ಭ್ರಷ್ಟಾಚಾರ ರಹಿತ ಆಡಳಿತಕ್ಕೆ ಕಮಲಕ್ಕೆ ಮತ ನೀಡಿ: ಕಲ್ಲೂರ
Team Udayavani, May 27, 2019, 4:20 PM IST
ಹುಮನಾಬಾದ: ಬಿಜೆಪಿ ಅಭ್ಯರ್ಥಿಗಳ ಪರ ಮಾಜಿ ಶಾಸಕ ಸುಭಾಷ ಕಲ್ಲೂರ ಅವರು ವಿವಿಧ ವಾರ್ಡ್‌ಗಳಿಗೆ ತೆರಳಿ ಮತ ಯಾಚಿಸಿದರು.
ಹುಮನಾಬಾದ: ಭ್ರಷ್ಟಾಚಾರ ರಹಿತ ಆಡಳಿತಕ್ಕಾಗಿ ಮತದಾರ ಪ್ರಭುಗಳು ಕಮಲಕ್ಕೆ ಮತ ನೀಡಬೇಕು ಎಂದು ಮಾಜಿ ಶಾಸಕ ಸುಭಾಷ ಕಲ್ಲೂರ ಹೇಳಿದರು.
ಪಟ್ಟಣದ ವಿವಿಧ ವಾರ್ಡ್‌ಗಳಲ್ಲಿ ಕಾಲ್ನಡಿಗೆ ಮೂಲಕ ಸಂಚರಿಸಿ ಬಿಜೆಪಿ ಅಭ್ಯರ್ಥಿಗಳ ಪರ ಮತಯಾಚಿಸುತ್ತಿದ್ದ ವೇಳೆ ಮಾತನಾಡಿದ ಅವರು, ಹುಮನಾಬಾದ ಪುರಸಭೆ ಅಧಿಕಾರ ಗದ್ದುಗೆ ಹಿಡಿದ ಕಾಂಗ್ರೆಸ್ ಪಕ್ಷ ಸರ್ಕಾರದಿಂದ ಅನುದಾನ ತಂದರೂ ಕೈಗೊಂಡಿರುವ ಎಲ್ಲ ಕಾಮಗಾರಿ ಅಪೂರ್ಣ ಸ್ಥಿತಿಯಲ್ಲಿವೆ. 2013ರಲ್ಲಿ ಆರಂಭಗೊಂಡ ಒಳಚರಂಡಿ ಕಾಮಗಾರಿಯನ್ನು 7 ವರ್ಷ ಗತಿಸಿದರೂ ಪೂರ್ಣಗೊಳಿಸಲು ಸಾಧ್ಯವಾಗಿಲ್ಲ. ಜೊತೆಗೆ ಕಾಮಗಾರಿ ಸಂಪೂರ್ಣ ನಿರೂಪಯುಕ್ತವಾಗಿದೆ ಎಂಬ ಆರೋಪ ಸಾರ್ವಜನಿಕ ವಲಯದಲ್ಲಿ ಕೇಳಿ ಬರುತ್ತಿದೆ ಎಂದು ಹೇಳಿದರು. ಅತ್ಯಾಕರ್ಷಕ ಹೂ-ಹುಲ್ಲಿನಿಂದ ಅಲಂಕೃತಗೊಂಡು ಪಟ್ಟಣದ ಸೌಂದರ್ಯ ಹೆಚ್ಚಿಸಬೇಕಿದ್ದ ಡಾ| ಅಂಬೇಡ್ಕರ್ ವೃತ್ತದಿಂದ ವಾಂಜ್ರಿವರೆಗೆ ಕೈಗೊಂಡ ರಸ್ತೆ ವಿಭಜಕ ತಿಪ್ಪೆಗುಂಡಿಯಾಗಿ ಪರಿವರ್ತನೆಯಾಗಿದ್ದರೂ ಯಾರೊಬ್ಬರೂ ಗಮನ ಹರಿಸುತ್ತಿಲ್ಲ. ಹುಮನಾಬಾದ ಪಟ್ಟಣದಲ್ಲಿ ಇರುವ ಪುರಸಭೆ ಏಕೈಕ ಉದ್ಯಾನ ಕಳೆದ ದಶಕದಿಂದ ಹಸಿರಿಲ್ಲದೇ ಭಣಗೊಡುತ್ತಿದೆ. ಹಸಿರು ಸಿರಿಯಲ್ಲಿ ಸಾರ್ವಜನಿಕರು ಪರಿವಾರ ಸಮೇತ ಬಂದು ನೆಮ್ಮದಿಯಿಂದ ಕುಳಿತುಕೊಳ್ಳಬೇಕಾದ ಉದ್ಯಾನ ಸ್ಥಳದಲ್ಲಿ ನಿಯಮ ಬಾಹಿರ ವಿವಿಧ ಕಟ್ಟಡಗಳನ್ನು ನಿರ್ಮಿಸಲಾಗುತ್ತಿದೆ. ಇದು ಅಭಿವೃದ್ಧಿಯೆ? ಇಂಥ ಪಕ್ಷಕ್ಕೆ ಜನರು ಮತ್ತೂಮ್ಮೆ ಮತ ನೀಡಿ, ಗದ್ದುಗೆ ಗೈಯಲ್ಲಿ ಕೊಡಬೇಕೆ ಎಂದು ಪ್ರಶ್ನಿಸಿದರು.
