15 ಗ್ರಾಪಂಗಳ 11 ಸದಸ್ಯರ ಅವಿರೋಧ ಆಯ್ಕೆ
ನಾಲ್ಕು ಸದಸ್ಯ ಸ್ಥಾನಗಳಿಗಷ್ಟೇ ಮೇ 29ರಂದು ಚುನಾವಣೆ • 31ರವರೆಗೆ ಚುನಾವಣಾ ನೀತಿ ಸಂಹಿತೆ ಜಾರಿ
Team Udayavani, May 27, 2019, 1:41 PM IST
ಗ್ರಾಪಂ ಚುನಾವಣೆಯಲ್ಲಿ ಉಂಗುರದ ಬೆರಳಿಗೆ ಶಾಯಿ ಹಾಕುವುದು. (ಕಡತ ಚಿತ್ರ)
ಮಂಡ್ಯ: ರಾಜ್ಯ ಚುನಾವಣಾ ಆಯೋಗದ ನಿರ್ದೇಶನದಂತೆ ಜಿಲ್ಲಾ ವ್ಯಾಪ್ತಿಯಲ್ಲಿ ವಿವಿಧ ಕಾರಣಗಳಿಂದ ತೆರವಾಗಿರುವ 15 ಸದಸ್ಯ ಸ್ಥಾನಗಳ ಪೈಕಿ 11 ಸ್ಥಾನಗಳಿಗೆ ಅವಿರೋಧ ಆಯ್ಕೆಯಾಗಿರುವುದರಿಂದ ಉಳಿದ ನಾಲ್ಕು ಸ್ಥಾನಗಳಿಗೆ ಚುನಾವಣೆ ನಡೆಯಲಿದೆ.
ಅವಿರೋಧ ಆಯ್ಕೆ: ಮಂಡ್ಯ ತಾಲೂಕಿನ ದೊಡ್ಡಗರುಡನಹಳ್ಳಿ -2, ಬೇವಿನಹಳ್ಳಿ-1, ಮದ್ದೂರು ತಾಲೂಕಿನ ಕೆಸ್ತೂರು-1, ನಿಲುವಾಗಿಲು-1, ಕೆ.ಹೊನ್ನಲಗೆರೆ-1, ಮಳವಳ್ಳಿ ತಾಲೂಕಿನ ಹಲಸಹಳ್ಳಿ-1, ಹಲಗೂರು-1, ಪಾಂಡವಪುರ ತಾಲೂಕಿನ ಚಿಕ್ಕಾಡೆ-1, ಕೆ.ಆರ್.ಪೇಟೆ ತಾಲೂಕಿನ ಬಲ್ಲೇನಹಳ್ಳಿ, ನಾಗಮಂಗಲ ತಾಲೂಕಿನ ಕದಬಹಳ್ಳಿಯ ಒಂದು ಸ್ಥಾನಗಳಿಗೆ ಸದಸ್ಯರನ್ನು ಅವಿರೋಧ ಆಯ್ಕೆ ಮಾಡಲಾಗಿದೆ.
ಉಳಿದಂತೆ ಮಂಡ್ಯ ತಾಲೂಕಿನ ಹುಲಿವಾನ, ಮಳವಳ್ಳಿ ತಾಲೂಕಿನ ಬ್ಯಾಡರಹಳ್ಳಿ, ಕೆ.ಆರ್.ಪೇಟೆ ತಾಲೂಕಿನ ಹರಳ ಹಳ್ಳಿಯ ಮೈಲನಹಳ್ಳಿ ಹಾಗೂ ಬೂಕನಕೆರೆಯ ರಂಗನಾಥಪುರ ಗ್ರಾಪಂ ಸದಸ್ಯ ಸ್ಥಾನಗಳಿಗೆ ಮೇ 29ರಂದು ಬೆಳಗ್ಗೆ 7 ಗಂಟೆಯಿಂದ ಸಂಜೆ 5 ಗಂಟೆಯವರೆಗೆ ಚುನಾವಣೆ ನಡೆಯಲಿದೆ.
