ದಕ್ಷಿಣ ಕನ್ನಡ ಕುಡಿಯುವ ನೀರಿನ ಸಮಸ್ಯೆ: ಅಧಿಕಾರಿಗಳೊಂದಿಗೆ ಮುಖ್ಯಮಂತ್ರಿ ಚರ್ಚೆ
Team Udayavani, May 27, 2019, 8:12 PM IST
ಬೆಂಗಳೂರು: ಮುಖ್ಯಮಂತ್ರಿ ಹೆಚ್.ಡಿ. ಕುಮಾರಸ್ವಾಮಿ ಅವರು ಇಂದು ದಕ್ಷಿಣ ಕನ್ನಡ ಜಿಲ್ಲೆಯ ಕುಡಿಯುವ ನೀರಿನ ಸಮಸ್ಯೆ ಕುರಿತು, ಅದರಲ್ಲೂ ವಿಶೇಷವಾಗಿ ಧರ್ಮಸ್ಥಳ ಹಾಗೂ ಮಂಗಳೂರು ನಗರದ ಕುಡಿಯುವ ನೀರಿನ ಸಮಸ್ಯೆ ಕುರಿತು ಸಭೆ ನಡೆಸಿ ಚರ್ಚಿಸಿದರು.
ಧರ್ಮಸ್ಥಳದಲ್ಲಿ ಈ ಬಾರಿ ನೇತ್ರಾವತಿ ನೀರು ಬತ್ತಿ ಹೋಗಿರುವುದರಿಂದ ಉಂಟಾಗಿರುವ ಸಮಸ್ಯೆ ಕುರಿತು ಮುಖ್ಯಮಂತ್ರಿಗಳ ಸೂಚನೆಯಂತೆ ಭೇಟಿ ನೀಡಿದ್ದ ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಡಾ. ಆರ್. ಸೆಲ್ವಮಣಿ ಅವರು ಸಮಸ್ಯೆ ಕುರಿತು ಮಾಹಿತಿ ನೀಡಿದರು. ಅಲ್ಲದೆ ಧರ್ಮಸ್ಥಳ ಧರ್ಮಾಧಿಕಾರಿ ಡಾ. ವೀರೇಂದ್ರ ಹೆಗ್ಗಡೆಯವರು ಎರಡು ಕಿಂಡಿ ಅಣಿಕಟ್ಟು ನಿರ್ಮಿಸಲು ಸರ್ಕಾರಕ್ಕೆ ಮನವಿ ಮಾಡಿರುವ ಹಿನ್ನೆಲೆಯಲ್ಲಿ ಏಳು ಕೋಟಿ ರೂ. ವೆಚ್ಚದಲ್ಲಿ ನೆರಿಯ ಹೊಳೆಗೆ ಹಾಗೂ ನೇತ್ರಾವತಿ ನದಿಗೆ ಕಿಂಡಿ ಅಣೆಕಟ್ಟು ನಿರ್ಮಿಸಲು ಸರ್ಕಾರಕ್ಕೆ ಸಣ್ಣ ನೀರಾವರಿ ಇಲಾಖೆಯು ಪ್ರಸ್ತಾವನೆ ಸಲ್ಲಿಸಿದೆ ಎಂದು ತಿಳಿಸಿದರು. ಈ ಪ್ರಸ್ತಾವನೆಯನ್ನು ಅನುಮೋದಿಸಿ, ಕೂಡಲೇ ಕಿಂಡಿ ಅಣೆಕಟ್ಟು ನಿರ್ಮಿಸಲು ಕ್ರಮ ವಹಿಸಲು ಮುಖ್ಯಮಂತ್ರಿಗಳು ಸೂಚಿಸಿದರು.
