ಅಂಗನವಾಡಿಗಳಲ್ಲೇ ಎಲ್ಕೆಜಿ-ಯುಕೆಜಿ ಪ್ರಾರಂಭಿಸಿ
•ಕರ್ನಾಟಕ ರಾಜ್ಯ ಅಂಗನವಾಡಿ ನೌಕರರ ಸಂಘದ ತಾಲೂಕು ಸಮಿತಿ ಕಾರ್ಯಕರ್ತರ ಪ್ರತಿಭಟನೆ
Team Udayavani, May 28, 2019, 11:31 AM IST
ಸುರಪುರ: ಕರ್ನಾಟಕ ರಾಜ್ಯ ಅಂಗನವಾಡಿ ನೌಕರರ ಸಂಘದ ಕಾರ್ಯಕರ್ತರು ಸಿಡಿಪಿಒ ಲಾಲಸಾಬ್‌ಗ ಮನವಿ ಸಲ್ಲಿಸಿದರು.
ಸುರಪುರ: ಸರಕಾರಿ ಶಾಲೆಗಳಲ್ಲಿ ಪೂರ್ವ ಪ್ರಾಥಮಿಕ ಶಾಲೆಗಳನ್ನು ಆರಂಭಿಸುವ ಕುರಿತು ಹೊರಡಿಸಿರು ಆದೇಶವನ್ನು ಕೂಡಲೆ ಹಿಂಪಡೆಯಬೇಕು. ಅಂಗನವಾಡಿ ಕೇಂದ್ರಗಳಲ್ಲಿಯೇ ಎಲ್ಕೆಜಿ, ಯುಕೆಜಿ ಶಿಕ್ಷಣ ಪ್ರಾರಂಭಿಸಬೇಕು ಎಂದು ಒತ್ತಾಯಿಸಿ ಸಿಐಟಿಯು ನೇತೃತ್ವದಲ್ಲಿ ಕರ್ನಾಟಕ ರಾಜ್ಯ ಅಂಗನವಾಡಿ ನೌಕರರ ಸಂಘದ ತಾಲೂಕು ಸಮಿತಿ ಕಾರ್ಯಕರ್ತರು ನಗರದ ಸಿಡಿಪಿಒ ಕಚೇರಿ ಎದುರು ಪ್ರತಿಭಟಿಸಿದರು.
ಪ್ರತಿಭಟನೆ ನೇತೃತ್ವ ವಹಸಿದ್ದ ಸಂಘದ ಪ್ರಧಾನ ಕಾರ್ಯದರ್ಶಿ ಸುರೇಖಾ ಕುಲಕರ್ಣಿ ಮಾತನಾಡಿ, ಸರಕಾರಿ ಶಾಲೆಗಳಲ್ಲಿ ಪೂರ್ವ ಪ್ರಾಥಮಿಕ ಶಾಲೆಗಳನ್ನು ತೆರೆದು 3 1/2 ವರ್ಷ ಮೇಲ್ಪಟ್ಟ ಮಕ್ಕಳಿಗೆ ಬೆಳಗ್ಗೆ 10:00 ರಿಂದ ಮಧ್ಯಾಹ್ನ 3:30ರ ತನಕ ಶಾಲೆ ನಡೆಸಬೇಕು. ಇದಕ್ಕಾಗಿ ಪ್ರತ್ಯೇಕ ಶಿಕ್ಷಕ-ಶಿಕ್ಷಕಿಯರನ್ನು ನಿಯೋಜಿಸಬೇಕು ಮತ್ತು ಪೌಷ್ಟಿಕ ಆಹಾರ ಕೊಡಬೇಕು. ಇದರಿಂದ ಶಾಲಾ ದಾಖಲಾತಿ ಹೆಚ್ಚಾಗಲಿದೆ ಎಂದು ಸರಕಾರದ ಇತ್ತೀಚಿನ ಆದೇಶದಲ್ಲಿ ತಿಳಿಸಿರುವುದು ಅವೈಜ್ಞಾನಿಕ ನಿಲುವಾಗಿದೆ ಎಂದು ಆರೋಪಿಸಿದರು.
ಆದೇಶ ತರುವ ಪೂರ್ವದಲ್ಲಿ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಮತ್ತು ಮಕ್ಕಳ ಶಿಕ್ಷಣ ತಜ್ಞರೊಂದಿಗೆ, ಸಂಘಟನೆಯೊಂದಿಗೆ ಸಂವಾದ ನಡೆಸದೇ ನಿರ್ಧಾರ ಕೈಗೊಳ್ಳಲಾಗಿದೆ. 1975ರಲ್ಲಿ ಜಾರಿಗೆ ತಂದ ಐಸಿಡಿಸಿ ಯೋಜನೆಯಡಿಯಲ್ಲಿ ಅಂಗನವಾಡಿ ಕೇಂದ್ರಗಳು ಸ್ಥಾಪನೆಯಾಗಿದ್ದು, 16,40,170 ಮಕ್ಕಳು ಅಂಗನವಾಡಿಗಳಲ್ಲಿ ದಾಖಲಾಗಿದ್ದಾರೆ. ಇದೇ ಮಕ್ಕಳು ಹೊಸ ದಾಗಿ ಪ್ರಾರಂಭವಾಗುವ ಪಬ್ಲಿಕ್ ಶಾಲೆಗಳಿಗೆ ದಾಖಲಾಗುತ್ತಾರೆ. ಇದರಿಂದ ಅಂಗನವಾಡಿ ಕೇಂದ್ರಗಳ ಅಗತ್ಯ ಬೀಳುವುದಿಲ್ಲ. 30-40 ವರ್ಷಗಳಿಂದ ಅತ್ಯಲ್ಪ ಸಂಬಳದಲ್ಲಿ ಬದುಕು ಕಟ್ಟಿಕೊಂಡ ಕಾರ್ಯಕರ್ತರು ಬದುಕು ಬೀದಿಗೆ ಬೀಳಲಿದೆ. ಇದೊಂದು ದೂರದೃಷ್ಟಿ ಇಲ್ಲದ ಕುರುಡು ಆದೇಶವಾಗಿದೆ ಎಂದು ದೂರಿದರು.
