ಶಿಕ್ಷಕರನ್ನು ನಿಯೋಜಿಸಲು ಸಂಸದರ ಸೂಚನೆ
ಮುಕ್ಕೂರು ಶಾಲಾ ಮಕ್ಕಳ ವರ್ಗಾವಣೆ ಹಿನ್ನೆಲೆ
Team Udayavani, May 28, 2019, 6:10 AM IST
ಸುಳ್ಯ: ಮುಕ್ಕೂರು ಹಿ.ಪ್ರಾ. ಶಾಲೆಯಲ್ಲಿ ಶಿಕ್ಷಕರ ಕೊರತೆ ಕಾರಣದಿಂದ ವಿದ್ಯಾರ್ಥಿಗಳು ವರ್ಗಾವಣೆ ಪತ್ರಕ್ಕೆ ಮೊರೆ ಹೋಗಿರುವ ಹಿನ್ನೆಲೆಯಲ್ಲಿ ಶಾಲೆಗೆ ತತ್‌ಕ್ಷಣ ಶಿಕ್ಷಕರನ್ನು ನಿಯೋಜಿಸಲು ಕ್ರಮ ಕೈಗೊಳ್ಳುವಂತೆ ಸಂಸದ ನಳಿನ್ ಕುಮಾರ್ ಕಟೀಲು ಅವರುಡಿಡಿಪಿಐಗೆ ಸೂಚನೆ ನೀಡಿದ್ದಾರೆ.
‘ಸಂಸದ ನಳಿನ್ ಕಲಿತ ಶಾಲಾ ಮಕ್ಕಳಿಗೆ ವರ್ಗಾವಣೆ ಶಿಕ್ಷೆ’ ಕುರಿತಂತೆ ಮೇ 27 ರಂದು ‘ಉದಯವಾಣಿ’ ವರದಿ ಪ್ರಕಟಿಸಿತ್ತು. ಈ ಬಗ್ಗೆ ಸಂಸದ ನಳಿನ್ ಕುಮಾರ್ ಕಟೀಲು ಮಂಗಳೂರು ಸಾರ್ವಜನಿಕ ಶಿಕ್ಷಣ ಇಲಾಖೆ ಉಪನಿರ್ದೇಶಕರನ್ನು ಸಂಪರ್ಕಿಸಿ ಮಕ್ಕಳ ಶೈಕ್ಷಣಿಕ ಚಟುವಟಿಕೆಗಳಿಗೆ ತೊಂದರೆ ಆಗದಂತೆ ಕ್ರಮ ಕೈಗೊಳ್ಳಲು ಸೂಚಿಸಿದ್ದಾರೆ. ಜಿ.ಪಂ. ವ್ಯಾಪ್ತಿಗೆ ಒಳಪಟ್ಟಿರುವ ಈ ಶಾಲೆಗೆ ಅಗತ್ಯ ಶಿಕ್ಷಕರನ್ನು ನಿಯೋಜಿಸುವಂತೆ ಡಿಡಿಪಿಐ ಅವರಿಗೆ ಸೂಚನೆ ನೀಡಿದ್ದೇನೆ ಎಂದು ಸಂಸದ ನಳಿನ್ ಕುಮಾರ್ ಕಟೀಲು ‘ಉದಯವಾಣಿ’ಗೆ ತಿಳಿಸಿದ್ದಾರೆ.
ಎಜಿಟಿ ಶಿಕ್ಷಕರ ನೇಮಕ
ಮಂಜೂರಾತಿ ಟಿಜಿಟಿ ದರ್ಜೆಯ ಶಿಕ್ಷಕ ಹುದ್ದೆ ಖಾಲಿ ಇರುವ ಕಾರಣ ಇಲ್ಲಿನ 7ನೇ ತರಗತಿಯಿಂದ 8ನೇ ತರಗತಿಗೆ ಉತೀರ್ಣಗೊಂಡ ವಿದ್ಯಾರ್ಥಿಗಳನ್ನು ಪೋಷಕರು ವರ್ಗಾವಣೆ ಪತ್ರ ಪಡೆದು ಮಕ್ಕಳನ್ನು ಬೇರೆ ಶಾಲೆಗೆ ಸೇರಿಸಲು ಮುಂದಾಗಿದ್ದರು. ಈಗ ಶಾಲಾ ಚಟುವಟಿಕೆಗೆ ಧಕ್ಕೆ ಆಗದಂತೆ ಶೈಕ್ಷಣಿಕ ವರ್ಷದ ಆರಂಭದಲ್ಲೇ ಎಜಿಟಿ ಶಿಕ್ಷಕರನ್ನು ಕರ್ತವ್ಯಕ್ಕೆ ನಿಯೋಜಿಸಲಾಗುವುದು ಎಂದು ಕ್ಷೇತ್ರ ಶಿಕ್ಷಣಾಧಿಕಾರಿ ಮಾಹಿತಿ ನೀಡಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Mangaluru: ಜೀವನ ಶೈಲಿ ಸಂಬಂಧಿ ಕಾಯಿಲೆಗೆ ಪರಿಹಾರ ಅಗತ್ಯ
Someshwara ದೇಗುಲ: ಶಿವಪಂಚಾಕ್ಷರಿ ಕೋಟಿ ನಾಮಜಪ ಯಜ್ಞ ಸಂಪನ್ನ
Mangaluru: ಟ್ರಾಯ್‌ನಿಂದ ಕರೆ ಮಾಡುವುದಾಗಿ ತಿಳಿಸಿ; 1.71 ಕೋ.ರೂ. ವಂಚನೆ
ಬಾಲಕಿಯ ಅತ್ಯಾಚಾರ-ಗರ್ಭಪಾತ ಪ್ರಕರಣ: ಅಪರಾಧಿಗೆ 20 ವರ್ಷ ಜೈಲು ಶಿಕ್ಷೆ; 50 ಸಾವಿರ ರೂ. ದಂಡ
Dinesh Gundu Rao: ಅನರ್ಹರ ಕಾರ್ಡ್ ರದ್ದು ತಪ್ಪಲ್ಲ, ಅರ್ಹರಿಗೆ ಅನ್ಯಾಯ ಆಗುವುದಿಲ್ಲ
MUST WATCH
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.