ಸೂಕ್ಷ್ಮ ಪ್ರದೇಶಗಳತ್ತ ಹೆಚ್ಚಿನ ಗಮನ ಹರಿಸಿ: ಅನುಬ್ ಕುಮಾರ್
Team Udayavani, May 27, 2019, 12:05 PM IST
ಮಡಿಕೇರಿ: ಸದ್ಯದಲ್ಲಿಯೇ ಮುಂಗಾರು ಆರಂಭವಾಗಲಿದ್ದು, ಈಗಾ ಗಲೇ ಗುರುತಿಸಲಾಗಿರುವ ಸೂಕ್ಷ್ಮ ಪ್ರದೇಶಗಳ ಬಗ್ಗೆ ಹೆಚ್ಚಿನ ಗಮನ ಹರಿಸು ವಂತೆ ನೋಡಲ್ ಅಧಿಕಾರಿಗಳಿಗೆ ಜಿಲ್ಲಾ ಉಸ್ತುವಾರಿ ಕಾರ್ಯದರ್ಶಿ ಅನುº ಕುಮಾರ್ ಅವರು ಸೂಚಿಸಿದ್ದಾರೆ.
ನಗರದ ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ಬರ ಮತ್ತು ಮುಂಗಾರು ಸಂಬಂಧ ಶನಿವಾರ ನಡೆದ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು.
ಪ್ರಕೃತಿ ವಿಕೋಪ ಎದುರಿಸುವ ನಿಟ್ಟಿನಲ್ಲಿ ಈಗಾಗಲೇ ಗುರುತಿಸಲಾಗಿರುವ ಸೂಕ್ಷ್ಮ ಪ್ರದೇಶಗಳಿಗೆ ನೋಡಲ್ ಅಧಿಕಾರಿಗಳು ಭೇಟಿ ನೀಡಿ ಅಲ್ಲಿನ ಸಮಸ್ಯೆಗಳು ಹಾಗೂ ಪರಿಹಾರ ಬಗ್ಗೆ ಮಾಹಿತಿ ಪಡೆಯಬೇಕು. ರಸ್ತೆ, ವಿದ್ಯುತ್ ಸಂಪರ್ಕ, ಕುಡಿಯುವ ನೀರು ಮತ್ತಿತರ ಸೌಕರ್ಯ ಇವೆಯೇ ಎಂಬುದನ್ನು ಗಮನಹರಿಸಬೇಕು ಎಂದು ಜಿಲ್ಲಾ ಉಸ್ತುವಾರಿ ಕಾರ್ಯದರ್ಶಿ ವಿ. ಅನುºಕುಮಾರ್ ಅವರು ತಿಳಿಸಿದ್ದಾರೆ.
ರಾಷ್ಟ್ರೀಯ ಹೆದ್ದಾರಿ ಸೇರಿದಂತೆ ಲೋಕೋಪಯೋಗಿ, ಪಂಚಾಯತ್ ರಾಜ್ ಮತ್ತು ಪ್ರಧಾನಮಂತ್ರಿ ಗ್ರಾಮ ಸಡಕ್ ಯೋಜನೆಯ ಬಾಕಿ ಇರುವ ಕಾಮಗಾರಿಗಳನ್ನು ತ್ವರಿತವಾಗಿ ಪೂರ್ಣ ಗೊಳಿಸುವಂತೆ ವಿ.ಅನುºಕುಮಾರ್ ಸೂಚಿಸಿದರು.
ಸದ್ಯದಲ್ಲೇ ಮುಂಗಾರು ಆರಂಭ ವಾಗಲಿದ್ದು, ಈ ಹಿನ್ನೆಲೆ ಜಿಲ್ಲಾಡಳಿತ ಪ್ರಕೃತಿ ವಿಕೋಪ ಎದುರಿಸುವ ನಿಟ್ಟಿನಲ್ಲಿ ಇದುವರೆಗೆ ಕೈಗೊಳ್ಳಲಾಗಿರುವ ಸಿದ್ಧತೆ ಬಗ್ಗೆ ಜನಪ್ರತಿನಿಧಿಗಳು, ಸರ್ಕಾರೇತರ ಸಂಸ್ಥೆಗಳು ಹಾಗೂ ಇತರರಿಗೆ ಮಾಹಿತಿ ನೀಡುವ ನಿಟ್ಟಿನಲ್ಲಿ ಸಭೆ ಆಹ್ವಾನಿಸುವಂತೆ ಜಿಲ್ಲಾ ಉಸ್ತುವಾರಿ ಕಾರ್ಯದರ್ಶಿ ಅನುºಕುಮಾರ್ ಸಲಹೆ ಮಾಡಿದರು.
