ಅರಕಲಗೂಡಿನಲ್ಲಿ ನೀರಿಲ್ಲದೇ ಜನರ ಪರದಾಟ
ಟ್ಯಾಂಕರ್ ನೀರಿಗೆ ಜನರು ಬಕಪಕ್ಷಿಗಳಂತೆ ಕಾದು ಕುಳಿತುಕೊಳ್ಳುವ ದುಸ್ಥಿತಿ
Team Udayavani, May 29, 2019, 12:15 PM IST
ಅರಕಲಗೂಡಿನಲ್ಲಿ ಟ್ಯಾಂಕರ್ ನೀರಿಗಾಗಿ ನೂಕುನುಗ್ಗಲು ಉಂಟಾಗಿದೆ.
ಅರಕಲಗೂಡು: ಪಟ್ಟಣಲ್ಲಿ ನೀರಿಗಾಗಿ ಹಾಹಾಕಾರವುಂಟಾಗಿದ್ದು, ಸಾರ್ವಜನಿಕರು ಟ್ಯಾಂಕರ್ ನೀರಿಗೆ ಬಕಪಕ್ಷಿಗಳಂತೆ ಕಾದು ಕುಳಿತುಕೊಳ್ಳುವ ಪರಿಸ್ಥಿತಿ ನಿರ್ಮಾಣವಾಗಿದೆ.
ಸುಟ್ಟು ಹೋಗಿರುವ ಟೀಸಿ: ಪಟ್ಟಣಕ್ಕೆ ಕುಡಿಯುವ ನೀರು ಸರಬರಾಜು ಮಾಡುವ ಗೊರೂರು ನೀರು ಶುದ್ಧೀಕರಣ ಘಟಕದ ವಿದ್ಯುತ್ ಪರಿವರ್ತಕ ಸುಟ್ಟು ಹೋಗಿರುವ ಕಾರಣ ಕುಡಿಯುವ ನೀರನ್ನು ನೀಡಲಾಗುತ್ತಿಲ್ಲ, ಇದರಿಂದ ಪಟ್ಟಣದ ನಿವಾಸಿಗಳಿಗೆ ತೊಂದರೆಯಾಗಿದ್ದು, ನೀರಿಗಾಗಿ ಕ್ಯಾನ್ ಹಿಡಿದು ಅಕ್ಕ ಪಕ್ಕದ ಗ್ರಾಮಗಳಿಗೆ ತೆರಳಿ ಅಲ್ಲಿಯ ಶುದ್ಧ ಕುಡಿಯುವ ನೀರನ್ನು ಆಶ್ರಯಿಸಿದ್ದಾರೆ.
ಒಂದು ವಾರ ನೀರಿಲ್ಲ: ಪಟ್ಟಣದಲ್ಲಿ ಹಿಂದೆಂದೂ ಕಾಣದ ರೀತಿಯಲ್ಲಿ ನೀರಿಗಾಗಿ ಸಾರ್ವಜನಿಕರು ತೊಂದರೆ ಅನುಭವಿಸುತ್ತಿದ್ದು, ಟ್ಯಾಂಕರ್‌ನಲ್ಲಿ ಸರಬರಾಜು ಮಾಡುತ್ತಿರುವ ನೀರನ್ನು ಹಿಡಿಯಲು ವಾರ್ಡ್‌ಗಳಲ್ಲಿ ಮಹಿಳೆಯರ ಕಿತ್ತಾಟ ನಡೆಯುತ್ತಿದೆ. ಇಂತಹ ಸ್ಥಿತಿ ಸುಮಾರು 07-08 ವರ್ಷಗಳ ಹಿಂದೆ ಉಂಟಾಗಿದ್ದು ಬಿಟ್ಟರೆ ಇಲ್ಲಿಯವರೆಗೆ ಇಂತಹ ತೊಂದರೆ ಸಾರ್ವಜನಿಕರಿಗೆ ಎದುರಾಗಿರಲಿಲ್ಲ. ಈ ತೊಂದರೆ ಸುಮಾರು 7 ದಿವಸಗಳ ಕಾಲ ಇರುತ್ತದೆ ಎಂದು ಅಧಿಕಾರಿಗಳು ವಾಹನಗಳಲ್ಲಿ ಪ್ರಚಾರ ಮಾಡಿಸುತ್ತಿದ್ದಾರೆ.
