ರಮೇಶ್ ಜಾರಕಿಹೊಳಿ ಭೇಟಿಯಾದ ಪಕ್ಷೇತರರು
Team Udayavani, May 30, 2019, 6:00 AM IST
ಬೆಂಗಳೂರು: ಮೈತ್ರಿ ಸರ್ಕಾರದ ಭವಿಷ್ಯದಲ್ಲಿ ಮಹತ್ವದ ಪಾತ್ರ ವಹಿಸಲಿರುವ ಇಬ್ಬರು ಪಕ್ಷೇತರ ಶಾಸಕರು ಕಾಂಗ್ರೆಸ್ ಬಂಡಾಯ ಶಾಸಕ ರಮೇಶ್ ಜಾರಕಿಹೊಳಿ ಅವರೊಂದಿಗೆ ಕಾಣಿಸಿ ಕೊಂಡು ಕುತೂಹಲ ಮೂಡಿಸಿದ್ದಾರೆ.
ಲೋಕಸಭೆ ಚುನಾವಣೆಯ ಹೀನಾಯ ಸೋಲಿನ ನಂತರ ರಾಜ್ಯದ ಮೈತ್ರಿ ಸರ್ಕಾರ ಅಧಿಕಾರ ಕಳೆದುಕೊಳ್ಳುವ ಭೀತಿ ಎದುರಿ ಸುತ್ತಿದ್ದು, ಬಿಜೆಪಿಯವರ ‘ಆಪರೇಷನ್ ಕಮಲ’ದಿಂದ ತಪ್ಪಿಸಿಕೊಳ್ಳಲು ಇಬ್ಬರು ಪಕ್ಷೇತರ ಶಾಸಕರನ್ನು ತಮ್ಮ ಜೊತೆಗೆ ಇಟ್ಟುಕೊಳ್ಳಲು ಮೈತ್ರಿ ಪಕ್ಷಗಳ ನಾಯಕರು ಕಸರತ್ತು ನಡೆಸಿದ್ದಾರೆ. ಅಲ್ಲದೇ ಈಗಾಗಲೇ ಆರ್.ಶಂಕರ್ ಹಾಗೂ ನಾಗೇಶ್ ಅವರಿಗೆ ಮಂತ್ರಿ ಸ್ಥಾನ ನೀಡುವ ಬಗ್ಗೆಯೂ ಎರಡೂ ಪಕ್ಷಗಳ ನಾಯಕರು ಸಹಮತ ವ್ಯಕ್ತಪಡಿ ಸಿದ್ದಾರೆ ಎನ್ನಲಾಗಿದೆ. ಈ ಬೆಳವಣಿಗೆಯ ನಡುವೆಯೇ ಇಬ್ಬರೂ ಶಾಸಕರು ಕಾಂಗ್ರೆಸ್‌ನ ಬಂಡಾಯ ಶಾಸಕ ರಮೇಶ್ ಜಾರಕಿಹೊಳಿ ಅವರನ್ನು ಭೇಟಿ ಮಾಡಿ ಮಾತುಕತೆ ನಡೆಸಿರುವುದು, ಮೈತ್ರಿ ಪಕ್ಷಗಳ ನಾಯಕರನ್ನು ಮತ್ತಷ್ಟು ಆತಂಕಕ್ಕೆ ದೂಡಿದೆ. ಆದರೆ, ಸಮ್ಮಿಶ್ರ ಸರ್ಕಾರದಲ್ಲಿ ಸಚಿವ ಸ್ಥಾನ ದೊರೆಯುವುದು ಖಚಿತವಾಗಿದ್ದು, ಸರ್ಕಾರಕ್ಕೆ ಬೆಂಬಲ ಕೊಡಲು ಇಬ್ಬರೂ ಪಕ್ಷೇತರ ಶಾಸಕರು ಸಿದ್ಧರಾಗಿದ್ದಾರೆ. ಅವರ ಮೂಲಕವೇ ಕಾಂಗ್ರೆಸ್‌ನ ಬಂಡಾಯ ಶಾಸಕ ರಮೇಶ್ ಜಾರಕಿಹೊಳಿ ಅವರ ಮನವೊಲಿಸಿ, ಯಾವುದೇ ಕಾರಣಕ್ಕೂ ರಾಜೀನಾಮೆ ನೀಡಿ ಬಿಜೆಪಿಗೆ ಹೋಗದಂತೆ ಮನವಿ ಮಾಡಲು ರಾಜ್ಯ ಮೈತ್ರಿ ಪಕ್ಷಗಳ ನಾಯಕರು ಪ್ರಯತ್ನ ನಡೆಸಿದ್ದಾರೆ ಎಂಬ ಮಾತುಗಳು ಕೇಳಿ ಬರುತ್ತಿವೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಎದೆ ನೋವು, ಮಧುಮೇಹ, ಥೈರಾಯ್ಡ್ ,ಸಮಸ್ಯೆಗಳಿಗೆ ಪರಿಹಾರ ತೆಂಗಿನಕಾಯಿ ಹೂವು
ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು
ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?
ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್ |
ಕೊಲ್ಲೂರಿನಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಡಿಸಿಎಂ ಡಿ ಕೆ ಶಿವಕುಮಾರ್
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.