ಬರದಲ್ಲಿ ಮರೆಯಾದ ಮಳೆಗಾಲ ಸಿದ್ಧತೆ

•ಬರ ನಿರ್ವಹಣೆಯಲ್ಲಿಯೇ ಮೇ ಮೀಸಲು•ಮಳೆಗಾಲ ನಿರ್ವಹಣೆಗೆ ರೂಪುಗೊಂಡಿಲ್ಲ ಯೋಜನೆ

Team Udayavani, May 31, 2019, 11:56 AM IST

haveri-tdy-1..

ಹಾವೇರಿ: ಮಳೆ ಬಂದರೆ ನಗರದಲ್ಲಿ ಕೊಳಚೆ ನೀರು ರಸ್ತೆ ಮೇಲೆ ಹರಿಯುವ ರೀತಿ ಇದು. (ಸಂಗ್ರಹಚಿತ್ರ)

ಹಾವೇರಿ: ಬರದ ಬವಣೆ ತೀವ್ರವಾಗಿರುವ ಹಿನ್ನೆಲೆಯಲ್ಲಿ ಜಿಲ್ಲೆಯಲ್ಲಿ ಮಳೆಗಾಲದ ಸಿದ್ಧತೆ ಬಗ್ಗೆ ಅಧಿಕಾರಿಗಳು ಇನ್ನೂ ಯಾವುದೇ ಯೋಚನೆ, ಸಿದ್ಧತೆಯ ಯೋಜನೆ ಹಾಕಿಕೊಂಡಿಲ್ಲ. ಹೀಗಾಗಿ ಈ ಬಾರಿ ಅಧಿಕಾರಿಗಳು ಮೇ ತಿಂಗಳನ್ನು ಸಂಪೂರ್ಣವಾಗಿ ಬರ ನಿರ್ವಹಣೆಗಾಗಿಯೇ ಮೀಸಲಿಟ್ಟಂತಾಗಿದೆ.

ಸಾಮಾನ್ಯವಾಗಿ ಮೇ ತಿಂಗಳು ಬಂತೆಂದರೆ ಅಧಿಕಾರಿಗಳು ಮುಂಬರುವ ಜೂನ್‌ ತಿಂಗಳಿನಿಂದ ಶುರುವಾಗುವ ಮಳೆಗಾಲ ಎದುರಿಸಲು ಸಿದ್ಧತೆ ಮಾಡಿಕೊಳ್ಳುತ್ತಾರೆ. ಕೃಷಿ ಇಲಾಖೆಯು ರೈತರಿಗೆ ಕೃಷಿ ಸೌಲಭ್ಯ ಕಲ್ಪಿಸಲು ತೊಡಗಿಕೊಂಡರೆ, ಆರೋಗ್ಯ ಇಲಾಖೆ ಸಾಂಕ್ರಾಮಿಕ ರೋಗ ತಡೆಗೆ ಕ್ರಮ ಕೈಗೊಳ್ಳುವಲ್ಲಿ ಮಗ್ನವಾಗುತ್ತದೆ. ತಾಲೂಕಾಡಳಿತ, ಸ್ಥಳೀಯ ಸಂಸ್ಥೆಗಳು ಮಳೆಗಾಲ ಎದುರಿಸಲು ಬೇಕಾದ ಸಿದ್ಧತೆ ಮಾಡಿಕೊಳ್ಳುತ್ತವೆ. ಈ ಬಾರಿ ಮೇ ತಿಂಗಳಲ್ಲಿ ಎಲ್ಲ ಅಧಿಕಾರಿ ವರ್ಗ ಕುಡಿಯುವ ನೀರಿನ ಬವಣೆ ಎದುರಿಸುವಲ್ಲಿಯೇ ಹೆಚ್ಚು ತಲ್ಲೀನವಾಗಿದೆ. ಹೀಗಾಗಿ ಮೇ ತಿಂಗಳು ಅರ್ಧ ಕಳೆದರೂ ಮಳೆಗಾಲದ ಸಿದ್ಧತೆ ಕಡೆಗೆ ಅಧಿಕಾರಿ ವರ್ಗ ಇನ್ನೂ ಲಕ್ಷ ್ಯವಹಿಸಿಲ್ಲ.