ಸಾರ್ವಜನಿಕರ ಆಕ್ರೋಶ: ಜಿಲ್ಲಾಡಳಿತ ಕುಡಿಯುವ ನೀರಿಗೆ ತೊಂದರೆ ಬಾರದಂತೆ ಮುಂಜಾಗ್ರತಾ ಕ್ರಮಗಳನ್ನು ತೆಗೆದುಕೊಳ್ಳುವ ಬಗ್ಗೆ ಮಾಧ್ಯಮಗಳಲ್ಲಿ ಪ್ರಚಾರ ಪಡೆಯುತ್ತಿದೆ. ಇಂತದರಲ್ಲಿ ಪಟ್ಟಣದ ನೀರು ಸರಬರಾಜು ಘಟಕದ ವಿದ್ಯುತ್ ಟೀಸಿ ಬದಲಾಯಿಸಲು ವಾರ ಕಾಲಾವಕಾಶ ಬೇಕೆ? ಈ ಕೂಡಲೇ ಇತ್ತ ಗಮನ ನೀಡಿ ತಕ್ಷಣದಲ್ಲಿ ಕುಡಿಯುವ ನೀರಿನ ತೊಂದರೆ ನಿವಾರಿಸುವಂತೆ ಸಾರ್ವಜನಿಕರು ತಾಲೂಕಿನ ಜನಪ್ರತಿನಿಧಿಗಳು ಹಾಗೂ ಅಧಿಕಾರಿಗಳನ್ನು ಆಗ್ರಹಿಸಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Suraj Revanna ಎಲ್ಲೇ ಹೋದ್ರೂ ಕಿತಾಪತಿ ಮಾಡಿ ಬರ್ತಾರೆ: ಶ್ರೇಯಸ್ ಪಟೇಲ್
ದ್ವೇಷದ ರಾಜಕಾರಣ ಸುಡುವ ಕಾಲ ಸನ್ನಿಹಿತ: ಸೂರಜ್ ರೇವಣ್ಣ
ಚಲಿಸುತ್ತಿದ್ದ ಖಾಸಗಿ ಬಸ್‌ನಲ್ಲಿ ದಿಢೀರ್ ಕಾಣಿಸಿಕೊಂಡ ಬೆಂಕಿ; ತಪ್ಪಿದ ಭಾರಿ ಅನಾಹುತ
Hasana: ಕರೆಯನ್ನು ಸ್ವೀಕರಿಸದ ಪ್ರಿಯಕರಗೆ ಚಾಕು ಇರಿದು ಪ್ರಿಯತಮೆ ಪರಾರಿ
Hassan: ಪತ್ನಿ ಕಿರುಕುಳ: ಹೇಮಾವತಿ ಹಿನ್ನೀರಿಗೆ ಹಾರಿ ಟೆಕ್ಕಿ ಆತ್ಮಹ*ತ್ಯೆ
MUST WATCH
ಹೊಸ ಸೇರ್ಪಡೆ
Kumbh Mela 2025: ಮಹಾಕುಂಭ ಮೇಳದ ಆಕರ್ಷಣೆಯ ಕೇಂದ್ರ ಬಿಂದು ಅಂಬಾಸಿಡರ್ ಬಾಬಾ…ರುದ್ರಾಕ್ಷಾ!
Shirva: ಮೂಡುಬೆಳ್ಳೆ ಪೇಟೆ; ನಿತ್ಯ ಟ್ರಾಫಿಕ್ ಜಾಮ್
Tirupati; ಗಾಯಾಳುಗಳನ್ನು ಭೇಟಿಯಾದ ಸಿಎಂ ನಾಯ್ಡು: ಟಿಟಿಡಿ ಅಧಿಕಾರಿಗಳಿಗೆ ಛೀಮಾರಿ!
Winter Health Tips: ಚಳಿಗಾಲದಲ್ಲಿ ಆರೋಗ್ಯವಾಗಿರಲು 10 ಅತ್ಯುತ್ತಮ ಮಾರ್ಗಗಳು
Toxic Movie: ʼಟಾಕ್ಸಿಕ್ʼನಲ್ಲಿ ನಟಿಸಲು ಯಶ್ ಪಡೆದ ಸಂಭಾವನೆ ಎಷ್ಟು?
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.