಬಿಜೆಪಿ ರಾಜ್ಯಾಧ್ಯಕ್ಷ ಬಿ.ಎಸ್‌.ಯಡಿಯೂರಪ್ಪ ಹೇಳಿದ್ದ ಆಡಿಯೋದಲ್ಲಿ ಬಹಿರಂಗಗೊಂಡಿತ್ತು. ಇದೀಗ ಮತ್ತೆ ಆಪರೇಷನ್‌ ಕಮಲದ ಗುಮ್ಮ ಭಾರೀ ಸುದ್ದು ಮಾಡುತ್ತಿರುವ ಸಂದರ್ಭದಲ್ಲಿ ಶಾಸಕ ಸುಧಾಕರ್‌ರ ರಾಜಕೀಯ ನಡೆ ಸಾಕಷ್ಟು ಕುತೂಹಲ ಹಾಗೂ ಚರ್ಚೆಗೆ ಗ್ರಾಸವಾಗಿದೆ.

ಟಾಪ್ ನ್ಯೂಸ್

Maha-Election

Assembly Election: ಮಹಾರಾಷ್ಟ್ರ ಗೆಲ್ಲಲು 10 ಗ್ಯಾರಂಟಿಗಳ ಕೊಟ್ಟ ʼಮಹಾಯುತಿʼ!

HDD–By-election

By Election: ಮುಖ್ಯಮಂತ್ರಿ ಗರ್ವದ ಸೊಕ್ಕು ಮುರಿಯಬೇಕು: ಎಚ್‌.ಡಿ.ದೇವೇಗೌಡ ಗುಡುಗು

ರೈಲು ಬುಕಿಂಗ್‌, ಟ್ರ್ಯಾಕ್‌ಗೆ ‘’ಸೂಪರ್‌ಆ್ಯಪ್‌’: ಮುಂದಿನ ತಿಂಗಳು ಬಿಡುಗಡೆ

Super App: ರೈಲು ಬುಕಿಂಗ್‌, ಟ್ರ್ಯಾಕ್‌ಗೆ ‘’ಸೂಪರ್‌ಆ್ಯಪ್‌’: ಮುಂದಿನ ತಿಂಗಳು ಬಿಡುಗಡೆ

High-Court

Kambala: ಪೆಟಾ ಪಿಐಎಲ್‌; ವಿಚಾರಣೆ ನ.12ಕ್ಕೆ ಮುಂದೂಡಿದ ಹೈಕೋರ್ಟ್‌

CM-Shiigavi-2

MUDA Case: ಕೇವಲ 14 ಸೈಟ್‌ಗಾಗಿ ನಾನು ರಾಜಕಾರಣ ಮಾಡಬೇಕಾ?: ಸಿಎಂ ಸಿದ್ದರಾಮಯ್ಯ

vidan-soudha-kannada

Golden Jubilee: ಕನ್ನಡವೇ ಅಧಿಕಾರಿಗಳ‌ ಹೃದಯದ ಭಾಷೆ ಆಗಲಿ

KSRTC

Transport: ಕೆಎಸ್ಸಾರ್ಟಿಸಿ ದಾಖಲೆ: ಒಂದೇ ದಿನ 1.23 ಕೋಟಿ ಮಂದಿ ಪ್ರಯಾಣ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಹಳ್ಳಕ್ಕೆ ಬಿದ್ದು ಓಮ್ನಿ ಕಾರು ಸ್ಫೋಟ: ಒಬ್ಬ ಮೃತ

Chintamani: ಹಳ್ಳಕ್ಕೆ ಬಿದ್ದು ಓಮ್ನಿ ಕಾರು ಸ್ಫೋಟ; ಒಬ್ಬ ಮೃತ

Waqf Issue: BJP protest against the Congress government across the state on November 4

Waqf Issue: ನ.4ರಂದು ರಾಜ್ಯಾದ್ಯಂತ ಕಾಂಗ್ರೆಸ್ ಸರ್ಕಾರದ ವಿರುದ್ದ ಬಿಜೆಪಿ ಪ್ರತಿಭಟನೆ

10-gudibande

Gudibande: ಕಲ್ಯಾಣಿಯಲ್ಲಿ ಬಿದ್ದು ಯುವಕ ಸಾವು

ಪರಿಶಿಷ್ಟರ ಮೇಲೆ ದೌರ್ಜನ್ಯ; 7 ವರ್ಷದಲ್ಲಿ 488 ಪ್ರಕರಣ!