ಏನೇನು ಮಾಡಬೇಕಿತ್ತು?: ಸಾಮಾನ್ಯವಾಗಿ ಸ್ಥಳೀಯ ಸಂಸ್ಥೆಗಳು ಮೇ ತಿಂಗಳಲ್ಲಿ ಗ್ರಾಮ, ನಗರದ ಗಟಾರಗಳನ್ನು ಸ್ವಚ್ಛಗೊಳಿಸಿ ನೀರು ಸರಾಗವಾಗಿ ಹರಿದು ಹೋಗುವಂತೆ ಮಾಡುವ ಯೋಜನೆ ಹಾಕಿಕೊಳ್ಳುತ್ತವೆ. ಹಳೆಯ ಮರ, ಬೀಳಬಹುದಾದ ಮರಗಳನ್ನು ಗುರುತಿಸಿ ಅವುಗಳನ್ನು ತೆಗೆಸಲು ಕ್ರಮ ಕೈಗೊಳ್ಳುತ್ತವೆ. ತಾಲೂಕಾಡಳಿತಗಳು ನೆರೆ ಬರಬಹುದಾದ ಗ್ರಾಮಗಳಲ್ಲಿ ಕೈಗೊಳ್ಳಬಹುದಾದ ಮುನ್ನಚ್ಚರಿಕೆ ಕ್ರಮಗಳ ಬಗ್ಗೆ ಆಲೋಚಿಸುತ್ತವೆ. ನೆರೆ ಬಂದರೆ ಎಲ್ಲಿ ಗಂಜಿಕೇಂದ್ರ ತೆರೆಯಬೇಕು. ನದಿಗಳು ಅಪಾಯ ಮಟ್ಟ ಮೀರಿ ಹರಿದರೆ ಸುತ್ತಲಿನ ಗ್ರಾಮಸ್ಥರು ಏನೆಲ್ಲ ಮುನ್ನಚ್ಚರಿಕೆ ಕ್ರಮ ಕೈಗೊಳ್ಳಬೇಕು. ಮಳೆಗಾಲ ಸಮಸ್ಯೆಗೆ ಸ್ಪಂದಿಸಲು ಸಹಾಯವಾಣಿ ತೆರೆಯುವುದು ಸೇರಿದಂತೆ ಇನ್ನಿತರ ಕ್ರಮಗಳ ಬಗ್ಗೆ ಮೇ ತಿಂಗಳಲ್ಲಿಯೇ ಯೋಜನೆ ಮಾಡಿಕೊಳ್ಳುತ್ತವೆ. ಆದರೆ, ಈ ವರ್ಷ ತಾಲೂಕಾಡಳಿತ, ಸ್ಥಳೀಯ ಸಂಸ್ಥೆಗಳು ಈವರೆಗೆ ಮಳೆಗಾಲ ಸಿದ್ಧತೆ ಬಗ್ಗೆ ತಲೆಕೆಡಿಸಿಕೊಂಡಿಲ್ಲ.

ನೀರಿನ ಸಮಸ್ಯೆ ತೀವ್ರವಾಗಿರುವುದರಿಂದ ಎಲ್ಲರೂ ಮಳೆಯ ನಿರೀಕ್ಷೆಯಲ್ಲಿದ್ದಾರೆ. ಮಳೆ ಬಂದರೆ ಸಾಕು ಎಂಬ ಭಾವನೆ ಎಲ್ಲೆಡೆ ವ್ಯಕ್ತವಾಗುತ್ತಿದೆ. ಜಿಲ್ಲೆಯಲ್ಲಿ ತಾಪಮಾನ 40ಡಿಗ್ರಿ ಸೆಲ್ಸಿಯಸ್‌ ಮೀರುತ್ತಿದ್ದು ಮಳೆ ಬಂದರೆ ಕಾದ ಹೆಂಚಾಗಿರುವ ವಾತಾವರಣ ತಂಪಾಗುತ್ತದೆ. ಅಂತರ್ಜಲಮಟ್ಟ ಹೆಚ್ಚಾಗುತ್ತದೆ. ಕೆರೆ ಕಟ್ಟೆಗಳಲ್ಲಿ ಒಂದಿಷ್ಟು ನೀರು ತುಂಬಿಕೊಂಡು ಬರ ಬೇಸಿಗೆಯ ನೀರಿನ ಸಮಸ್ಯೆ ಕಡಿಮೆಯಾಗುತ್ತದೆ ಎಂದು ಮಳೆಗಾಗಿ ಪ್ರಾರ್ಥನೆ ಮಾಡಿಕೊಳ್ಳುತ್ತಿದ್ದಾರೆ.

