ಉಪನ್ಯಾಸಕನಿಗೆ ವಿದ್ಯಾರ್ಥಿಗಳಿಂದ ಬಿತ್ತು ಧರ್ಮದೇಟು
Team Udayavani, May 28, 2019, 9:37 AM IST
ದಾವಣಗೆರೆ: ವಿದ್ಯಾರ್ಥಿನಿಯರಿಗೆ ಅಶ್ಲೀಲ ಮೆಸೇಜ್ ಮಾಡುತ್ತಿದ್ದ ಆರೋಪದ ಹಿನ್ನೆಲೆಯಲ್ಲಿ ವಿದ್ಯಾರ್ಥಿ ಗಳೇ ಉಪನ್ಯಾಸಕನಿಗೆ ಥಳಿಸಿರುವ ಘಟನೆ ತಡವಾಗಿ ಬೆಳಕಿಗೆ ಬಂದಿದ್ದು, ಘಟನೆ ವೀಡಿಯೋ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದೆ.
ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನ ಕನ್ನಡ ಉಪನ್ಯಾಸಕ ಬಿ.ಕೆ. ಬಸವರಾಜ್ ವಿದ್ಯಾರ್ಥಿನಿಯರಿಗೆ ಲೈಂಗಿಕ ಕಿರುಕುಳ ಕೊಡುತ್ತಿದ್ದ ಎನ್ನಲಾಗುತ್ತಿದೆ. ಕಳೆದ ಹಲವು ದಿನಗಳಿಂದ ಕೆಲ ವಿದ್ಯಾರ್ಥಿನಿಯರ ಜೊತೆ ಅಸಭ್ಯವಾಗಿ ವರ್ತಿಸುತ್ತಾ, ಮೊಬೈಲ್ನಲ್ಲಿ ಮೆಸೇಜ್ ಮಾಡುತ್ತಾ ಕಿರುಕುಳ ನೀಡುತ್ತಿದ್ದ ಎಂಬ ಕಾರಣದಿಂದ ಆಕ್ರೋಶಗೊಂಡ ವಿದ್ಯಾರ್ಥಿಗಳು ಬಸವರಾಜ್‌ಗೆ ಥಳಿಸಿದಾಗ ಆತ ತಪ್ಪು ಒಪ್ಪಿಕೊಂಡ ಘಟನೆಯೂ ನಡೆದಿದೆ.
ಈ ಬಗ್ಗೆ ಸುದ್ದಿಗಾರರೊಂದಿಗೆ ಕಾಲೇಜು ಪ್ರಾಂಶುಪಾಲ ತೂ.ಕ. ಶಂಕರಯ್ಯ ಮಾತನಾಡಿ, ನಾನು ರಜೆಯಲ್ಲಿ ಇದ್ದಿದ್ದರಿಂದ ಶನಿವಾರ ನಡೆದ ಈ ಗಲಾಟೆ ಬಗ್ಗೆ ಸರಿಯಾಗಿ ಮಾಹಿತಿ ಗೊತ್ತಿಲ್ಲ. ಈ ಹಿಂದೆ ಎನ್.ಆರ್. ಪುರದ ಸರ್ಕಾರಿ ಕಾಲೇಜಿನಲ್ಲಿ ಕನ್ನಡ ಉಪನ್ಯಾಸಕರಾಗಿ ಕರ್ತವ್ಯ ನಿರ್ವಹಿಸುತ್ತಿದ್ದ ಬಿ.ಕೆ. ಬಸವರಾಜ್, ಯಾವುದೋ ದೂರಿನ ಹಿನ್ನೆಲೆಯಲ್ಲಿ ಕಳೆದ ಮೂರ್‍ನಾಲ್ಕು ವರ್ಷಗಳ ಹಿಂದೆ ನಮ್ಮ ಕಾಲೇಜಿಗೆ ವರ್ಗಾವಣೆ ಮಾಡಿಸಿಕೊಂಡು ಬಂದಿದ್ದರು.
ನಮ್ಮ ಕಾಲೇಜಿನಲ್ಲಿ ಉಪನ್ಯಾಸಕ ಬಿ.ಕೆ. ಬಸವರಾಜ್, ವಿದ್ಯಾರ್ಥಿನಿಯರಿಗೆ ಅಸಭ್ಯವಾಗಿ ಮೆಸೇಜ್ ಮಾಡುತ್ತಿದ್ದರು ಎಂಬ ದೂರುಗಳು ಇದೀಗ ಕೇಳಿಬಂದಿವೆ. ಆದರೆ, ಘಟನೆ ಬಗ್ಗೆ ವಿದ್ಯಾರ್ಥಿನಿಯರಾಗಲಿ, ಪೋಷಕರಾಗಲಿ ಯಾರೂ ದೂರು ಸಲ್ಲಿಸಲು ಬಂದಿಲ್ಲ. ಒಂದು ವೇಳೆ ಪೊಲೀಸರಿಗೆ ದೂರು ನೀಡಿದ್ದಲ್ಲಿ, ನೋಟಿಸ್ ನೀಡಲಾಗುತ್ತದೆ. ಮುಂದಿನ ಕ್ರಮವನ್ನು ಶಿಕ್ಷಣ ಇಲಾಖೆ ಕೈಗೊಳ್ಳಲಿದೆ ಎಂದು ತಿಳಿಸಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
ಬಿಸಿಯೂಟ ಸಿಬ್ಬಂದಿ ಇಡಿಗಂಟಿಗೆ ಸರ್ಕಾರದ ಮಾರ್ಗಸೂಚಿ ಪ್ರಕಟ
Davanagere: ಆತ್ಮಹತ್ಯೆ ಮಾಡಿಕೊಂಡಿರುವ ಸಚಿನ್ ಗುತ್ತಿಗೆದಾರನೇ ಅಲ್ಲ…
Davanagere; ಹೊಸ ವರ್ಷ ಆಚರಣೆ ವೇಳೆ ಅಪಘಾ*ತ: ಯುವಕ ಸಾ*ವು,ಇನ್ನೋರ್ವ ಗಂಭೀರ
Davanagere: ರಾಜ್ಯದಲ್ಲಿ ಕಾಂಗ್ರೆಸ್ ಸರಕಾರದಿಂದ ಅರಾಜಕತೆ ಸೃಷ್ಟಿ: ಜಗದೀಶ್ ಶೆಟ್ಟರ್
ಸಿ.ಟಿ.ರವಿ-ಸಚಿವೆ ಲಕ್ಷ್ಮೀ ದೂರು ಪ್ರಕರಣ: ಪೊಲೀಸರ ವರದಿ ಬಳಿಕ ನಿಯಮಾನುಸಾರ ಕ್ರಮ: ಹೊರಟ್ಟಿ
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.