ಪರಿಹಾರ ಕೇಂದ್ರ ಗುರ್ತಿಸಿಕೊಳ್ಳುವುದು, ಆಸ್ಪತ್ರೆಗಳಲ್ಲಿ ಆ್ಯಂಬ್ಯುಲೆನ್ಸ್ ಸೇವೆ, ಔಷಧಿ, ಇತರೆ ಅಗತ್ಯ ಸಿದ್ಧತೆ ಮಾಡಿಕೊಳ್ಳಬೇಕು. ಆಹಾರ ಪೂರೈಕೆಯಿಂದ ಅಡುಗೆ ಅನಿಲ, ಆಹಾರ ದಾಸ್ತಾನು ಮಾಡಿಕೊಳ್ಳಬೇಕು. ಪೊಲೀಸ್, ವೈದ್ಯಕೀಯ, ಗೃಹ ರಕ್ಷಕ ದಳ ಸೇವೆಗಳ ಅಗತ್ಯ ಸನ್ನದು ಮಾಡಿಕೊಂಡಿರಬೇಕು ಎಂದು ಜಿಲ್ಲಾ ಉಸ್ತುವಾರಿ ಕಾರ್ಯದರ್ಶಿ ಅವರು ತಿಳಿಸಿದರು.
ನೋಡಲ್ ಅಧಿಕಾರಿಗಳಾದ ಚಂದ್ರ ಶೇಖರ್ ಅವರು ಸೂಕ್ಷ್ಮ ಪ್ರದೇಶಗಳಲ್ಲಿನ ಕುಟುಂಬದವರಿಗೆ ಮೂರು ತಿಂಗಳ ಮಟ್ಟಿಗಾದರೂ ಸೀಮೆಎಣ್ಣೆ ವಿತರಿಸಬೇಕು. ಗರ್ವಾಲೆಯ ಉಪ ಆರೋಗ್ಯ ಕೇಂದ್ರದಲ್ಲಿ ವೈದ್ಯರು ಹಾಗೂ ಶ್ರುಶ್ರೂಷಕರನ್ನು ನಿಯೋಜಿಸುವುದು, ಮಳೆಗಾಲದಲ್ಲಿ ರಸ್ತೆ ಬಂದ್ ಆಗುವುದನ್ನು ತಪ್ಪಿಸಲು ಅಗತ್ಯ ಕ್ರಮ ಕೈಗೊಳ್ಳುವುದು ಮತ್ತಿತರ ಬೇಡಿಕೆಗಳು ಇವೆ ಎಂದು ಅವರು ಮಾಹಿತಿ ನೀಡಿದರು.
ಜಿ.ಪಂ.ಸಿಇಒ ಕೆ.ಲಕ್ಷ್ಮೀಪ್ರಿಯಾ, ಎಸ್. ಪಿ. ಸುಮನ್ ಡಿ.ಪೆನ್ನೇಕರ್, ಜಿ.ಪಂ.ಉಪ ಕಾರ್ಯದರ್ಶಿ ಗುಡೂರು ಭೀಮಸೇನ, ಉಪ ವಿಭಾಗಾಧಿಕಾರಿ ಟಿ.ಜವರೇಗೌಡ, ಭೂ ದಾಖಲೆಗಳ ಸಹಾಯಕ ನಿರ್ದೇಶಕರಾದ ಷಂಶುದ್ದೀನ್, ಲೋಕೋಪಯೋಗಿ ಇಲಾಖೆ ಎಂಜಿನಿಯರ್ ಇಬ್ರಾಹಿಂ, ಜಿ.ಪಂ. ಕುಡಿಯುವ ನೀರು ವಿಭಾಗದ ಎಂಜಿನಿಯರ್ ರೇವಣ್ಣವರ್, ರಾಷ್ಟ್ರೀಯ ಹೆದ್ದಾರಿ ವಿಭಾಗದ ಎಂಜಿನಿಯರ್ ಹೊಳ್ಳ, ನೋಡಲ್ ಅಧಿಕಾರಿಗಳು ಉಪಸ್ಥಿತರಿದ್ದರು.
