ಯುಜಿಸಿ ಮಾನ್ಯತೆ ರದ್ದಾಗಿದ್ದ ಅವಧಿಯ ವಿದ್ಯಾರ್ಥಿಗಳಿಗೆ ಪರೀಕ್ಷೆ
2018-19ನೇ ಸಾಲಿನಲ್ಲಿ ಪ್ರವೇಶಾತಿ ಪಡೆದಿರುವ 12 ಸಾವಿರ ವಿದ್ಯಾರ್ಥಿಗಳಿಗೂ ಜುಲೈ-ಆಗಸ್ಟ್‌ನಲ್ಲಿ ಪರೀಕ್ಷೆ : ಪ್ರೊ.ಡಿ.ಶಿವಲಿಂಗಯ್ಯ
Team Udayavani, May 28, 2019, 6:00 AM IST
ಮೈಸೂರು: ಯುಜಿಸಿ ಮಾನ್ಯತೆ ರದ್ದಾಗಿದ್ದರಿಂದ ಸಂಕಷ್ಟಕ್ಕೆ ಸಿಲುಕಿರುವ 2011-12 ಮತ್ತು 2012-13ನೇ ಸಾಲಿನ ಬಿ.ಎ., ಬಿ.ಕಾಂ. ವಿದ್ಯಾರ್ಥಿಗಳಿಗೆ ಪರೀಕ್ಷೆ ನಡೆಸಲು ಕರ್ನಾಟಕ ರಾಜ್ಯ ಮುಕ್ತ ವಿಶ್ವವಿದ್ಯಾನಿಲಯ ಮುಂದಾಗಿದೆ.
ಸುದ್ದಿಗೋಷ್ಠಿಯಲ್ಲಿ ವಿವಿ ಕುಲಪತಿ ಪ್ರೊ.ಡಿ.ಶಿವಲಿಂಗಯ್ಯ ಮಾತನಾಡಿ, 2011-12 ಮತ್ತು 2012-13ನೇ ಸಾಲಿನಲ್ಲಿ ಅಂತರ್ ಗೃಹ ಬಿ.ಎ., ಬಿ.ಕಾಂ ಪ್ರವೇಶಾತಿ ಪಡೆದು ಪರೀಕ್ಷೆಗಳಲ್ಲಿ ಅನುತ್ತೀರ್ಣರಾಗಿರುವ ಮತ್ತು ಪರೀಕ್ಷೆ ತೆಗೆದುಕೊಳ್ಳಲು ಸಾಧ್ಯವಾಗದ ವಿದ್ಯಾರ್ಥಿಗಳಿಗೆ ಪರೀಕ್ಷೆ ಬರೆಯಲು ಅವಕಾಶ ನೀಡಲಾಗುತ್ತಿದೆ ಎಂದರು.
2012-13ನೇ ಸಾಲಿನಲ್ಲಿ ಬಿ.ಎ., ಬಿ.ಕಾಂ ಗೆ ಪ್ರವೇಶಾತಿ ಪಡೆದಿದ್ದ ವಿದ್ಯಾರ್ಥಿಗಳ ಪದವಿ 2016-17ರಲ್ಲಿ ಪೂರ್ಣಗೊಳ್ಳಬೇಕಿತ್ತು. ಆದರೆ, ವಿವಿಯ ತಪ್ಪಿನಿಂದಾಗಿ ಯುಜಿಸಿ ಮಾನ್ಯತೆ ಕಳೆದುಕೊಂಡಿದ್ದರಿಂದ ಪರೀಕ್ಷೆ ನಡೆಸಲಾಗಿರಲಿಲ್ಲ. ಹೀಗಾಗಿ ವಿವಿ ನಿಯಮಾವಳಿಗಳ ಪ್ರಕಾರ ಹಾಗೂ ರಾಜ್ಯ ಸರ್ಕಾರದ ಆದೇಶದಂತೆ 2011-12ನೇ ಸಾಲಿನ ಬಿ.ಎ., ಬಿ.ಕಾಂ ವಿದ್ಯಾರ್ಥಿಗಳಿಗೆ ಪರೀಕ್ಷೆ ಬರೆಯಲು ಒಂದು ಅವಕಾಶ ಹಾಗೂ 2011-12ನೇ ಸಾಲಿನ ಬಿ.ಎ., ಬಿ.