ನಾಳೆಯಿಂದ ಮಾವು, ಹಲಸು ಮೇಳ

ಸರ್ಕಾರಿ ಜೂನಿಯರ್‌ ಕಾಲೇಜು ಮೈದಾನದಲ್ಲಿ ಆಯೋಜನೆ ,ಮೇಳದಲ್ಲಿ ಸಸ್ಯ ಸಂತೆಗೆ ವ್ಯವಸೆ

Team Udayavani, May 31, 2019, 11:02 AM IST

tumkur-tdy-2

ತುಮಕೂರು: ಜಿಲ್ಲಾಡಳಿತ, ಜಿಪಂ, ತೋಟಗಾರಿಕೆ ಇಲಾಖೆ ಹಾಗೂ ಕರ್ನಾಟಕ ರಾಜ್ಯ ಮಾವು ಅಭಿವೃದ್ಧಿ ಮತ್ತು ಮಾರುಕಟ್ಟೆ ನಿಗಮದ ಸಂಯುಕ್ತಾಶ್ರಯದಲ್ಲಿ ಜೂ.1ರಿಂದ 5ರವರೆಗೆ 5 ದಿನಗಳ ಕಾಲ ಮಾವು ಮತ್ತು ಹಲಸು ಪ್ರದರ್ಶನ ಮತ್ತು ಮಾರಾಟ ಮೇಳ ಹಾಗೂ ಸಸ್ಯ ಸಂತೆಯನ್ನು ಏರ್ಪಡಿಸಲಾಗಿದೆ ಎಂದು ಜಿಪಂ ಸಿಇಒ ಶುಭಾ ಕಲ್ಯಾಣ್‌ ತಿಳಿಸಿದರು. ನಗರದ ಜಿಪಂ ಮಿನಿ ಸಭಾಂಗಣದಲ್ಲಿ ಗುರುವಾರ ಏರ್ಪಡಿಸಿದ್ದ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿ, ಈ ಮೇಳವನ್ನು ನಗರದ ಸರ್ಕಾರಿ ಜೂನಿಯರ್‌ ಕಾಲೇಜು ಮೈದಾನದಲ್ಲಿ ಆಯೋಜಿಸಲಾಗಿದೆ.

ಜಿಲ್ಲೆಯಲ್ಲಿ ಮಾವು ಪ್ರಮುಖವಾದ ಬೆಳೆಯಾಗಿದ್ದು, 16,330 ಹೆಕ್ಟೇರ್‌ ಪ್ರದೇಶದ ವಿಸ್ತೀರ್ಣದಲ್ಲಿ ಬೆಳೆಯ ಲಾಗುತ್ತಿದೆ. ಬಾದಾಮಿ, ರಸಪುರಿ, ಸೇಂದೂರು, ತೋತಾಪುರಿ ಮತ್ತಿತರ ಮಾವಿನ ತಳಿಗಳನ್ನು ಹೆಚ್ಚಾಗಿ ಬೆಳೆಯುತ್ತಿ ರುವುದರಿಂದ 1.50ರಿಂದ 1.90 ಲಕ್ಷ ಮೆಟ್ರಿಕ್‌ ಟನ್‌ಗಳಷ್ಟು ವಾರ್ಷಿಕ ಉತ್ಪಾದನೆಯಾಗುತ್ತಿದೆ ಎಂದು ಅಂದಾಜು ಮಾಡಲಾಗಿದೆ ಎಂದು ನುಡಿದರು. ಕಾರ್ಬೈಡ್‌ ಮುಕ್ತ

