ಒಡಿಶಾ, ಅರುಣಾಚಲದಲ್ಲಿ ನೂತನ ಸಿಎಂಗಳ ಪದಗ್ರಹಣ
Team Udayavani, May 30, 2019, 6:00 AM IST
ಒಡಿಶಾ ವಿಧಾನಸಭೆ ಚುನಾವಣೆಯಲ್ಲಿ ಜಯಭೇರಿ ಬಾರಿಸಿರುವ ಬಿಜೆಡಿ ನಾಯಕ ನವೀನ್ ಪಾಟ್ನಾಯಕ್ ಬುಧವಾರ ಮುಖ್ಯಮಂತ್ರಿಯಾಗಿ ಪ್ರಮಾಣ ವಚನ ಸ್ವೀಕರಿಸಿದ್ದಾರೆ. ದಾಖಲೆಯ 5ನೇ ಬಾರಿಗೆ ಅವರು ಸಿಎಂ ಆಗಿ ಪ್ರಮಾಣ ಸ್ವೀಕರಿಸಿದ್ದಾರೆ. ರಾಜ್ಯಪಾಲ ಗಣೇಶಿ ಲಾಲ್ ಅವರು ಪಾಟ್ನಾಯಕ್ಗೆ ಗೋಪ್ಯತೆಯ ಪ್ರಮಾಣ ಬೋಧಿಸಿದ್ದು, ಇವರ ಜತೆಗೆ 20 ಮಂದಿ ಸಚಿವರಾಗಿ ಪ್ರಮಾಣ ಸ್ವೀಕರಿಸಿದ್ದಾರೆ. ಇನ್ನು ಅರುಣಾಚಲ ಪ್ರದೇಶದಲ್ಲಿ ಬಿಜೆಪಿ ಹಿರಿಯ ನಾಯಕ ಪೆಮಾ ಖಂಡು ಅವರು ರಾಜ್ಯದ 10ನೇ ಮುಖ್ಯಮಂತ್ರಿಯಾಗಿ ಬುಧವಾರವೇ ಪದಗ್ರಹಣ ಮಾಡಿದ್ದಾರೆ. ಚೌನಾ ಮೇನ್ ಅವರು ಡಿಸಿಎಂ ಆಗಿ, 11 ಮಂದಿ ಸಂಪುಟ ಸಚಿವರಾಗಿ ಪ್ರಮಾಣ ಸ್ವೀಕರಿಸಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಹೊಸ ಸೇರ್ಪಡೆ
King Cobra: “ಕಾಳಿಂಗ’ ಸರ್ಪಕ್ಕೆ ಕನ್ನಡದ್ದೇ ವೈಜ್ಞಾನಿಕ ಹೆಸರು!
Mysuru:’ಕರ್ನಾಟದಲ್ಲಿ “ಗ್ಯಾರಂಟಿ’ ಹೆಸರಲ್ಲಿ ಲೂಟಿ, ಮಹಾರಾಷ್ಟ್ರದಲ್ಲಿ ನೀವು ಘೋಷಿಸಬೇಡಿ’
By Election: ಚನ್ನಪಟ್ಟಣದಲ್ಲಿ ಎಚ್.ಡಿ.ದೇವೇಗೌಡ Vs ಡಿ.ಕೆ.ಶಿವಕುಮಾರ್ ಮೇಕೆದಾಟು ಜಟಾಪಟಿ
Active Politics: ನಾನು ಎಂದೂ ಮಂಡ್ಯ ಕ್ಷೇತ್ರ ಬಿಡುವುದಿಲ್ಲ: ಮಾಜಿ ಸಂಸದೆ ಸುಮಲತಾ
Golden Jubliee: ಪತ್ರಿಕೆಯ ಓದು ಪ್ರತಿಯೊಬ್ಬರಿಗೂ ಆಹಾ! ಎನಿಸುವಂತಿರಲಿ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.