ಕಾಂ ವಿದ್ಯಾರ್ಥಿಗಳಿಗೆ ಎರಡು ಅವಕಾಶಗಳನ್ನು ನೀಡುವ ಮೂಲಕ ಪರೀಕ್ಷೆಗೆ ಅವಕಾಶ ಕಲ್ಪಿಸಲಾಗಿದೆ. 2-3 ದಿನಗಳಲ್ಲಿ ಆನ್‌ಲೈನ್‌ನಲ್ಲಿ ಅರ್ಜಿ ಕರೆದು ಪ್ರಕಟಣೆ ಹೊರಡಿಸಲಾಗುವುದು. ಜತೆಗೆ 2018-19ನೇ ಸಾಲಿನಲ್ಲಿ ಪ್ರವೇಶಾತಿ ಪಡೆದಿರುವ 12 ಸಾವಿರ ವಿದ್ಯಾರ್ಥಿಗಳಿಗೂ ಜುಲೈ-ಆಗಸ್ಟ್‌ನಲ್ಲಿ ಪರೀಕ್ಷೆ ನಡೆಸಲಾಗುವುದು ಎಂದು ತಿಳಿಸಿದರು.
ಪ್ರವೇಶಾತಿ ಪ್ರಾರಂಭ: 2019-20ನೇ ಶೈಕ್ಷಣಿಕ ಸಾಲಿನ ಜುಲೈ ಆವೃತ್ತಿಗೆ ಬೇರೆ ಬೇರೆ ಕೋರ್ಸ್‌ಗಳಿಗೆ ಪ್ರವೇಶಾತಿ ಪ್ರಕ್ರಿಯೆಯನ್ನು ಮೇ 6ರಂದು ಆರಂಭಿಸಿದ್ದು, ಈಗಾಗಲೇ 77 ವಿದ್ಯಾರ್ಥಿಗಳು ಪ್ರವೇಶ ಪಡೆದಿದ್ದಾರೆ. ಪ್ರವೇಶಾತಿ ಸಂಬಂಧ ವಿವಿಯ ಅಧಿಕೃತ ವೆಬ್‌ಸೈಟ್ ಅನ್ನು ಈವರೆಗೆ 31,720 ವಿದ್ಯಾರ್ಥಿಗಳು ವೀಕ್ಷಿಸಿದ್ದು, ಈ ಪೈಕಿ 759 ವಿದ್ಯಾರ್ಥಿಗಳು ಹೆಸರು ನೋಂದಣಿ ಮಾಡಿಕೊಂಡಿದ್ದಾರೆ. ಈ ಆವೃತ್ತಿಯ ಪ್ರವೇಶಾತಿಗೆ ಆ.31ರವರೆಗೆ ಕಾಲಾವಕಾಶವಿದ್ದು, 50 ಸಾವಿರ ವಿದ್ಯಾರ್ಥಿಗಳು ಪ್ರವೇಶ ಪಡೆಯುವ ನಿರೀಕ್ಷೆ ಇದೆ ಎಂದರು.
ಪಿಎಚ್.ಡಿ ಮುಂದುವರಿಕೆ: 2012-13ನೇ ಸಾಲಿನಿಂದ ಅನ್ವಯವಾಗುವಂತೆ 2015ರ ಮೇ 16ರ ಅಧಿಸೂಚನೆಯಲ್ಲಿ ಯುಜಿಸಿ ಮುಕ್ತ ವಿವಿಯ ಮಾನ್ಯತೆ ಹಿಂಪಡೆದಿದ್ದರಿಂದ ಸಂಶೋಧನಾರ್ಥಿಗಳಿಗೆ ಪಿಎಚ್.ಡಿ ಪದವಿಗೆ ಪ್ರವೇಶಾತಿ ತಡೆಹಿಡಿಯಲಾಗಿತ್ತು. ಪ್ರಸ್ತುತ ವಿವಿಗೆ ಯುಜಿಸಿ ಮಾನ್ಯತೆ ದೊರೆತಿರುವುದರಿಂದ ಈ ವಿವಿಯಲ್ಲಿ 2008 ಮತ್ತು 2012ರ ಪಿಎಚ್.ಡಿ ಪರಿನಿಯಮಗಳ ಪ್ರಕಾರ ನೋಂದಣಿ ಮಾಡಿಕೊಂಡಿದ್ದ 118 ಸಂಶೋಧನಾರ್ಥಿಗಳ ಸಂಶೋಧನಾ ಕಾರ್ಯವನ್ನು ಮುಂದುವರಿಸಲು ತೀರ್ಮಾನ ಕೈಗೊಳ್ಳಲಾಗಿದೆ ಎಂದರು.