ಹಣ್ಣುಗಳ ಮಾರಾಟ: ಮೇಳದಲ್ಲಿ ರೈತರು ಹಣ್ಣುಗಳನ್ನು ಮಾರಾಟ ಮಾಡಲು ಉಚಿತವಾಗಿ 22 ಮಳಿಗೆಗಳನ್ನು ತೆರೆಯಲಾಗುತ್ತಿದೆ. ರೈತರಿಂದ ಗ್ರಾಹಕರಿಗೆ ಕಾರ್ಬೈಡ್‌ ಮುಕ್ತ ನೈಸರ್ಗಿಕವಾಗಿ ಮಾಗಿಸಿದ ಹಣ್ಣುಗಳನ್ನು ಹಾಪ್‌ಕಾಮ್ಸ್‌ ನಿಗದಿಪಡಿಸಿದಂತೆ ಸುಲಭ ಬೆಲೆಯಲ್ಲಿ ನೇರ ಮಾರಾಟ ಮಾಡಲಾಗುವುದು. ವ್ಯಾಪಾರಿಗಳು ಬೇಗ ಹಣ್ಣು ಮಾಡುವ ದೃಷ್ಟಿಯಿಂದ ಬಲಿಯದೇ ಇರುವ ಕಾಯಿಗಳನ್ನು ಕಾರ್ಬೈಡ್‌ ರಾಸಾಯನಿಕ ವಸ್ತುವನ್ನು ಬಳಸಿ ಹಣ್ಣನ್ನು ಮಾಗಿಸುತ್ತಿದ್ದಾರೆ. ಕಾರ್ಬೈಡ್‌ಯುಕ್ತ ಹಣ್ಣುಗಳು ಕ್ಯಾನ್ಸರ್‌ಕಾರಕವಾಗಿವೆ. ಈ ನಿಟ್ಟಿನಲ್ಲಿ ಮೇಳದಲ್ಲಿ ಮಾರಾಟ ಮಾಡುವ ಹಣ್ಣುಗಳನ್ನು ಮಾಗಿಸಲು ರಾಸಾ ಯನಿಕವನ್ನು ಬಳಸಲಾಗಿದೆಯೇ ಎಂಬುದನ್ನು ಪರೀಕ್ಷಿಸಲು ಇಲಾಖೆಯಿಂದ ತಂಡವನ್ನು ನಿಯೋಜಿಸಲಾಗಿದೆ.ಗ್ರಾಹಕರು ಹೆಚ್ಚಿನ ಸಂಖ್ಯೆಯಲ್ಲಿ ಮೇಳಕ್ಕೆ ಆಗಮಿಸಿ ನೈಸರ್ಗಿಕವಾಗಿ ಹಣ್ಣು ಮಾಡಿದ ಮಾವು ಮತ್ತು ಹಲಸಿನ ಹಣ್ಣುಗಳನ್ನು ಖರೀದಿಸುವ ಮೂಲಕ ರೈತರನ್ನು ಉತ್ತೇಜಿಸಬೇಕು ಎಂದು ಮನವಿ ಮಾಡಿದರು.

ಬೆಳಗ್ಗೆ 11 ಗಂಟೆಗೆ ಮೇಳ ಉದ್ಘಾಟನೆ: ತೋಟಗಾರಿಕೆ ಉಪನಿರ್ದೇಶಕ ಬಿ.ರಘು ಮಾತನಾಡಿ, ಮೇಳವನ್ನು ಡಿಸಿಎಂ ಡಾ.ಜಿ. ಪರಮೇಶ್ವರ್‌ ಜೂ.1ರ ಬೆಳಗ್ಗೆ 11 ಗಂಟೆಗೆ ಉದ್ಘಾಟನೆ ಮಾಡಲಿದ್ದಾರೆ. ಕಾರ್ಮಿಕ ಸಚಿವ ವೆಂಕಟರಮಣಪ್ಪ, ಸಣ್ಣ ಕೈಗಾರಿಕೆ ಸಚಿವ ಎಸ್‌.ಆರ್‌.ಶ್ರೀನಿವಾಸ್‌ ತಾಂತ್ರಿಕ ಕಿರುಹೊತ್ತಿಗೆ ಬಿಡುಗಡೆ ಮಾಡಲಿದ್ದಾರೆ. ಶಾಸಕ ಜಿ.ಬಿ. ಜ್ಯೋತಿ ಗಣೇಶ್‌ ಅಧ್ಯಕ್ಷತೆ ವಹಿಸಲಿದ್ದಾರೆ. ಜಿಪಂ ಅಧ್ಯಕ್ಷೆ ಲತಾ ಹಾಗೂ ಸಂಸದ ಜಿ.ಎಸ್‌. ಬಸವರಾಜು ಮಳಿಗೆಗಳ ಉದ್ಘಾಟಿಸಲಿದ್ದಾರೆ. ಶಾಸಕ ಡಿ.ಸಿ. ಗೌರಿಶಂಕರ್‌, ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ನಿಗಮದ ಅಧ್ಯಕ್ಷ ಹಾಗೂ ಶಾಸಕ ಜಿ.ಸತ್ಯ ನಾರಾಯಣ, ಮಹಾನಗರ ಪಾಲಿಕೆ ಮಹಾ ಪೌರರಾದ ಲಲಿತಾ ರವೀಶ್‌, ಜಿಲ್ಲೆಯ ವಿವಿಧ ಸಂಸದರು, ಶಾಸಕರು, ಜನಪ್ರತಿನಿಧಿಗಳು, ಅಧಿಕಾರಿಗಳು ಪಾಲ್ಗೊಳ್ಳಲಿದ್ದಾರೆ ಎಂದರು.