ಈ ಚುನಾವಣೆಯಲ್ಲಿ ಪ್ರತಿ ಮತಕೇಂದ್ರಕ್ಕೆ ಒಬ್ಬ ಅಧ್ಯಕ್ಷಾಧಿಕಾರಿ, ಒಬ್ಬ ಸಹಾಯಕ ಅಧ್ಯಕ್ಷಾಧಿಕಾರಿ ಹಾಗೂ ಇಬ್ಬರು ಮತಗಟ್ಟೆ ಸಿಬ್ಬಂದಿ ನೇಮಕ ಮಾಡಲಾಗಿದೆ. ಸದರಿ ಚುನಾವಣೆಯಲ್ಲಿ ಮತದಾರರ ಎಡಗೈ ಉಂಗುರದ ಬೆರಳಿಗೆ ಅಳಿಸಲಾಗದ ಶಾಯಿಯನ್ನು ಹಾಕಲಾಗುವುದು.
ಮತ ಚಲಾಯಿಸಲು ಗುರುತಿನ ಚೀಟಿ: ಮತದಾರರು ಮತದಾನ ಮಾಡಲು ಮತಗಟ್ಟೆಗೆ ತೆರಳಿದಾಗ ಭಾರತ ಚುನಾವಣಾ ಆಯೋಗ ನೀಡಿರುವ ಮತದಾರರ ಭಾವಚಿತ್ರವುಳ್ಳ ಗುರುತಿನ ಚೀಟಿಯನ್ನು ಗುರುತಿಗಾಗಿ ಹಾಜರು ಪಡಿಸುವುದು ಅಥವಾ ಅದರ ಬದಲು ಆಧಾರ್ ಕಾರ್ಡ್, ಡ್ರೈವಿಂಗ್ ಲೈಸೆನ್ಸ್, ಪಾಸ್‌ಪೋರ್ಟ್, ಪಡಿತರ ಚೀಟಿ ಸೇರಿದಂತೆ 22 ದಾಖಲೆಗಳು ಹಾಗೂ ಕುಟುಂಬದ ಮುಖ್ಯಸ್ಥರ ಹೆಸರಿನಲ್ಲಿ ನೀಡಲಾಗಿರುವ ದಾಖಲೆಯನ್ನು ಆ ಕುಟುಂಬದ ಇನ್ನಿತರ ಸದಸ್ಯರ ಗುರುತಿಗಾಗಿ ಬಳಸಬಹುದು.
ಮತದಾನ ಶಾಂತಿಯುತವಾಗಿ ನಡೆಯುವುದಕ್ಕೆ ಅಗತ್ಯ ಕ್ರಮ ವಹಿಸಲಾಗಿದೆ. ಅಗತ್ಯ ಪೊಲೀಸ್ ಬಂದೋಬಸ್ತ್ ವ್ಯವಸ್ಥೆ ಮಾಡಲಾಗಿದೆ. ಮತ ಎಣಿಕೆ ಕಾರ್ಯವು ಮೇ 31ರಂದು ಬೆಳಗ್ಗೆ 8 ಗಂಟೆಗೆ ನಡೆಯಲಿದೆ.