ಕೌಶಲ್ಯಾಭಿವೃದ್ಧಿ ತರಬೇತಿ ಕಡ್ಡಾಯ: ಕರ್ನಾಟಕ ರಾಜ್ಯ ಮುಕ್ತ ವಿವಿಯಲ್ಲಿ ಪ್ರವೇಶಾತಿ ಪಡೆದ ಸ್ನಾತಕ ಹಾಗೂ ಸ್ನಾತಕೋತ್ತರ ವಿದ್ಯಾರ್ಥಿಗಳು ಕೌಶಲ್ಯಾಭಿವೃದ್ಧಿ ತರಬೇತಿ ಕಾರ್ಯಕ್ರಮಗಳಾದ ಆಡಳಿತ ಕನ್ನಡ, ಇಂಗ್ಲಿಷ್ ಫಾರ್ ಕಮ್ಯೂನಿಕೇಷನ್ ಆ್ಯಂಡ್ ಸಾಫ್ಟ್ ಸ್ಕಿಲ್ಸ್, ವೆಬ್ ಡಿಸೈನಿಂಗ್, ಕಂಪ್ಯೂಟರ್ ಫಂಡಮೆಂಟಲ್ಸ್, ಡೆಸ್ಕ್ಟಾಪ್ ಪಬ್ಲಿಷಿಂಗ್ (ಡಿಟಿಪಿ), ಮಲ್ಟಿಮೀಡಿಯಾ ಮತ್ತು ಬೇಸಿಕ್ ಆಫ್ ನೆಟ್ ವರ್ಕಿಂಗ್ ಕೋರ್ಸ್‌ಗಳನ್ನು ಆಯ್ಕೆ ಮಾಡಿಕೊಂಡಿರುತ್ತಾರೆ ಎಂದು ಹೇಳಿದರು. ಮುಕ್ತ ವಿವಿ ಕುಲಸಚಿವ ಪ್ರೊ.ರಮೇಶ್ ಹಾಜರಿದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
JDS ರಾಮನಗರದಿಂದಲೂ ಔಟ್: ‘ಮೈತ್ರಿ’ಗೂ ಲಾಭ ತಂದು ಕೊಡದ ದಳ
Vikram Gowda Case: ವಿಕ್ರಂ ಗೌಡ ಎನ್‌ಕೌಂಟರ್; ತನಿಖೆ ಚುರುಕು
Karnataka Congress; ‘ಭ್ರಷ್ಟ’ಆರೋಪ ಮಧ್ಯೆ ವಿಪಕ್ಷಗಳಿಗೆ ಮರ್ಮಾಘಾತ
Mysuru: ಜೆಡಿಎಸ್ ವರಿಷ್ಠರಿಗೆ ನಾನು ಬೇಡ, ನನ್ನ ಮಗ ಬೇಕಾಗಿದ್ದಾನೆ: ಜಿ.ಟಿ.ದೇವೇಗೌಡ
BJP ಸಂಘಟನೆ, ತಂತ್ರಗಾರಿಕೆಯಲ್ಲಿ ವಿಫಲ: ವಿಜಯೇಂದ್ರ ಮೇಲೂ ಪರಿಣಾಮ?
MUST WATCH
ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು
ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?
ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್ |
ಕೊಲ್ಲೂರಿನಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಡಿಸಿಎಂ ಡಿ ಕೆ ಶಿವಕುಮಾರ್
ಉಡುಪಿ ಶ್ರೀ ಕೃಷ್ಣ ಮಠದಲ್ಲಿ ಬೃಹತ್ ಗೀತೋತ್ಸವಕ್ಕೆ ಅದ್ದೂರಿ ಚಾಲನೆ|
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.