ಮೇಳದಲ್ಲಿ ಸಸ್ಯಸಂತೆ: ಮೇಳದಲ್ಲಿ ಹಣ್ಣುಗಳ ಪ್ರದರ್ಶನ ಮತ್ತು ಮಾರಾಟವನ್ನಷ್ಟೇ ಅಲ್ಲದೆ, ಸಸ್ಯಸಂತೆ ಎಂಬ ವಿನೂತನ ಕಾರ್ಯಕ್ರಮ ಹಮ್ಮಿ ಕೊಳ್ಳಲಾಗಿದೆ. ಸಸ್ಯ ಸಂತೆಯಲ್ಲಿ ರೈತಾಪಿ ಸಮುದಾಯ ಹಾಗೂ ನಗರವಾಸಿಗಳಿಗೆ ಅವಶ್ಯಕವಿರುವ, ತೋಟಗಾರಿಕೆ ಕ್ಷೇತ್ರ ಮತ್ತು ನರ್ಸರಿಗಳಲ್ಲಿ ಉತ್ಪಾದಿಸಲಾಗುತ್ತಿರುವ ಗುಣ ಮಟ್ಟದ ವಿವಿಧ ತೋಟಗಾರಿಕೆ ಬೆಳೆಗಳ ಕಸಿ ಮತ್ತು ಸಸಿಗಳ ಪ್ರದರ್ಶಿಕೆ ಮತ್ತು ಮಾರಾಟ ಮಾಡ ಲಾಗುವುದು. ಇಲಾಖೆಯ ಜೈವಿಕ ಕೇಂದ್ರಗಳಲ್ಲಿ ಉತ್ಪಾದಿಸಲಾಗಿರುವ ಜೈವಿಕ ಗೊಬ್ಬರಗಳಾದ ವರ್ಮಿ ಕಾಂಪೋಸ್ಟ್‌, ವರ್ವಿವಾಶ್‌, ವೆಜಿಟೇಬಲ್‌ ಸ್ಪೆಷಲ್‌, ಬನಾನ ಸ್ಪೆಷಲ್‌ ಮತ್ತು ಇತರೆ ಉತ್ಪನ್ನ ಗಳು, ಔಷಧೀಯ ಹಾಗೂ ಸುಗಂಧ ಗಿಡಗಳ ಪ್ರದರ್ಶನ ಮತ್ತು ಮಾರಾಟ ಮಾಡಲಾಗುತ್ತದೆ. ದಾಳಿಂಬೆ, ಅಣಬೆಯನ್ನು ಬೆಳೆಯುವ ರೈತರನ್ನುಪೋತ್ಸಾಹಿಸಲು ಪ್ರತ್ಯೇಕವಾಗಿ ಮಳಿಗೆಯನ್ನು ತೆರೆದು ಮಾರಾಟಕ್ಕೆ ಅವಕಾಶ ಕಲ್ಪಿಸಲಾಗುವುದು ಎಂದು ತಿಳಿಸಿದರು.