ಡಾ| ಅಂಬೇಡ್ಕರ್ ವೃತ್ತದಿಂದ ಫುಟ್ಪಾತ್ ಪಕ್ಕದಲ್ಲಿ ಹರಿಯುವ ಸಾರ್ವಜನಿಕ ತ್ಯಾಜ್ಯ ನೋಡಿದರೆ ವಾಕರಿಕೆ ಬರುತ್ತದೆ. ಇಷ್ಟು ಅವಧಿ ಅಧಿಕಾರದಲ್ಲಿದ್ದರೂ ಆ ಸಮಸ್ಯೆ ಬಗೆಹರಿಸಲು ಸಾಧ್ಯವಾಗದ ಪಕ್ಷಕ್ಕೆ ಮತ್ತೂಮ್ಮೆ ಮತ ನೀಡಬೇಕೆ? ಅಂಥವರನ್ನು ಅಧಿಕಾರದಿಂದ ದೂರ ಇಡಲು ಮತದಾರರು ಈ ಬಾರಿ ಬಿಜೆಪಿಗೆ ಮತ ನೀಡಬೇಕು ಎಂದು ಮನವಿ ಮಾಡಿದರು. ಜಿಲ್ಲಾ ಬಿಜೆಪಿ ಉಪಾಧ್ಯಕ್ಷ ಶಿವಾನಂದ ಮಂಠಾಳ್ಕರ್, ತಾಲೂಕು ಅಧ್ಯಕ್ಷ ವಿಶ್ವನಾಥ ಪಾಟೀಲ ಮಾಡ್ಗುಳ್, ನರಸಿಂಗ್(ರಾಜು)ಭಂಡಾರಿ, ಬ್ಯಾಂಕ್‌ರೆಡ್ಡಿ, ಗಿರೀಶ ಎಂ.ಪಾಟೀಲ ಮೊದಲಾದವರು ಇದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
ODI; ವೆಸ್ಟ್ ಇಂಡೀಸ್ ವಿರುದ್ಧ ಭಾರತದ ವನಿತೆಯರಿಗೆ 211 ರನ್ ಜಯ:ಸ್ಮೃತಿ ನರ್ವಸ್ 90
Hunsur: ವನ್ಯಪ್ರಾಣಿ ದಾಳಿಗೆ ಸುಮಾರು 70 ಸಾವಿರ ಬೆಲೆಬಾಳುವ ಎತ್ತು ಬಲಿ
Gundlupete ಬಂಡೀಪುರ: ಗಂಡಾನೆ ಕಳೇಬರ ಪತ್ತೆ
Highest honour: ಪ್ರಧಾನಿ ನರೇಂದ್ರ ಮೋದಿಗೆ ಕುವೈಟ್‌ನ ಅತ್ಯುನ್ನತ ಗೌರವ ಪ್ರದಾನ
Delhi; ಅಕ್ರಮ ಬಾಂಗ್ಲಾ ವಲಸಿಗರ ವಿರುದ್ಧ ಕಾರ್ಯಾಚರಣೆ: 175 ಮಂದಿ ಪತ್ತೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.