ಪರಿಶಿಷ್ಟರ ಮೇಲೆ ದೌರ್ಜನ್ಯ; 7 ವರ್ಷದಲ್ಲಿ 488 ಪ್ರಕರಣ!

13-

Gudibanda: ದೇವಸ್ಥಾನದಲ್ಲಿ ಕಳವು; ಆರೋಪಿಗಳು ಪೊಲೀಸ್ ವಶಕ್ಕೆ

MUST WATCH

udayavani youtube

ಗೋವಿನ ಪೂಜೆ ಯಾಕಾಗಿ ಮಾಡಬೇಕು?

udayavani youtube

ಮೇಲುಕೋಟೆಯಲ್ಲಿ ದೀಪಾವಳಿ ಆಚರಿಸುವುದಿಲ್ಲ ಎಂಬ ಮಾತು ನಿಜವೋ ಸುಳ್ಳೋ

udayavani youtube

ಗಣಪತಿ ಸಹಕಾರಿ ವ್ಯವಸಾಯಕ ಸಂಘ ‘ನಿ.’ ಕೆಮ್ಮಣ್ಣು ಶತಾಭಿವಂದನಂ ಸಮಾರೋಪ ಸಂಭ್ರಮ ಸಂಪನ್ನ

udayavani youtube

ಉದಯವಾಣಿ’ಚಿಣ್ಣರ ಬಣ್ಣ -2024

udayavani youtube

ಹಬ್ಬದ ಊಟವೇ ಈ ಹೋಟೆಲ್ ನ ಸ್ಪೆಷಾಲಿಟಿ

ಹೊಸ ಸೇರ್ಪಡೆ

Maha-Election

Assembly Election: ಮಹಾರಾಷ್ಟ್ರ ಗೆಲ್ಲಲು 10 ಗ್ಯಾರಂಟಿಗಳ ಕೊಟ್ಟ ʼಮಹಾಯುತಿʼ!

HDD–By-election

By Election: ಮುಖ್ಯಮಂತ್ರಿ ಗರ್ವದ ಸೊಕ್ಕು ಮುರಿಯಬೇಕು: ಎಚ್‌.ಡಿ.ದೇವೇಗೌಡ ಗುಡುಗು

ರೈಲು ಬುಕಿಂಗ್‌, ಟ್ರ್ಯಾಕ್‌ಗೆ ‘’ಸೂಪರ್‌ಆ್ಯಪ್‌’: ಮುಂದಿನ ತಿಂಗಳು ಬಿಡುಗಡೆ

Super App: ರೈಲು ಬುಕಿಂಗ್‌, ಟ್ರ್ಯಾಕ್‌ಗೆ ‘’ಸೂಪರ್‌ಆ್ಯಪ್‌’: ಮುಂದಿನ ತಿಂಗಳು ಬಿಡುಗಡೆ

High-Court

Kambala: ಪೆಟಾ ಪಿಐಎಲ್‌; ವಿಚಾರಣೆ ನ.12ಕ್ಕೆ ಮುಂದೂಡಿದ ಹೈಕೋರ್ಟ್‌

CM-Shiigavi-2

MUDA Case: ಕೇವಲ 14 ಸೈಟ್‌ಗಾಗಿ ನಾನು ರಾಜಕಾರಣ ಮಾಡಬೇಕಾ?: ಸಿಎಂ ಸಿದ್ದರಾಮಯ್ಯ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.