ಸಾವಯುವ ಗೊಬ್ಬರ ಮಾರಾಟಕ್ಕೆ ವ್ಯವಸ್ಥೆ: ನಗರದ ತಾರಸಿ ತೋಟ ಹಾಗೂ ಕೈತೋಟ ಮಾಡುವ ಹವ್ಯಾಸಿಗರಿಗೆ ಪೋತ್ಸಾಹ ನೀಡಲು ಕುಂಡಗಳಲ್ಲಿ ಬೆಳೆ ಬೆಳೆಯಲು ಅವಶ್ಯಕವಿರುವ ಸಲಕರಣೆಗಳನ್ನು ಮತ್ತು ಸಾವಯುವ ರೀತಿಯಲ್ಲಿ ಪೋಷಕಾಂಶಗಳನ್ನು ನೀಡುವ ಗೊಬ್ಬರಗಳನ್ನು ಮಾರಾಟಕ್ಕೆ ವ್ಯವಸ್ಥೆ ಮಾಡಲಾಗಿದೆ. ತೋಟಗಾರಿಕಾ ಇಲಾಖೆಯಿಂದ ಹೆಬ್ಬೂರು ತೋಟಗಾರಿಕೆ ಬೆಳೆಗಳ ರೈತ ಉತ್ಪಾದಕ ಸಂಸ್ಥೆಗೆ ನೀಡಿರುವ ಹಣ್ಣು ಮತ್ತು ತರಕಾರಿ ಮಾರಾಟ ವಾಹನವನ್ನು ಕಾರ್ಯಕ್ರಮದಲ್ಲಿ ಪ್ರದರ್ಶಿಸಲಾಗುವುದು. ಮೇಳದ ನಂತರ ಈ ವಾಹನವನ್ನು ಪ್ರಾಯೋಗಿಕವಾಗಿ ನಗರದಲ್ಲಿ ಹಣ್ಣು ಮತ್ತು ತರಕಾರಿ ಮಾರಾಟ ಮಾಡಲು ಬಳಸಿಕೊಳ್ಳ ಲಾಗುವುದು ಎಂದು ತಿಳಿಸಿದರು.

ಮಾವು ಬೆಳೆಯುವ ರೈತರಿಗೆ ಕಡಿಮೆ ವೆಚ್ಚದಲ್ಲಿ ಹುಲ್ಲಿನಿಂದ, ಇಥಲಿನ್‌ ಗ್ಯಾಸ್‌ನಿಂದ ಹಾಗೂ ರೈಪನಿಂಗ್‌ ಛೇಂಬರ್‌ನಲ್ಲಿ ಹಣ್ಣುಗಳನ್ನು ನೈಸರ್ಗಿಕವಾಗಿ ಮಾಗಿಸುವ ಬಗ್ಗೆ ಈಗಾಗಲೇ ತರಬೇತಿ ನೀಡಲಾಗಿದೆ. ಮುಂಬರುವ ದಿನಗಳಲ್ಲಿ ಆರೋಗ್ಯದ ಹಿತದೃಷ್ಟಿಯಿಂದ ವ್ಯಾಪಾರಿಗಳಿಗೂ ಸಹ ನೈಸರ್ಗಿಕವಾಗಿ ಹಣ್ಣನ್ನು ಮಾಗಿಸುವ ತರಬೇತಿಯನ್ನು ನೀಡಲಾಗುವುದು. ಜಿಲ್ಲೆಯ ರೈತರು, ತುಮಕೂರು ನಗರವಾಸಿಗಳು, ಗ್ರಾಹ ಕರು ಹಾಗೂ ಸಂಘಸಂಸ್ಥೆಗಳು ಹೆಚ್ಚಿನ ಸಂಖ್ಯೆ ಯಲ್ಲಿ ಆಗಮಿಸಿ ಈ ಮೇಳದ ಸದುಪಯೋಗ ಪಡೆದು ಕೊಳ್ಳಬೇಕೆಂದು ಮನವಿ ಮಾಡಿದರು.