ಈಗಲೇ ಕ್ರಮವಾಗಬೇಕು: ಮಳೆ ಬಂತೆಂದರೆ ಜಿಲ್ಲಾ ಕೇಂದ್ರ ಹಾವೇರಿ ನಗರದ ಬಹುಕಡೆಗಳಲ್ಲಿ ಕಾಲುವೆಯ ಕೊಳಚೆಯೆಲ್ಲ ರಸ್ತೆ ಮೇಲೆ ಬಂದು ನಿಲ್ಲುತ್ತದೆ. ನಗರದ ಮುಖ್ಯ ರಸ್ತೆ ಪಿ.ಬಿ. ರಸ್ತೆಯ ಮೇಲೆಯೂ ನೀರು ತುಂಬಿ ಹರಿಯುವ ಮೂಲಕ ರಸ್ತೆ ಸಂಚಾರಕ್ಕೆ ತೊಂದರೆಯಾಗುತ್ತದೆ. ನಗರದ ಗೂಗಿಕಟ್ಟೆ ಸ್ಥಳವಂತೂ ಕೊಳಚೆ ಸಂಗ್ರಹ ತಾಣವಾಗಿ ಮಾರ್ಪಡುತ್ತದೆ. ನಾಗೇಂದ್ರನಮಟ್ಟಿಗೆ ಹೋಗುವ ಮಾರ್ಗದಲ್ಲಿನ ರೇಲ್ವೆ ಕೆಳಸೇತುವೆಯಲ್ಲಿ ನೀರು ನುಗ್ಗಿ ಸಂಚಾರಕ್ಕೆ ಅಡ್ಡಿಯಾಗುತ್ತದೆ. ಹೀಗಾಗಿ ನಗರಸಭೆ ಈಗಲೇ ಕಾಲುವೆ, ರಾಜ ಕಾಲುವೆಗಳನ್ನು ಸ್ವಚ್ಛಗೊಳಿಸುವ ಕಾರ್ಯಕ್ಕೆ ಈಗಲೇ ಅಣಿಯಾಗಬೇಕಿದೆ.

ನಗರದ ನಾಗೇಂದ್ರನಮಟ್ಟಿ ಸೇರಿದಂತೆ ಅನೇಕ ಬಡಾವಣೆಗಳಲ್ಲಿ ಇನ್ನೂ ಕಚ್ಚಾ ರಸ್ತೆಗಳೇ ಇದ್ದು ಅವು ಮಳೆ ಬಂದಾಗ ಕೆಸರುಗದ್ದೆಯಂತಾಗುತ್ತವೆ. ಅಂಥ ರಸ್ತೆಗಳಿಗೆ ಡಾಂಬರ್‌ ಹಾಕುವ ಕಾರ್ಯ ಆಗಬೇಕಿದೆ. ನಗರದಲ್ಲಿ ಅಲ್ಲಲ್ಲಿ ರಾಶಿಬಿದ್ದಿರುವ ಕಸದ ವಿಲೇವಾರಿ ಆಗಬೇಕಿದೆ. ಮಳೆಗಾಲದ ಸಾಂಕ್ರಾಮಿಕ ರೋಗಗಳ ತಡೆಗೆ ಅಗತ್ಯ ಸ್ವಚ್ಛತಾ ಕ್ರಮ ಕೈಗೊಳ್ಳಬೇಕಿದೆ.

ಒಟ್ಟಾರೆ ಬರ ಸಮಸ್ಯೆಯ ಜತೆಗೆ ಅಧಿಕಾರಿ ವರ್ಗ ಬರ ನಿರ್ವಹಣೆಯ ಜತೆಯಲ್ಲಿಯೇ ಮುಂಬರುವ ಮಳೆಗಾಲ ಎದುರಿಸಲು ಬೇಕಾದ ಅಗತ್ಯ ಸಿದ್ಧತೆಯನ್ನೂ ಮಾಡಿಕೊಳ್ಳಬೇಕಾದ ಅನಿವಾರ್ಯತೆ ಇದ್ದು ಈ ದಿಸೆಯಲ್ಲಿ ಅಧಿಕಾರಿ ವರ್ಗ ಲಕ್ಷ ವ್ಯಹಿಸಬೇಕಿದೆ.

•ಎಚ್.ಕೆ. ನಟರಾಜ

ಟಾಪ್ ನ್ಯೂಸ್

Maharashtra Polls: Who will be the next Chief Minister? Fadnavis gives a hint

Maharashtra Polls: ಯಾರಾಗಲಿದ್ದಾರೆ ಮಹಾ ಮುಖ್ಯಮಂತ್ರಿ? ಸುಳಿವು ನೀಡಿದ ಫಡ್ನವೀಸ್‌

ಕೊಪ್ಪಳ: ಫ್ಲೈಟ್‌ನಲ್ಲಿ ಲಿಂಗದಹಳ್ಳಿ ಸರ್ಕಾರಿ ಶಾಲಾ ಮಕ್ಕಳ ಪ್ರವಾಸ!