ಈಗಾಗಲೇ 3 ವರ್ಷದೊಳಗಿನ ಮಕ್ಕಳಿಗೆ ಮನೆಗೆ ಆಹಾರ ಕೊಡಲಾಗುತ್ತದೆ. ಮಾನವ ಸಂಪನ್ಮೂಲ ಬೆಳವಣಿಗೆ ಇರುವ ಏಕೈಕ ಯೋಜನೆ ಇದಾಗಿದೆ. 1975ರಿಂದ ಪ್ರಾರಂಭವಾಗಿ ಇಂದು ದೇಶದಲ್ಲಿ ಅತ್ಯಂತ ಬೃಹತ್ ಯೋಜನೆಯಾಗಿ ಕಾರ್ಯ ನಿರ್ವಹಿಸುತ್ತಿದೆ. 6 ವರ್ಷದೊಳಗಿನ ಮಕ್ಕಳಲ್ಲಿ ಶೇ. 40 ದೈಹಿಕ ಮತ್ತು ಶೇ. 80 ಮಾನಸಿಕ ಬೆಳವಣಿಗೆ ನಡೆಯುತ್ತದೆ. ಈ ಸಂದರ್ಭದಲ್ಲಿ ಅಗತ್ಯ ಪೌಷ್ಟಿಕ ಆಹಾರ, ಪ್ರಾಥಮಿಕ ಸವಲತ್ತುಗಳು ಮತ್ತು ಪೂರ್ವ ಪ್ರಾಥಮಿಕ ಶಿಕ್ಷಣ ಜತೆಯಲ್ಲಿರಬೇಕು ಎಂಬ ಕಾರಣಕ್ಕೆ 4,200 ಕೋಟಿಯನ್ನು ಈಗಾಗಲೇ ಖರ್ಚು ಮಾಡುತ್ತಿರುವುದು ಯಾವ ಪುರುಷಾರ್ಥಕ್ಕಾಗಿ ಎಂದು ಆಕ್ರೋಶ ವ್ಯಕ್ತ ಪಡಿಸಿದರು.
ನಂತರ ಸಿಡಿಪಿಒ ಲಾಲಸಾಬ್‌ಗ ಮನವಿ ಸಲ್ಲಿಸಲಾಯಿತು. ಅಂಗನವಾಡಿ ಕಾರ್ಯಕರ್ತೆಯರಾದ ನರಸಮ್ಮ, ವಿಜಯಲಕ್ಷ್ಮೀ, ಶಶಿಕಲಾ, ಭಾರತಿ, ಕಸ್ತೂರಿಬಾಯಿ, ಸಮಿತಿಯ ಸದಸ್ಯರು ಇದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Yadagiri: ಸ್ನಾನಕ್ಕೆಂದು ತೆರಳಿದ ಇಬ್ಬರು ಬಾಲಕರು ನೀರುಪಾಲು
Yadagiri: ಮನೆ ಮೇಲೆ ಗಾಂಜಾ ಗಿಡ ಬೆಳೆದ ವ್ಯಕ್ತಿ ಬಂಧನ
Yadagiri: ರೈತರಿಗೆ ಭೂಮಿ ನೀಡಿದ್ದೇ ಕಾಂಗ್ರೆಸ್ ಪಕ್ಷ: ವಿ.ಎಸ್.ಉಗ್ರಪ್ಪ
ಕಳ್ಳರ ಮಾಹಿತಿ ನೀಡಿದ್ದೇ ಮುಳುವಾಯ್ತು… ಜೈಲಿನಿಂದ ಬರುತ್ತಿದ್ದಂತೆ ವ್ಯಕ್ತಿಯ ಹತ್ಯೆ
Hunasagi: ರಾಜ್ಯೋತ್ಸವ ಪ್ರಶಸ್ತಿ ಪುರಸ್ಕೃತ ಕಾಷ್ಟ ಶಿಲ್ಪಿ ಕಂಚಗಾರ ಇನ್ನಿಲ್ಲ
MUST WATCH
ಹೊಸ ಸೇರ್ಪಡೆ
Emergency: ಹತ್ತಾರು ವಿಳಂಬದ ಬಳಿಕ ಕೊನೆಗೂ ಕಂಗನಾ ʼಎಮರ್ಜೆನ್ಸಿʼ ರಿಲೀಸ್ ಗೆ ಡೇಟ್ ಫಿಕ್ಸ್
IPL Mega Auction: ಮೆಗಾ ಹರಾಜಿನಲ್ಲಿ 13ರ ಬಾಲಕ: ಯಾರಿದು ವೈಭವ್ ಸೂರ್ಯವಂಶಿ
Mangaluru: ಹೆದ್ದಾರಿ ಬದಿ ನಿಲ್ಲುವ ವಾಹನ; ಅಪಾಯಕ್ಕೆ ಆಹ್ವಾನ
Gujarat: ಹಿರಿಯ ವಿದ್ಯಾರ್ಥಿಗಳ Ragging-ಪ್ರಥಮ ವರ್ಷದ ಎಂಬಿಬಿಎಸ್ ವಿದ್ಯಾರ್ಥಿ ಸಾ*ವು
Puttur: ಕಲ್ಪವೃಕ್ಷಕ್ಕೆ ಮರುಜೀವವಿತ್ತ ಎಂಜಿನಿಯರ್
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.