ಟಾಪ್ ನ್ಯೂಸ್

Karnataka By Poll Results: ಮತಎಣಿಕೆ-ಚನ್ನಪಟ್ಟಣ, ಶಿಗ್ಗಾಂವಿ, ಸಂಡೂರು “ಕೈ” ಮುನ್ನಡೆ‌

Karnataka By Poll Results: ಮತಎಣಿಕೆ-ಚನ್ನಪಟ್ಟಣ, ಶಿಗ್ಗಾಂವಿ, ಸಂಡೂರು “ಕೈ” ಮುನ್ನಡೆ‌

By Election: CP Yogeshwar took the lead against Nikhil; Channapatna is curious

By Election: ನಿಖಿಲ್‌ ವಿರುದ್ದ ಮುನ್ನಡೆ ಸಾಧಿಸಿದ ಯೋಗೇಶ್ವರ್;‌ ಕುತೂಹಲದತ್ತ ಚನ್ನಪಟ್ಟಣ

2-karkala

Karkala: ಶಾಲಾ ವಾಹನಕ್ಕೆ ಢಿಕ್ಕಿ ಹೊಡೆದು ಬೈಕ್ ಸವಾರ ಸ್ಥಳದಲ್ಲೇ ಸಾವು

Zebra Movie Review: ಜೀಬ್ರಾ ಕ್ರಾಸ್‌ನಲ್ಲಿ ಕಣ್ಣಾ ಮುಚ್ಚಾಲೆ!

Zebra Movie Review: ಜೀಬ್ರಾ ಕ್ರಾಸ್‌ನಲ್ಲಿ ಕಣ್ಣಾ ಮುಚ್ಚಾಲೆ!

Wayanad: ಪ್ರಿಯಾಂಕಾ ಗಾಂಧಿ ‘ಕೈ’ ಹಿಡಿಯಲಿದ್ದಾರಾ ಮತದಾರರು… 37,000 ಮತಗಳಿಂದ ಮುನ್ನಡೆ

Wayanad: ಪ್ರಿಯಾಂಕಾ ಗಾಂಧಿ ‘ಕೈ’ ಹಿಡಿಯಲಿದ್ದಾರಾ ಮತದಾರರು… 85,000 ಮತಗಳಿಂದ ಮುನ್ನಡೆ

maharstra

Election Results: ಮಹಾರಾಷ್ಟ್ರ, ಝಾರ್ಖಂಡ್‌ ನಲ್ಲಿ ಮತ ಎಣಿಕೆ ಪ್ರಕ್ರಿಯೆ ಆರಂಭ

ಉಪ ಚುನಾವಣಾ ಫಲಿತಾಂಶ: ಸಂಡೂರು, ಚನ್ನಪಟ್ಟಣ, ಶಿಗ್ಗಾಂವಿ ಕ್ಷೇತ್ರಗಳ ಮತ ಎಣಿಕೆ ಆರಂಭ

ಉಪ ಚುನಾವಣಾ ಫಲಿತಾಂಶ: ಸಂಡೂರು, ಚನ್ನಪಟ್ಟಣ, ಶಿಗ್ಗಾಂವಿ ಕ್ಷೇತ್ರಗಳ ಮತ ಎಣಿಕೆ ಆರಂಭ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Udupi: ಕೋಟಿ ಗೀತಾ ಲೇಖನ ಯಜ್ಞ: 500ಕ್ಕೂ ಹೆಚ್ಚು ವಿದ್ಯಾರ್ಥಿಗಳು, ಸಿಬ್ಬಂದಿಯಿಂದ ದೀಕ್ಷೆ

