ಆಗಬೇಕಿದೆ ಕಾಂಞಂಗಾಡ್- ಕಾಣಿಯೂರು ರೈಲು ಮಾರ್ಗ
Team Udayavani, May 29, 2019, 6:00 AM IST
ಸಾಂದರ್ಭಿಕ ಚಿತ್ರ
ಕಾಣಿಯೂರು: ಉಡುಪಿಯ ಅಷ್ಟಮಠಗಳಲ್ಲೊಂದಾದ ಕಾಣಿಯೂರು ಮಠದ ಮೂಲ ಮಠವಿರುವ ಕಾಣಿಯೂರಿನಲ್ಲಿ ಮಂಗಳೂರು-ಹಾಸನ ರೈಲು ಮಾರ್ಗ ನಿರ್ಮಾಣದ ಸಂದರ್ಭ ಬ್ರೇಕ್‌ಹಾಲ್ಟ್ ರೈಲ್ವೇ ನಿಲ್ದಾಣವನ್ನು ನಿರ್ಮಾಣ ಮಾಡಲಾಯಿತು. ಈಗಲೂ ಬ್ರೇಕ್‌ಹಾಲ್ಟ್ ನಿಲ್ದಾಣವಾಗಿಯೇ ಕಾಣಿಯೂರು ರೈಲು ನಿಲ್ದಾಣವಿದೆ.
ಕಾಣಿಯೂರು ರೈಲು ನಿಲ್ದಾಣವು ರೈಲ್ವೇ ಸಂಪರ್ಕ ವ್ಯವಸ್ಥೆಯಲ್ಲಿ ಅಭಿವೃದ್ಧಿ ಹೊಂದಲು ಇರುವ ಏಕೈಕ ಮಾರ್ಗವೆಂದರೆ ಕಾಂಞಂಗಾಡ್-ಕಾಣಿಯೂರು ಹೊಸ ರೈಲು ಮಾರ್ಗ ನಿರ್ಮಾಣ. ಈ ರೈಲು ಮಾರ್ಗ ನಿರ್ಮಾಣವಾದರೆ ಕಾಣಿಯೂರು ಹೊಸ ರೈಲ್ವೇ ಜಂಕ್ಷನ್ ಆಗುತ್ತದೆ. ಮಂಗಳೂರು-ಹಾಸನ ಮತ್ತು ಕಾಞಂಗಾಡ್-ಕಾಣಿಯೂರು ರೈಲು ಮಾರ್ಗವು ಇಲ್ಲಿ ಸಂಧಿಸುತ್ತದೆ. ಉದ್ದೇಶಿತ ರೈಲು ಮಾರ್ಗದ ಯೋಜನೆಗಾಗಿ ಕಾಣಿಯೂರಿನ ಏಲಡ್ಕದಲ್ಲಿ ರೈಲ್ವೇ ಇಲಾಖೆಯು ಈಗಾಗಲೇ ನಿವೇಶನವನ್ನು ಗುರುತಿಸಿದೆ. ಕಾಣಿಯೂರು ರೈಲು ನಿಲ್ದಾಣವು ಈಗ ಇರುವ ಸ್ಥಳದಿಂದ ಎರಡು ಕಿ.ಮೀ. ಮುಂದಕ್ಕೆ ರಚನೆಯಾಗುವ ಕಾಣಿಯೂರು ಜಂಕ್ಷನ್‌ಗೆ ಸ್ಥಳಾಂತರಗೊಳ್ಳುತ್ತದೆ.
ಈಗಿನ ಸ್ಥಿತಿ
ಕಾಣಿಯೂರು ಬ್ರೇಕ್‌ಹಾಲ್ಟ್ ರೈಲು ನಿಲ್ದಾಣವು ಕಾಣಿಯೂರು ಪೇಟೆಯ ಮುಖ್ಯ ರಸ್ತೆಗೆ ಹೊಂದಿಕೊಂಡಿದೆ. ಕಮಿಷನ್ ಏಜೆಂಟ್ ಇರುವ ನಿಲ್ದಾಣವಾಗಿದೆ. ರೈಲು ಬಳಕೆದಾರರ ಸಂಖ್ಯೆಯೂ ಇದೆ. ಈ ಹಿಂದೆ ದೂರ ಪ್ರಯಾಣದ ರೈಲುಗಳು ಕಾಣಿಯೂರಿನಲ್ಲಿ ನಿಲುಗಡೆಗೊಳ್ಳುತ್ತಿದ್ದವು. ಗೇಜ್ ಪರಿವರ್ತನೆಯ ಬಳಿಕ ಕಾಣಿಯೂರು ಬ್ರೇಕ್‌ಹಾಲ್ಟ್ ನಿಲ್ದಾಣದಲ್ಲಿ ಮಂಗಳೂರು -ಸುಬ್ರಹ್ಮಣ್ಯ ರಸ್ತೆ ಲೋಕಲ್ ರೈಲು ಮಾತ್ರ ನಿಲುಗಡೆಗೊಳ್ಳುತ್ತದೆ.
