ರಾಹುಲ್ ಭೇಟಿ ಮಾಡಿದ ಎಚ್‌ಡಿಕೆ
Team Udayavani, May 31, 2019, 3:05 AM IST
ಬೆಂಗಳೂರು: ನರೇಂದ್ರಮೋದಿ ಅವರ ಪ್ರಮಾಣ ವಚನ ಸ್ವೀಕಾರ ಸಮಾರಂಭದಲ್ಲಿ ಪಾಲ್ಗೊಳ್ಳಲು ದೆಹಲಿಗೆ ತೆರಳಿದ್ದ ಮುಖ್ಯಮಂತ್ರಿ ಎಚ್.ಡಿ. ಕುಮಾರಸ್ವಾಮಿ ಗುರುವಾರ ಎಐಸಿಸಿ ಅಧ್ಯಕ್ಷ ರಾಹುಲ್ ಗಾಂಧಿಯವರನ್ನು ಭೇಟಿ ಮಾಡಿ ಚರ್ಚಿಸಿದರು.
ಲೋಕಸಭೆ ಚುನಾವಣೆ ಸೋಲಿಗೆ ಕಾರಣ, ಮೈತ್ರಿ ಧರ್ಮ ಕೆಲವೆಡೆ ಪಾಲನೆ ಆಗದಿರುವುದು, ನಾಯಕರ ನಡುವಿನ ಸಮನ್ವಯ ಕೊರತೆ ಮತ್ತಿತರ ವಿಚಾರಗಳ ಬಗ್ಗೆ ರಾಹುಲ್ ಗಾಂಧಿ ಜತೆ ಕುಮಾರಸ್ವಾಮಿ ಚರ್ಚಿಸಿದ್ದಾರೆ ಎಂದು ಹೇಳಲಾಗಿದೆ. ಲೋಕಸಭೆ ಚುನಾವಣೆ ಫಲಿತಾಂಶದ ನಂತರ ರಾಜ್ಯದಲ್ಲಿ ನಡೆಯುತ್ತಿರುವ ರಾಜಕೀಯ ವಿದ್ಯಮಾನಗಳ ಬಗ್ಗೆಯೂ ಸಂಪೂರ್ಣ ಮಾಹಿತಿ ನೀಡಿದರು.
ಯಾವುದೇ ಕಾರಣಕ್ಕೂ ರಾಜ್ಯದಲ್ಲಿ ಸಮ್ಮಿಶ್ರ ಸರ್ಕಾರಕ್ಕೆ ತೊಂದರೆಯಾಗಬಾರದು. ಸರ್ಕಾರ ಮುಂದುವರಿಯಬೇಕು. ಏನಾದರೂ ಸಮಸ್ಯೆ ಇದ್ದರೆ ಖುದ್ದು ನಾನೇ ಮಧ್ಯಪ್ರವೇಶ ಮಾಡಿ ಬಗೆಹರಿಸುತ್ತೇನೆ ಎಂದು ರಾಹುಲ್‌ಗಾಂಧಿ ಇದೇ ಸಂದರ್ಭದಲ್ಲಿ ಹೇಳಿದ್ದಾರೆ ಎಂದು ತಿಳಿದು ಬಂದಿದೆ.
ಇದೇ ಸಂದರ್ಭದಲ್ಲಿ ರಾಷ್ಟ್ರ ರಾಜಕಾರಣಕ್ಕೆ ನಿಮ್ಮ ಅಗತ್ಯವಿದೆ. ಆದ್ದರಿಂದ ಎಐಸಿಸಿ ಅಧ್ಯಕ್ಷರಾಗಿ ನೀವೇ ಮುಂದುವರಿಯಬೇಕು ಎಂದು ಕುಮಾರಸ್ವಾಮಿ ಮನವಿ ಮಾಡಿದರು. ಸಚಿವರಾದ ಸಾ.ರಾ.ಮಹೇಶ್, ಬಂಡೆಪ್ಪ ಕಾಶೆಂಪೂರ್ ಉಪಸ್ಥಿತರಿದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Indiranagar; ಅಸ್ಸಾಂ ಯುವತಿ ಹ*ತ್ಯೆ ಕೇಸ್: ಆರೋಪಿ ಬಂಧಿಸಿದ ಪೊಲೀಸರು
Kalaburagi: ಅನುಭವ ಮಂಟಪ ಸ್ಥಳ ಮರಳಿ ಪಡೆಯಲು ದೆಹಲಿ ಚಲೋ
Dharwad: 15 ದಿನಗಳಲ್ಲಿ ಸಚಿವ ಸಂಪುಟ ವಿಸ್ತರಣೆ, ನಾನೂ ಕೂಡ ಆಕಾಂಕ್ಷಿ: ವಿನಯ್ ಕುಲಕರ್ಣಿ
ಚಂದ್ರಶೇಖರ ಶ್ರೀ ವಿರುದ್ಧ ಕೇಸ್; ಒಕ್ಕಲಿಗರು ತಿರುಗಿ ಬೀಳುತ್ತಾರೆ: ಆರ್.ಅಶೋಕ್ ಎಚ್ಚರಿಕೆ
Madikeri: ಮನೆಯ ಆವರಣದಲ್ಲಿ ಗಾಂಜಾ ಬೆಳೆದ ಆರೋಪಿಯ ಬಂಧನ
MUST WATCH
ಬಳಂಜದ ಪುಟ್ಟ ಪೋರನ ಕೃಷಿ ಪ್ರೇಮ | ಕಸಿ ಕಟ್ಟುವಿಕೆಯಲ್ಲಿ ಬಲು ಪರಿಣಿತ ಈ 6 ನೇ ತರಗತಿ ಬಾಲಕ
ಎದೆ ನೋವು, ಮಧುಮೇಹ, ಥೈರಾಯ್ಡ್ ,ಸಮಸ್ಯೆಗಳಿಗೆ ಪರಿಹಾರ ತೆಂಗಿನಕಾಯಿ ಹೂವು
ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು
ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?
ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್ |
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.