ಕೊಪ್ಪಳ: ಫ್ಲೈಟ್‌ನಲ್ಲಿ ಲಿಂಗದಹಳ್ಳಿ ಸರ್ಕಾರಿ ಶಾಲಾ ಮಕ್ಕಳ ಪ್ರವಾಸ!

Dhanashree Verma: ಯಶ್‌ ಸಿನಿಮಾಕ್ಕೆ ಕ್ರಿಕೆಟಿಗ ಚಹಾಲ್ ಪತ್ನಿ ಹೀರೋಯಿನ್

Dhanashree Verma: ಯಶ್‌ ಸಿನಿಮಾಕ್ಕೆ ಕ್ರಿಕೆಟಿಗ ಚಹಾಲ್ ಪತ್ನಿ ಹೀರೋಯಿನ್

Re-Release: ಈ ವರ್ಷ ರೀ ರಿಲೀಸ್‌ ಆದ ಬಾಲಿವುಡ್‌ ಸಿನಿಮಾಗಳ ಬಾಕ್ಸ್‌ ಆಫೀಸ್‌ ಗಳಿಕೆ ಎಷ್ಟು?

Re-Release: ಈ ವರ್ಷ ರೀ ರಿಲೀಸ್‌ ಆದ ಬಾಲಿವುಡ್‌ ಸಿನಿಮಾಗಳ ಬಾಕ್ಸ್‌ ಆಫೀಸ್‌ ಗಳಿಕೆ ಎಷ್ಟು?

Uttara Pradesh By poll: 30 ವರ್ಷದ ಬಳಿಕ ಮುಸ್ಲಿಂ ಬಾಹುಳ್ಯದ ಕ್ಷೇತ್ರದಲ್ಲಿ ಅರಳಿದ ಕಮಲ!

Uttara Pradesh By poll: 30 ವರ್ಷದ ಬಳಿಕ ಮುಸ್ಲಿಂ ಬಾಹುಳ್ಯದ ಕ್ಷೇತ್ರದಲ್ಲಿ ಅರಳಿದ ಕಮಲ!

IPL Mega Auction: 2008-2024.. Here is the list of the most expensive players in each auction

IPL Mega Auction: 2008-2024.. ಪ್ರತಿ ಹರಾಜಿನ ದುಬಾರಿ ಆಟಗಾರರ ಪಟ್ಟಿ ಇಲ್ಲಿದೆ

Eye Surgeries: ಪದವಿ ಪೂರ್ಣಗೊಳಿಸದೆ 44 ಕಣ್ಣಿನ ಶಸ್ತ್ರಚಿಕಿತ್ಸೆ ನಡೆಸಿದ ವೈದ್ಯ…

Eye Surgeries: ವೈದ್ಯಕೀಯ ಪದವಿ ಪೂರ್ಣಗೊಳಿಸದೇ 44 ಕಣ್ಣಿನ ಶಸ್ತ್ರಚಿಕಿತ್ಸೆ ನಡೆಸಿದ ವೈದ್ಯ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Haveri: ಮಾಜಿ ಸಚಿವ ಮನೋಹರ ತಹಶೀಲ್ದಾರ ವಿಧಿವಶ

Haveri: ಮಾಜಿ ಸಚಿವ ಮನೋಹರ ತಹಶೀಲ್ದಾರ ವಿಧಿವಶ

1-bbb

Shiggaon; ಉಪಚುನಾವಣೆ ಮತದಾನಕ್ಕೆ ಗೈರಾದ ಗಾಯಕ ಹನುಮಂತ ಲಮಾಣಿ

ajjamper-Qadri

Adi Jambava Samavesha: ಅಂಬೇಡ್ಕರ್‌ ಇಸ್ಲಾಂ ಧರ್ಮ ಸೇರಲು ಸಜ್ಜಾಗಿದ್ದರು: ಖಾದ್ರಿ

ಚುನಾವಣೆ ಹೊತ್ತಲ್ಲೇ ಗೃಹಲಕ್ಷ್ಮಿ ಹಣ ಜಮೆ: ಬೊಮ್ಮಾಯಿ ಆಕ್ಷೇಪಚುನಾವಣೆ ಹೊತ್ತಲ್ಲೇ ಗೃಹಲಕ್ಷ್ಮಿ ಹಣ ಜಮೆ: ಬೊಮ್ಮಾಯಿ ಆಕ್ಷೇಪ

