ಅಮಿತ್ ಶಾ, ಪ್ರಸಾದ್ ರಾಜ್ಯಸಭೆ ಸದಸ್ಯತ್ವ ರದ್ದು
Team Udayavani, May 30, 2019, 6:00 AM IST
ಬಿಜೆಪಿ ಅಧ್ಯಕ್ಷ ಅಮಿತ್ ಶಾ, ಮಾಜಿ ಕೇಂದ್ರ ಸಚಿವರಾದ ರವಿಶಂಕರ್ ಪ್ರಸಾದ್ ಹಾಗೂ ಸ್ಮತಿ ಇರಾನಿ, ಡಿಎಂಕೆ ನಾಯಕಿ ಕನಿಮೋಳಿ ಅವರ ರಾಜ್ಯಸಭೆ ಸದಸ್ಯತ್ವ ರದ್ದುಗೊಳಿಸಲಾಗಿದೆ ಎಂದು ರಾಜ್ಯಸಭೆ ಕಾರ್ಯಾಲಯ ತಿಳಿಸಿದೆ.
ಇವರು ಲೋಕಸಭೆ ಚುನಾವಣೆಗೆ ಸ್ಪರ್ಧಿಸಿ ಗೆದ್ದಿರುವ ಹಿನ್ನೆಲೆಯಲ್ಲಿ ಈ ಕ್ರಮ ಕೈಗೊಳ್ಳಲಾಗಿದೆ. ಶಾ ಹಾಗೂ ಇರಾನಿ ಗುಜರಾತ್ನಿಂದ ರಾಜ್ಯಸಭೆಗೆ ಆಯ್ಕೆಯಾಗಿದ್ದರೆ, ಬಿಹಾರದಿಂದ ಪ್ರಸಾದ್ ಆಯ್ಕೆಯಾಗಿದ್ದರು. ಈ ಬಾರಿ ಪಟನಾದಿಂದ ಪ್ರಸಾದ್, ಅಮೇಠಿಯಿಂದ ಸ್ಮತಿ ಹಾಗೂ ಗಾಂಧಿನಗರದಿಂದ ಅಮಿತ್ ಶಾ ಲೋಕಸಭೆ ಚುನಾವಣೆಯಲ್ಲಿ ಗೆಲುವು ಸಾಧಿಸಿದ್ದಾರೆ.
ಬಿಹಾರದಿಂದ ಎನ್ಡಿಎ ಮಿತ್ರಪಕ್ಷ ಎಲ್ಜೆಪಿ ಮುಖಂಡ ರಾಮ್ ವಿಲಾಸ್ ಪಾಸ್ವಾನ್ರನ್ನು ರಾಜ್ಯಸಭೆಗೆ ಆಯ್ಕೆ ಮಾಡುವ ಸಾಧ್ಯತೆಯಿದೆ. ಇನ್ನುಳಿದ ಗುಜರಾತ್ನ ಎರಡು ಕ್ಷೇತ್ರಗಳನ್ನೂ ಚುನಾವಣೆಯಲ್ಲಿ ಸೋತು, ಸಂಪುಟ ಸೇರುವವರಿಗೆ ಮೀಸಲಿಡುವ ಸಾಧ್ಯತೆಯಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಹೊಸ ಸೇರ್ಪಡೆ
Sagara: ಚಿರತೆ ಉಗುರು, ಹಲ್ಲು ಅಕ್ರಮ ಸಾಗಣೆ… ಸೊತ್ತು ಸಮೇತ ವ್ಯಕ್ತಿ ವಶ
Mudhol: ಸಾಲಬಾಧೆಗೆ ಹೆದರಿ ರೈತ ಮಹಿಳೆ ಬಾವಿಗೆ ಹಾರಿ ಆತ್ಮಹತ್ಯೆ
Belegavi: ‘ನಾ ಡ್ರೈವರ್’ ಹಾಡಿನ ಗಾಯಕ ಮಾಳು ನಿಪನಾಳನಿಂದ ಯುವಕನ ಮೇಲೆ ಹಲ್ಲೆ
Horoscope: ಉದ್ಯೋಗ ಸ್ಥಾನದಲ್ಲಿ ಎರಡೂ ಬಗೆಯ ಅನುಭವಗಳು ಆಗಲಿದೆ
MUDA Case: ತನಿಖೆ ಸಿಬಿಐಗೆ ವಹಿಸಲು ಹೈಕೋರ್ಟ್ಗೆ ಅರ್ಜಿ; ಇಂದು ವಿಚಾರಣೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.