ಬ್ಯಾನರ್ ಅಳವಡಿಸುವಂತಿಲ್ಲ: ಅವಿರೋಧವಾಗಿ ಆಯ್ಕೆಯಾಗಿರುವ ಗ್ರಾಮ ಪಂಚಾಯಿತಿಗಳ ವ್ಯಾಪ್ತಿಯಲ್ಲಿ ನೀತಿ ಸಂಹಿತೆ ಜಾರಿಯಲ್ಲಿರುವುದು ತಕ್ಷಣದಿಂದಲೇ ಸ್ಥಗಿತಗೊಂಡಿದೆ. ಉಪ ಚುನಾವಣೆ ನಡೆಯಲಿರುವ ಗ್ರಾಪಂಗಳ ವ್ಯಾಪ್ತಿಯಲ್ಲಿ ಮೇ 31ರವರೆಗೆ ನೀತಿ ಸಂಹಿತೆ ಜಾರಿಯಲ್ಲಿರುತ್ತದೆ. ಗ್ರಾಪಂ ಚುನಾವಣೆಗಳು ಪಕ್ಷರಹಿತ ಚುನಾವಣೆಗಳಾಗಿರುವುದರಿಂದ ರಾಜಕೀಯ ಪಕ್ಷದ ಮುಖಂಡರು ಹಾಗೂ ಸ್ಪರ್ಧಾಳುಗಳು ಯಾವುದೇ ರೀತಿಯಲ್ಲಿ ಕಾನೂನು ಉಲ್ಲಂಘನೆಯಾಗದಂತೆ ಕ್ರಮ ವಹಿಸಬೇಕು. ಚುನಾವಣಾ ಪ್ರಚಾರದ ಅವಧಿಯಲ್ಲಿ ರಾಜಕೀಯ ಪಕ್ಷಗಳು ಸಭೆ-ಸಮಾರಂಭಗಳನ್ನು ಏರ್ಪಡಿಸಿ ವೇದಿಕೆ ಮೇಲೆ ಪಕ್ಷದ ಬಾವುಟ-ಬ್ಯಾನರ್‌ಗಳನ್ನು ಅಳವಡಿಸುವುದು ಮಾಡುವಂತಿಲ್ಲ.
ಚುನಾವಣೆಗೆ ಸ್ಪರ್ಧಿಸಿರುವ ಅಭ್ಯರ್ಥಿಗಳನ್ನು ತಮ್ಮ ಪಕ್ಷದ ಅಥವಾ ಬೆಂಬಲಿತ ಅಭ್ಯರ್ಥಿ ಎಂದು ಅವರ ಪರವಾಗಿ ಮತ ನೀಡಲು ಮತದಾರರನ್ನು ಕೋರುವಂತಿಲ್ಲ. ರಾಜಕೀಯ ಮುಖಂಡರ ಭಾವಚಿತ್ರ, ಪಕ್ಷದ ಚಿಹ್ನೆಯಿರುವ ಕರಪತ್ರಗಳು, ಕಟೌಟ್‌ಗಳು, ಬ್ಯಾನರ್‌ಗಳು, ಬಂಟಿಂಗ್‌ಗಳನ್ನು ಬಳಸಿ ಪ್ರಚಾರ ಮಾಡುವಂತಿಲ್ಲ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಎದೆ ನೋವು, ಮಧುಮೇಹ, ಥೈರಾಯ್ಡ್ ,ಸಮಸ್ಯೆಗಳಿಗೆ ಪರಿಹಾರ ತೆಂಗಿನಕಾಯಿ ಹೂವು
ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು
ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?
ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್ |
ಕೊಲ್ಲೂರಿನಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಡಿಸಿಎಂ ಡಿ ಕೆ ಶಿವಕುಮಾರ್
ಹೊಸ ಸೇರ್ಪಡೆ
PAN 2.0 ಗೆ ಸಂಪುಟ ಅನುಮೋದನೆ: ಏನಿದು ಪ್ಯಾನ್ 2.0? ಇದರ ವೈಶಿಷ್ಟ್ಯವೇನು?
Bangla:ಬಂಧನಕ್ಕೊಳಗಾದ ಇಸ್ಕಾನ್ ನ ಕೃಷ್ಣದಾಸ್ ಗೆ ಜಾಮೀನು ನಿರಾಕರಿಸಿದ ಬಾಂಗ್ಲಾ ಕೋರ್ಟ್
Udupi: ಭಿಕ್ಷಾಟನೆ, ಅಪೌಷ್ಟಿಕತೆ ವಿರುದ್ಧ ಯುವಕನ ಬರಿಗಾಲ ಜಾಗೃತಿ
Udupi: ಬಿಎಸ್ಸೆನ್ನೆಲ್ ಟವರ್ ನಿರ್ವಹಣೆ ಹೊಣೆ ಪಂಚಾಯತ್ ಹೆಗಲಿಗೆ
Rapper Badshah: ಗಾಯಕ ಬಾದ್‌ಶಾ ಒಡೆತನದ ಬಾರ್ & ಕ್ಲಬ್ ಹೊರಗೆ ಬಾಂ*ಬ್ ಸ್ಪೋ*ಟ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.