ಮಂಗಳೂರು ನಗರದ ಕುಡಿಯುವ ನೀರಿನ ಸಮಸ್ಯೆ ಕುರಿತು ಮಾಹಿತಿ ನೀಡಿದ ನಗರಾಭಿವೃದ್ಧಿ ಸಚಿವ ಯು.ಟಿ. ಖಾದರ್, ಮಂಗಳೂರಿನಲ್ಲಿ ಜನಸಂಖ್ಯೆ ಹೆಚ್ಚಿದ್ದು, ತುಂಬೆ ಕಿಂಡಿ ಅಣೆಕಟ್ಟಿನಲ್ಲಿ 7 ಮೀಟರ್ ವರೆಗೆ ನೀರು ಸಂಗ್ರಹಿಸುವ ಅಗತ್ಯವಿದೆ. ಇದರಿಂದ ಹೆಚ್ಚುವರಿಯಾಗಿ 344 ಎಕರೆ ಭೂಮಿ ಜಲಾವೃತವಾಗಲಿದ್ದು, ಇದಕ್ಕಾಗಿ ಭೂ ಸ್ವಾಧೀನಕ್ಕೆ 130 ಕೋಟಿ ರೂ. ಗಳ ಅಗತ್ಯವಿದೆ ಎಂದು ತಿಳಿಸಿದರು. ಈ ಬಗ್ಗೆ ಸ್ಪಂದಿಸಿದ ಮುಖ್ಯಮಂತ್ರಿಗಳು ಕೂಡಲೇ ಪ್ರಸ್ತಾವನೆ ಸಲ್ಲಿಸುವಂತೆ ತಿಳಿಸಿದರು.
ಇದಲ್ಲದೆ ಎಂಆರ್ಪಿಎಲ್ನಲ್ಲಿ ಸ್ಥಾಪಿಸಲಾಗುತ್ತಿರುವ ಉಪ್ಪುನೀರನ್ನು ಶುದ್ಧೀಕರಿಸುವ ಘಟಕದ ಸಾಧಕ ಬಾಧಕಗಳನ್ನು ಅಧ್ಯಯನ ನಡೆಸಿ ವರದಿ ಸಲ್ಲಿಸುವಂತೆ ಜಿಲ್ಲಾಧಿಕಾರಿ ಸಸಿಕಾಂತ್ ಸೆಂಥಿಲ್ ಅವರಿಗೆ ಸೂಚಿಸಿದರು.
ಕಡಲ್ಕೊರೆತ:
ಉಳ್ಳಾಲ ಭಾಗದಲ್ಲಿ ಕಡಲ್ಕೊರೆತದಿಂದ ಬಾಧಿತರಾಗುವ 150 ಮನೆಗಳನ್ನು ಗುರುತಿಸಲಾಗಿದ್ದು, ಇವರಿಗೆ ಕೊಡಗು ಮಾದರಿಯಲ್ಲಿ ಪುನರ್ವಸತಿ ಕಲ್ಪಿಸಲು ಮುಖ್ಯಮಂತ್ರಿಗಳು ಸೂಚಿಸಿದರು.
ಉಳ್ಳಾಲದಲ್ಲಿ ಪ್ರತಿವರ್ಷ ಕಡಲ್ಕೊರೆತ ತಡೆಯಲು ಸಮುದ್ರ ತೀರದಲ್ಲಿ ಕಲ್ಲು ಹಾಕಲು ಕೋಟ್ಯಂತರ ರೂಪಾಯಿ ವ್ಯಯಿಸಲಾಗುತ್ತಿದ್ದು, ಕಲ್ಲುಗಳು ಸಮುದ್ರದ ಅಲೆಯಲ್ಲಿ ಕೊಚ್ಚಿ ಹೋಗುತ್ತವೆ. ಇದಕ್ಕೆ ಶಾಶ್ವತ ಪರಿಹಾರ ಒದಗಿಸುವ ಅಗತ್ಯವಿದೆ ಎಂದು ಸಚಿವ ಯು.ಟಿ. ಖಾದರ್ ಅವರು ಮುಖ್ಯಮಂತ್ರಿಗಳ ಗಮನಕ್ಕೆ ತಂದರು. ಈ ಹಿನ್ನೆಲೆಯಲ್ಲಿ ಮುಖ್ಯಮಂತ್ರಿಗಳು ಈ ಕುಟುಂಬಗಳಿಗೆ ಪುನರ್ವಸತಿ ಕಲ್ಪಿಸುವಂತೆ ಕ್ರಮ ಕೈಗೊಳ್ಳಲು ಸೂಚಿಸಿದರು.