ಅಣಕು ಪ್ರದರ್ಶನ
ಈಗಾಗಲೇ ಸೂಕ್ಷ್ಮ ಪ್ರದೇಶಗಳು ಸೇರಿದಂತೆ ಹಲವು ಕಡೆಗಳಿಗೆ ಭೇಟಿ ನೀಡಲಾಗುತ್ತಿದೆ. ಅಲ್ಲಿನ ಪರಿಸ್ಥಿತಿ ಬಗ್ಗೆ ಮಾಹಿತಿ ಪಡೆಯಲಾಗುತ್ತಿದೆ. ಮುಂಜಾಗ್ರತ ಕ್ರಮವಾಗಿ ಜಿಲ್ಲೆಗೆ ಎನ್‌ಡಿಆರ್‌ಎಫ್ ತಂಡ ಆಗಮಿಸಲಿದ್ದು, ಸೂಕ್ಷ್ಮ ಪ್ರದೇಶಗಳಿಗೆ ಭೇಟಿ ನೀಡಲಿದ್ದಾರೆ ಎಂದು ಜಿಲ್ಲಾಧಿಕಾರಿ ಅವರು ತಿಳಿಸಿದರು. ಹಾಗೆಯೇ ಮೇ 28 ಮತ್ತು 29 ರಂದು ಭಾರತೀಯ ಸೇನೆ, ಪೊಲೀಸ್, ಅಗ್ನಿಶಾಮಕ ಇಲಾಖೆ ಇತರೆ ತಂಡದವರು ಭೂಕುಸಿತ ಪ್ರದೇಶವೆಂದು ಗುರ್ತಿಸಲಾಗಿರುವ ಹೆಬ್ಬೆಟಗೇರಿ ಹಾಗೂ ಪ್ರವಾಹ ಪೀಡಿತ ಪ್ರದೇಶವೆಂದು ಗುರ್ತಿಸಲಾಗಿರುವ ಹಟ್ಟಿಹೊಳೆಯಲ್ಲಿ ಅಣಕು ಪ್ರದರ್ಶನ ನಡೆಸಲಿದ್ದಾರೆ ಎಂದು ಜಿಲ್ಲಾಧಿಕಾರಿ ಅವರು ಹೇಳಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು
ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?
ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್ |
ಕೊಲ್ಲೂರಿನಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಡಿಸಿಎಂ ಡಿ ಕೆ ಶಿವಕುಮಾರ್
ಉಡುಪಿ ಶ್ರೀ ಕೃಷ್ಣ ಮಠದಲ್ಲಿ ಬೃಹತ್ ಗೀತೋತ್ಸವಕ್ಕೆ ಅದ್ದೂರಿ ಚಾಲನೆ|
ಹೊಸ ಸೇರ್ಪಡೆ
Vijayapura: ಜಿಲ್ಲಾಸ್ಪತ್ರೆಯಲ್ಲಿ ಒಂದು ವರ್ಷದ ಮಗು ಅಪಹರಣ: ಸಿಸಿಟಿವಿಯಲ್ಲಿ ದೃಶ್ಯ
Kundgol: ವಿದ್ಯುತ್ ಕಂಬಕ್ಕೆ ಡಿಕ್ಕಿ ಹೊಡೆದು ಬೈಕ್; ಸವಾರರು ಕಣ್ಮರೆ
Smart meters: ನೀರು ಸಂರಕ್ಷಿಸುವ ವಿಚಾರದಲ್ಲಿ ಕ್ರಾಂತಿ ಮಾಡಿದ ಸ್ಮಾರ್ಟ್ ವಾಟರ್ ಮೀಟರ್
Viral Pics: ಡೇಟಿಂಗ್ ರೂಮರ್ಸ್ ನಡುವೆ ವಿಜಯ್ – ರಶ್ಮಿಕಾ ಸೀಕ್ರೆಟ್ ಲಂಚ್ ಡೇಟ್
Lakkundi: ಹೊಸದಾಗಿ 5 ಬಾವಿ, 5 ಶಾಸನಗಳು, ಸಾವಿರಕ್ಕೂ ಹೆಚ್ಚು ಶಿಲ್ಪಕಲೆಗಳ ಅನ್ವೇಷಣೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.