BY Election; ಹೊತ್ತಲ್ಲೇ ಗೃಹಲಕ್ಷ್ಮಿ ಹಣ ಜಮೆ: ಬೊಮ್ಮಾಯಿ ಆಕ್ಷೇಪ

Lokayukta Raid: ಹಾವೇರಿಯಲ್ಲಿ ಎಇ ಕಾಶೀನಾಥ್ ಭಜಂತ್ರಿ ನಿವಾಸದ ಮೇಲೆ ಲೋಕಾಯುಕ್ತ ದಾಳಿ

Lokayukta Raid: ಹಾವೇರಿಯಲ್ಲಿ ಎಇ ಕಾಶೀನಾಥ್ ಭಜಂತ್ರಿ ನಿವಾಸದ ಮೇಲೆ ಲೋಕಾಯುಕ್ತ ದಾಳಿ

MUST WATCH

udayavani youtube

ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?

udayavani youtube

ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್‌ |

udayavani youtube

ಕೊಲ್ಲೂರಿನಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಡಿಸಿಎಂ ಡಿ ಕೆ ಶಿವಕುಮಾರ್

udayavani youtube

ಉಡುಪಿ ಶ್ರೀ ಕೃಷ್ಣ ಮಠದಲ್ಲಿ ಬೃಹತ್ ಗೀತೋತ್ಸವಕ್ಕೆ ಅದ್ದೂರಿ ಚಾಲನೆ|

udayavani youtube

ಲಾಭದಾಯಕ ಗುಲಾಬಿ ಕೃಷಿ ಮಾಡುವ ವಿಧಾನ

ಹೊಸ ಸೇರ್ಪಡೆ

Maharashtra Polls: Who will be the next Chief Minister? Fadnavis gives a hint

Maharashtra Polls: ಯಾರಾಗಲಿದ್ದಾರೆ ಮಹಾ ಮುಖ್ಯಮಂತ್ರಿ? ಸುಳಿವು ನೀಡಿದ ಫಡ್ನವೀಸ್‌

ಕೊಪ್ಪಳ: ಫ್ಲೈಟ್‌ನಲ್ಲಿ ಲಿಂಗದಹಳ್ಳಿ ಸರ್ಕಾರಿ ಶಾಲಾ ಮಕ್ಕಳ ಪ್ರವಾಸ!

ಕೊಪ್ಪಳ: ಫ್ಲೈಟ್‌ನಲ್ಲಿ ಲಿಂಗದಹಳ್ಳಿ ಸರ್ಕಾರಿ ಶಾಲಾ ಮಕ್ಕಳ ಪ್ರವಾಸ!

Dhanashree Verma: ಯಶ್‌ ಸಿನಿಮಾಕ್ಕೆ ಕ್ರಿಕೆಟಿಗ ಚಹಾಲ್ ಪತ್ನಿ ಹೀರೋಯಿನ್

Dhanashree Verma: ಯಶ್‌ ಸಿನಿಮಾಕ್ಕೆ ಕ್ರಿಕೆಟಿಗ ಚಹಾಲ್ ಪತ್ನಿ ಹೀರೋಯಿನ್

Re-Release: ಈ ವರ್ಷ ರೀ ರಿಲೀಸ್‌ ಆದ ಬಾಲಿವುಡ್‌ ಸಿನಿಮಾಗಳ ಬಾಕ್ಸ್‌ ಆಫೀಸ್‌ ಗಳಿಕೆ ಎಷ್ಟು?

Re-Release: ಈ ವರ್ಷ ರೀ ರಿಲೀಸ್‌ ಆದ ಬಾಲಿವುಡ್‌ ಸಿನಿಮಾಗಳ ಬಾಕ್ಸ್‌ ಆಫೀಸ್‌ ಗಳಿಕೆ ಎಷ್ಟು?

Uttara Pradesh By poll: 30 ವರ್ಷದ ಬಳಿಕ ಮುಸ್ಲಿಂ ಬಾಹುಳ್ಯದ ಕ್ಷೇತ್ರದಲ್ಲಿ ಅರಳಿದ ಕಮಲ!

Uttara Pradesh By poll: 30 ವರ್ಷದ ಬಳಿಕ ಮುಸ್ಲಿಂ ಬಾಹುಳ್ಯದ ಕ್ಷೇತ್ರದಲ್ಲಿ ಅರಳಿದ ಕಮಲ!

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.