ಸಭೆಯಲ್ಲಿ ಸಣ್ಣ ನೀರಾವರಿ ಸಚಿವ ಸಿ.ಎಸ್. ಪುಟ್ಟರಾಜು, ಮುಖ್ಯಮಂತ್ರಿಯವರ ಅಪರಮುಖ್ಯ ಕಾರ್ಯದರ್ಶಿ ಡಾ. ಇ.ವಿ. ರಮಣರೆಡ್ಡಿ, ಕರ್ನಾಟಕ ನಗರ ಮೂಲಭೂತ ಸೌಕರ್ಯ ಅಭಿವೃದ್ಧಿ ಮಂಡಳಿಯ ವ್ಯವಸ್ಥಾಪಕ ನಿರ್ದೇಶಕ ಎ.ಬಿ. ಇಬ್ರಾಹಿಂ, ಕರ್ನಾಟಕ ನಗರ ನೀರು ಸರಬರಾಜು ಮತ್ತು ಒಳಚರಂಡಿ ಮಂಡಳಿಯ ವ್ಯವಸ್ಥಾಪಕ ನಿರ್ದೇಶಕ ಜಯರಾಮ್, ನಗರಾಭಿವೃದ್ಧಿ ಇಲಾಖೆ ಕಾರ್ಯದರ್ಶಿ ಅಂಜುಂ ಪರ್ವೇಜ್ ಮತ್ತಿತರ ಅಧಿಕಾರಿಗಳು ಭಾಗವಹಿಸಿದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Yadagiri: ವಕ್ಫ್ ಹೋರಾಟ ರೈತರ ಪರವಾಗಿದೆ: ಶಾಸಕ ಯತ್ನಾಳ
KFD Vaccine: ಮುಂಬರುವ ನವೆಂಬರ್ನಲ್ಲಿ ಮಂಗನ ಕಾಯಿಲೆಗೆ ಲಸಿಕೆ ಸಿದ್ಧ: ದಿನೇಶ್ ಗುಂಡೂರಾವ್
Constitution: ಕಾಂಗ್ರೆಸ್ಸಿಗರಿಂದ ಸಂವಿಧಾನದ ರಕ್ಷಕರಂತೆ ಕಪಟ ನಾಟಕ: ಬಿ.ವೈ.ವಿಜಯೇಂದ್ರ
Vijayapura: 6ರ ಬಾಲಕನ ಮೇಲೆ ಅನೈಸರ್ಗಿಕ ಲೈಂಗಿಕ ದೌರ್ಜನ್ಯ: ಅಪರಾಧಿಗೆ 20 ವರ್ಷ ಜೈಲು
Kalaburagi; ನಮ್ಮ ತಂಡದವರು ಸಿಎಂ ಆಗುವ ದಿನ ಬರಲಿದೆ: ಗುಡುಗಿದ ಯತ್ನಾಳ್
MUST WATCH
ಬಳಂಜದ ಪುಟ್ಟ ಪೋರನ ಕೃಷಿ ಪ್ರೇಮ | ಕಸಿ ಕಟ್ಟುವಿಕೆಯಲ್ಲಿ ಬಲು ಪರಿಣಿತ ಈ 6 ನೇ ತರಗತಿ ಬಾಲಕ
ಎದೆ ನೋವು, ಮಧುಮೇಹ, ಥೈರಾಯ್ಡ್ ,ಸಮಸ್ಯೆಗಳಿಗೆ ಪರಿಹಾರ ತೆಂಗಿನಕಾಯಿ ಹೂವು
ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು
ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?
ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್ |
ಹೊಸ ಸೇರ್ಪಡೆ
Old Parliament House: ಭಾರತದ ಸಂವಿಧಾನವು ಜೀವಂತಿಕೆಯ, ಪ್ರಗತಿಪರ ದಾಖಲೆ: ರಾಷ್ಟ್ರಪತಿ
Cleanliness: ಮನೆ ಮನೆಯಿಂದ ದೇಶವೇ ಸ್ವಚ್ಚ
Congress: ದ.ಕ ಗ್ರಾಮ ಪಂಚಾಯತ್; 24ರಲ್ಲಿ 19 ಸ್ಥಾನ ಕಾಂಗ್ರೆಸ್ ಬೆಂಬಲಿತರಿಗೆ ಗೆಲುವು
Siddapura: ಬುಲೆಟ್ ಬೈಕಿಗೆ ಜೆಸಿಬಿ ಡಿಕ್ಕಿ; ಸವಾರರಿಗೆ ಗಾಯ
Moodabidri: ನಿವೃತ್ತ ದೈಹಿಕ ಶಿಕ್ಷಣ ನಿರ್ದೇಶಕ ಪಿ.ನೇಮಿರಾಜ ಹೆಗ್ಡೆ ನಿಧನ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.