5 ವರ್ಷಕ್ಕೊಮ್ಮೆ ಸಮಸ್ಯೆ
ಕಾಣಿಯೂರು ರೈಲ್ವೇ ನಿಲ್ದಾಣದಲ್ಲಿ ಕಮಿಷನ್ ಏಜೆಂಟ್ ನೆಲೆಯಲ್ಲಿ 5 ವರ್ಷಗಳ ಅವ ಧಿಗೆ ರೈಲ್ವೇ ಏಜೆಂಟರನ್ನು ನೇಮಕಗೊಳಿಸಲಾಗುತ್ತದೆ. ಪ್ರತಿ ಬಾರಿಯೂ 5 ವರ್ಷಗಳ ಬಳಿಕ ಏಜೆಂಟ್ ನೇಮಕ ವಿಳಂಬವಾಗುತ್ತಿದ್ದು, ಈ ಕಾರಣದಿಂದ ಕಾಣಿಯೂರಿನಲ್ಲಿ ಲೋಕಲ್ ರೈಲು ನಿಂತರೂ ಪ್ರಯಾಣಿಕರು ಟಿಕೆಟ್ ಖರೀದಿಸಿ ಪ್ರಯಾಣಿಸಲು ಸಾಧ್ಯವಾಗುತ್ತಿಲ್ಲ. ಹೊಸ ಏಜೆಂಟರ ಅಥವಾ ಹಳೆ ಏಜೆಂಟರನ್ನೇ ಮುಂದುವರಿಸುವ ಪ್ರಕ್ರಿಯೆ ಮುಗಿಯುವವರೆಗೆ ಕಾಣಿಯೂರಿನವರು ಮಂಗಳೂರಿಗೆ ತೆರಳುವುದಾದರೆ ನರಿಮೊಗರು ರೈಲ್ವೇ ನಿಲ್ದಾಣದಲ್ಲಿ ಇಳಿದು ಟಿಕೆಟ್ ಮಾಡಿ ಮತ್ತೆ ಪ್ರಯಾಣ ಮುಂದುವರಿಸ ಬೇಕಾಗುತ್ತದೆ. ಅದೇ ರೀತಿ ಸುಬ್ರಹ್ಮಣ್ಯ ರಸ್ತೆ ಕಡೆಗೆ ತೆರಳುವುದಾದರೆ ಎಡಮಂಗಲ ರೈಲ್ವೇ ನಿಲ್ದಾಣದಲ್ಲಿ ಇಳಿದು ಟಿಕೆಟ್ ಖರೀದಿಸಿ ಪ್ರಯಾಣ ಮುಂದುವರಿಸಬೇಕಾಗುತ್ತದೆ.
ನನೆಗುದಿಗೆ ಬಿದ್ದ ಯೋಜನೆ
ಕಾಣಿಯೂರು-ಕಾಂಞಂಗಾಡ್ ಹೊಸ ರೈಲುಮಾರ್ಗ ಯೋಜನೆಯು ದಶಕಗಳಿಂದ ನನೆಗುದಿಗೆ ಬಿದ್ದಿದೆ. ಕೇರಳ ಭಾಗದಿಂದ ಈ ಯೋಜನೆಗೆ ಹೆಚ್ಚಿನ ಒತ್ತು ಸಿಗುತ್ತಿದೆ. ಯಾಕೆಂದರೆ ಕಾಸರಗೋಡು ಜಿಲ್ಲೆಯಿಂದ ಕರ್ನಾಟಕದ ಹಾಸನ, ಬೆಂಗಳೂರು ನಗರಗಳನ್ನು ಸಂಪರ್ಕಿಸಲು ಇದು ಹತ್ತಿರದ ರೈಲು ಮಾರ್ಗವಾಗಿದೆ. ಕರ್ನಾಟಕ ಭಾಗದಲ್ಲಿ ಈ ಯೋಜನೆಗೆ ಹೆಚ್ಚಿನ ಆಸಕ್ತಿ ವ್ಯಕ್ತವಾಗುತ್ತಿಲ್ಲ. ಈ ರೈಲು ಮಾರ್ಗ ರಚನೆಯಾದರೆ ಸುಳ್ಯದ ಮೂಲಕ ರೈಲು ಮಾರ್ಗ ಹಾದು ಹೋಗುತ್ತದೆ. ಡಿ.ವಿ. ಸದಾನಂದ ಗೌಡರು ಕೇಂದ್ರ ರೈಲ್ವೇ ಸಚಿವರಾಗಿದ್ದಾಗ ಈ ಯೋಜನೆಯ ಸರ್ವೇ ನಡೆಸಲು ಅನುದಾನ ಮಂಜೂರು ಮಾಡಿದ್ದರು. ಮುಂದೆ ಏನಾಗಿದೆ ಎಂದು ಯಾರಿಗೂ ಗೊತ್ತಿಲ್ಲ.
– ಪ್ರವೀಣ್ ಚೆನ್ನಾವರ
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
New Year: ಸ್ನೇಹಿತರ ಮನೆಗೆ ಪಾರ್ಟಿಗೆಂದು ಹೋದ ಬಾಲಕಿಯ ಮೇಲೆ ಅತ್ಯಾ*ಚಾರ
Miraculous; ಎರಡು ಬಸ್ ಗಳ ಮಧ್ಯ ಸಿಲುಕಿದರೂ ವ್ಯಕ್ತಿ ಬಚಾವ್: ವೈರಲ್ ವಿಡಿಯೋ
China; ಭಾರತದ ಭೂಭಾಗದಲ್ಲಿ ಎರಡು ಕೌಂಟಿಗಳು: ಕೇಂದ್ರದಿಂದ ಬಲವಾದ ಪ್ರತಿಭಟನೆ
Sharan; ಹೆದರಿಸಿ ನಗಿಸಲು ಬರುತ್ತಿದೆ ʼಛೂ ಮಂತರ್ʼ
Retirement: ವೃತ್ತಿ ನಿವೃತ್ತಿ ವ್ಯಕ್ತಿಯಲ್ಲಿ ಖಿನ್ನತೆಗೆ ಕಾರಣವಾಗುವುದೇ? ಇಲ್ಲಿದೆ ಮಾಹಿತಿ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.