ಶಾರದಾ ಚಿಟ್ ಫಂಡ್ ಹಗರಣ: ಸಿಬಿಐ ಎದುರು ಹಾಜರಾದ ಐಪಿಎಸ್ ಘೋಷ್
Team Udayavani, May 29, 2019, 4:22 PM IST
ಕೋಲ್ಕತ : ಬಹುಕೋಟಿ ಶಾರದಾ ಚಿಟ್ ಫಂಡ್ ಹಗರಣಕ್ಕೆ ಸಂಬಂಧಿಸಿ ಸಮನ್ಸ್ ಪಡೆದಿರುವ ಐಪಿಎಸ್ ಅಧಿಕಾರಿ ಅರ್ನಾಬ್ ಘೋಷ್ ಅವರಿಂದು ಸಾಲ್ಟ್ ಲೇಕ್ ನಲ್ಲಿರುವ ಸಿಬಿಐ ಕಚೇರಿಗೆ ಹಾಜರಾದರು.
ಘೋಷ್ ಅವರು, 2014ರಲ್ಲಿ ಸುಪ್ರೀಂ ಕೋರ್ಟ್ ಶಾರದಾ ಚಿಟ್ ಫಂಡ್ ಹಗರಣದ ತನಿಖೆ ನಡೆಸುವಂತೆ ಸಿಬಿಐಗೆ ಆದೇಶಿಸುವ ಮುನ್ನ ಈ ಹಗರಣದ ತನಿಖೆ ನಡೆಸುತ್ತಿದ್ದ, ಪಶ್ಚಿಮ ಬಂಗಾಲ ಸರಕಾರದಿಂದ ನೇಮಿಸಲ್ಪಟ್ಟಿದ್ದ, ವಿಶೇಷ ತನಿಖಾ ತಂಡದ (ಎಸ್ಐಟಿ) ಓರ್ವ ಸದಸ್ಯರಾಗಿದ್ದರು.
ಎಸ್ಐಟಿ ತಂಡದ ನೇತೃತ್ವ ವಹಿಸಿದ್ದ ಮಾಜಿ ಕೋಲ್ಕತ ಪೊಲೀಸ್ ಕಮಿಷನರ್ ರಾಜೀವ್ ಕುಮಾರ್ ಅವರಿಗೂ ಸಿಬಿಐ ಇದೇ ರೀತಿಯ ಸಮನ್ಸ್ ಕಳುಹಿಸಿದೆ. ಆದರೆ ಅವರಿನ್ನೂ ಅದಕ್ಕೆ ಸ್ಪಂದಿಸಿಲ್ಲ.
ಘೋಷ್ ಅವರ ಸಹಾಯಕರಾಗಿದ್ದ ಇನ್ನೋರ್ವ ಎಸ್ಐಟಿ ಅಧಿಕಾರಿ ಪ್ರಭಾಕರ ನಾಥ್ ಅವರನ್ನು ಕಳೆದ ಮಂಗಳವಾರ ಸಿಬಿಐ ತಾಸುಗಟ್ಟಲೆ ಪ್ರಶ್ನಿಸಿರುವುದಾಗಿ ವರದಿಗಳು ತಿಳಿಸಿವೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Parliament Session: ಗೂಂಡಾಗಿರಿ ಮೂಲಕ ಸಂಸತ್ ಮೇಲೆ ನಿಯಂತ್ರಣ ಸಾಧಿಸಲು ಯತ್ನ: ಮೋದಿ
Mosque survey: ಸಂಭಲ್ ಹಿಂಸೆ: ಎಸ್ಪಿ ಸಂಸದ ಸೇರಿ ಹಲವರ ವಿರುದ್ಧ ಕೇಸು
Adani Group: ಸಾಲ ಅಗತ್ಯವಿಲ್ಲ: ಅದಾನಿ “ಆರ್ಥಿಕ ಶಕ್ತಿ’ ಪ್ರದರ್ಶನ
Assembly Election: ಮಹಾರಾಷ್ಟ್ರಕ್ಕೆ ಫಡ್ನವೀಸ್ ಸಿಎಂ?: 2-3 ದಿನಗಳಲ್ಲೇ ಪ್ರಮಾಣವಚನ
Maha Election: ಡಿಕೆಶಿ ಸೇರಿ ಕಾಂಗ್ರೆಸ್ ಜತೆ ಇವಿಎಂ ಬಗ್ಗೆ ಚರ್ಚೆ: ಸಂಸದೆ ಸುಪ್ರಿಯಾ
MUST WATCH
ಎದೆ ನೋವು, ಮಧುಮೇಹ, ಥೈರಾಯ್ಡ್ ,ಸಮಸ್ಯೆಗಳಿಗೆ ಪರಿಹಾರ ತೆಂಗಿನಕಾಯಿ ಹೂವು
ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು
ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?
ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್ |
ಕೊಲ್ಲೂರಿನಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಡಿಸಿಎಂ ಡಿ ಕೆ ಶಿವಕುಮಾರ್
ಹೊಸ ಸೇರ್ಪಡೆ
Tensions Grip: ಬಾಂಗ್ಲಾದೇಶ ಸರಕಾರದಿಂದ ಹಿಂದೂ ನಾಯಕ, ಇಸ್ಕಾನ್ನ ಕೃಷ್ಣದಾಸ್ ಸೆರೆ
Parliament Session: ಗೂಂಡಾಗಿರಿ ಮೂಲಕ ಸಂಸತ್ ಮೇಲೆ ನಿಯಂತ್ರಣ ಸಾಧಿಸಲು ಯತ್ನ: ಮೋದಿ
Sullia: ರಬ್ಬರ್ ಸ್ಮೋಕ್ ಹೌಸ್ಗೆ ಬೆಂಕಿ
Horoscope: ಆತ್ಮ ವಿಶ್ವಾಸ ಮತ್ತು ಸಕಾರಾತ್ಮಕ ಚಿಂತನೆಯಿಂದ ಯಶಸ್ಸು ಸಿಗಲಿದೆ
Mosque survey: ಸಂಭಲ್ ಹಿಂಸೆ: ಎಸ್ಪಿ ಸಂಸದ ಸೇರಿ ಹಲವರ ವಿರುದ್ಧ ಕೇಸು
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.