Udupi: ಕೋಟಿ ಗೀತಾ ಲೇಖನ ಯಜ್ಞ: 500ಕ್ಕೂ ಹೆಚ್ಚು ವಿದ್ಯಾರ್ಥಿಗಳು, ಸಿಬ್ಬಂದಿಯಿಂದ ದೀಕ್ಷೆ

1-parm

Caste ನೋಡಿ ಮತ ಹಾಕಿದರೆ ಸಮಾಜದಲ್ಲಿ ಬದಲಾವಣೆ ಅಸಾಧ್ಯ : ಸಿಎಂ ಸಿದ್ದರಾಮಯ್ಯ

Tumkur: ತುಮಕೂರಲ್ಲಿ ದಲಿತ ಮಹಿಳೆ ಹ*ತ್ಯೆ: 21 ಅಪರಾಧಿಗಳಿಗೆ ಜೀವಾವಧಿ ಶಿಕ್ಷೆ

Road Mishap: ಚಲಿಸುತ್ತಿದ್ದ ಲಾರಿಗೆ ಕಾರು ಢಿಕ್ಕಿ: ತಂದೆ-ಮಗು ಸ್ಥಳದಲ್ಲೇ ಸಾವು

Road Mishap: ಚಲಿಸುತ್ತಿದ್ದ ಲಾರಿಗೆ ಕಾರು ಢಿಕ್ಕಿ: ತಂದೆ-ಮಗು ಸ್ಥಳದಲ್ಲೇ ಸಾವು

Maharashtra ಸರಕಾರ ವಿರುದ್ಧ ಮಾನನಷ್ಟ ಕೇಸ್‌: ಸಚಿವ ಡಾ| ಜಿ. ಪರಮೇಶ್ವರ್‌

Maharashtra ಸರಕಾರ ವಿರುದ್ಧ ಮಾನನಷ್ಟ ಕೇಸ್‌: ಸಚಿವ ಡಾ| ಜಿ. ಪರಮೇಶ್ವರ್‌

MUST WATCH

udayavani youtube

ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್‌ |

udayavani youtube

ಕೊಲ್ಲೂರಿನಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಡಿಸಿಎಂ ಡಿ ಕೆ ಶಿವಕುಮಾರ್

udayavani youtube

ಉಡುಪಿ ಶ್ರೀ ಕೃಷ್ಣ ಮಠದಲ್ಲಿ ಬೃಹತ್ ಗೀತೋತ್ಸವಕ್ಕೆ ಅದ್ದೂರಿ ಚಾಲನೆ|

udayavani youtube

ಲಾಭದಾಯಕ ಗುಲಾಬಿ ಕೃಷಿ ಮಾಡುವ ವಿಧಾನ

udayavani youtube

ಗೀತೋತ್ಸವ ತ್ರಿಪಕ್ಷ ಶತವೈಭವ ಕಾರ್ಯಕ್ರಮಕ್ಕೆ ಆಮಂತ್ರಿಸಿದ ಪರ್ಯಾಯ ಪುತ್ತಿಗೆ ಶ್ರೀಗಳು

ಹೊಸ ಸೇರ್ಪಡೆ

Karnataka By Poll Results: ಮತಎಣಿಕೆ-ಚನ್ನಪಟ್ಟಣ, ಶಿಗ್ಗಾಂವಿ, ಸಂಡೂರು “ಕೈ” ಮುನ್ನಡೆ‌

Karnataka By Poll Results: ಮತಎಣಿಕೆ-ಚನ್ನಪಟ್ಟಣ, ಶಿಗ್ಗಾಂವಿ, ಸಂಡೂರು “ಕೈ” ಮುನ್ನಡೆ‌

By Election: CP Yogeshwar took the lead against Nikhil; Channapatna is curious

By Election: ನಿಖಿಲ್‌ ವಿರುದ್ದ ಮುನ್ನಡೆ ಸಾಧಿಸಿದ ಯೋಗೇಶ್ವರ್;‌ ಕುತೂಹಲದತ್ತ ಚನ್ನಪಟ್ಟಣ

2-karkala

Karkala: ಶಾಲಾ ವಾಹನಕ್ಕೆ ಢಿಕ್ಕಿ ಹೊಡೆದು ಬೈಕ್ ಸವಾರ ಸ್ಥಳದಲ್ಲೇ ಸಾವು

Zebra Movie Review: ಜೀಬ್ರಾ ಕ್ರಾಸ್‌ನಲ್ಲಿ ಕಣ್ಣಾ ಮುಚ್ಚಾಲೆ!

Zebra Movie Review: ಜೀಬ್ರಾ ಕ್ರಾಸ್‌ನಲ್ಲಿ ಕಣ್ಣಾ ಮುಚ್ಚಾಲೆ!

Wayanad: ಪ್ರಿಯಾಂಕಾ ಗಾಂಧಿ ‘ಕೈ’ ಹಿಡಿಯಲಿದ್ದಾರಾ ಮತದಾರರು… 37,000 ಮತಗಳಿಂದ ಮುನ್ನಡೆ

Wayanad: ಪ್ರಿಯಾಂಕಾ ಗಾಂಧಿ ‘ಕೈ’ ಹಿಡಿಯಲಿದ್ದಾರಾ ಮತದಾರರು… 85,000 ಮತಗಳಿಂದ ಮುನ್ನಡೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.